ಬೆಂಗಳೂರು ಸೆ 7: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು. ಕಳೆದ ಐದು ವರ್ಷಗಳಲ್ಲಿ ದಾಖಲಾದ 10893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್ ಶೀಟ್ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ ಅಸಡ್ಡೆಯನ್ನು ತೋರಿಸುತ್ತದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಿದಂತಾಗುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ 90 ದಿನಗಳೊಳಗೆ ಚಾರ್ಜ್ ಶೀಟ್ ಹಾಕದಿದ್ದರೆ, ಎಸ್ ಸಿ /ಎಸ್ಟಿ ದೌರ್ಜನ್ಯ ತಡೆ…
ಲೇಖಕ: admin
ಸಿದ್ದಾಪುರ ಸೆ.7 : (ಅಂಚೆಮನೆ ಸುಧಿ) ಚಿತ್ರ ಕಲಾವಿದರೊಬ್ಬರು ತಮ್ಮ ಕಲೆಯನ್ನು ತಾವು ಶಿಕ್ಷಣ ಪಡೆದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಪರಿಚಯ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ನೀಡುವ ಪ್ರಯತ್ನ ಮಾಡುತ್ತಿದೆ. ಆದರೆ ಮಕ್ಕಳ ಅತಿ ಆಸಕ್ತಿಯ ಚಿತ್ರಕಲೆಗೆ ಕೊಂಚ ಪ್ರೋತ್ಸಾಹ ಕಡಿಮೆಯೇ ಇದೆ. ಇದನ್ನು ಮನಗಂಡ ಮಾಲ್ದಾರೆಯ ಚಿತ್ರ ಕಲಾವಿದ ರೆಹಮತ್ ಬಾವ ಅವರು ಬಡ ವಿದ್ಯಾರ್ಥಿಗಳಲ್ಲಿ ಚಿತ್ರಕಲೆಯ ಬಗ್ಗೆ ಅರಿವು ಮೂಡಿಸುವ ಕಾಯಕದಲ್ಲಿ ತೊಡಗಿದ್ದಾರೆ. ತಾವು ವ್ಯಾಸಂಗ ಮಾಡಿದ ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಉಚಿತವಾಗಿ ಚಿತ್ರಕಲೆಯ ಕುರಿತು ತರಬೇತಿ ನೀಡುತ್ತಿದ್ದಾರೆ. ರೆಹಮತ್ ಅವರ ಪ್ರಯತ್ನದ ಫಲವಾಗಿ ವಿದ್ಯಾರ್ಥಿಗಳು ಕೂಡ ಅತಿ ಆಸಕ್ತಿಯಿಂದ ಚಿತ್ರಕಲೆಯನ್ನು ಮೈಗೂಡಿಸಿಕೊಳ್ಳುತ್ತಿದ್ದಾರೆ. ಜಾಹೀರಾತು ಮತ್ತು ಜಾಗೃತಿ ಫಲಕಗಳಲ್ಲಿ ಚಿತ್ರವನ್ನು ರಚಿಸುವ ಕಲೆಗಾರ ರೆಹಮತ್ ಗೋಡೆ ಬರಹಗಳ ಮೂಲಕವೂ ಗಮನ ಸೆಳೆದಿದ್ದಾರೆ. ಕಳೆದ ಅನೇಕ ವರ್ಷಗಳಿಂದ…
ನಾಪೋಕ್ಲು ಸೆ.7 : ಕಕ್ಕುಂದ ಕಾಡಿನ ವೆಂಕಟರಮಣ ದೇವಸ್ಥಾನದ ಗಣಪತಿ ಸೇವಾ ಸಮಿತಿ ವತಿಯಿಂದ 18ನೇ ವರ್ಷದ ಗೌರಿ ಗಣೇಶೋತ್ಸವವು ಸೆ.19 ರಂದು ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, ಬಳಿಕ ಗೌರಿ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ. ಸೆ.20 ರಿಂದ 23ರ ವರೆಗೆ ಐದು ದಿನಗಳ ಕಾಲ ದೇವಾಲಯದಲ್ಲಿ ನಿತ್ಯ ಪೂಜೆ ಮಹಾಪೂಜೆ, ಮಂಗಳಾರತಿ ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಲಿದೆ. ಸೆ. 20 ರಂದು ರವಿ ಓಂಕಾರ ತಂಡದಿಂದ ಸಂಗೀತ ಕಾರ್ಯಕ್ರಮ, ಸೆ.21ರಂದು ಸಮುದಾಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸೆ.22 ರಂದು ಬೆಳಿಗ್ಗೆ 10 ಗಂಟೆಯಿಂದ ಕೆಸರು ಗದ್ದೆ ಕ್ರೀಡಾಕೂಟ, ಹಗ್ಗ ಜಗ್ಗಾಟ, ಕಬ್ಬಡಿ ಹಾಗೂ ವಿವಿಧ ಕ್ರೀಡಾಕೂಟ ನಡೆಯಲಿದೆ. ಸೆ.23 ರಂದು ಮಹಾ ಪೂಜೆಯ ಬಳಿಕ ಅಪರಾಹ್ನ ಒಂದು ಗಂಟೆಗೆ ಅನ್ನದಾನ ನಡೆಯಲಿದೆ. ಬಳಿಕ ಸುಳ್ಯದ ನಾಸಿಕ್ ಬ್ಯಾಂಡ್ ಮತ್ತು ಚಂಡೆ ಮೇಳದೊಂದಿಗೆ ಪಟ್ಟಣದಲ್ಲಿ ಅಲಂಕೃತ ಮಂಟಪ ದೊಂದಿಗೆ ಬರವಣಿಗೆಯಲ್ಲಿ ಸಾಗಿ ಉತ್ಸವ ಮೂರ್ತಿಯನ್ನು ಕಾವೇರಿ…
ಮಡಿಕೇರಿ ಸೆ.7 : ಶಾಲೆಗೆ ತೆರಳಲೆಂದು ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳಿಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲ್ಲೂಕಿನ ಸೀತಾಪುರ ಕಾವಲು ಗೇಟ್ ಬಳಿ ನಡೆದಿದೆ. ಬಾವಿಕೆರೆ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸೀತಾಪುರ ಕಾವಲು ತುಳಸಿ (15) ಮೃತ ದುರ್ದೈವಿ. ಮತ್ತೋರ್ವ ವಿದ್ಯಾರ್ಥಿನಿ ನಿವೇದಿತ (14) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮರ ಮತ್ತು ಮನೆಯೊಂದಕ್ಕೂ ಡಿಕ್ಕಿ ಹೊಡೆದಿದೆ. ಅಸಮಾಧಾನಗೊಂಡ ಸಾರ್ವಜನಿಕರು ಬಸ್ ನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣವೂ ನಡೆಯಿತು. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಸೆ.7 : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 58ನೇ ಪುಣ್ಯಸ್ಮರಣೆಯನ್ನು ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಸಹಯೋಗದಲ್ಲಿ ನಗರದ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಜನಪ್ರತಿನಿಧಿಗಳು, ನಿವೃತ್ತ ಯೋಧರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ದೇವಯ್ಯ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭ ಮಾತನಾಡಿದ ಏರ್ ಮಾರ್ಷಲ್ (ನಿವೃತ್ತ) ಕೊಡಂದೇರ ನಂದಾ ಕಾರ್ಯಪ್ಪ, ವೀರ ಸೇನಾನಿ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ಅವರು ದೇಶ ರಕ್ಷಣೆಯ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಅಜ್ಜಮಾಡ ಬಿ.ದೇವಯ್ಯ ಹಾಗೂ ಕರ್ನಲ್ ಪುಟ್ಟಿಚಂಡ ಎಸ್. ಗಣಪತಿ ಅವರಿಗೆ ಮಹಾವೀರ ಚಕ್ರ ಪ್ರಶಸ್ತಿ ದೊರೆತ್ತಿದೆ. ಆ ಮೂಲಕ ಕೊಡಗು ಜಿಲ್ಲೆಗೆ ಎರಡು ಮಹಾವೀರ ಚಕ್ರ ಪ್ರಶಸ್ತಿ ದೊರೆತಂತ್ತಾಗಿದೆ. ಇಬ್ಬರು ಯೋಧರು ದಕ್ಷತೆ ಮತ್ತು ಶೌರ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಇವರ…
ವಿರಾಜಪೇಟೆ, ಸೆ.7 : ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಮೇರು ಕಿರೀಟವಾಗಿದ್ದು, ಸಮ ಸಮಾಜದ ಪರಿಕಲ್ಪನೆಗೆ ವಚನಕಾರರ ಹೋರಾಟ ಅದ್ವಿತೀಯ ಎಂದು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಹೆಚ್.ಎನ್.ರಾಮಚಂದ್ರ ಬಣ್ಣಿಸಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಏಕಲವ್ಯ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ” ಶಾಲಾ ಕಾಲೇಜುಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಚಿಂತನಾ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದ ದಿನಮಾನಗಳಲ್ಲಿ ತಾಂಡವವಾಡುತ್ತಿದ್ದ ಜಾತಿ, ವರ್ಗಬೇಧ, ಮೇಲು – ಕೀಳು, ಬಡವ – ಬಲ್ಲಿದರೆಂಬ ಅಸಮಾನತೆ ತೊಲಗಿಸಲು ಬಸವಾದಿ ಶರಣರು ನಡೆಸಿದ ವಚನ ಕ್ರಾಂತಿ ಅಂದಿನ ಜನಸಾಮಾನ್ಯರ ಬದುಕನ್ನೇ ಬದಲಿಸಿತ್ತು. ಹಾಗೆಯೇ ಬಸವೇಶ್ವರರು ಕೊಟ್ಟ ಕಲಬೇಡ ಕೊಲಬೇಡ ಹುಸಿಯನುಡಿಯಲು ಬೇಡ ಎಂಬ ಸಪ್ತ ಸೂತ್ರ ಇಡೀ ಮಾನವ ಬದುಕಿಗೆ ಕಿರೀಟ ಪ್ರಾಯ ಎಂದು ವಚನಗಳ ಮೂಲಕ ವಿವರಿಸಿದ ರಾಮಚಂದ್ರ, ವಿದ್ಯಾರ್ಥಿಗಳು ಇಂತಹ ವಚನಗಳ ಸಾರವನ್ನರಿತು ಅದರಂತೆ ಉತ್ತಮವಾದ ವ್ಯಕ್ತಿತ್ವ ರೂಪಿಸಿಕೊಳ್ಳಲು ಕರೆ…
ಮಡಿಕೇರಿ ಸೆ.7 : ನಗರದ ಬ್ರಹ್ಮಕುಮಾರಿಸ್ ಲೈಟ್‍ಹೌಸ್ ಸಭಾಂಗಣದಲ್ಲಿ ಪಾವನ ಪರ್ವ ರಕ್ಷಾಬಂಧನದನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಶ್ರೀಮತಿ ರಾಣಿ ಮಾಚಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ರಹ್ಮಾಕುಮಾರಿ ಧನಲಕ್ಷ್ಮಿ ಜಿ ರಕ್ಷಾ ಬಂಧನದ ಆಧ್ಯಾತ್ಮಿಕ ರಹಸ್ಯವನ್ನು ತಿಳಿಸಿದರು. ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯಿತ್ರಿಜೀ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಸಹೋದರ ಸಹೋದರಿಯರಿಗೆ ಶ್ರೀರಕ್ಷೆಯನ್ನು ಕಟ್ಟಿ, ಹಣೆಗೆ ಶ್ರೀಗಂಧವನ್ನಿಟ್ಟು ವರದಾನಗಳನ್ನು ನೀಡಿ ಸರ್ವರಿಗೂ ಶುಭ ಕೋರಲಾಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರಿಗೆ ಈಶ್ವರೀಯ ಸೇವೆಯ ಮಾಹಿತಿ ನೀಡಿ ಶುಭ ಕೋರಲಾಯಿತು. ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ, ವೈದ್ಯಕೀಯ ಕಾಲೇಜು, ಜಿಲ್ಲಾ ಪೋಲೀಸ್ ಕಛೇರಿ, ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾರಾಗೃಹ, ಬ್ಯಾಂಕುಗಳು, ಶಾಲೆಗಳು, ಬಾಲ ಭವನ ಇತ್ಯಾದಿ ಸ್ಥಾನಗಳಲ್ಲಿ ಈಶ್ವರೀಯ ಸಂದೇಶ ನೀಡಿ ಧ್ಯಾನದ ಜಾಗೃತಿ ಮೂಡಿಸಿ ತಮ್ಮ ನಿಶ್ಯಕ್ತತೆಗಳನ್ನು ದೂರ ಮಾಡಿಕೊಳ್ಳುವ ಸಹಜ ಸಾಧನ ಧ್ಯಾನವೆಂಬ ಅನುಭೂತಿ ಮಾಡಿಸಲಾಯಿತು. ನಗರದಾದ್ಯಂತ ಅನೇಕ ಸ್ಥಾನಗಳಲ್ಲಿ ಭ್ರಾತೃತ್ವದ…
ಮಡಿಕೇರಿ ಸೆ.7 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆ.16 ರಂದು ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 6 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ತಿಳಿಸಿದರು. ಕೊಡಗು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಸನ್ಮಾನಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್‍ನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 1 ಕೋಟಿ ರೂಪಾಯಿ ಮೊತ್ತದ ಕ್ಷೇಮ ನಿಧಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಕೊಡಗಿನ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ. ಬೆಳ್ಳಿ ಮಹೋತ್ಸವ ಪ್ರಯುಕ್ತ ಹೊರತಲಾರುತ್ತಿರುವ ಸ್ಮರಣ ಸಂಚಿಕೆ ಪಿಂಜರಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ…
ಮಡಿಕೇರಿ ಸೆ.6 : ಮಡಿಕೇರಿ ವಿದ್ಯುತ್ ಉಪ ಕೇಂದ್ರ 66/11 ಕೆವಿ ಯಿಂದ ಹೊರ ಹೋಗುವ ಎಫ್ 12 ರಾಜಾಸೀಟು ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಸೆ.7 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ರಾಜಾಸೀಟು, ಇಂದಿರಾಗಾಂಧಿ, ಚಾಮುಂಡೇಶ್ವರಿನಗರ, ರೇಸ್‍ಕೋರ್ಸ್ ರಸ್ತೆ, ಹೊಸ ಬಡಾವಣೆ, ಮುಳಿಯ, ವಿದ್ಯಾನಗರ, ಎಫ್‍ಎಂಸಿ ಕಾಲೇಜು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.
ಮಡಿಕೇರಿ ಆ.06 : ತೀವ್ರತರವಾದ ಮತ್ತು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್‍ಗಳನ್ನು ತಲುಪಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ನಿರ್ಮೂಲನೆ ಸಂಬಂಧಿಸಿದಂತೆ 2 ಸುತ್ತಿನ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬಿಟ್ಟು ಹೋಗಿರುವ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ನಿರ್ಮೂಲನೆ ಮಾಡಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಸಂಬಂಧಿಸಿದಂತೆ ವಿಶೇಷವಾಗಿ ದಡಾರ ಮತ್ತು ರುಬೆಲ್ಲಾ ರೋಗ ನಿರೋಧಕತೆಯ ಅಂತರ ಕಡಿಮೆ ಮಾಡುವುದು, ಇದುವರೆಗೆ ಲಸಿಕೆ ಡೋಸ್ ಪಡೆಯದಿದ್ದಲ್ಲಿ ಲಸಿಕೆಯನ್ನು ತಲುಪಿಸುವುದು, ಲಸಿಕೆ ಪಡೆದಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಹಾಗೆಯೇ…






