ಮಡಿಕೇರಿ, ಆ.14 : ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನಗದು ಸೌಲಭ್ಯವನ್ನು ವರ್ಗಾವಣೆ ಮಾಡುವ ಪ್ರಯುಕ್ತ ಆ.17 ರಂದು ಕುಶಾಲನಗರ ಪುರಸಭೆ ವ್ಯಾಪ್ತಿಯ 1 ನೇ ಬ್ಲಾಕ್ ಕಾವೇರಿ ಬಡಾವಣೆಯಲ್ಲಿರುವ ಕಾವೇರಿ ಕಲಾಭವನ, 1ನೇ ಬ್ಲಾಕ್ ಇಂದಿರಾ ಬಡಾವಣೆಯಲ್ಲಿರುವ ದಾರೂಲ್ ಉಲುಂ ಸಮುದಾಯ ಭವನ, 3ನೇ ಬ್ಲಾಕ್ ತ್ಯಾಗರಾಜ ರಸ್ತೆಯಲ್ಲಿರುವ ಗಾಯತ್ರಿ ಕಲ್ಯಾಣ ಮಂಟಪ, 4 ನೇ ಬ್ಲಾಕ್‍ನಲ್ಲಿರುವ ಗೌಡ ಸಮಾಜ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಕುಶಾಲನಗರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಆ.14 : ಕೊಡಗು ಜಿಲ್ಲೆಯಾದ್ಯಂತ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಹೋಟೆಲ್, ರೆಸ್ಟೋರೆಂಟ್‍ಗಳು, ರೆಸಾರ್ಟ್‍ಗಳು, ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಪ್ಲಾಂಟೇಷನ್‍ಗಳು ಹಾಗೂ ಇತರೆ ಸಂಸ್ಥೆಗಳು ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕಡ್ಡಾಯವಾಗಿ ತಮ್ಮಲ್ಲಿ ಕೆಲಸ ಮಾಡುವ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡಲು ಸೂಚಿಸಿದೆ. ತಪ್ಪಿದಲ್ಲಿ ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆಗಾಗಿ ಸಂಬಂಧಿಸಿದವರ ವಿರುದ್ಧ ಕಾಯ್ದೆ ಮತ್ತು ನಿಯಮಗಳಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಹರ್ಷವರ್ಧನ ತಿಳಿಸಿದ್ದಾರೆ.
ಮಡಿಕೇರಿ ಆ.14 : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ..ಎಂ.ಕಾರ್ಯಪ್ಪ ಸಭಾಂಗಣದಲ್ಲಿ 2023-24ನೇ ಸಾಲಿನ ವಿದ್ಯಾರ್ಥಿ ಸಂಘ, ಎನ್‍ಎಸ್‍ಎಸ್, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡಾ ಚಟುವಟಿಕೆಗಳ ಸಮಾರಂಭಕ್ಕೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ಪಿ.ಧನಂಜಯ ಚಾಲನೆ ನೀಡಿದರು. ಎಲ್ಲರಿಗೂ ಒಳಿತನ್ನು ಬಯಸುತ್ತಾ, ಹಿರಿಯರಿಗೆ ಗೌರವ ನೀಡುತ್ತಾ, ಗುರುಗಳಿಗೆ ನಮಿಸುತ್ತಾ ಸಂಪ್ರದಾಯಗಳೊಂದಿಗೆ ಬೆಳೆದವರು ನಮ್ಮ ಭಾರತದವರು. ಶೇ.60 ಯುವಶಕ್ತಿ ಭಾರತದಲ್ಲಿದೆ. ಮುಂದಿನ ಭಾರತದ ಭವಿಷ್ಯ ಸುಗಮವಾಗಿ- ಸಮೃದ್ಧಿಯಾಗಿರಬೇಕೆಂದರೆ ಯುವ ಜನತೆಯು ಒಳ್ಳೆಯ ವಿದ್ಯಾಭ್ಯಾಸವನ್ನು ಪಡೆದು ಭಾರತ ದೇಶವನ್ನು ಅಭಿವೃದ್ಧಿಪಥದೆಡೆಗೆ ಸಾಗಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ನಾಯಕತ್ವ ಗುಣ ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ನುಡಿದರು. ನಗರಸಭಾ ಸದಸ್ಯರು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉತ್ತಮಗೊಳಿಸಲು ಇಂದಿನಿಂದಲೇ ಪ್ರಯತ್ನ ಪಡಬೇಕು. ಇಂದಿನ ಸಮಾಜದಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವಂತಹ ಸನ್ನಿವೇಶಗಳನ್ನು ನಾವೀಗ ನೋಡುತ್ತಿದ್ದೇವೆ. ಅಂತಹದರಲ್ಲಿ ಈ ಕಾಲೇಜಿನಲ್ಲಿ ಹೇರಳ ವಿದ್ಯಾರ್ಥಿಗಳನ್ನು ನೋಡಿ ಸಂತೋಷವಾಗುತ್ತಿದೆ. ಇದಕ್ಕೆ ನಿಮ್ಮ ಪ್ರಾಧ್ಯಾಪಕರುಗಳೇ…
ಮಡಿಕೇರಿ ಆ.14 : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ.15 ರವರೆಗೆ ಎಲ್ಲರ ಮನೆ ಮನೆಗಳ ಮೇಲೆ ಭಾರತದ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸುವಂತಾಗಬೇಕು ಎಂದು ಜಿಲ್ಲಾಡಳಿತ ಕೋರಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯಾದ್ಯಂತ ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಅವಧಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಉದ್ಯಮಗಳು, ಸಾರ್ವಜನಿಕ ಸ್ಥಳಗಳು, ಸಂಘ ಸಂಸ್ಥೆಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುವುದು ಸೇರಿದಂತೆ ಸಾರ್ವಜನಿಕರು ಸಹ ಸ್ವಯಂ ಪ್ರೇರಿತವಾಗಿ ಭಾಗವಹಿಸಿ, ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಲು ಕೋರಿದೆ. ಎಲ್ಲರ ಮನೆ ಮನೆಗಳ ಮೇಲೆ, ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಜಿಲ್ಲಾ ಕಚೇರಿಗಳಲ್ಲಿ ಧ್ವಜ ಶಿಷ್ಟಚಾರವನ್ನು ಪಾಲನೆ ಮಾಡಿ, ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ರಾಷ್ಟ್ರಧ್ವಜ ಹಾರಿಸಬೇಕು. ಅಭಿಯಾನದಲ್ಲಿ ಪಾಲ್ಗೊಂಡಿರುವ ಕುರಿತು ಸಾರ್ವಜನಿಕರು ಆ.15…
ಮಡಿಕೇರಿ ಆ.14 : ಕೊಡಗಿನ ಸಮಸ್ತ ಜನತೆಗೆ 77 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ನಾವೆಲ್ಲರೂ ಪಣ ತೊಡೋಣ. (ಹಂಚೆಟ್ಟಿರ ಮನು ಮುದ್ದಪ್ಪ, ಅಧ್ಯಕ್ಷರು, ವ್ಯಾಲಿ ಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್)
ಮಡಿಕೇರಿ ಆ.14 : ಕಳೆದ ಮೂರು ತಿಂಗಳಲ್ಲಿ ಕಾಡಾನೆ ದಾಳಿಯಿಂದ 44 ಪ್ರಕರಣಗಳು ವರದಿಯಾಗಿದ್ದು, ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೋಮವಾರಪೇಟೆಯ ತಾ.ಪಂ.ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕಾಡಾನೆ ಹಾವಳಿಯಿಂದ ಸಿದ್ದಾಪುರ ಬಳಿಯ ಅರೆಕಾಡು ಸಮೀಪದಲ್ಲಿ ಭಾನುವಾರ ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಡಾನೆಗಳನ್ನು ಕಾಡು ಪ್ರದೇಶಕ್ಕೆ ಓಡಿಸುವ ಸಂದರ್ಭದಲ್ಲಿ ಸ್ಥಳೀಯರಿಗೆ ಮಾಹಿತಿ ನೀಡಬೇಕು. ಮುಂಚಿತವಾಗಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದರು. ಕಾಡಾನೆ ಹಾವಳಿ ನಿಯಂತ್ರಣಕ್ಕೆ ತಂತಿ ಬೇಲಿ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಹೀಗೆ ಹಲವು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕು. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು. ವಿಷಯ…
ಮಡಿಕೇರಿ ಆ.14 : ಕೊಡಗಿನ ಸಮಸ್ತ ಜನತೆಗೆ 77 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ದೇಶಭಕ್ತಿ ನಮ್ಮೆಲ್ಲರ ಶಕ್ತಿಯಾಗಲಿ, ಭಾರತವನ್ನು ಶಕ್ತಿಶಾಲಿ ರಾಷ್ಟ್ರವನ್ನಾಗಿಸೋಣ. (ಸೂದನ ಎಸ್.ಈರಪ್ಪ, ಅಧ್ಯಕ್ಷರು, ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘ)
ಬೆಂಗಳೂರು ಆ.14 : ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಚಂದ್ರಾಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕ ಭವನ ಮತ್ತು ಶಾಖಾ ಮಠದ ವೀಕ್ಷಣೆ ಮಾಡಿದರು.
ಮಡಿಕೇರಿ ಆ.14 : ದಾಂಪತ್ಯ ಜೀವನಕ್ಕೆ ಕಾಲಿಡಲು ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ರೆಡಿ ಆಗಿದ್ದಾರೆ. ದೀರ್ಘ ಕಾಲದವರೆಗೆ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಆ.24ರಂದು ವಿರಾಜಪೇಟೆಯ “ಅಮ್ಮತಿ ಕೊಡವ ಸಮಾಜ”ದಲ್ಲಿ ಹಸೆಮಣೆ ಏರಲಿದ್ದಾರೆ. ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ, ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್ ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್ ಅಮೂಲ್ಯ, ದಿಗಂತ್ ,ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್ ,ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ರಮೇಶ್ ಅರವಿಂದ್, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ನೀಡಿದ್ದಾರೆ.
ಮಡಿಕೇರಿ ಆ.14 : ದೇಶಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳಾಗಿದೆ. ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದಕ್ಕಾಗಿ ನಾವೆಲ್ಲರೂ ಪಣ ತೊಡೋಣ. ದೇಶದ ರಕ್ಷಣೆ ಮತ್ತು ದೇಶದ ಅಭ್ಯುದಯಕ್ಕಾಗಿ ಶ್ರಮಿಸೋಣ. (ತೇಲಪಂಡ ಶಿವಕುಮಾರ್ ನಾಣಯ್ಯ, ಕಾರ್ಯಕಾರಿ ಸಮಿತಿ ಸದಸ್ಯರು, ಕೊಡಗು ಜಿಲ್ಲಾ ಬಿಜೆಪಿ)






