ಮಡಿಕೇರಿ ಆ.12 : ಕೊಡಗು ಜಿಲ್ಲೆಯ ಹಲವೆಡೆ ಕಾಡಾನೆಗಳ ಮೇಲೆ ದ್ವೇಷ ಸಾಧನೆ ಆಗುತ್ತಿದ್ದು ವನ್ಯಜೀವಿಗಳ ಹತ್ಯೆಗಳು ನಡೆಯುವುದು ಕಂಡು ಬಂದಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ತಿಳಿಸಿದ್ದಾರೆ. ಅವರು ಕುಶಾಲನಗರದ ಸಮೀಪದ ಹಾರಂಗಿ ಆನೆ ಶಿಬಿರದಲ್ಲಿ ನಡೆದ ಆನೆ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಆನೆಗಳು ಪರಿಸರದ ಭಾಗವಾಗಿದ್ದು, ಪ್ರಕೃತಿಯ ಸಂರಕ್ಷಣೆ ಆದಲ್ಲಿ ಮಾತ್ರ ಮಾನವನ ಉಳಿವುಸಾಧ್ಯ ಎಂದರು. ದೇಶದಲ್ಲಿ ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ರಾಜ್ಯದಲ್ಲಿ 6 ಸಾವಿರಕ್ಕೂ ಅಧಿಕ ಆನೆಗಳಿದ್ದು ಜಿಲ್ಲೆಯಲ್ಲಿ ಕೂಡ ಆನೆಗಳ ಸಂಖ್ಯೆ ಏರಿಕೆ ಕಂಡು ಬಂದಿದೆ. ಆನೆ ಮಾನವ ಸಂಘರ್ಷಕ್ಕೆ ನಾವುಗಳೇ ಪರಿಹಾರ ಹುಡುಕಬೇಕಾಗಿದೆ. ಅವುಗಳ ಸಂರಕ್ಷಣೆ ನಮ್ಮಿಂದಲೇ ಆಗಬೇಕಾಗಿದೆ ಎಂದರು. ಈ ಸಂದರ್ಭ ಮಾತನಾಡಿದ ವನ್ಯಜೀವಿ ತಜ್ಞರಾದ ಡಾ ಚಿಟ್ಟಿಯಪ್ಪ, ಆನೆಗಳ ಆಹಾರ, ಓಡಾಡುವ ಪ್ರದೇಶಗಳ ಕೊರತೆ ಹಾಗೂ ಪ್ರಾಕೃತಿಕ ಪರಿಸರ ನಾಶ ಪ್ರಸಕ್ತ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಅರಣ್ಯ ನಾಶ ಕಾಡಿನಲ್ಲಿ ಕಂಡು…
ಲೇಖಕ: admin
ಸುಂಟಿಕೊಪ್ಪ, ಆ.12: ಗದ್ದೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನೂತನವಾಗಿ ಆಯ್ಕೆಯಾದ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸುಂಟಿಕೊಪ್ಪ ಗ್ರೇಡ್ 1 ಗ್ರಾ.ಪಂ 2ನೇ ಅವಧಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನೇಮಕಗೊಂಡ ಪಿ.ಆರ್.ಸುನಿಲ್‍ಕುಮಾರ್ ಅವರನ್ನು ಶಾಲೆಯ ಮುಖ್ಯೋಪಾದ್ಯಾಯನಿ ಹೇಮಾಕುಮಾರಿ ಶಾಲು ಹೊದೆಸಿ, ಫಲತಾಂಬೂಲ ನೀಡಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಆಯ್ಕೆಯಾಗಿರುವ ನನ್ನನು ಶಾಲೆಯ ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದವು ಪ್ರಪ್ರಥಮವಾಗಿ ಗೌರವಿಸುವ ಮೂಲಕ ನನ್ನ ಮೇಲೆ ಇರಿಸಿರುವ ಅಭಿಮಾನಕ್ಕೆ ಚಿರಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿಯೂ ಶಾಲೆಯ ಸರ್ವೊತ್ತೋಮುಖ ಅಭಿವೃದ್ಧಿಗೆ ಪೂರಕವಾಗಿ ಆದ್ಯತೆಯನ್ನು ನೀಡುವ ಭರವಸೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭ ಶಿಕ್ಷಕಿಯಾರಾದ ಶೈಲಾ ಜಾಯ್, ಮೀನಾ ಕುಮಾರಿ,ಅನಿತಾ, ಅಕ್ಷರ ದಾಸೋಹದ ಶ್ರೀಜಾ, ಹೀನ ಹಾಗೂ ವಿದ್ಯಾರ್ಥಿಗಳು ಇದ್ದರು.
ಮಡಿಕೇರಿ ಆ.12 : ಗ್ರಾಮೀಣ ಸೊಗಡಿನ ಜಾನಪದ ಕಲೆಯ ‘ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ’ ಮಡಿಕೇರಿ ಸಮೀಪ ಕಗ್ಗೋಡ್ಲುವಿನ ಗದ್ದೆ ಬಯಲಿನಲ್ಲಿ, ಉತ್ಸಾಹಿ ಕ್ರೀಡಾಳುಗಳು ಹಾಗೂ ಕ್ರೀಡಾ ಪ್ರೇಮಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಮತ್ತು ತಾಲ್ಲೂಕು ಯುವ ಒಕ್ಕೂಟ, ಕಗ್ಗೋಡ್ಲು ಕಾವೇರಿ ಯುವಕ ಸಂಘ ಹಾಗೂ ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಸಂಯುಕ್ತಾಶ್ರಯದಲ್ಲಿ ಕಗ್ಗೋಡ್ಲುವಿನ ದಿವಂಗತ ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ಜಿಲ್ಲೆ ಮಾತ್ರವಲ್ಲದೆ ನೆರೆಯ ಜಿಲ್ಲೆಯ ಹಲವು ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದವು. ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ, ಸಾರ್ವಜನಿಕ ಪುರುಷರ ವಾಲಿಬಾಲ್, ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್, ಪ್ರೌಢ ಶಾಲಾ ಬಾಲಕಿಯರಿಗೆ ಥ್ರೋಬಾಲ್ ಪಂದ್ಯಾವಳಿ, ಪ್ರೌಢಶಾಲಾ ಬಾಲಕ-ಬಾಲಕಿಯರ ಹಗ್ಗಜಗ್ಗಾಟ ಸ್ಪರ್ಧೆಗಳು ನಡೆದವು, ಅದರಲ್ಲೂ ಹಗ್ಗಜಗ್ಗಾಟ ಸ್ಪರ್ಧೆ ಅತ್ಯಂತ ಕುತೂಹಲಕಾರಿಯಾಗಿ ನಡೆದು ಗಮನ ಸೆಳೆಯಿತು. ::: ಕೆಸರಿನಲ್ಲಿ ಮಿಂದೆದ್ದ ಪುಟಾಣಿಗಳು ::: ವಿಶಾಲವಾದ ಗದ್ದೆ…
ಸೋಮವಾರಪೇಟೆ ಆ.12 : ವೀರಶೈವ ಲಿಂಗಾಯತ ಸಂಘಟನಾ ವೇದಿಕೆ (ರಿ), ಕೊಡಗು ಜಿಲ್ಲೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೊಡ್ಲಿಪೇಟೆ ಮಹಿಳಾ ಸಮಾಜದಲ್ಲಿ ನಡೆಯಿತು. ಜಿಲ್ಲಾ ಅಧ್ಯಕ್ಷರಾಗಿ ಹೆಚ್.ಎಂ.ದಿವಾಕರ್ ಪ್ರಧಾನ ಕಾರ್ಯದರ್ಶಿ ದಯಾನಂದ, ಮಾಧ್ಯಮ ಕಾರ್ಯದರ್ಶಿ ಎನ್.ಎ. ಅಶ್ವಥ್ ಕುಮಾರ್, ಖಜಾಂಚಿ ಯು.ಪಿ.ನಾಗೇಶ್ . ಪ್ರಧಾನ ಸಂಚಾಲಕರಾಗಿ ಬಿ.ಕೆ.ಯತೀಶ್ ತಾಲ್ಲೂಕುವಾರು ಉಪಾಧ್ಯಕ್ಷರಾಗಿ ಸಿ.ವಿ..ಶಂಭುಲಿಂಗಪ್ಪ, ಡಿ.ಎಸ್. ಮಹೇಶ್ , ಶನಿವಾರಸಂತೆ ಡಿ.ಎನ್.ವಿಕ್ರಂ, ಬಡುಬನಹಳ್ಳಿ ಬಸಪ್ಪ ಸೋಮವಾರಪೇಟೆ ಎಂ.ಎಂ. ಪ್ರಕಾಶ್ , ಹೆಚ್.ಸಿ. ಯತೀಶ್, ಕಾರ್ಯದರ್ಶಿಗಳಾಗಿ ಎಸ್.ವಿ.ಸಿದ್ದೇಶ್ . ಯು.ಹೆಚ್. ಉಮೇಶ್, ನಿರ್ದೇಶಕರು ಗುರುರಾಜ್, ಎಂ.ಸಿ.ಆದರ್ಶ, ಪಿ.ಎನ್ ರವಿ, ಇಂದುಶೇಖರ್, ಕೆ.ಪಿ.ಮುತ್ತಯ್ಯ, ಮೊಹನ್, ವಿ.ಹರೀಶ್, ಪ್ರಥಾಪ್.ಸಿ.ಟಿ ಜಗದೀಶ್, ಗಿರೀಶ್ ಲಕ್ನಿ ಇವರುಗಳನ್ನು ಆಯ್ಕೆ ಮಾಡಲಾಯಿತು ಹಾಗು ಸಂಘದ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಸಭೆಯ ದಿವ್ಯ ಸಾನಿದ್ಯದಲ್ಲಿ ಗೌರವಾಧ್ಯಕ್ಷರಾದ ಮನೆಹಳ್ಳಿ ಮಠಾಧ್ಯರು ಶ್ರೀ ಶ್ರೀ ಶಿವಲಿಂಗಸ್ವಾಮೀಜಿ, ಕಲ್ಲುಮಠಾಧ್ಯಕ್ಷರು ಶ್ರೀ ಶ್ರೀ ಮಹಾಂತ ಸ್ವಾಮೀಜಿ, ಕಲ್ಲಹಳ್ಳಿ ಮಠಾಧ್ಯಕ್ಷರು ಶ್ರೀ ಶ್ರೀ ರುದ್ರಮುನಿ ಮಾಹಾ ಸ್ವಾಮೀಜಿ ಆಶೀರ್ವಚನ ನೀಡಿದರು. ಪ್ರಾಸ್ಥಾವಿಕ…
ಮಡಿಕೇರಿ ಆ.12 : ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಸ್ವಾವಲಂಬಿ ಬದುಕಿನ ಗ್ಯಾರಂಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಆ.14ರಂದು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳ ಸಾವಿರಾರು ಮಂದಿ ಭೂಮಿ-ವಸತಿ ವಂಚಿತ ಬಡ ಜನರು ಈ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ ಎಂದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಬಡ ಜನರಿಗೆ ನೀಡಿರುವ ಐದು ಗ್ಯಾರಂಟಿಗಳ ಬದಲು ಸ್ವಾವಲಂಬಿ ಬದುಕಿನ ಗ್ಯಾರಂಟಿ ನೀಡಬೇಕಿತ್ತು. ಕಳೆದ ಹಲವು ವರ್ಷಗಳಿಂದ ಭೂಮಿಯ ಹಕ್ಕುಪತ್ರಕ್ಕಾಗಿ ಧ್ವನಿ ಎತ್ತುತ್ತಿದ್ದರೂ ಚುನಾವಣೆ ಸಂದರ್ಭದಲ್ಲಿ ಭರವಸೆ ಮಾತ್ರ ನೀಡಿ ಆಡಳಿತಕ್ಕೆ ಬಂದ ನಂತರ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು. ಆದಿವಾಸಿಗಳನ್ನು ಲೈನ್‍ಮನೆಗಳಿಂದ ಬಿಡುಗಡೆಗೊಳಿಸಿ ಸ್ವಂತ ಸೂರು, ಕೃಷಿ ಭೂಮಿ ನೀಡಬೇಕು, ಬ್ಯಾಡಗೊಟ್ಟ ಮತ್ತು ಬಡವನಹಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳನ್ನು…
ಮಡಿಕೇರಿ,ಆ.12 : ಎರಡನೇ ಶನಿವಾರದ ರಜಾದಿನ., ಪ್ರವಾಸಿ ತಾಣವೂ ಆಗಿರುವ ಮಂಜಿನ ನಗರಿ ಮಡಿಕೇರಿಯಲ್ಲಿ ಜನ ಜಂಗುಳಿ ಇದ್ದಿದ್ದೇ.., ಬೆಳಿಗ್ಗೆಯೇ ದೇವಾಲಯಗಳಲ್ಲೂ ಭಕ್ತರು., ರಸ್ತೆಯಲ್ಲಿ ಶಾಲಾ ಮಕ್ಕಳ., ವಾಹನಗಳ ಓಡಾಟ., ನಗರ ಮಧ್ಯದೊಲಗಡೆ ತಲೆ ಎತ್ತಿ ನಿಂತಿರುವ ಐತಿಹಾಸಿಕ ಹಿನ್ನೆಲೆ ಇರುವ ಶ್ರೀ ಓಕಾರೇಶ್ವರ ದೇವಾಲಯದ ಪುಷ್ಕರಣಿಯ ಬಳಿ ಭಕ್ತರ ಓಡಾಟವಿತ್ತು., ಪ್ರಶಾಂತ ವಾತಾವರಣದಲ್ಲಿ ಒಂದು ಬದಿಯಿಂದ ‘ಹೊಯ್ಯಾ., ಹೊಯ್.,’ ಎಂಬ ರೈತರು ನಾಟಿ ನೆಡುವ ಹಾಡು ಕೇಳಿಬರುತ್ತಿತ್ತು., ಕಣ್ಹಾಯಿಸಿದಾಗ ಪುಟ್ಟದಾದ ಗದ್ದೆಯಲ್ಲಿ ಒಂದಷ್ಟು ಮಂದಿ ನಾಟಿ ನೆಡುತ್ತಿದ್ದರು., ರೈತರಲ್ಲದಂತಿದ್ದರೂ ಮಣ್ಣಿನ ಮಕ್ಕಳಾಗಿದ್ದರು..! ಈ ದೃಷ್ಯ ಕಂಡುಬಂದಿದ್ದು ಇಂದು ಬೆಳಿಗ್ಗೆ ಓಂಕಾರೇಶ್ವರ ದೇವಾಲಯದ ಪುಷ್ಕರಣಿಯ ಪಕ್ಕದಲ್ಲಿ ಸಾಂಪ್ರದಾಯಿಕ ಹುತ್ತರಿ ಹಬ್ಬಕ್ಕೆ ಕದಿರು ತೆಗೆಯುವ ಸಲುವಾಗಿ ನಿರ್ಮಿಸಿರುವ ಗದ್ದೆಯಲ್ಲಿ., ವರ್ಷಂಪ್ರತಿಯಂತೆ ಈ ಬಾರಿ ಕೂಡ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ವತಿಯಿಂದ ಕೊಡಗು ಜಿಲ್ಲಾ ಜಾನಪದ ಪರಿಷತ್‍ನ ಸಹಯೋಗದೊಂದಿಗೆ ಸಾಂಪ್ರದಾಯಿಕ ನಾಟಿ ನೆಡುವ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ಮಕ್ಕಳು, ಮಹಿಳೆ, ಪುರುಷ, ವೃದ್ಧರಾದಿಯಾಗಿ…
ಬೆಂಗಳೂರು ಆ.12 : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಭಾಗೀರಥಿ ಮುರುಳ್ಯ ಆಯ್ಕೆಯಾಗಿದ್ದಾರೆ. ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರ ಆದೇಶದನ್ವಯ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ. ಅವರು ಕಾರ್ಯ ನಿರ್ವಹಿಸಲಿದ್ದಾರೆ. ಸಮಿತಿಗೆ 15 ವಿಧಾನಸಭಾ ಸದಸ್ಯರು ಹಾಗೂ 5 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
ಮಡಿಕೇರಿ ಆ.12 : ನೆಲಜಿಯ ಅಂಬಲ ಮಹಿಳಾ ಸಮಾಜದ ವತಿಯಿಂದ ಸಾಧಕರನ್ನು ಸನ್ಮಾನಿಸಲಾಯಿತು. ಅಂಬಾಲ ಮಹಿಳಾ ಸಮಾಜದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ , ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಆಕಾಶವಾಣಿಯ ನಿವೃತ್ತ ಉದ್ಘೋಷಕಿ ಶಾರದ ನಂಜಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಮಾಜದ ಪ್ರಮುಖರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.
ನಾಪೋಕ್ಲು ಆ.12 : ದಡಾರದಂತಹ ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾಕರಣ ಅಭಿಯಾನ ಕಾರುಗುಂದ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಡಳಿತ ವೈದ್ಯಾಧಿಕಾರಿ ಪಾರ್ವತಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ದಡಾರ ಮತ್ತು ರುಬೆಲ್ಲಾವನ್ನು ನಿರ್ಮೂಲನೆ ಮಾಡಬೇಕಿದೆ. ಆ ನಿಟ್ಟಿನಲ್ಲಿ ಲಸಿಕಾಕರಣಕ್ಕೆ ಬಿಟ್ಟು ಹೋದ ಮಕ್ಕಳು ಮತ್ತು ಗರ್ಭಿಣಿಯರಿಗೆ ಇಂದ್ರಧನುಷ್ 5.0 ಲಸಿಕಾಕರಣವನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು ಸಮುದಾಯದಿಂದ ರೋಗವನ್ನು ತಡೆಯಲು ಸಾಧ್ಯವಾಗಲಿದೆ. ಬಿಟ್ಟು ಹೋದ ಮತ್ತು ಹೊರಗುಳಿದ ಐದು ವರ್ಷದ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಲಸಿಕಾಕರಣ ಕೊಡಿಸಬೇಕು ಎಂದ ಲಸಿಕೆ ಅಭಿಯಾನದ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಕಾರುಗುಂದ ಗ್ರಾ.ಪಂ ಸದಸ್ಯೆ ಎಂ.ಕೆ.ಜಯಂತಿ, ಐಸಿಡಿಎಸ್ ಮಡಿಕೇರಿ ತಾಲೂಕು ಮೇಲ್ವಿಚಾರಕಿ ಶೀಲಾ, ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.ನೆರೆದಿದ್ದವರಿಗೆ ಆರೋಗ್ಯದ ಬಗ್ಗೆ ಹಾಗೂ ಚುಚ್ಚುಮದ್ದಿನ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು. ವರದಿ : ದುಗ್ಗಳ ಸದಾನಂದ
ಬೆಂಗಳೂರು ಆ.12 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗ್ನಿ ಅವಘಡ ಸಂಭವಿಸಿದ ಬಿಬಿಎಂಪಿ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣಾ ವಿಭಾಗದ ಪ್ರಯೋಗಾಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಂತರ ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಭೈರತಿ ಸುರೇಶ್ ಹಾಜರಿದ್ದರು.






