ಮಡಿಕೇರಿ ಸೆ.6 : ಶ್ರೀ ಕಂಚಿ ಕಾಮಾಕ್ಷಿ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರತೀ ವರ್ಷದಂತೆ ಈ ಬಾರಿಯೂ ತಾ.6 ರಂದು (ಇಂದು) ದೇವಾಲಯದಲ್ಲಿ ನಡೆಯಲಿದೆ. ಇಂದು (ಬುಧವಾರ) ರಾತ್ರಿ 10 ಗಂಟೆಯಿಂದ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 12 ಗಂಟೆಗೆ ಮಹಾಪೂಜೆ ನೆರವೇರಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕೃಷ್ಣ ಆರಾಧನೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
ಲೇಖಕ: admin
ನಾಪೋಕ್ಲು ಸೆ.6 : ದಾರ್ಶನಿಕ, ತತ್ವಜ್ಞಾನಿ, ಶಿಕ್ಷಣ ತಜ್ಞ, ಪ್ರಾಧ್ಯಾಪಕ, ಕುಲಪತಿಗಳಾಗಿ ರಾಧಾಕೃಷ್ಣ ಅವರು ಸಲ್ಲಿಸಿದ ಅಪ್ರತಿಮ ಸೇವೆ ಸ್ಮರಣೀಯ ಎಂದು ನಿರ್ದೇಶಕ ಕಲ್ಯಾಟಂಡ ಪೂಣಚ್ಚ ಹೇಳಿದರು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಲೆಯ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದ ಅಪ್ಪಣ್ಣ ಮಾತನಾಡಿ, ಶಿಕ್ಷಕರ ಸ್ವಾರ್ಥ ರಹಿತ ಸೇವೆಯಿಂದ ವಿದ್ಯಾರ್ಥಿಗಳು ಮುಂದಿನ ಸಮಾಜದ ಉತ್ತಮ ಪ್ರಜೆಗಳಾಗಬಲ್ಲರು. ಡಾ.ರಾಧಾಕೃಷ್ಣನ್ ತಮ್ಮ ಆದರ್ಶಗಳ ಮೂಲಕ ಸಮಾಜಕ್ಕೆ ಮಾದರಿಯಾದರು. ಅವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದ ಅವರು ಮುಂದಿನ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಮಹತ್ತರವಾದುದು ಎಂದರು. ಹಿರಿಯ ಶಿಕ್ಷಕಿ ಮುಂಡಂಡ ಕವಿತಾ ಅಯ್ಯಣ್ಣ, ಶಿಕ್ಷಕಿ ಮರ್ಲಿನ್ ಪ್ರಿಯಾ ಮಾತನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ಬೊಳ್ಳಚೆಟ್ಟಿರ ಸುರೇಶ್ ಉಪಸ್ಥಿತರಿದ್ದರು. ಶಿಕ್ಷಕರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಮತ್ತು…
ನಾಪೋಕ್ಲು ಸೆ.6 : ಜಿಲ್ಲಾ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕ ಮೂಡೇರ ಕಾಳಯ್ಯ ಹಾಗೂ ದೈಹಿಕ ಶಿಕ್ಷಕಿ ಸರಿತಾ ತರಬೇತಿ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಸೆ.6 : ಚೇರಂಬಾಣೆ ವೃತ್ತ, ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಕೀಲರ ಸಂಘ ಕೊಡಗು, ಬೆಟ್ಟಗೇರಿ ಗ್ರಾ.ಪಂ ಸಹಯೋಗ ದೊಂದಿಗೆ ಅಪ್ಪಂಗಳ ಸಮುದಾಯ ಭವನದಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಸಪ್ತಾಹ, ಮಾತೃ ವಂದನ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಾನಸಿಕ, ಭೌತಿಕ ಹಾಗೂ ದೈಹಿಕವಾಗಿ ಆರೋಗ್ಯದ ಬೆಳವಣಿಗೆ ಆಗಬೇಕೆಂದು ಯೂನಿಸೆಫ್ ಚಿಂತನೆಯಾಗಿದೆ. ಭಾರತದ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಕೈಕಟಕುವಂತೆ ಪೌಷ್ಟಿಕಾಂಶ ದೊರಕಬೇಕೆಂಬುದು ತಿಳಿಸಲಾಗಿದೆ. ಪೌಷ್ಟಿಕತೆ ಎನ್ನುವುದು ಕೇವಲ ಪ್ರಾಪ್ತ ವಯಸ್ಸಿನವರಿಗೆ ಮಾತ್ರವಲ್ಲದೆ ಪ್ರಸವಪೂರ್ವ ಮಗುವಿನಿಂದಲೂ ಉತ್ತಮ ಪೌಷ್ಟಿಕತೆ ಪ್ರಾರಂಭವಾಗುತ್ತದೆ. ಅದಕ್ಕಾಗಿ ಸರ್ಕಾರದ ಯೋಜನೆಗಳನ್ನು ಸಮಾಜಕ್ಕೆ ಹತ್ತಿರವಾಗಿರುವ ಅಂಗನವಾಡಿ ಕೇಂದ್ರಗಳ ಮೂಲಕ ವಿತರಣೆಯಾಗುತ್ತದೆ ಎಂದು ತಿಳಿಸಿದರು. ಬಡತನ ನಿರ್ಮೂಲನೆ ಬಗ್ಗೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಯೋಜನೆಯಾದ ಉಚ್ಚ…
ಸೋಮವಾರಪೇಟೆ, ಸೆ.6: ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಬೋಧಕೇತರ ನೌಕರರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಡಾ.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಳಿಯಪ್ಪ ಮಾತನಾಡಿ, ಭಾರತದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಗೌರವಾರ್ಥವಾಗಿ ಅವರ ಜನ್ಮದಿನವಾದ ಸೆ.5 ರಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಸಮಾಜದಲ್ಲಿ ಶಿಕ್ಷಕರಿಗೆ ವಿಶೇಷ ಸ್ಥಾನವಿದೆ. ಮನುಷ್ಯನನ್ನು ಮನುಷ್ಯನನ್ನಾಗಿ ಮಾಡುವವನು ಗುರು. ಮಾನವ ಜೀವನದಲ್ಲಿ ಶಿಕ್ಷಕನ ಸ್ಥಾನವು ದೇವರು ಮತ್ತು ಪೋಷಕರಿಗಿಂತ ಮೇಲಿದೆ ಎಂದು ಬಣ್ಣಿಸಿದರು. ಶಿಕ್ಷಣ ಸಂಯೋಜಕ ಕೆ.ಬಿ.ರಾಧಾಕೃಷ್ಣ, ಕಛೇರಿಯ ಪತ್ರಾಂಕಿತ ಅಧಿಕಾರಿ ಎಂ.ಆರ್.ಕಿರಣ್, ಅಧೀಕ್ಷಕ ಸಿ.ಪಿ.ದಾಮೋದರ್, ಸರ್ಕಾರಿ ನೌಕರರ ಸಂಘದ ಖಜಾಂಚಿ ವಿ.ಜಿ.ದಿನೇಶ್, ತಾಲ್ಲೂಕು ಬೋಧಕೇತರರ ನೌಕರರ ಸಂಘದ ಅಧ್ಯಕ್ಷ ಹೆಚ್.ಆರ್.ಸುರೇಶ್, ಉಪಾಧ್ಯಕ್ಷ ಹೆಚ್.ಟಿ.ರಾಜೇಶ್ , ನಿರ್ದೇಶಕ ಮೋಹನ್ ದಾಸ್, ಕಛೇರಿ ಸಿಬ್ಬಂದಿಗಳಾದ ಟಿ.ಬಿ.ಚಿದಾನಂದ, ಶೇಷಾದ್ರಿ ಎಲ್. ಸ್ವಾಮಿ, ಪಿ.ಎಸ್. ಭುವನೇಶ್ ಇತರರು ಹಾಜರಿದ್ದರು.
ಮಡಿಕೇರಿ ಸೆ.6 : ಮುಂದಿನ ಶೈಕ್ಷಣಿಕ ವರ್ಷದಿಂದ ಕೊಡಗು ವಿಶ್ವವಿದ್ಯಾಲಯವು ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡುವ ಯೋಜನೆಯನ್ನು ರೂಪಿಸಿಕೊಂಡಿದೆ. ಮಾತ್ರವಲ್ಲ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ತಲಾ ಒಂದೊಂದು ಲಾಂಗ್ವೇಜ್ ಲ್ಯಾಬ್ ಗಳನ್ನು ರೂಪಿಸಲಾಗುವುದು. ಜೊತೆಯಲ್ಲಿ ಕರ್ನಾಟಕ ಸರ್ಕಾರದ ಕಲಿಕೆಯೊಂದಿಗೆ ಕೌಶಲ್ಯ ಎಂಬ ಯೋಜನೆಯನ್ನು ಕೊಡಗು ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗಾಗಿ ಪರಿಚಯಿಸಲಾಗುವುದು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ನುಡಿದರು. ಕರ್ನಾಟಕ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಫೋರ್ಕ್ ಟೆಕ್ನೊಲಜಿ ಹಾಗೂ ಕೊಡಗು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎರಡು ವಾರಗಳ ಅಧ್ಯಾಪಕರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಅವರು, ಅಧ್ಯಾಪಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಶಿಕ್ಷಕರ ದಿನಾಚರಣೆ ಕೇವಲ ಒಂದು ದಿನದ ಸಂಭ್ರಮವಾಗಬಾರದು. ಬದಲಾಗಿ…
ಮಡಿಕೇರಿ ಸೆ.5 : ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯು ಸೆಪ್ಟೆಂಬರ್, 8 ರಂದು ಬೆಳಗ್ಗೆ 11 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಚೇರಿ ಆವರಣದಲ್ಲಿ ನಡೆಯಲಿದೆ. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ನೇತೃತ್ವದಲ್ಲಿ ಸಾಕ್ಷರ ಧ್ವಜಾರೋಹಣ ಮತ್ತು ಸಾಕ್ಷರತಾ ಪ್ರಮಾಣ ವಚನದ ಮೂಲಕ ನೆರವೇರಿಸಲಾಗುವುದು ಎಂದು ಕೊಡಗು ಜಿಲ್ಲಾ ಪಂಚಾಯತ್ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಸೆ.5 : ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಗೆ ತನ್ನದೇ ಆದ ಗೌರವ ಸ್ಥಾನವಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು. ನಗರದ ಕೊಡಗು ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಕರ ಸೇವೆಯನ್ನು ಯಾರೂ ಸಹ ಮರೆಯುವುದಿಲ್ಲ. ಪುಸ್ತಕ ಮೂಲಕ ಪಾಠ ಮಾಡುವುದಕ್ಕೂ, ಮನಸ್ಸಿನ ಮೂಲಕ ಪಾಠ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ. ಆ ನಿಟ್ಟಿನಲ್ಲಿ ಮಕ್ಕಳ ಜ್ಞಾನಾರ್ಜನೆ ಹೆಚ್ಚಿಸುವಲ್ಲಿ ಶಿಕ್ಷಕರ ಸೇವೆ ಮಹತ್ವದ್ದಾಗಿದೆ ಎಂದರು. ಶಿಕ್ಷಕರು ಹಲವು ಮೂಲ ಸೌಲಭ್ಯಗಳ ಕೊರತೆಯ ನಡುವೆಯೂ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿಸಲು ಪ್ರಯತ್ನಿಸುತ್ತಾರೆ. ಮಕ್ಕಳನ್ನು ಸರಿದಾರಿಗೆ ತರಲು…
ಮಡಿಕೇರಿ ಸೆ.5 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮುಂದಿಟ್ಟಿರುವ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಕೇಂದ್ರ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಸಮಯಾವಕಾಶ ಕೋರಿದ ಹಿನ್ನೆಲೆ ಕೋರ್ಟ್ ವಿಚಾರಣೆಯನ್ನು ಅ.4 ಕ್ಕೆ ಮುಂದೂಡಿತು. ಆ.3 ರಂದು ನಡೆದ ವಿಚಾರಣೆ ಸಂದರ್ಭ ಮೂವರು ಪ್ರತಿವಾದಿಗಳು 4 ವಾರಗಳಲ್ಲಿ ಉತ್ತರ ನೀಡುವಂತೆ ಕೋರ್ಟ್ ನಿರ್ದೇಶನ ನೀಡಿತ್ತು. ಇಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರು ಅರ್ಜಿಯನ್ನು ಆಲಿಸಿದರು. ಅರ್ಜಿದಾರರಾದ ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಕೊಡವ ಪರ ವಕೀಲ ಕೀರನ್ ನಾರಾಯಣ್ ವಾದ ಮಂಡಿಸಿದರು. ಸಹಾಯಕ ಸಾಲಿಸಿಟರ್ ಜನರಲ್ ಶಾಂತಿ ಭೂಷಣ್ ಅವರು ಪ್ರತಿವಾದಿಗಳ ಒಕ್ಕೂಟದ ಸರ್ಕಾರದ ಪರವಾಗಿ ವಾದಿಸಿದರು. ಎನ್.ಯು.ನಾಚಪ್ಪ ಅವರು…
ಮಡಿಕೇರಿ ಸೆ.5 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಢ ರ್ ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಸೆ.7 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ತಾಳತ್ತಮನೆ, ಉಡೋತ್ತುಮೊಟ್ಟೆ, ಚೇರಂಬಾಣೆ, ಅಪ್ಪಂಗಳ, ಭಾಗಮಂಡಲ, ತಲಕಾವೇರಿ, ಚೇರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.






