ಮಡಿಕೇರಿ ಏ 29 NEWS DESK : ಜಿಲ್ಲಾ ಪೊಲೀಸ್ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ಕಾಲೇಜ್ ಹಾಗೂ ಎನ್ ಎಸ್ ಎಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ “ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವೃತ್ತ ನಿರೀಕ್ಷಕರಾದ ಪಿ.ಕೆ.ರಾಜು, ಮದ್ಯ/ಮಾದಕ ವಸ್ತುಗಳ ಬಳಕೆ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ತುರ್ತು ಸಂದರ್ಭಗಳಲ್ಲಿ ಬಳಸಿಕೊಳ್ಳಬಹುದಾದ ವಿವಿಧ ಸಹಾಯವಾಣಿ ಸಂಖ್ಯೆಗಳನ್ನು ಹಾಗೂ KSP ಆಪ್ ಸಂಬಂಧಿತ ಮಾಹಿತಿಯನ್ನು ನೀಡಿದರು. ಅದೇ ಸಂದರ್ಭದಲ್ಲಿ “ಸಮ್ಮಿತ್ರಾ ಆಪ್” ಕುರಿತು ಮಾಹಿತಿ ನೀಡಿ, ಮಾದಕ ವಸ್ತುಗಳನ್ನು ದುರುಪಯೋಗಪಡಿಸುವವರ ಬಗ್ಗೆ ವಿವರಗಳನ್ನು ನೀಡುವ ಮೂಲಕ ಸಮಾಜದಲ್ಲಿ ಈ ಸಮಸ್ಯೆಯನ್ನು ನಿರ್ಮೂಲಗೊಳಿಸಲು ವಿದ್ಯಾರ್ಥಿಗಳು ಸಹಕರಿಸಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಬಿ. ನಮ್ಮ ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆಯಾಗಿಸಲು ಎಲ್ಲರೂ ಒಟ್ಟಾಗಿ ಕೆಲಸ…
ಲೇಖಕ: admin
ಮಡಿಕೇರಿ NEWS DESK ಏ.29 : 2025-26 ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಇತ್ತೀಚೆಗಷ್ಟೇ ಹೊರ ಬಿದ್ದಿದ್ದು ಕೊಡಗು ಜಿಲ್ಲೆಯು ಉತ್ತಮ ಫಲಿತಾಂಶವನ್ನು ಕಾಯ್ದುಕೊಂಡಿದೆ. ವಿಶೇಷವಾಗಿ ಇತ್ತೀಚಿನ ವರ್ಷಗಳಲ್ಲಿ ಸರಕಾರಿ ಶಾಲೆಗಳು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸುತ್ತಿದೆ. ಇಂತಹ ಸಾಧನೆಯ ಹಾದಿಯಲ್ಲಿರುವ ಶಾಲೆ ಎಂದರೆ ಸರಕಾರಿ ಪ್ರೌಢಶಾಲೆ ಮೂರ್ನಾಡು. ಕಳೆದ ಆರು ವರ್ಷಗಳಿಂದ ಶೇಕಡ ನೂರರಷ್ಟು ಫಲಿತಾಂಶ ದಾಖಲಿಸಿದ ಗಮನಾರ್ಹ ಸಾಧನೆ ಈ ಶಾಲೆಯದಾಗಿದೆ. ಮೂರ್ನಾಡುವಿನ ಸ್ಥಳೀಯರ, ವಿದ್ಯಾಭಿಮಾನಿಗಳ, ಹಿತೈಷಿಗಳ ನಿರಂತರ ಬೇಡಿಕೆಯ ಫಲವಾಗಿ 2007ರಲ್ಲಿ ಕೇವಲ ಒಂಬತ್ತು ವಿದ್ಯಾರ್ಥಿಗಳೊಂದಿಗೆ ಹಳೆಯ ಕಟ್ಟಡ ಒಂದರಲ್ಲಿ ಪ್ರಾರಂಭವಾದ ಈ ಶಾಲೆ ಇಂದು ಅತ್ಯುತ್ತಮವಾದ ಕಟ್ಟಡ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್, ಗ್ರಂಥಾಲಯ, ಸ್ಮಾರ್ಟ್ ಕ್ಲಾಸ್, ಪ್ರೊಜೆಕ್ಟರ್, ವಿಶಾಲ ಆಟದ ಮೈದಾನ ಹಾಗೂ ಉತ್ತಮ ಬೋಧಕ ವೃಂದದವರನ್ನು ಹೊಂದಿದೆ. ನೋಡುವವರಿಗೆ ಇದು ಒಂದು ಖಾಸಗಿ ಶಾಲೆ ಎಂಬ ಭಾವನೆಯನ್ನು ಮೂಡಿಸುತ್ತದೆ. ಸರ್ಕಾರಿ ಶಾಲೆಯ ಸಮಸ್ಯೆಗಳು ಖಾಸಗಿ ಶಾಲೆಗಳಿಗಿಂತ ವಿಭಿನ್ನವಾಗಿರುತ್ತದೆ. ಅದು…
ಮಡಿಕೇರಿ ಏ.29 NEWS DESK : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಜಾಬೀರ್ (21), ಒರಿಸ್ಸಾ ರಾಜ್ಯದ ಕಂದನಮಾಲ್ ಜಿಲ್ಲೆಯ ಕಳಿಂಗ ಗ್ರಾಮದ ಸುಲ್ತಾನ್ ಪ್ರಧಾನ್ (55) ಹಾಗೂ ಇದೇ ರಾಜ್ಯದ ಮದಿನಂಜು ಗ್ರಾಮದ ಸ್ವರ್ಣಲತಾ ನಾಯಕ್ (35) ಬಂಧಿತ ಆರೋಪಿಗಳಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನವಳವಾಡಿ ಗ್ರಾಮದ ಸಿಂಕೋನದಿಂದ ಮಕ್ಕಂದೂರು ಕಡಗೆ ಹೋಗುವ ರಸ್ತೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಬಳಿಯಿಂದ 15.903 ಕೆ.ಜಿ ಗಾಂಜಾ ಮತ್ತು 3 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಜಿಲ್ಲಾ ಡಿಎಸ್‍ಬಿ ಪಿಐ ಮೇದಪ್ಪ ಐ.ಪಿ,, ಗ್ರಾಮಾಂತರ ಠಾಣಾ ಪಿಐ ಚಂದ್ರಶೇಖರ್ ಹೆಚ್.ವಿ, ಎಎಸ್‍ಐ ಚರ್ಮಣ ಸಿ.ಯು, ಸಿಬ್ಬಂದಿಗಳಾದ ಮಹೇಶ್ ಎಂ.ಕೆ, ಉದಯ್ ಕುಮಾರ್ ಜಿ.ಆರ್, ನಿರಂಜನ ಎಂ.ಎನ್, ಪ್ರವೀಣ್ ಬಿ.ಕೆ, ರಾಜೇಶ್ ಸಿ.ಕೆ, ಶರತ್ ರೈ ಬಿ.ಜೆ, ರುದ್ರಪ್ಪ ಜಿ…
ಮಡಿಕೇರಿ ಏ.29 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.29 ರಂದು ಸೆಮಿಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* ಪುರುಷರ ಕ್ರಿಕೆಟ್ (ಲಾಲು ಮುದ್ದಯ್ಯ ಮೈದಾನ) ಚೆಕ್ಕೇರ ಮತ್ತು ಪಂದ್ಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಚೆಕ್ಕೇರ 29 ರನ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 90 ರನ್ ಗಳನ್ನು ಸೇರಿಸಿತು. ಪಂದ್ಯಂಡ 8 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಚೆಕ್ಕೇರ ಕಾರ್ಯಪ್ಪ 47 ರನ್ ಗಳನ್ನು ಸೇರಿಸಿ 2 ವಿಕೆಟ್ ಗಳನ್ನು ಕಬಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಪಂದ್ಯಂಡ ದಿಲನ್ 19 ರನ್ ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮಾಳೇಟಿರ (ಕೆದಮುಳ್ಳೂರು) ಮತ್ತು ಪಾರುವಂಡ…
ಮಡಿಕೇರಿ ಏ.29 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘ ಕಾಲೇಜು ಮೈದಾನದ ಬಳಿ ನಿರ್ಮಿಸಿರುವ ಫೈರಿಂಗ್ ರೇಂಜ್ ಮೇ 5 ರಂದು ಉದ್ಘಾಟನೆಗೊಳ್ಳಲಿದೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕೊಡಗು ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್ ಹಾಗೂ ಎನ್‍ಸಿಸಿಯ ಕಮಾಂಡಿಂಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಅವರು ಫೈರಿಂಗ್ ರೇಂಜ್ ನ್ನು ಉದ್ಘಾಟಿಸಲಿದ್ದಾರೆ. ಫೀ.ಮಾ.ಕಾರ್ಯಪ್ಪ ಕಾಲೇಜ್ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎನ್‍ಸಿಸಿಯ ಆಡಳಿತಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಶ್ರೀನಿವಾಸ್ ಎಸ್., ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಮುಕ್ಕಾಟಿರ ಎ.ಅಪ್ಪಯ್ಯ, ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಾಗೂ ವಕೀಲ ಮುಂಡoಡ ಸುದಯ್ ನಾಣಯ್ಯ ಹಾಗೂ…
ಮಡಿಕೇರಿ ಏ.29 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯ ಫೈನಲ್ಸ್ ಮತ್ತು ಸಮಾರೋಪ ಸಮಾರಂಭ ಮೇ 1 ರಂದು ನಡೆಯಲಿದೆ. ಬೇತ್ರಿ ಮುಕ್ಕಾಟಿರ ಪಟ್ಟೆದಾರ ಕಾಳಪ್ಪ ಹಾಗೂ ಕ್ರಿಕೆಟ್ ನಮ್ಮೆಯ ಅಧ್ಯಕ್ಷ ಸುರೇಶ್ ಪೆಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಸಾರಾ ಮಹೇಶ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಶಾಸಕರೂ ಆದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಓಸ್ಪ್ರೇ ಗ್ರೂಪ್ ನ ಮಾಚೆಟ್ಟಿರ ಜೆನಿತ್ ಅಯ್ಯಪ್ಪ, ಮೊಬಿಯಸ್ ಫೌಂಡೇಶನ್ ನ ಮಣವಟ್ಟಿರ ಮಧು ಬೋಪಣ್ಣ, ವಿಶೇಷ ಆಹ್ವಾನಿತರಾಗಿ ಇಂಡಸ್ ಅಸಿಸ್ಟ್ ಪ್ರೈವೇಟ್ ಲಿಮಿಟೆಡ್ ನ ಎಸ್.ಬಾಲಚಂದ್ರ, ಕೊಡವ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಕೀತಿಯಂಡ ಕಾರ್ಸನ್ ಹಾಗೂ ಉಪಾಧ್ಯಕ್ಷ ಚೇರಂಡ ಕಿಶನ್ ಉಪಸ್ಥಿತರಿರುವರು.
ಮಡಿಕೇರಿ ಏ.29 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಮೇ 1 ರಂದು ಫೈನಲ್ ಪಂದ್ಯಗಳು. *ಮೈದಾನ 1* ಪುರುಷರ ಸೆಮಿಫೈನಲ್ (ಲಾಲು ಮುದ್ದಯ್ಯ ಮೈದಾನ) *ಮಹಿಳಾ ಕ್ರಿಕೆಟ್* ಬೆಳಿಗ್ಗೆ 9.30 ಗಂಟೆಗೆ ಮಣವಟ್ಟಿರ ಮತ್ತು ಮುಕ್ಕಾಟಿರ (ಹರಿಹರ) *ಪುರುಷರ ಕ್ರಿಕೆಟ್* ಚೆಕ್ಕೇರ ಮತ್ತು ಮಾಳೇಟಿರ (ಕೆದಮುಳ್ಳೂರು)
ಮಡಿಕೇರಿ NEWS DESK ಏ.29 : ಮಡಿಕೇರಿ ನಗರದ ಹೊರವಲಯದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ ಮೇ 5ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಜರಾಜೇಶ್ವರಿ ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ಅವರು ದೇವಾಲಯಕ್ಕೆ ಸುಮಾರು 80 ವರ್ಷಗಳ ಇತಿಹಾಸವಿದೆ. ವಾರ್ಷಿಕೋತ್ಸವ ಹಾಗೂ ರಥೋತ್ಸವದಲ್ಲಿ ರಾಜ್ಯ ಮತ್ತು ಹೊರ ರಾಜ್ಯದ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದರು. ಭಕ್ತರ, ದಾನಿಗಳ, ವಿವಿಧ ಸಂಘ ಸಂಸ್ಥೆಗಳ, ಸ್ವಯಂಸೇವಕರ ಸಹಕಾರದಿಂದ ಪ್ರತಿವರ್ಷ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ದೇವಾಲಯದಲ್ಲಿ ಪ್ರತಿದಿನ ಭಕ್ತರಿಗಾಗಿ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಾರ್ಷಿಕೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವುದರೊಂದಿಗೆ ತನು ಮನ ಧನದ ಸಹಕಾರ ನೀಡುವಂತೆ ಮನವಿ ಮಾಡಿದರು. ದೇವಾಲಯ ಸಮಿತಿಯ ಸದಸ್ಯ ಕಿರಣ್ ಕುಮಾರ್ ಅವರು ಮಾತನಾಡಿ ವಾರ್ಷಿಕೋತ್ಸವ ಹಾಗೂ ರಥೋತ್ಸವದ ಮಾಹಿತಿ ನೀಡಿದರು. ಮೇ 5 ರಂದು ಬೆಳಿಗ್ಗೆ 6 ಗಂಟೆಗೆ ಧ್ವಜಾರೋಹಣ, 6.30ಕ್ಕೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ…
ಮಡಿಕೇರಿ ಏ.28 NEWS DESK : 1995-96ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ ಮದೆನಾಡಿನ ಮದೆಮಹೇಶ್ವರ ವಿದ್ಯಾಸಂಸ್ಥೆ(BGS)ಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬೊಳ್ಳೂರು ಹರೀಶ ಅವರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಅಗಲಿದ ಸಹಪಾಠಿಗಳಿಗೆ ಮತ್ತು ಗುರುಗಳಿಗೆ ಸಂತಾಪ ಸೂಚನೆ, ಗುರುಗಳಿಗೆ ಗುರುವಂದನಾ ಸಾಧನೆಗಳ ಪರಿಚಯ, ಮೋಜಿನ ಆಟದೊಂದಿಗೆ ಗುರುಗಳೊಂದಿಗೆ ವಿದ್ಯಾರ್ಥಿಗಳು ಕೊಡಗಿನ ವಾಲಗಕ್ಕೆ ಹೆಜ್ಜೆ ಹಾಕಿದರು. ಗುರುಗಳಿಗೆ ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ಶಿಕ್ಷಕರಾದ ಜೋಯಪ್ಪ, ಶಿವರಾಂ, ಸಿದ್ದರಾಜು, ಕೃಷ್ಣ, ಲಕ್ಷಣ, ಸುಗುಣ, ದಿವಂಗತ ಮಂದಣ್ಣ ಅವರ ಪತ್ನಿ ಭಾಗೀರತಿ, ತಿಮ್ಮಯ್ಯ, ಶಿವಲಿಂಗಯ್ಯ, ಕಾರ್ಯಪ್ಪಣ್ಣ ಹಾಗೂ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಇಬ್ರಾಹಿಂ ಹಾಜರಿದ್ದರು. ಮಕ್ಕಳು ವಿದ್ಯಾರ್ಥಿ ಗಳಾಗಿದ್ದಾಗ ಗುರುಗಳಿಂದ ಪೆಟ್ಟು ತಿನ್ನದವರು ಬೆತ್ತ ಕೊಟ್ಟು ಹೊಡೆಸಿಕೊಳ್ಳುವುದು ವಿಶೇಷ ಮನೋರಂಜನೆಗೆ ಸಾಕ್ಷಿಯಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಸ್ವಾಗತಿಸಿದರು. ಬಾರನ ದಿನೇಶ್ ಗುರು ನಮನ ಪರಿಚಯ ಮಾಡಿದರು. ರಾಘವೇಂದ್ರ ಮತ್ತು ಮಾಧವ…
ಮಡಿಕೇರಿ ಏ.28 NEWS DESK : ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಾ ಮುಂದಕ್ಕೆ ಸಾಗಲು ಅಲ್ಲಿನ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಅತ್ಯಂತ ಮುಖ್ಯವಾದದ್ದು ಎಂದು ಕಾವೇರಿ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಎಂ.ಎಸ್. ಮುತ್ತಣ್ಣ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ನಿವೃತ್ತ ಸಿಬ್ಬಂದಿಗಳ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದು ಸಂಸ್ಥೆಯ ಏಳಿಗೆಯೂ ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಮೇಲೆ ಅವಲಂಬಿತವಾಗಿದೆ. ಸಿಬ್ಬಂದಿಗಳು ಸಂಸ್ಥೆಯ ಏಳಿಗೆಗೆ ಶ್ರಮಿಸಿ ತಮ್ಮ ಸೇವೆಯನ್ನು ಸಲ್ಲಿಸುವುದು ಬಹಳ ಮುಖ್ಯವಾಗಿದೆ. ಅದರಲ್ಲಿಯೂ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ವೃಂದದವರು ವಹಿಸುವಂತಹ ಪಾತ್ರ ಮಹತ್ವದ್ದಾಗಿದೆ. 60 ವರ್ಷಗಳು ತುಂಬುವವರೆಗೂ ಸಂಸ್ಥೆಗಾಗಿ, ಸಂಸ್ಥೆಯ ಏಳಿಗೆಗಾಗಿ ಶ್ರಮವಹಿಸಿದ್ದು ಇನ್ನು ಮುಂದೆ ನಿಮ್ಮ ಕೌಟುಂಬಿಕ ಜೀವನ ಹಾಗೂ ಸಾಮಾಜಿಕ ಜೀವನದಲ್ಲಿ ನಿಮ್ಮ ಸೇವೆ ಅದೇ ರೀತಿ ಮುಂದುವರೆಯಲಿ. ನಿವೃತ್ತ ಜೀವನ ಸುಖ, ಶಾಂತಿ, ನೆಮ್ಮದಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು. ಕಾವೇರಿ ಎಜುಕೇಶನ್ ಸೊಸೈಟಿ…






