ಮಡಿಕೇರಿ ಸೆ.8 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 27.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.95 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1751.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2979.47ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.30 ಮಿ.ಮೀ. ಕಳೆದ ವರ್ಷ ಇದೇ ದಿನ 40.38 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2586.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4332.32 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1305.71 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2261.33 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.40 ಮಿ.ಮೀ.…
ಲೇಖಕ: admin
ಮಡಿಕೇರಿ ಸೆ.8 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ನಡೆಸಲಾಯಿತು. ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಲೋಕೇಶ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಕಚೇರಿಯಿಂದ ಗಾಂಧಿ ಮೈದಾನದವರೆಗೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಸರ್ಕಾರ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ಕುರಿತು ಕೆ.ಎಂ.ಲೋಕೇಶ್ ಮಾತನಾಡಿದರು. ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹಮ್ಮದ್, ಉಪಾಧ್ಯಕ್ಷ ಸುಜು ತಿಮ್ಮಯ್ಯ, ನಗರಾಧ್ಯಕ್ಷ ಬಿ.ವೈ.ರಾಜೇಶ್, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ನಗರ ಮಹಿಳಾ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮೂಡ ಮಾಜಿ…
ಮಡಿಕೇರಿ ಸೆ.8: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯ ಸ್ಟಾಲಿನ್ ಅವರು ನೀಡಿರುವ ಹೇಳಿಕೆಯನ್ನು ಬಿಜೆಪಿಯ ಮಾಜಿ ಶಾಸಕದ್ವಯರು ತೀವ್ರವಾಗಿ ಖಂಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ತಮಿಳುನಾಡಿನ ಡಿಎಂಕೆ ಪಕ್ಷ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಲೇ ರಾಜಕೀಯಕ್ಕೆ ಬಂದಿದೆ. ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಹೇಳಿಕೆ ಖಂಡನೀಯ. ರಾಜ್ಯದ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯೂ ಖಂಡನಾರ್ಹವಾಗಿದ್ದು, ದೇಶದ ಸಂವಿಧಾನ ತಮಗೆ ಇಷ್ಟ ಬಂದ ಧರ್ಮವನ್ನು ಅನುಸರಿಸಲು ಅವಕಾಶ ನೀಡಿದೆ. ಆದರೆ ಮತ್ತೊಂದು ಧರ್ಮವನ್ನು ಟೀಕಿಸುವುದಕ್ಕೆ ಅವಕಾಶ ನೀಡಿಲ್ಲ. ಸಚಿವರ ಹೇಳಿಕೆ ಸಂವಿಧಾನ ವಿರೋಧಿಯಾಗಿದ್ದು, ಇವರು ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ‘ಇಂಡಿಯಾ’ ಹೆಸರು ಬ್ರಿಟಿಷರ ಬಳುವಳಿಯಾಗಿದೆ. ಕೊಡಗು ಜಿಲ್ಲೆಗೆ ‘ಕೂರ್ಗ್’, ಮಡಿಕೇರಿಗೆ ‘ಮರ್ಕರಾ’ ಹೀಗೆ ಕೊಡಗಿನಲ್ಲೂ ಅನೇಕ ಊರುಗಳ ಹೆಸರು ಬದಲಾವಣೆಯಾಗಿದೆ. ಭಾರತ ಹೆಸರು ಬದಲಾವಣೆ ವಿಚಾರವಾಗಿ ವೃಥಾ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಕೆ.ಜಿ.ಬೋಪಯ್ಯ…
ಮಡಿಕೇರಿ ಸೆ.8 : ಬಿಜೆಪಿ ಸರ್ಕಾರದ ರೈತಪರ ಯೋಜನೆ ಮುಂದುವರಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ, ಬಿಜೆಪಿ ರೈತ ಮೋರ್ಚಾದಿಂದ ಮಡಿಕೇರಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆ, ಭೂಸಿರಿ, ಶ್ರಮಶಕ್ತಿ ಮತ್ತು ರೈತ ಸಂಪದ ಯೋಜನೆಯನ್ನು ಮುಂದುವರೆಸಬೇಕೆಂದು ಒತ್ತಾಯಿಸಿದರು. ಅಪ್ಪಚ್ಚು ರಂಜನ್ ಮಾತನಾಡಿ ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ಸ್ಥಗಿತಗೊಳಿಸಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ, ವಿದ್ಯುತ್ ದರವನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು. ಕೆ.ಜಿ.ಬೋಪಯ್ಯ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನೂರು ದಿನ ಕಳೆದಿದೆ. ಆದರೆ ಈ ನೂರು ದಿನಗಳ ಆಡಳಿತದ ಅನುಭವದಿಂದಾಗಿ ಜನರು ಸರಕಾರಕ್ಕೆ ಹಿಡಿಶಾಪ…
ಮಡಿಕೇರಿ ಸೆ.8 : ಭಾಗಮಂಡಲದ ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಸೆ.10 ರಂದು ಚುನಾವಣೆ ನಡೆಯಲಿದ್ದು, ಸಮಾನ ಮನಸ್ಕರ ತಂಡಕ್ಕೆ ಮತದಾರರು ಬೆಂಬಲ ನೀಡಬೇಕೆಂದು ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೇನು ಕೃಷಿಯ ಉತ್ತೇಜನ ಮತ್ತು ಕೃಷಿಕರ ಆರ್ಥಿಕ ಸಬಲತೆಗಾಗಿ ಜೇನು ಸಹಕಾರ ಸಂಘವನ್ನು ಹುಟ್ಟು ಹಾಕಲಾಗಿದೆ. ಇಲ್ಲಿನ ಜೇನಿಗೆ ಇಡೀ ವಿಶ್ವದಲ್ಲಿ ಬಹುದೊಡ್ಡ ಬೇಡಿಕೆ ಇದೆ. ಆದರೆ ಸರಿಯಾದ ಮಾರುಕಟ್ಟೆಯ ತಂತ್ರ, ನಿರ್ವಹಣೆಯ ಕೊರತೆ, ಭವಿಷ್ಯದ ಯೋಜನೆಗಳನ್ನು ಕೈಗೊಳ್ಳದೆ ಇರುವುದರಿಂದ ಜೇನು ಕೃಷಿಕರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಈ ಬಾರಿ ಜನರೇ ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಬೆಂಬಲಿತ ಸಮಾನ ಮನಸ್ಕರ ತಂಡಕ್ಕೆ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಸಮಿತಿ ಸಂಚಾಲಕ ವೆಂಕಟೇಶ್ ಮಾತನಾಡಿ, ಹಿಂದಿನ ಆಡಳಿತ ಮಂಡಳಿಯಿಂದ ಕೊಡಗಿನ ಕೃಷಿಕರಿಗೆ ಲಾಭವಾಗಿಲ್ಲ. 500 ರಿಂದ 600 ರೂ. ಗೆ ಜೇನು ಮಾರಾಟವಾಗುತ್ತಿದೆ. ಬೇರೆಡೆ…
ಮಡಿಕೇರಿ ಸೆ.8 : ನಗರದ ಬ್ರಹ್ಮಕುಮಾರಿ ಲೈಟ್‍ಹೌಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಕೀಲರಾದ ನಿರಂಜನ್ ಜ್ಯೋತಿ ಬೆಳಗಿಸಿ, ಶುಭಹಾರೈಸಿದರು. ಜಿಲ್ಲಾಸ್ಪತ್ರೆಯ ವೈದ್ಯಧಿಕಾರಿಗಳಾದ ಡಾ.ಸತೀಶ್ ಹಾಗೂ ಡಾ.ಶಿಲ್ಪ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಜಿಲ್ಲಾ ಸಂಚಾಲಕರಾದ ಬ್ರಹ್ಮಕುಮಾರಿ ರಾಜಯೋಗಿನಿ ಗಾಯತ್ರಿಜೀ ಆಶೀರ್ವಚನ ನೀಡಿದರು. ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮಕ್ಕಳು ಕೃಷ್ಣ ಮತ್ತು ಗೋಪಿಕೆಯರ ವೇಷದಲ್ಲಿ ಕಂಗೊಳಿಸಿದರು. ಆಮಿಸಿದ ಎಲ್ಲರಿಗೂ ಪ್ರಸಾದ ವಿತರಿಸಲಾಯಿತು.
ಬೆಂಗಳೂರು ಸೆ.8 : ಶಿಕ್ಷಕರು ಮತ್ತು ನಾಡಿನ ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿ ಇದ್ದಾರೆ. ಹೀಗಾಗಿ ಅವರೆಲ್ಲಾ ನಮ್ಮ ಪರವಾಗಿರುವುದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಅನುಕೂಲಕರ ವಾತಾವರಣವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾತನಾಡಿದರು. ಜನವರಿಯಿಂದ ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಕಾರ್ಯಕ್ರಮ ಆರಂಭವಾಗಲಿದೆ. ನಾವು ವಿದ್ಯಾವಂತ ಯುವಕ ಯುವತಿಯರಿಗೆ 24 ತಿಂಗಳ ಕಾಲ ಯುವನಿಧಿ ಕೊಡುವ ಜತೆಗೆ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದರು. ಟಿಕೆಟ್ ಆಕಾಂಕ್ಷಿಗಳು ಶಿಕ್ಷಕ ಸದಸ್ಯರು ಮತ್ತು ಪದವೀಧರ ಸದಸ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು ಅವರ ಮಾತು ಮತ್ತು ಬೇಡಿಕೆಗಳನ್ನು ಕೇಳಿಸಿಕೊಂಡು ನಮಗೆ ತಿಳಿಸಿ. ನಾಡಿನ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದಕ್ಕಾಗಿ ಪಕ್ಷ ಮತ್ತು ಸರ್ಕಾರ ಶ್ರಮಿಸಲಿದೆ. ಇದನ್ನು ಮತದಾರರಿಗೆ ಸರಿಯಾಗಿ ಅರ್ಥ ಮಾಡಿಸಿ ಚುನಾವಣೆಯಲ್ಲಿ ಗೆದ್ದು ಬನ್ನಿ ಎಂದು ಹಾರೈಸಿದರು. ಟಿಕೆಟ್…
ಮಡಿಕೇರಿ ಸೆ.8 : ಬೀಬಿ ಫಾತಿಮಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೈಸೂರು ಅಲ್-ಅನ್ಸಾರ್ ಆಸ್ಪತ್ರೆ, ಮಂಗಳೂರು ಏನಪೋಯ ಆಸ್ಪತ್ರೆ, ವಿರಾಜಪೇಟೆ ಕೊಡಗು ದಂತ ವೈದ್ಯ ಮಹಾವಿದ್ಯಾಲಯ ಮತ್ತು ವಿವಿಧ ಆಸ್ಪತ್ರೆಗಳ ಮತ್ತು ತಜ್ಞ ವೈದ್ಯರುಗಳ ಸಹಯೋಗದಲ್ಲಿ ‘ಆರೋಗ್ಯ ತಪಾಸಣಾ ಬೃಹತ್ ಶಿಬಿರ’, ದಂತ ತಪಾಸಣಾ ಶಿಬಿರ, ನೇತ್ರ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವು ಸೆ.12 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಕುಶಾಲನಗರದ ಇಂದಿರಾ ಬಡಾವಣೆಯ ಹಿಲಾಲ್ ಮದರಸ ಹಾಲ್ ಸಭಾಂಗಣದಲ್ಲಿ ನಡೆಯಲಿರುವ ಶಿಬಿರದಲ್ಲಿ ದಂತ ತಪಾಸಣೆ, ನೇತ್ರ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಅಲ್ಲದೆ ಮಂಗಳೂರಿನ ಏನಪೊಯ ಆಸ್ಪತ್ರೆಯ ತಜ್ಞವೈದ್ಯರುಗಳಿಂದ ಸ್ತನ ಪರೀಕ್ಷೆ ಹಾಗೂ ಗರ್ಭಕಂಠದ ಪರೀಕ್ಷೆಗಳನ್ನು ಕೂಡ ನಡೆಸಿ ಸೂಕ್ತ ಸಲಹೆಗಳನ್ನು ನೀಡಲಾಗುವುದು. ಶಿಬಿರವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬೀಬಿ ಫಾತಿಮಾ ಚಾರಿಟೇಬಲ್ ಟ್ರಸ್ಟ್ ನ ಅಪ್ರೋಜ್ ಮಹಮ್ಮದ್ ಖಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ…
ಮಡಿಕೇರಿ ಸೆ.8 : ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.10 ರಂದು ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಸದಸ್ಯರ ಮಕ್ಕಳಿಗೆ ಪತ್ರಿಭಾ ಪುರಸ್ಕಾರ, ಸಾಧಕರಿಗೆ, ಹಿರಿಯ ಸದಸ್ಯರಿಗೆ ಸನ್ಮಾನ, ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಎಂದು ಹೇಳಿದ್ದಾರೆ. ::: ರೂ.22.75 ಲಕ್ಷ ಲಾಭ ::: ಸಂಘವು ಪ್ರಸ್ತುತ 2428 ಸದಸ್ಯರನ್ನು ಹೊಂದಿದ್ದು, ಸುಮಾರು ರೂ.22,75,252.84 ಲಾಭ ಗಳಿಸಿದೆ. ರೂ.2,89,85,090 ಪಾಲು ಬಂಡವಾಳವಿದ್ದು, ಒಟ್ಟು ವ್ಯವಹಾರ ರೂ.37,22,64,501.50 ಆಗಿದೆ. ಠೇವಣಿ ರೂ.12,54,23,795.80 ಇದ್ದು, ಪ್ರಸಕ್ತ ವರ್ಷ ರೂ.8,13,23,867 ಸಾಲ ನೀಡಲಾಗಿದೆ. ಒಟ್ಟು ಸಾಲ ರೂ.14,69,27,751 ಆಗಿದ್ದು, ದುಡಿಯುವ ಬಂಡವಾಳ ರೂ.17,15,75,835 ಆಗಿದೆ.…
ಶನಿವಾರಸಂತೆ ಸೆ.8 : ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ಪ್ರತಿಭಾ ಕಾರಂಜಿ -ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ಶಿಕ್ಷಣ ತಜ್ಞ ಬೆಂಗಳೂರಿನ ಎ.ಎಸ್.ಸಾಗರ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಸಮೂಹ ಸಂಪನ್ಮೂಲ ಕೇಂದ್ರ, ಕೊಡ್ಲಿಪೇಟೆ ವಿದ್ಯಾಸಂಸ್ಥೆ ಸಹಯೋಗದೊಂದಿಗೆ ನಡೆದ ಕೊಡ್ಲಿಪೇಟೆ ಮತ್ತು ಬೆಸೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ -ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಪರೀಕ್ಷೆ ಪಾಸ್ ಆಗಲು ಮಾತ್ರ ಯೋಚನೆ ಮಾಡಬೇಡಿ. ಉತ್ತಮ ಜ್ಞಾನವನ್ನು ಬೆಳೆಸಿಕೊಂಡಲ್ಲಿ ಎಲ್ಲಾ ಪರೀಕ್ಷೆಗಳನ್ನು ಪಾಸ್ ಮಾಡುವ ಸಾಮರ್ಥ್ಯ ಬರುತ್ತದೆ ಎಂದರು. ಕೇವಲ ಅಂಕಗಳಿಕೆಗಾಗಿ ಓದದೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಜ್ಞಾನಾರ್ಧನೆ ಹೊಂದಿ ಸಮಾಜದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳವೇಕು ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ ಹೊರತರಲು…






