ಲೇಖಕ: admin

ಮಡಿಕೇರಿ ಸೆ.11 : ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಪ್ರಮುಖ ಡಾ.ಸೈಯದ್ ನಾಸಿರ್ ಹುಸೇನ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕ ಮತ್ತು ಅಲ್ಪಸಂಖ್ಯಾತರ ಘಟಕ ಸನ್ಮಾನಿಸಿ ಗೌರವಿಸಿತು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಪ್ರಮುಖರಾದ ಯಾಕುಬ್, ಲತೀಫ್, ರಶೀದ್, ಶೌಕತ್, ಜುಬೈರ್, ರಫೀಕ್ ಹಾಗೂ ಬಾಷಾ ಅವರುಗಳು ಬೆಂಗಳೂರಿನಲ್ಲಿ ಡಾ.ಸೈಯದ್ ನಾಸಿರ್ ಹುಸೇನ್ ಅವರನ್ನು ಭೇಟಿಯಾಗಿ ಅಭಿನಂದಿಸಿ ಶುಭ ಹಾರೈಸಿದರು.

Read More

ಸೋಮವಾರಪೇಟೆ ಸೆ.11 : ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ತಾಲ್ಲೂಕು ರೈತ ಮೋರ್ಚಾ ಪ್ರತಿಭಟನೆ ನಡೆಸಿತು. ಸೋಮವಾರಪೇಟೆ ತಾಲ್ಲೂಕು ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತಪರ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು. ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆ, ಭೂಸಿರಿ, ಶ್ರಮಶಕ್ತಿ ಮತ್ತು ರೈತ ಸಂಪದ ಯೋಜನೆಯನ್ನು ಮುಂದುವರೆಸಬೇಕೆoದು ಆಗ್ರಹಿಸಿದರು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರoಜನ್, ರೈತ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಮಚ್ಚಂಡ ಪ್ರಕಾಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಸೆ.11 : ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆಯಾಗಿದ್ದು, ಇದೇ ರಾಜ್ಯದ ಪತಿ ರೋಷನ್ (30) ಬಂಧಿತ ಆರೋಪಿಯಾಗಿದ್ದಾನೆ. ನಗರದ ಖಾಸಗಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಕೈಗಾರಿಕಾ ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಲಹ ಏರ್ಪಟ್ಟು ಪತಿ ರೋಷನ್ ರಾಧಿಕಾಳ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ತೀವ್ರ ರಕ್ತಸ್ರಾವಗೊಂಡ ಮಹಿಳೆಯನ್ನು ನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಆರೋಪಿ ರೋಷನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಸೆ.11 : ಸೋಮವಾರಪೇಟೆಯ ಶಾಸಕರ ಕಛೇರಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು  ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಬಹುತೇಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಶಾಸಕರು ಸಕಾಲದಲ್ಲಿ ಸಾರ್ವಜನಿಕರ ಕೆಲಸ, ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು ಸಾರ್ವಜನಿಕರು ಶಾಸಕರ ಗಮನ ಸೆಳೆದರು, ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.

Read More

ಬೆಂಗಳೂರು ಸೆ.11 :  ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ವರದಿಯಾಗಿದ್ದು,  ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ. ತಮ್ಮ ಫೆಸ್‍ಬುಕ್ ಪೋಸ್ಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ.  ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ…

Read More

ಬೆಂಗಳೂರು ಸೆ.11 :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವನಸಂಪತ್ತಿನ ಸಂರಕ್ಷಣೆಯ ವೇಳೆ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅರಣ್ಯ ಸಚಿವ  ಈಶ್ವರ್ ಖಂಡ್ರೆ ಮತ್ತು ವಸತಿ‌ ಸಚಿವ ಜಮೀರ್ ಅಹಮದ್ ಈ ಸಂದರ್ಭ  ಹಾಜರಿದ್ದರು.

Read More

ಮಡಿಕೇರಿ ಸೆ.11 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವನ್ನು ಉಪಮುಖ್ಯ ವೈದ್ಯಾಧಿಕಾರಿ ಹೆಚ್.ವಿ.ದೇವದಾಸ್ ಉದ್ಘಾಟಿಸಿ, ಮಾತನಾಡಿ ಅಂಬೇಡ್ಕರ್ ಅವರಿಂದ ಎಲ್ಲವನ್ನೂ ಪಡೆದುಕೊಂಡ ನಾವು ಸಮಾಜದ ದೀನದಲಿತರ ಬದುಕನ್ನು ಹಸನಾಗಿಸಲು ಶ್ರಮಪಡಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ದಲಿತ ಸಂಘರ್ಷ ಸಮಿತಿಯು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು, ಆಶ್ರಮದ ಹಿರಿಯರಿಗೆ ಒಂದು ದಿನ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಏರ್ಪಡಿಸಿದಲ್ಲಿ ತಾನೂ ಕೂಡ ಒಬ್ಬ ವೈದ್ಯನಾಗಿ ಬಂದು ಅವರ ಸೇವೆ ಮಾಡುವುದಾಗಿ ಭರವಸೆ ನೀಡಿದರು. ಕೊಡಗು ಮೆಡಿಕಲ್ ಕಾಲೇಜಿನ ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ದೇಶದ ಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್.ಎಲ್.ದಿವಾಕರ್, ವಿದ್ಯಾರ್ಥಿಗಳು ಅಂಬೇಡ್ಕರ್…

Read More

ಗೋಣಿಕೊಪ್ಪ ಸೆ.11 : ಮಿಸ್, ಮಿಸ್ಸೆಸ್ ಮತ್ತು ಕಿಡ್ಸ್ ಮೈಸೂರು ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಮೊದಲ ರನ್ನರ್ ಅಪ್ ಕಿರೀಟವನ್ನು ರಶ್ಮಿ ರಾಜ್ ಮುಡಿಗೇರಿಸಿಕೊಂಡಿದ್ದಾರೆ. ಎಸ್.ಎಸ್ ಕಲಾಸಂಗಮ ಸಂಸ್ಥೆ ಮೈಸೂರಿನಲ್ಲಿ ಆಯೋಜಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ವಿಭಾಗದಲ್ಲಿ ರಶ್ಮಿ ಭಾಗವಹಿಸಿದ್ದರು. ಮೂರು ವಿಭಾಗದಲ್ಲಿ ಸುಮಾರು 60ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಸೌಂದರ್ಯ ಸ್ಪರ್ಧೆಯ ತೀರ್ಪುಗಾರರಾಗಿ ಭುವನ ಸುಂದರಿ 2022 ವಿನ್ನರ್ ಸತ್ಯವತಿ ಬಸವರಾಜ್, ಜ್ಯೋತಿಬಿಹಲ್, ಸುಪ್ರಜಾ, ಪೂರ್ಣಿಮಾ, ಮುಖ್ಯ ಅತಿಥಿಗಳಾಗಿ ಜಗದೀಶ್, ಶಶಿಧರ್ ಕೋಟೆ ಖ್ಯಾತ ಗಾಯಕ ಗಂಡ್ಲಿ ಸದಾನಂದ ಸ್ವಾಮಿ, ಚಲನಚಿತ್ರ ನಟ ನಿರ್ಮಾಪಕ ಡಾ.ಬಲರಾಮ್, ಡಾ ಮಾಣಿಕ್ ಟ್ಯಾಂಡಲಿ, ರಾಮಪ್ಪ, ಕಲಾಸಂಗಮ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್, ಬಿ.ಕೆ ಶೋಭಾ, ಪಿ.ಎನ್.ಶಿಲ್ಪ ಗಣೇಶ್ ಇದ್ದರು. ರಶ್ಮಿ ಪೊನ್ನಂಪೇಟೆ ತಾಲೂಕಿನ ಮಡಿಕೆಬೀಡು ಗ್ರಾಮದ ಆದೇಂಗಡ ರಾಜ ಅಯ್ಯಪ್ಪ ಮತ್ತು ದಿ.ಸಾವಿತ್ರಿ ಅವರ ಪುತ್ರಿಯಾಗಿದ್ದಾರೆ. ಹಲವು ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ರಶ್ಮಿ ವಿನ್ನರ್, ರನ್ನರ್ ಅಪ್ ಕಿರೀಟವನ್ನು ಮುಡುಗೇರಿಸಿಕೊಂಡಿದ್ದಾರೆ.

Read More

ನಾಪೋಕ್ಲು sಸೆ.11 : ಕ್ರೈಸ್ತರ ಪವಿತ್ರ ಹಬ್ಬವಾದ ಕನ್ಯಾ ಮರಿಯಮ್ಮ ಜನ್ಮದಿನವನ್ನು ನಾಪೋಕ್ಲುವಿನ ಮೇರಿ ಮಾತೆ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಸಂಭ್ರಮದಿಂದ ಆಚರಿಸಿದರು. ಮಾತೆ ಮರಿಯಮ್ಮ ಜಯಂತಿಯ ಪ್ರಯುಕ್ತ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ದಿನದ ಮಹತ್ವದ ಬಗ್ಗೆ ವಿವರಿಸಿದರು. ಮೇರಿಮಾತೆಯ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಂತೃಪ್ತ ಜೀವನ ನಡೆಸಬೇಕೆಂದು ಹಿತವಚನ ನುಡಿದು ಎಲ್ಲರಿಗೂ ಶುಭ ಹಾರೈಸಿದರು. ಕ್ರೈಸ್ತ ಬಾಂಧವರು ದೇವಾಲಯದಲ್ಲಿ ಪ್ರಾರ್ಥನಾ ವಿಧಿಗಳಲ್ಲಿ ಭಾಗವಹಿಸಿ ತಾವು ತಂದ ಹೂಗಳನ್ನು ದೇವಾಲಯದ ಆವರಣದಲ್ಲಿ ವಿಶೇಷವಾಗಿ ಅಲಂಕರಿಸಿ ಇರಿಸಲಾದ ಮರಿಯಮ್ಮ ನವರ ಪ್ರತಿರೂಪಕ್ಕೆ ಸಮರ್ಪಿಸಿ ಸಂಭ್ರಮಿಸಿ ಧನ್ಯತಭಾವ ಹೊಂದಿದರು. ಹಬ್ಬಕ್ಕೆ ಪೂರ್ವ ತಯಾರಿಯಾಗಿ ಒಂಬತ್ತು ದಿನಗಳ ನೋವೇನಾ ಪ್ರಾರ್ಥನೆ ಆಯೋಜಿಸಲಾಗಿತ್ತು. ಈ ಸಂದರ್ಭ ಮೇರಿ ಮಾತೆ ದೇವಾಲಯದ ವ್ಯಾಪ್ತಿಯ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಹಬ್ಬವನ್ನು ಆಚರಿಸಿದರು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಸೆ.11 : ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಹಲವಾರು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ ಬಾಲಕರ ಫುಟ್ಬಾಲ್ ಪ್ರಥಮ, ಬಾಲಕಿಯರು ವಾಲಿಬಾಲ್ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶಟಲ್ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಚೆಸ್ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ , 400 ಮೀಟರ್ ರಿಲೇ ವಿಭಾಗದಲ್ಲಿ ಬಾಲಕಿಯರು ಪ್ರಥಮ, ತ್ರಿವಿಧ ಜಿಗಿತ ಪ್ರಥಮ ಸ್ಥಾನ, ಗುಂಡು ಎಸೆತ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬದoಜೆಟ್ಟಿರ ಗಪ್ಪಣ್ಣ ಅವರ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಕಿರಣ್ ಮತ್ತು ಸುನಿಲ್ ತರಬೇತಿ ನೀಡಿದರು. ವರದಿ : ದುಗ್ಗಳ ಸದಾನಂದ. 

Read More