ನಾಪೋಕ್ಲು ಸೆ.11 : ಮಕ್ಕಳ ಲಾಲನೆ ಪಾಲನೆ ಜೊತೆಗೆ ಸರ್ವತೋಮುಖ ಅಭಿವೃದ್ಧಿಗೆ ತಾಯಿಯ ಪಾತ್ರ ಅನನ್ಯ ಎಂದು ಬೆಂಗಳೂರು ಜ್ಯೋತಿ ನಿವಾಸ್ ಕಾಲೇಜಿನ ನಿವೃತ್ತಿ ಡೀನ್ ಹಾಗೂ ಉಪ ಪ್ರಾಂಶುಪಾಲರಾದ ಕಾಂಡಂಡ ಉಷಾ ಜೋಯಪ್ಪ ಹೇಳಿದರು. ಮಹಿಳಾ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ ನ0.393 ನೇ ನಾಪೋಕ್ಲು ಸಹಕಾರ ಮಹಿಳಾ ಸಮಾಜದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ತಾಯಿ ತನ್ನ ಮಕ್ಕಳನ್ನು ತಿಳಿದಷ್ಟು ಬೇರೆಯವರು ತಿಳಿಯಲು ಸಾಧ್ಯವಿಲ್ಲ ಎಂದರು. ಮಕ್ಕಳನ್ನು ಮೊಬೈಲಿಗೆ ದಾಸರಾಗುವಂತೆ ಪ್ರೇರೇಪಿಸದೆ ಸದ್ಗುಣಗಳನ್ನು ಬೆಳೆಸಬೇಕಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಕನಸನ್ನು ಸಹಕಾರಗೊಳಿಸಿ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸಬೇಕೆಂದು ಉಷಾ ಜೋಯಪ್ಪ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಸಮಾಜದ ಅಧ್ಯಕ್ಷರಾದ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ ವಹಿಸಿ ಮಹಿಳಾ ಸಮಾಜದ ಕಾರ್ಯದಕ್ಷತೆಯ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ರೂಪುರೇಷೆಗಳ ಬಗ್ಗೆ ಸಭೆಗೆ ಮಾಹಿತಿಯನ್ನು ನೀಡಿ ಎಲ್ಲರೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಕೋರಿಕೊಂಡರು. ಕಾರ್ಯಕ್ರಮದಲ್ಲಿ…
ಲೇಖಕ: admin
ಮಡಿಕೇರಿ ಸೆ.11 : ಮಡಿಕೇರಿಯ ಐತಿಹಾಸಿಕ ದಸರಾ ಉತ್ಸವಾಚರಣೆಗೆ ಪೂರ್ವಭಾವಿಯಾಗಿ ಸಾಂಪ್ರದಾಯದಂತೆ ನಗರದ ಪೇಟೆ ಶ್ರೀರಾಮಮಂದಿರದಲ್ಲಿ ದಸರಾ ಉತ್ಸವ ಸಮಿತಿಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ಸವದ ಸಿದ್ಧತಾ ಕಾರ್ಯಗಳಿಗೆ ಚಾಲನೆ ದೊರಕಿತು. ಮಡಿಕೇರಿ ದಸರಾ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ನಗರಸಭೆ ಸದಸ್ಯ ಕೆ.ಎಸ್.ರಮೇಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಪೇಟೆ ಶ್ರೀರಾಮಮಮಂದಿರದ ಶ್ರೀ ಗಣೇಶನಿಗೆ ಮತ್ತು ಪುರಾತನ ಶ್ರೀರಾಮನ ಪಟಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ, ಉತ್ಸವದ ಯಶಸ್ಸಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಗರಸಭೆ ಸದಸ್ಯರು, ದಶಮಂಟಪ ಸಮಿತಿಯ ಪದಾಧಿಕಾರಿಗಳು, ದಸರಾ ಉತ್ಸವ ಸಮಿತಿಯ ಮಾಜಿ ಪದಾಧಿಕಾರಿ ಹಾಗೂ ಈ ಸಂದರ್ಭ ಹಾಜರಿದ್ದರು.
ಸೋಮವಾರಪೇಟೆ ಸೆ.10 : ಸೋಮವಾರಪೇಟೆ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೃಷ್ಟ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಂದ ರಾಧಾ ಕೃಷ್ಣರ ಛದ್ಮವೇಷ ಸ್ಪರ್ಧೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಯಶೋಧ, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಸಹಶಿಕ್ಷಕಿಯರು ಇದ್ದರು.
ಸೋಮವಾರಪೇಟೆ ಸೆ.10 : ಪೊಲೀಸ್ ಇಲಾಖೆ ವತಿಯಿಂದ ಶ್ರೀ ಗೌರಿ-ಗಣೇಶ ಹಬ್ಬದ ಆಚರಣೆ ಹಾಗೂ ವಿಸರ್ಜನೆಯ ಅಂಗವಾಗಿ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳ ಪೂರ್ವಭಾವಿ ಸಭೆಯನ್ನು ಸಂಜೆ ಸೋಮವಾರಪೇಟೆ ಪತ್ರಿಕಾಭವನ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಡಿವೈಎಸ್‌ಪಿ ಗಂಗಾಧರಪ್ಪ ಮಾತನಾಡಿ, ಗಣಪತಿ ಆಚರಣ ಸಮಿತಿಯವರು ಸಾರ್ವಜನಿಕರಿಂದ ಒತ್ತಾಯಪೂರ್ವಕವಾಗಿ ಹಾಗೂ ರಸ್ತೆಗಳಲ್ಲಿ ವಾಹನಗಳನ್ನು ತಡೆದು ಚಂದಾ ವಸೂಲಿ ಮಾಡಬಾರದು. ಅಂತಹ ದೂರುಗಳು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಮೊದಲು ಸೆಸ್ಕ್, ಅಗ್ನಿ ಶಾಮಕ ಇಲಾಖೆಯವರಿಂದ ಅನುಮತಿ ಪಡೆಯಬೇಕು. ಸಾರ್ವಜನಿಕ ರಸ್ತೆಯಲ್ಲಿ ವಾಹನ ಮತ್ತು ಜನರು ಓಡಾಟಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಪ್ರತಿಷ್ಠಾಪನೆ ಮಾಡಬಾರದು ಎಂದು ಹೇಳಿದರು. ಖಾಸಗಿ ಮನೆ, ಅಂಗಡಿ, ದೇವಸ್ಥಾನ ಅಥವಾ ನೇರ ವಿದ್ಯುತ್ ಲೈನ್ ಮತ್ತು ಇನ್ನಾವುದೇ ರೀತಿ ಅನಧಿಕೃತ ವಿದ್ಯುತ್ ಸಂಪರ್ಕ ಪಡೆಯಬಾರದು, ಪ್ರತಿ ಗಣೇಶ ಮಂಡಳಿಯ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳ ಪಟ್ಟಿಯನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ಮುಂಚಿತವಾಗಿ ಸಲ್ಲಿಸಬೇಕು. ಸಂಘಟಕರು ಗಣಪತಿ…
ಸೋಮವಾರಪೇಟೆ ಸೆ.10 : ಸೋಮವಾರಪೇಟೆ ಒಕ್ಕಲಿಗ ಸಮುದಾಯಭವನದಲ್ಲಿ ಭಾನುವಾರ ನಡೆದ, ಒಕ್ಕಲಿಗರ ಸಂಘದ ಸ್ಥಾಪಕ ಅಧ್ಯಕ್ಷ ಸಿ.ಕೆ.ಕಾಳಪ್ಪ ಅವರ ಪುತ್ಥಳ್ಳಿ ಅನಾವರಣ ಕಾರ್ಯಕ್ರಮದಲ್ಲಿ, ಸೋಮವಾರಪೇಟೆ ಒಕ್ಕಲಿಗರ ಸಂಘದ ಅಭಿವೃದ್ಧಿ ಕಾಮಗಾರಿಗಳಿಗೆ ಅತೀ ಹೆಚ್ಚು ಅನುದಾನ ಕಲ್ಪಿಸಿದ ಕೊಡಗು-ಮೈಸೂರು ಸಂಸದ ಪ್ರತಾಪ್‌ಸಿಂಹ ಅವರನ್ನು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗು ಮಡಿಕೇರಿ ಶಾಸಕ ಡಾ.ಮಂತರ್‌ಗೌಡ ಅವರುಗಳು ಸನ್ಮಾನಿಸಿದರು. ಸಂಘದ ಉಪಾಧ್ಯಕ್ಷ ಸಿ.ಕೆ.ರಾಘವ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಇದ್ದರು.
ಸೋಮವಾರಪೇಟೆ ಸೆ.10 : ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಸ್ಥಾಪಕ ಅಧ್ಯಕ್ಷ, ಜಾಗ ದಾನಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಕೆ.ಕಾಳಪ್ಪ ಅವರ ಪುತ್ಥಳಿಯನ್ನು ಅವರ ಪುತ್ರ ಸಿ.ಕೆ.ರಾಘವ ಹಾಗೂ ಕುಟುಂಬಸ್ಥರು ಭಾನುವಾರ ಅನಾವರಣ ಮಾಡಿದರು. ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗರ ಸಮುದಾಯಭವನದ ಪ್ರವೇಶ ದ್ವಾರದಲ್ಲಿ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾಳಪ್ಪ ಅವರ ಕುಟುಂಬಸ್ಥರಾದ ಸುದೈವ, ರಾಗಿಣಿ, ಪದ್ಮಿನಿ, ಸವಿತಾ, ಕಿರಣ್ ಕುಶಾಲಪ್ಪ, ಲಲಿತ, ಮೇನಕ, ಅನ್ನಪೂರ್ಣ ಅವರುಗಳನ್ನು ಸನ್ಮಾನಿಸಲಾಯಿತು. ಸಂಘದ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಸಿ.ಕೆ.ಕಾಳಪ್ಪ ಅವರ ಸತತ ಪರಿಶ್ರಮದಿಂದ ತಾಲ್ಲೂಕು ಒಕ್ಕಲಿಗರ ಸಂಘ ಸ್ಥಾಪನೆಯಾಗಿದೆ. 1968ರಿಂದ 1995ರ ವರಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೋಟ್ಯಾಂತರ ಮೌಲ್ಯದ ಸ್ವಂತ ಜಾಗವನ್ನು ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ ದಾನವಾಗಿ ನೀಡಿದ್ದಾರೆ. ಅವರ ಕನಸ್ಸಿನಂತೆ ವಿದ್ಯಾಸಂಸ್ಥೆಯನ್ನು ಕಟ್ಟಿದ್ದೇವೆ. ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಹತ್ತನೆ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕಳೆದ 6ವರ್ಷಗಳಿಂದ ಸತತ ಶೇ.100ರಷ್ಟು ಫಲಿತಾಂಶ…
ಮಡಿಕೇರಿ ಸೆ.10 : ಸ್ಫೂರ್ತಿ ಕಲಾ ಟೆಸ್ಟ್ ವತಿಯಿಂದ ಕೊಡಗಿನ ಸಮಾಜ ಸೇವಕ ಕರವೇ ಪ್ರಾಸಿಸ್ ಡಿಸೋಜ ಅವರಿಗೆ ಕರುನಾಡ ರತ್ನ ಪ್ರಶಸ್ತಿ ಹಾಗೂ ಸ್ಫೂರ್ತಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಬನಶಂಕರಿ ಜೆಎಸ್ಎಸ್ ಮಹಾವಿದ್ಯಾಪೀಠ ಘನಲಿಂಗ ಶಿವಯೋಗ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಡಿಕೇರಿ ಸೆ.10 : ಕೊಡಗು ಸೌಹಾರ್ದ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಡಿಕೇರಿ ಕೊಡವ ಸಮಾಜದ ಮೇಲಿನ ಕಟ್ಟಡದಲ್ಲಿ ಸಂಘದ ಅಧ್ಯಕ್ಷರಾದ ಮಂಡುವಂಡ ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯತು. ಸಂಘವು ಅಭಿವೃದ್ಧಿಪಥದತ್ತ ಸಾಗುತ್ತಿದ್ದು, ಪ್ರಸ್ತುತ 2108 ಸದಸ್ಯರಿದ್ದಾರೆ. 89.75 ಲಕ್ಷ ರೂ. ಪಾಲುಹಣ ಹೊಂದಿದ್ದು, ಈ ಬಾರಿ 20 ಲಕ್ಷ ರೂ. ಲಾಭ ಗಳಿಸಿದೆ, ಸದಸ್ಯರಿಗೆ ಶೇ.9ರಷ್ಟು ಡಿವಿಡೆಂಟ್ ನೀಡಲಾಗುವುದು ಎಂದು ಮುತ್ತಪ್ಪ ತಿಳಿಸಿದರು. ಸದಸ್ಯರ ಸಹಕಾರದಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ವಹಿವಾಟು ನಡೆಸುವ ಮೂಲಕ ಅಧಿಕ ಲಾಭದ ನಿರೀಕ್ಷೆಯಲ್ಲಿದ್ದೇವೆ ಎಂದರು. ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಾದ ಶಾಂತೆಯಂಡ ಯೋಗ್ ಕುಟ್ಟಪ್ಪ( 10 ನೇ ತರಗತಿ) ಹಾಗೂ ಕೇಕಡ.ಎಂ. ಬೋಪಣ್ಣ (ಪಿಯುಸಿ) ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಉಪಾಧ್ಯಕ್ಷೆ ಯಂ.ಜಿ.ಉಷಾ ವಂದಿಸಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಸಿ.ಸೀಮಾ ನಿರೂಪಿಸಿದರು. ನಿರ್ದೇಶಕರುಗಳಾದ ಚೋವಂಡ. ಡಿ. ಕಾಳಪ್ಪ, ಆಲೆಮಾಡ ಕೆ. ಕಾರ್ಯಪ್ಪ, ಮಣವಟ್ಟಿರ .ಬಿ.ಮಾಚಯ್ಯ, ನಾಟೋಳಂಡ.ಡಿ.ಚರ್ಮಣ, ಕೊಂಗಂಡ ಎ.ತಿಮ್ಮಯ್ಯ, ಪಟ್ಟಡ ಎ.ಕರುಂಬಯ್ಯ,ಕುಡುವಂಡ ಬಿ.ಉತ್ತಪ್ಪ, ನಂದೇಟಿರ…
ಮಡಿಕೇರಿ ಸೆ.10 : ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಜೆಸಿಐ ಸಪ್ತಾಹ 2023ನೇ ಸಾಲಿನ ಎರಡನೇ ದಿನದ ಕಾರ್ಯಕ್ರಮದಲ್ಲಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ನೀತ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಮಾಯಮುಡಿ ಸರ್ಕಾರಿ ಶಾಲೆಗೆ ನೀರು ಶುದ್ಧೀಕರಣ ಯಂತ್ರವನ್ನು ಅಳವಡಿಸಲಾಯಿತು, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಇತ್ತೀಚಿನ ದಿನಗಳಲ್ಲಿ ಶುದ್ಧ ನೀರಿನ ಕೊರತೆಯಿಂದ ಅನಾರೋಗ್ಯ ಹೆಚ್ಚಾಗುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ಶುದ್ಧ ನೀರು ದೊರೆಯಬೇಕು ಎನ್ನುವ ಉದ್ದೇಶದಿಂದ ಶಾಶ್ವತ ಪರಿಹಾರವಾಗಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಕುಡಿಯುವ ನೀರಿನ ಯಂತ್ರವನ್ನು ಅಳವಡಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಎ.ಪಿ, ನಿಕಟ ಪೂರ್ವ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ, ಸದಸ್ಯರಾದ ತಿಮ್ಮಯ್ಯ, ಶಾಲೆಯ ಮುಖ್ಯ ಉಪಾಧ್ಯಾಯರಾದ ರಾಗಿಣಿ ಡಿ.ಯು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಉಮೇಶ್ , ಸದಸ್ಯರಾದ ಸಲಾಂ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗೋಣಿಕೊಪ್ಪ ಸೆ.10 : ಜೆಸಿಐ ಪೊನ್ನಂಪೇಟೆ ನಿಸರ್ಗ ಆಯೋಜನೆಯಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಗ್ರಾ.ಪಂ. ಅಧ್ಯಕ್ಷೆ ಮನ್ನಕಮನೆ ಸೌಮ್ಯ ಬಾಲು ಚಾಲನೆ ನೀಡಿದರು. ಶ್ರೀ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜೆಸಿಐ ಸಪ್ತಾಹ 2023ರ ಪ್ರಯುಕ್ತ ರಕ್ತದಾನ ಶಿಭಿರ ಜೆಸಿಐ ಪೊನ್ನಂಪೇಟೆ ನಿಸರ್ಗ ಅಧ್ಯಕ್ಷ ನೀತ್ ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ರಕ್ತದಾನ ಮಾಡುವುದರಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಮತ್ತೊಬ್ಬರ ಜೀವವನ್ನು ಉಳಿಸಲು ಕಾರಣವಾಗಬಹುದು. ಯುವ ಸಮುದಾಯ ರಕ್ತದಾನ ಮಾಡುವುದರ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ಮತ್ತು ಯುವ ಸಮುದಾಯದಕ್ಕೆ ರಕ್ತದಾನ ಮಾಡುವುದರ ಪ್ರೇರಣಾತ್ಮಕವಾದ ಕಾರ್ಯಕ್ರಮಗಳನ್ನು ಸಂಘಟನೆಗಳು ಆಯೋಜಿಸಬೇಕೆಂದು ಗ್ರಾ.ಪಂ. ಅಧ್ಯಕ್ಷ ಸೌಮ್ಯ ಬಾಲು ಸಲಹೆ ನೀಡಿದರು. ಗ್ರಾ.ಪಂ. ಸದಸ್ಯ ಕುಲ್ಲಚಂಡ ಪ್ರಮೋದ್ ಗಣಪತಿ ಮಾತನಾಡಿ ರಕ್ತದಾನ ಮಾಡುವುದರ ಶ್ರೇಷ್ಠತೆಯನ್ನು ಯುವ ಸಮುದಾಯ ಅರಿತುಕೊಳ್ಳುವುದರಲ್ಲಿ ಸೋತಿದೆ. ದುಶ್ಚಟಗಳಿಗೆ ಒಳಗಾಗುತ್ತಿರುವ ಯುವಕರು ರಕ್ತದಾನ ಮಾಡಲು ಹಿಂಜರಿಯುತ್ತಿದ್ದಾರೆ. ಈ ಬಗ್ಗೆ ಮಕ್ಕಳಲ್ಲಿ ರಕ್ತದಾನದ ಶ್ರೇಷ್ಠತೆಯ ಬಗ್ಗೆ ತಿಳಿಸಿಕೊಡುವ ಅಗತ್ಯವಿದೆ. ಯಾವುದೇ ಹಿಂಜರಿಕೆಯಿಲ್ಲದೇ ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ…






