ಮಡಿಕೇರಿ ಸೆ.12 : ಮೊಗೇರ ಗ್ರಾಮ ವಿಕಾಸ ಯೋಜನೆಯ ಪ್ರಥಮ ವಾರ್ಷಿಕೋತ್ಸವ ಸೆ.17 ರಂದು ಸುಂಟಿಕೊಪ್ಪದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 10.30 ಗಂಟೆಗೆ ಸುಂಟಿಕೊಪ್ಪದ ಶ್ರೀ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ ಎಂದು ಗ್ರಾಮ ವಿಕಾಸ ಯೋಜನೆಯ ಅಧ್ಯಕ್ಷ ಗೌತಮ್ ಶಿವಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಪಿ.ಬಿ.ಜನಾರ್ಧನ, ರಾಜ್ಯ ಉಪಾಧ್ಯಕ್ಷ ಬಿ.ಶಿವಪ್ಪ, ಸ್ಥಾಪಕಾಧ್ಯಕ್ಷ ಟಿ.ಸದಾನಂದ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪಿ.ಎಂ.ರವಿ, ಮುದ್ದಕಳಲ ಯುವಕ ಸಂಘದ ಜಿಲ್ಲಾಧ್ಯಕ್ಷ ಜ್ಯೋತಿಕುಮಾರ್, ಸಿದ್ದಾಪುರ ಅಮೃತ ಮೊಗೇರ ಸಂಘದ ಅಧ್ಯಕ್ಷ ಮಂಜು ಬರಡಿ ಹಾಗೂ ಶಾಂತಳ್ಳಿ ಉಪ ತಹಶೀಲ್ದಾರ್ ತುಕ್ರಪ್ಪ ಪಾಲ್ಗೊಳ್ಳಲಿದ್ದಾರೆ. ನಾಲ್ಕೇರಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕ ಪಿ.ಕೆ.ಅಪ್ಪಯ್ಯ, ಮಡಿಕೇರಿ ಉಪ ಅರಣ್ಯ ವಲಯಾಧಿಕಾರಿ ಪಿ.ಟಿ.ರಾಘವ, ಸೋಮವಾರಪೇಟೆ ವೈಲ್ಡ್ ಲೈಫ್ ಡಿ.ಆರ್.ಎಫ್.ಓ ಪಿ.ಟಿ.ಶಶಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಅಧೀಕ್ಷಕ ಬಾಬು,…
ಲೇಖಕ: admin
ಬೆಂಗಳೂರು ಸೆ.12: ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, ಇಲ್ಲ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home ಗೆ ಅವಕಾಶವಿಲ್ಲ. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ. ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎನ್ನುವ ಸೂಚನೆ ನೀಡಿದರು. ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ…
ಮಡಿಕೇರಿ ಸೆ.12 : ಕಾಫಿ ತೋಟದ ಲೈನ್‍ಮನೆಗಳಲ್ಲಿ ಹಾಗೂ ಬಾಡಿಗೆ ಮನೆಯಲ್ಲಿ ವಾಸವಿರುವ ನಿವೇಶನ ಹಾಗೂ ವಸತಿ ರಹಿತ ಬುಡಕಟ್ಟು ಕುಟುಂಬದವರಿಗೆ ನಿವೇಶನ ಹಾಗೂ ಹಕ್ಕುಪತ್ರ ಒದಗಿಸವಂತೆ ಒತ್ತಾಯಿಸಿ ಬುಡಕಟ್ಟು ಕಾರ್ಮಿಕರ ಸಂಘ ಪ್ರತಿಭಟನೆ ನಡೆಸಿತು. ಪೊನ್ನಂಪೇಟೆ ತಾಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, 8 ತಿಂಗಳುಗಳ ಕಾಲ ನಿರಂತರವಾಗಿ ತಾಲೂಕು ಕಚೇರಿಯ ಮುಂದೆ ಅಹೋರಾತ್ರಿ ಪ್ರತಿಭಟನೆ ಕೈಗೆತ್ತಿಕೊಳ್ಳಲಾಗಿತ್ತು. ಈ ವೇಳೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿವೇಶನ ಮಂಜೂರು ಮಾಡುವುದಾಗಿ ಭರವಸೆ ನೀಡಿ ಇಂದಿಗೆ 5 ತಿಂಗಳು ಕಳೆದರು ನಮ್ಮ ಸಮಸ್ಯೆಗಳಿಗೆ ಪರಿಹಾರ ಲಭಿಸಿಲ್ಲ. ಒಂದು ತಿಂಗಳೊಳಗೆ ನಿವೇಶನ ರಹಿತ ಆದಿವಾಸಿಗಳಿಗೆ ನಿವೇಶನ ಹಾಗೂ ಹಕ್ಕುಪತ್ರ ನೀಡುವಂತೆ ಪ್ರತಿಭಟನಾನಿರತರು ಪಟ್ಟು ಹಿಡಿದರು. ಬುಡಕಟ್ಟು ಕಾರ್ಮಿಕರ ಸಂಘದ ಅಧ್ಯಕ್ಷ ವೈ.ಬಿ.ಗಪ್ಪು ಮುಂದಾಳತ್ವದಲ್ಲಿ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಕಚೇರಿಯ ಮುಂದೆ ಜಮಾವಣೆಗೊಂಡ ನೂರಾರು ಗಿರಿಜನರು, ತಾಲೂಕು ತಶೀಲ್ದಾರ್‍ಗಳಿಗೆ ಮನವಿ ಸಲ್ಲಿಸಿ ನಂತರ ಪೊನ್ನಂಪೇಟೆಯ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಸಾಗಿ ತಾಲೂಕು ಪಂಚಾಯಿತಿಯ ಕಚೇರಿಗೆ ಆಗಮಿಸಿ…
ಬೆಂಗಳೂರು ಸೆ 12: ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು. ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ. ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ. ಕೆಲವೊಂದು ಸಮಸ್ಯೆಗಳಿಗೆ ವಾರದ ಕಾಲ ಮಿತಿಯಲ್ಲಿ…
ಮಡಿಕೇರಿ ಸೆ.12 : ಕೊಡಗಿನ ಮುರುವಂಡ ತನುಷ್ ಅಪ್ಪಯ್ಯ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಪದವಿಗೇರಿದ್ದಾರೆ. ಚೆನ್ನೈನಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ತೇರ್ಗಡೆಯಾಗಿ ಲೆಫ್ಟಿನೆಂಟ್ ಪದವಿಯೊಂದಿಗೆ ಹೊರಹೊಮ್ಮಿದ್ದಾರೆ. ಕೊಳತೋಡು ಬೈಗೋಡು ಗ್ರಾಮದ ತನುಷ್ ಅಪ್ಪಯ್ಯ ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ (ಕಾಪ್ಸ್) ದ್ವಿತೀಯ ಪಿಯುಸಿವರೆಗೆ ವ್ಯಾಸಂಗ ಮಾಡಿ ಬೆಂಗಳೂರಿನ ದಯಾನಂದ ಸಾಗರ ಇಂಜಿನಿಯರಿಂಗ್ ಕಾಲೇಜಿನಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಅಲಹಾಬಾದ್ ನಲ್ಲಿ ಎಸ್.ಎಸ್. ಬಿ. ಪೂರ್ಣಗೊಳಿಸಿದ್ದ ತನುಷ್ ಅಪ್ಪಯ್ಯ, ಶಾರ್ಟ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 8ನೇ ರ‍್ಯಾಂಕ್ ಪಡೆದು ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡಮಿಗೆ ಸೇರಿದ್ದರು. ತನುಷ್ ಅಪ್ಪಯ್ಯ ಕೊಳತೋಡು ಬೈಗೋಡು ಗ್ರಾಮದ ಮುರುವಂಡ ಎ.ಬೋಪಣ್ಣ (ಮುತ್ತು) ಮತ್ತು ವಿನುತಾ (ತಾಮನೆ: ಬೊಜ್ಜಂಗಡ) ದಂಪತಿಯ ಪುತ್ರರಾಗಿದ್ದಾರೆ.
ಮಡಿಕೇರಿ ಸೆ.12 : ಕುಶಾಲನಗರದ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.
ಸುಂಟಿಕೊಪ್ಪ ಸೆ.13 : ಶ್ರೀ ದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶಿವಪ್ರಸಾದ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಆಕಾಶ್ ನೇಮಕಗೊಂಡಿದ್ದಾರೆ. ಕಳೆದ 10 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಮಿತಿಗೆ ಉಪಾಧ್ಯಕ್ಷರಾಗಿ ವಿನೋದ್‍ಕುಮಾರ್, ಖಜಾಂಜಿಯಾಗಿ ಮಹೇಂದ್ರ (ಚಾಮಿ), ಸಹಕಾರ್ಯದರ್ಶಿ ಬಿ.ಕೆ.ರಾಜೇಶ್, ಸಮಿತಿ ಸದಸ್ಯರುಗಳಾಗಿ ಕಿರಣ್, ಮನೋಜ್, ರಾಜೇಶ್, ಆದರ್ಶ್, ವಿಷ್ಣು, ಮಧು, ಪ್ರಶಾಂತ್, ಕಾರ್ತಿಕ್, ಸುನಿಲ್ ಹಾಗೂ ಸುದಿ ನೇಮಕಗೊಳಿಸಲಾಯಿತು.
ಸುಂಟಿಕೊಪ್ಪ ಸೆ.12 : ಮಾದಾಪುರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಯ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್‍ನಿಂದ ಮಾದಪುರ ವಲಯ ಕಾಂಗ್ರೆಸ್ ಅಧ್ಯಕ್ಷ ದಾದು ಬೋಪಯ್ಯ ಸೇರಿದಂತೆ ಎಲ್ಲಾ 13 ಸ್ಥಾನಗಳಿಗೆ ಆಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರೂ 1 ಸ್ಥಾನಗಳಿಸದೆ ಹೀನಾಯ ಸೋಲು ಕಂಡಿದೆ. ಮಾದಾಪುರ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎ.ಲತೀಫ್ ಪಕ್ಷೇತರರಾಗಿ ಸ್ಪರ್ಧಿಸಿ ಜಯ ಸಾಧಿಸಿದ್ದರೆ. ಹಿರಿಯ ಸಹಕಾರಿ ಸಿ.ಎ.ತಮ್ಮಯ್ಯ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಪಕ್ಷದ ಆಭ್ಯರ್ಥಿಗಳ ಪರವಾಗಿ ಶಾಸಕ ಡಾ.ಮಂಥರ್‍ಗೌಡ ಸೋಮವಾರಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಪ್ರಚಾರ ನಡೆಸಿದರೂ ಮತದಾರರ ಮನಗೆಲ್ಲಲು ಸಾಧ್ಯವಾಗಲಿಲ್ಲ. ಬಿಜೆಪಿಯ ಸಂಘದ ಅಧ್ಯಕ್ಷ ಬಿಜ್ಜಂಡ ಮೊಣ್ಣಪ್ಪ ಸುಬ್ರಮಣಿ, ನಾಪಂಡ ಉಮೇಶ ಉತ್ತಪ್ಪ, ಕುಟ್ಟಂಡ ಕುಟ್ಟಪ್ಪ, ಮುಕ್ಕಾಟಿರ ತಿಮ್ಮಯ್ಯ, ಪಿ.ಪಿ.ತಿಲಕ ಕುಮಾರ್, ನಾಗಂಡ ಭವಿನ್, ನಾಗಂಡ ಸೋನುದೇಚಮ್ಮ, ಸಿ.ಎಸ್.ಪವಿತ್ರ ಹರೀಶ, ಎಂ.ಆರ್.ಗಿರೀಶ,ಭೀಮಯ್ಯ ಹೆಚ್.ಈ.,…
ಮಡಿಕೇರಿ ಸೆ.11 : ಅಮ್ಮತ್ತಿಯ ಕಲ್ ಗುಡಿ ಆರ್ಮರಿಯಿಂದ ಸಿಂಗಲ್ ಬ್ಯಾರಲ್ ಕೋವಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರು ಕೋವಿಯನ್ನು ಅನಾವರಣಗೊಳಿಸಿದರು. ಕೊಡಗಿನ ವೀರಪರಂಪರೆಯ ಕೂರ್ಗ್ ವಾರಿಯರ್ ಲೋಗೊ ಹೊಂದಿರುವ ಅತ್ಯುತ್ತಮ ಗುಣಮಟ್ಟದ ಭಾರತೀಯ ಸಿಂಗಲ್ ಬ್ಯಾರಲ್ ನ ನೂತನ ಕೋವಿಯನ್ನು ಅಮ್ಮತ್ತಿಯ ಕಲ್ ಗುಡಿ ಗನ್ನ್ ಹೌಸ್ ನಲ್ಲಿ ಗಾಳಿಗೆ ಗುಂಡು ಹಾರಿಸುವ ಮೂಲಕ ಶಾಸಕ ಪೊನ್ನಣ್ಣ ಅವರು ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭ ಕಲ್ಗುಡಿಯ ಆರ್ಮರಿಯ ಸಂಸ್ಥಾಪಕ ನೆಲ್ಲಮಕ್ಕಡ ಶಂಭು ಸೋಮಣ್ಣ, ಸಂಸದ ಪ್ರತಾಪಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮತ್ತಿತರರು ನೂತನ ಕೋವಿಯನ್ನು ಲೋಕಾರ್ಪಣೆಗೊಳಿಸಿದರು.
ಮಡಿಕೇರಿ ಸೆ.11 : ಮಡಿಕೇರಿ ದಸರಾ-2023 ರ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹಾಗೂ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರ ಅನಿಲ್ ಹೆಚ್.ಟಿ ಮತ್ತು ಕವಿಗೋಷ್ಠಿ ಅಧ್ಯಕ್ಷರಾಗಿ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಆಯ್ಕೆಯಾಗಿದ್ದಾರೆ.






