ಲೇಖಕ: admin

ಮಡಿಕೇರಿ ಸೆ.13 : ಮಡಿಕೇರಿ ತಾಲ್ಲೂಕು ಕಚೇರಿಯಲ್ಲಿ ಅನೇಕ ಸಮಸ್ಯೆಗಳಿವೆ, ಕಳೆದ 25 ವರ್ಷಗಳಿಂದ ಅಧಿಕಾರದಲ್ಲಿದ್ದವರು ತಾಲ್ಲೂಕು ಕಚೇರಿ ಬಗ್ಗೆ ಆಸಕ್ತಿ ತೋರದ ಪರಿಣಾಮ ಇಂದು ಜನರು ಕಷ್ಟ ಅನುಭವಿಸುವಂತ್ತಾಗಿದೆ ಎಂದು ಆರೋಪಿಸಿರುವ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಕೊರತೆಗಳ ಕುರಿತು ಅಧಿಕಾರಿಗಳು ಶಾಸಕರ ಗಮನ ಸೆಳೆಯಬೇಕೆಂದು ಒತ್ತಾಯಿಸಿದ್ದಾರೆ. ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪಡಿತರ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆ, ಆಧಾರ್ ಕಾರ್ಡ್‍ಗೆ ಸಂಬಂಧಿಸಿದ ದಾಖಲೆ, ಆದಾಯ ದೃಢೀಕರಣ ಪತ್ರ ಮತ್ತಿತರ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿದ ಸಾರ್ವಜನಿಕರು ಬೆಳಗ್ಗೆಯಿಂದ ಸಂಜೆಯವರೆಗೆ ಸಾಲುಗಟ್ಟಿ ನಿಲ್ಲಬೇಕಾದ ಪರಿಸ್ಥಿತಿ ಉದ್ಭವಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು. ತಾಲ್ಲೂಕು ಕಚೇರಿಯ ತಾಂತ್ರಿಕ ವ್ಯವಸ್ಥೆಗಳು ಇನ್ನೂ ಕೂಡ ಮೇಲ್ದರ್ಜೆಗೇರಿಲ್ಲ, ಪ್ರತಿದಿನ ಸರ್ವರ್ ಸಮಸ್ಯೆ ಮತ್ತು ವಿದ್ಯುತ್ ಕಡಿತದ ಕಾರಣಗಳನ್ನು ನೀಡಲಾಗುತ್ತಿದೆ. ಸರ್ವರ್ ಪ್ರಕ್ರಿಯೆಯು ವಿಳಂಬವಾಗುತ್ತಿದ್ದು, ಅರ್ಜಿದಾರರು ನಿತ್ಯ ತಾಲ್ಲೂಕು ಕಚೇರಿಗೆ ಅಲೆಯಲೇಬೇಕಾಗಿದೆ. ರಾಜ್ಯ…

Read More

ಮಡಿಕೇರಿ ಸೆ.13 : ಇಂದಿನ ಯುವಜನಾಂಗ ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಬೇಸರದ ಸಂಗತಿ. ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಸುಂದರ ಸಮಾಜವನ್ನು ನಿರ್ಮಿಸುವ ಕಾರ್ಯದಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಮಡಿಕೇರಿಯ ಅಹ್ಮದಿಯಾ ಮುಸ್ಲಿಂ ಜಮಾಅತ್’ನ ಧರ್ಮಗುರು ಖಲೀಂ ಖಾನ್ ಅಭಿಪ್ರಾಯಪಟ್ಟರು. ಮಡಿಕೇರಿಯ ಅಹ್ಮದಿಯಾ ಮುಸ್ಲಿಂ ಜಮಾಅತ್ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಇವರ ಸಹಯೋಗದೊಂದಿಗೆ ಜಿಲ್ಲಾ ಕಾರಾಗೃಹದ ಸಭಾಂಗಣದಲ್ಲಿ ಕಾರಾಗೃಹದಲ್ಲಿನ ಖೈದಿಗಳಿಗೆ ಆಯೋಜಿಸಲಾಗಿದ್ದ ‘ಆಮೂಲಾಗ್ರ ಸುಧಾರಣೆ'(ಡಿ-ರಾಡಿಕಲೈಸೇಷನ್) ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಹುಟ್ಟಿನಿಂದ ಎಲ್ಲರೂ ಮುಗ್ಧರು. ಬೆಳೆಯುತ್ತಾ ಹೋದಂತೆ ತಪ್ಪುಗಳನ್ನು ಮಾಡುತ್ತಾರೆ. ಆದರೆ ತಪ್ಪುಗಳ ಬಗ್ಗೆ ಪಶ್ಚಾತ್ತಾಪಪಟ್ಟು ಉತ್ತಮ ನಾಗರಿಕನಾಗಿ ಸುಧಾರಣೆ ಹೊಂದಲು ಖಂಡಿತವಾಗಿಯೂ ಸಾಧ್ಯವಿದೆ ಎಂದರು. ಅಹ್ಮದಿಯಾ ಜಮಾಅತ್’ನ ಜಾಗತಿಕ ನೇತಾರರಾದ ಹಝ್ರತ್ ಮಿರ್ಝಾ ಮಸ್ರೂರ್ ಅಹ್ಮದ್ ಅವರ “ಯಾವುದೇ ಮನುಷ್ಯನು ದೌರ್ಬಲ್ಯ ಮತ್ತು ನ್ಯೂನ್ಯತೆಗಳಿಂದ ಮುಕ್ತನಾಗಿರುವುದಿಲ್ಲ. ಆದ್ದರಿಂದ ಸುಧಾರಣೆಗೆ ನಾವು ನಿರಂತರ ಪ್ರಯತ್ನವನ್ನು ಮಾಡಬೇಕಾಗುತ್ತದೆ” ಎಂಬ…

Read More

ವಿರಾಜಪೇಟೆ ಸೆ.13 : ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ, ಕಲೋತ್ಸವಗಳನ್ನು ಪ್ರಾರಂಭಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಹೇಳಿದರು. ಆರ್ಜಿ ಗ್ರಾಮದ ಪೆರಂಬಾಡಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಉತ್ತಮ ವೇದಿಕೆಯಾಗಿದೆ ಎಂದರು. ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವ ಕೆಲಸ ಶಿಕ್ಷಕರಿಂದ ಆಗಬೇಕು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ಜಿಲ್ಲೆಯ ಮಕ್ಕಳು ಭಾಗವಹಿಸಿ ಬಹುಮಾನ ಪಡೆದು ನಮ್ಮ ಜಿಲ್ಲೆಗೆ ಕೀರ್ತಿ ತರಬೇಕು ಎಂದರು. ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಪ್ರತಿಯೊಂದು ಮಗುವು ತನ್ನದೇ ಆದ ಪ್ರತಿಭೆಯನ್ನು ಹೊಂದಿರುತ್ತದೆ. ಇದನ್ನು ಗುರುತಿಸುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕು. ಪಠ್ಯದೊಂದಿಗೆ ಪಠ್ಯೇತರ…

Read More

ವಿರಾಜಪೇಟೆ ಸೆ.13 : 2023-24ನೇ ಸಾಲಿನ ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲೂಕು ಹಾಗೂ ಬಾಳೆಲೆ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಿಳುಗುಂದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟವನ್ನು ಪ್ರತಿನಿಧಿಸಿದ್ದಾರೆ. ಹಾಗೂ ಇದೇ ಶಾಲೆಯ ವಿದ್ಯಾರ್ಥಿನಿಯರು ಥ್ರೋ ಬಾಲ್ ಪಂದ್ಯಾವಳಿಯಲ್ಲಿ ತಾಲೂಕು ಮಟ್ಟದಲ್ಲಿ ಗೆಲುವು ಸಾಧಿಸಿ, ಜಿಲ್ಲಾ ಮಟ್ಟವನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲಾ ಮುಖ್ಯಶಿಕ್ಷಕಿ ಅರುಣ್ ಆನ್ಸಿ ಡಿಸೋಜ ತಿಳಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕಿ ಎಸ್.ಜಿ.ಲಿನ್ನಿ ತರಬೇತುದಾರರಾಗಿದ್ದು, ಶಾಲೆಯ ಶಿಕ್ಷಕವರ್ಗ, ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ. ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ನಾಪೋಕ್ಲು ಸೆ.13 :  ಪ್ರವಾಸಿ ತಾಣ ಅಬ್ಬಿಫಾಲ್ಸ್ ನಲ್ಲಿ ಭಾರೀ ಅಪಾಯವೊಂದು ತಪ್ಪಿದಂತಾಗಿದೆ. ಮುಖ್ಯರಸ್ತೆಯಿಂದ ಜಲಧಾರೆಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಭಾರೀ ಗಾತ್ರದ ಒಣಮರವೊಂದು ಮುರಿದು ಬಿದ್ದಿದ್ದು, ಕೂದಲೆಳೆ ಅಂತರದಿ0ದ ಪ್ರವಾಸಿಗರು ಪಾರಾಗಿದ್ದಾರೆ. ಬೆಳಗ್ಗಿನಿಂದಲೇ ಜಲಧಾರೆ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಈ ವೇಳೆ ಕಾಫಿ ತೋಟದಲ್ಲಿದ್ದ ಒಣ ಮರವೊಂದು ಏಕಾಏಕಿ ಮುರಿದು ರಸ್ತೆಗಡ್ಡಲಾಗಿ ಬಿದ್ದಿದೆ. ಮರ ಬಿದ್ದ ಸ್ಥಳದಿಂದ ಕೆಲವರು ಆಗಷ್ಟೇ ಮುಂದೆ ಸಾಗಿದ್ದರೆ, ಇನ್ನೂ ಕೆಲವರು ತರಾತುರಿಯಿಂದ ಜಲಧಾರೆಯನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದರು. ಅದೃಷ್ಟವಶಾತ್, ಮರ ಮಾರ್ಗಕ್ಕೆ ಅಡ್ಡಲಾಗಿ ಬೇಲಿಯ ಮೇಲೆ ಬಿದ್ದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.13 : ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಗಣಪತಿ ಸೇವಾ ಸಮಿತಿ ವತಿಯಿಂದ ವರ್ಷಂಪತಿ ನಡೆಯುವ ಗಣೇಶೋತ್ಸವವು ಈ ಬಾರಿ ಸೆ.19 ರಂದು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸೇವಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ. ವರದಿ -ದುಗ್ಗಳ ಸದಾನಂದ 

Read More

ನಾಪೋಕ್ಲು ಸೆ.13 : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ನಾಪೋಕ್ಲುವಿನ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪಾಧ್ಯಕ್ಷ ಹ್ಯಾರಿಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಕ್ಕಳಿಗೆ ಕಿವಿ ಮಾತನ್ನು ಹೇಳಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುಳ ಚಿತ್ರಾಪುರ ಮಾತನಾಡಿ ಶುಭಹಾರೈಸಿದರು. ಈ ಸಂದರ್ಭ ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಾಲಾ ಆಡಳಿತ ಮಂಡಳಿ ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕವೃಂದ ಪಾಲ್ಗೊಂಡಿದ್ದರು. ಬಳಿಕ ಕ್ಲಸ್ಟರಿಗೆ ಸಂಬಂಧಿಸಿದ ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆಸಲಾಯಿತು . ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಷಣ, ಜಾನಪದ ಗೀತೆ, ನೃತ್ಯ, ಚಿತ್ರಕಲೆ, ಛದ್ಮವೇಷ, ರಸಪ್ರಶ್ನೆ, ಧಾರ್ಮಿಕ ಪಠಣ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಕ್ಲಸ್ಟರಿಗೆ ಸಂಬಂಧಿಸಿದ 18 ಶಾಲೆಗಳ 435 ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ವರದಿ : ದುಗ್ಗಳ ಸದಾನಂದ   

Read More

ವಿರಾಜಪೇಟೆ ಸೆ.13 : ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘದ 2023-24ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕುಂಬೆಯಂಡ ಸುರೇಶ್ ದೇವಯ್ಯ ಪ್ರಧಾನ ಕಾರ್ಯದರ್ಶಿಯಾಗಿ ಜೂಡಿವಾಜ್ ಮರು ಆಯ್ಕೆಯಾಗಿದ್ದಾರೆ. ಉಪದ್ಯಕ್ಷರಾಗಿ ಪಿ.ಎಂ.ದಿನೇಶ್ ಕಾವೇರಪ್ಪ, ಖಜಾಂಚಿಯಾಗಿ ವಿ.ಎ.ದಿನೇಶ್ ಮತ್ತು ಸಂಘದ ನಿರ್ದೇಶಕರಾಗಿ ಬಿ.ವಿ.ವಿನಂತು, ಎಂ.ಕೆ.ಮಹೇಶ್, ಅಜಯ್, ಬಿ.ಜಿ.ನಾಗೇಶ್, ಸದಾ ಪೂಣಚ್ಚ, ಕುಪ್ಪಂಡ ಪ್ರಸಾದ್ ದೇವಯ್ಯ, ಮತ್ತು ಕೆ.ಎನ್. ಜೀವನ್ ನಾಣಯ್ಯ ಮಾಹಾಸಭೆಯಲ್ಲಿ ಸರ್ವನೂಮತದಿಂದ ಆಯ್ಕೆಗೊಂಡರು. ಕೊಡಗು ಖಾಸಗಿ ಬಸ್ ಕಾರ್ಮಿಕ ಸಂಘ ವಿರಾಜಪೇಟೆ ಸಂಘದ ಕಚೇರಿಯಲ್ಲಿ ನಡೆದ ಮಾಹಸಭೆಯಲ್ಲಿ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುರೇಶ್ ದೇವಯ್ಯ, ಬಸ್ಸು ಕಾರ್ಮಿಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಸ್ಸುಗಳ ನಿರ್ವಹಣೆಗೆ ಕಚ್ಚಾವಸ್ತುಗಳ ಬೆಲೆ ಏರಿಕೆಯಿಂದ ಕಾರ್ಮಿಕರು ಕಷ್ಟಪಡುವಂತಾಗಿದೆ. ಸಂಘದ ಸದಸ್ಯರ ಏಳಿಗೆಗೆ ಸಂಘವು ಸದಾಕಾಲ ಶ್ರಮಿಸುತ್ತದೆ ಎಂದು ಹೇಳಿದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ 

Read More

ಮಡಿಕೇರಿ ಸೆ.13 :  ಪೊನ್ನಂಪೇಟೆಯ ಸರ್ವದೈವತ ಶಾಲೆಯಲ್ಲಿ ನಡೆದ ವಲಯ ಮಟ್ಟದ ಚೆಸ್ ಪಂದ್ಯಾವಳಿ ಯಲ್ಲಿ ಕಾವೇರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಬಿ.ಎಸ್. ಸೃಷ್ಟಿ ಭಾಗವಹಿಸಿ ವಿಜೇತರಾಗಿದ್ದಾರೆ. ಬಾಲಕಿಯರ ವಿಭಾಗದ 14ವರ್ಷ ವಯೋಮಿತಿಯ ಕೆಳಪಟ್ಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆ ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಚೆಸ್ ತರಬೇತಿಯನ್ನು ರಾಷ್ಟ್ರೀಯ ಚೆಸ್ ತರಬೇತುದಾರ ಮಣಿ ನೀಡಿದ್ದಾರೆ. ಶಾಲೆಯ ದೈಹಿಕ ಶಿಕ್ಷಕಿ ಮೋನಿಕಾ ಕಾವೇರಿ ಹಾಗೂ ಲಾವಣ್ಯ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿರುತ್ತಾರೆ. ವಿಜೇತ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ, ಶಾಲಾ ಸಂಯೋಜಕರು, ಶಿಕ್ಷಕ ವೃಂದದವರು ಶ್ಲಾಘಿಸಿ , ಅಭಿನಂದಿಸಿ ,ಹಾರೈಸಿದ್ದಾರೆ.

Read More

ಕುಶಾಲನಗರ ಸೆ.13 :  ಕುಶಾಲನಗರದ “ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡಮಿ” ವತಿಯಿಂದ ಫಾತಿಮಾ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಚಿತ್ರಕಲೆ ಹಾಗೂ ಕೈಬರಹ ಸ್ಪರ್ಧೆಯ ವಿಜೇತರಿಗೆ ಕೂಡುಮಂಗಳೂರು ಗ್ರಾ.ಪಂ ಸದಸ್ಯ  ಕೆ.ಬಿ.ಶಂಶುದ್ಧೀನ್  ಬಹುಮಾನ ವಿತರಿಸಿದರು. ಚಿತ್ರಕಲೆಯಲ್ಲಿ ಸಬ್ ಜೂನಿಯರ್ ವಿಭಾಗದ ಕೆ.ಎಂ.ಯುಕ್ತಿ ಪ್ರಥಮ, ಬಾನುತೇಜ್ ದ್ವಿತೀಯ, ಕರುಣ್ ತೃತೀಯ, ಜೂನಿಯರ್ ವಿಭಾಗದಲ್ಲಿ ಎಚ್.ಎ.ಸೋನು ಪ್ರಥಮ, ಸೃಜನ್ ದ್ವಿತೀಯ, ಟೆರೆನ್ಸ್ ಡಿಸೋಜ ತೃತೀಯ,  ಸೀನಿಯರ್ ವಿಭಾಗದಲ್ಲಿ ಎ.ಸಿ.ಕನಿಷ್ಕ ಪ್ರಥಮ, ಕೆ.ಎಸ್.ಸುಹಾಸ್ ದ್ವಿತೀಯ, ಅಕ್ಷತ ಹಾಗೂ ಪ್ರಿಯ.ಪಿ.ವಿ ತೃತೀಯ ಸ್ಥಾನವನ್ನು ಪಡೆದುಕೊಂಡರು. ಕೈ ಬರಹ ಸ್ಪರ್ಧೆಯಲ್ಲಿ ಕೆ.ಎನ್.ಶ್ವೇತ ಪ್ರಥಮ, ಹಾರುನ್.ಎಸ್ ದ್ವಿತೀಯ, ಲಾವಣ್ಯ.ಡಿ.ಸಿ ತೃತೀಯ, ಜೂನಿಯರ್ ವಿಭಾಗದಲ್ಲಿ ಉಜ್ವಲ.ವಿ ಪ್ರಥಮ, ಸಿಯೋನ ಎಂಜಲ್ ದ್ವಿತೀಯ, ಜೀವನ್.ಕೆ.ಎಲ್ ತೃತೀಯ, ಸೀನಿಯರ್ ವಿಭಾಗದಲ್ಲಿ ರಂಜಿನಿ.ಎಂ.ಆರ್ ಪ್ರಥಮ, ಕನಿಷ್ಕ.ಎ.ಸಿ ದ್ವಿತೀಯ, ಪ್ರಿಯ.ವೈ.ಪಿ ಹಾಗೂ ಸುಮತಿ ತೃತೀಯ ಸ್ಥಾನ ಪಡೆದುಕೊಂಡರು. ವಿಜೇತ ಸ್ಪರ್ಧಾಳುಗಳಿಗೆ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ವಿತರಿಸಿದರು. ನಂತರ ಮಾತನಾಡಿದ ಅವರು, ಸ್ಪರ್ಧೆಯಲ್ಲಿ ಸೋಲು…

Read More