ಮಡಿಕೇರಿ ಸೆ.5 : 33/11ಕೆವಿ ಎಂಯುಎಸ್‍ಎಸ್ ಮೂರ್ನಾಡು ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಸೆ.6 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊಡವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಸೆ.05 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇದರ ಅಧೀನ ಸಂಸ್ಥೆಯಾದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮಡಿಕೇರಿ ಡಿಸಿಎಂ ಡಿಪ್ಲೊಮಾ ಪರೀಕ್ಷೆಯಲ್ಲಿ ರಾಜ್ಯಕ್ಕೆ 1 ನೇ ರ‍್ಯಾಂಕ್ , 3 ನೇ ರ‍್ಯಾಂಕ್ ಹಾಗೂ 6 ನೇ ರ‍್ಯಾಂಕ್ ಗಳನ್ನು ಮತ್ತು 5 ಡಿಸ್ಟಿಂಕ್ಷನ್‍ಗಳನ್ನು ಗಳಿಸಿದ್ದು, ಶೇ.100 ರಷ್ಟು ದಾಖಲೆ ಫಲಿತಾಂಶ ಬಂದಿದೆ. ವಿ.ಭೂಮಿಕ 1ನೇ ರ‍್ಯಾಂಕ್ , ಬಿ.ಎ.ದಮಯಂತಿ 3ನೇ ರ‍್ಯಾಂಕ್ , ಬಿ.ಪಿ.ನಿತಿನ್ ನಂಜಪ್ಪ 6ನೇ ರ‍್ಯಾಂಕ್ ಪಡೆದಿದ್ದಾರೆ ಎಂದು ಕೆಐಸಿಎಂ ಪ್ರಾಂಶುಪಾಲರಾದ ಡಾ.ಆರ್.ಎಸ್.ರೇಣುಕಾ ತಿಳಿಸಿದ್ದಾರೆ.
ವಿರಾಜಪೇಟೆ ಸೆ.5 : ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಆಚರಿಸಿದರು. ಕಾಲೇಜಿನ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಮಾತನಾಡಿ, ಶಿಕ್ಷಣವನ್ನು ಪಡೆಯಬೇಕೆಂದರೆ ಗುರುವಿನ ನುಡಿಗಳನ್ನು ಮನಸ್ಸಿಟ್ಟು ಕೇಳಬೇಕು. ಅದನ್ನು ಪರಿಪಾಲಿಸುವುದು ವಿದ್ಯಾರ್ಥಿಗಳ ಕರ್ತವ್ಯ. ಗುರುವಿಗೆ ಗೌರವವನ್ನು ನೀಡಬೇಕೆಂದು ಗುರುವಿನ ಮಹತ್ವವನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಎ.ಎಂ.ಡೈನಾ ಮಾತನಾಡಿ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಹಿತನುಡಿಗಳನಾಡಿದರು. ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ರೀತಿಯ ಆಟೋಟ, ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಇದೇ ಸಂದರ್ಭ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಪ್ರಾರಂಭದಲ್ಲಿ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿಗಳಾದ ದೀಷ್ಮ ಮತ್ತು ತಂಡದವರಿಂದ ಪ್ರಾರ್ಥನೆ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಕಾವ್ಯ ಸ್ವಾಗತಿಸಿದರು. ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಕುಮಾರಿ ಕಾವೇರಮ್ಮ ವಂದಿಸಿದರೆ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಹಸೀನಾ ಮತ್ತು ಸುಶ್ಮಿತಾ ನಿರೂಪಿಸಿದರು.
ಮಡಿಕೇರಿ ಸೆ.5 : ಬಿಜೆಪಿ ಸರ್ಕಾರದ ರೈತಪರ ಯೋಜನೆ ಮುಂದುವರಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಸೆ.8 ರಂದು ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಯಲಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ಖಂಡಿಸಿ ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯಾದ್ಯಂತ ಸೆ.8 ರಂದು ಪ್ರತಿಭಟನೆ ನಡೆಸಲಿದೆ. ಅಂದು ಮಡಿಕೇರಿ ನಗರ, ಮಡಿಕೇರಿ ಗ್ರಾಮಾಂತರ, ವಿರಾಜಪೇಟೆ ಹಾಗೂ ಸೋಮವಾರಪೇಟೆ ಸೇರಿದಂತೆ ಜಿಲ್ಲೆಯ ನಾಲ್ಕು ಮಂಡಲದಲ್ಲಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದರು. ಮಳೆಯ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಸಮಸ್ಯೆಗಳ ನಿವಾರಣೆಗಾಗಿ ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು, ರೈತರ ಜಮೀನುಗಳಲ್ಲಿ ಇರುವ ತೆರೆದ ಬಾವಿಯ ನೀರನ್ನು ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳಲು 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು, ರೈತರ ಆತ್ಮಹತ್ಯೆಯಂತಹ ಅನಾಹುತಗಳಿಗೆ ಆಸ್ಪದ ನೀಡದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಕಮ್ಮಿಕೊಳ್ಳಬೇಕು, ಬಿಜೆಪಿ ರಾಜ್ಯ ಸರ್ಕಾರ ನೀಡುತ್ತಿದ್ದ…
ಮಡಿಕೇರಿ ಸೆ.5 : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ 2022-23ನೇ ಸಾಲಿನಲ್ಲಿ 30.33 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಪ್ರಸ್ತುತ ಸಾಲಿನಲ್ಲಿ 298.50 ಲಕ್ಷ ವಹಿವಾಟು ನಡೆಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಿ.ಕೆ.ಬಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಮುಖೇನ ಸದಸ್ಯರುಗಳಿಗೆ 2983.66 ಲಕ್ಷ ರೂ. ಸಾಲವನ್ನು ವಿವಿಧ ರೂಪಗಳಲ್ಲಿ ನೀಡಲಾಗಿದೆ. ಇದರಲ್ಲಿ ಪ್ರಮುಖವಾಗಿ ಜಾಮೀನು ಸಾಲವಾಗಿ 637.97 ಲಕ್ಷ ರೂ., ಮನೆ ಆಧಾರ ಸಾಲವಾಗಿ 1080.62 ಲಕ್ಷ ರೂ., ಚಿನ್ನಾಭರಣಗಳ ಈಡಿನ ಸಾಲವಾಗಿ 947.06 ಲಕ್ಷ ರೂ.ಗಳನ್ನು ನೀಡಲಾಗಿದೆ. ಸಾಲ ವಸೂಲಾತಿ ಶೇ.95.62 ರಷ್ಟು ಆಗಿದೆ ಎಂದರು. ಬ್ಯಾಂಕಿನ ದುಡಿಯುವ ಬಂಡವಾಳ 5015.83 ಲಕ್ಷವಾಗಿದ್ದು, ಇದು ಕಳೆದ ಸಾಲಿಗಿಂತ 571.35 ಲಕ್ಷ ರೂ. ಹೆಚ್ಚಿನದ್ದಾಗಿದೆ. ಬ್ಯಾಂಕ್ ಪ್ರಸ್ತುತ 4426.99 ರಷ್ಟು ವಿವಿಧ ಠೇವಣಾತಿಗಳನ್ನು ಹೊಂದಿದ್ದು, ಇದು ಕಳೆದ ಸಾಲಿಗಿಂತ 496.42 ಲಕ್ಷ ರೂ.ಗಳಷ್ಟು ಹೆಚ್ಚಿನದ್ದಾಗಿದೆ. ಠೇವಣಾತಿಗಳ ಮೇಲೆ ಪೂರ್ಣ ಪ್ರಮಾಣದ ಡೆಪಾಸಿಟ್ ಇನ್ಸೂರೆನ್ಸ್ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಷನ್‍ನಲ್ಲಿ…
ವಿರಾಜಪೇಟೆ ಸೆ.5 : ಮಕ್ಕಳು ಶಿಸ್ತುಬದ್ದ ಜೀವನ ನಡೆಸಲು ಶಿಕ್ಷಕರೇ ಪ್ರೇರಣೆಯಾಗಲಿದ್ದಾರೆ. ಶಿಕ್ಷಕರನ್ನು ಗುರುತಿಸುವುದು ಸಮಾಜದ ಜವಾಬ್ದಾರಿ ಎಂದು ಮುಖ್ಯಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಶಿಕ್ಷಣಾ ಇಲಾಖೆ, ವಿರಾಜಪೇಟೆ ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ, ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ತಾಲೂಕು ಶಿಕ್ಷಕರ ಕಲ್ಯಾಣ ಸಮಿತಿ, ಸಂತ ಅನ್ನಮ್ಮ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ವಿದ್ಯಾರ್ಥಿಗಳ ಓದಿನ ಜೊತೆಗೆ ಭವಿಷ್ಯ ರೂಪಿಸಿಕೊಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡುವ, ಸಮಾಜ ತಿದ್ದುವ ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಕಾರಣವಾಗಲಿದ್ದಾರೆ. ಶಿಕ್ಷಕರು ತಮ್ಮ ಪಾಲಿನ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು. ಪೋಷಕರು ಶಿಕ್ಷಕರನ್ನೆ ದೇವರು ಎಂದು ಭಾವಿಸಿರುತ್ತಾರೆ ಎಂದು…
ಮೈಸೂರು ಸೆ.5 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ – 2023 ರ ಅಂಗವಾಗಿ ಇಂದು ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳನ್ನು ಸ್ವಾಗತಿಸಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಸೇರಿ ಹಲವರು ಹಾಜರಿದ್ದರು.
ಮಡಿಕೇರಿ ಸೆ.5 : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 58ನೇ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ, ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಸುನಿಲ್…
ಮಡಿಕೇರಿ ಸೆ.5 : ರಾಜ್ಯವನ್ನಾಳಿದ ಈ ಹಿಂದಿನ ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಕುರಿತು ಕಾಂಗ್ರೆಸ್ ಸರ್ಕಾರ ತನಿಖೆ ಆರಂಭಿಸಿದ್ದು, ಉಪ್ಪು ತಿಂದವರು ನೀರು ಕುಡಿಯಲೇಬೇಕು, ಶಿಕ್ಷೆ ಅನುಭವಿಸಲೇಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ತಿಳಿಸಿದ್ದಾರೆ. ನಗರದ ಕಾವೇರಿ ಹಾಲ್ ನಲ್ಲಿ ನಡೆದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, “ನಾ ಕಾವುಂಗ, ಕಿಸಿಕೊ ಕಾನೆ ನಹೀ ದುಂಗಾ” ಎಂದು ಹೇಳುವ ಪ್ರಧಾನಮಂತ್ರಿಗಳು ಈ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಚಾರದ ವಿರುದ್ಧ ಮೌನ ವಹಿಸಿರುವುದು ಯಾಕೆ ಎಂದು ಪ್ರಶ್ನಿಸಿದರು. ಬಿಜೆಪಿ ಆಡಳಿತದ ಅವಧಿಯಲ್ಲಿ ಕೋವಿಡ್ ಹಗರಣ, ಶೇ.40 ಕಮಿಷನ್ ದಂಧೆ ನಡೆದಿದೆ, ಇದನ್ನು ಖುದ್ದು ಗುತ್ತಿಗೆದಾರರ ಸಂಘವೇ ಬಹಿರಂಗ ಪಡಿಸಿತ್ತು. ಉಡುಪಿಯಲ್ಲಿ ಕಿರುಕುಳ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದರು. ಹೀಗೆ ಎಲ್ಲಾ ಹಗರಣಗಳ ಕುರಿತು ಕಾಂಗ್ರೆಸ್ ಸರ್ಕಾರ ತನಿಖೆಯನ್ನು ಆರಂಭಿಸಿದೆ. ಚುನಾವಣೆ ಸಂದರ್ಭ…
ಮಡಿಕೇರಿ ಸೆ.5 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ನಗರದ ಕೊಡಗು ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿ ಸ.ಕ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಬಿ.ಸಿ.ವನಜ, ನಾಪೋಕ್ಲು ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕೆ.ಪಿ.ಚಂದ್ರಕಲಾ, ಚೆಂಬು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಪಿ.ಎಸ್.ಕಾಮಾಕ್ಷಿ, ಸೋಮವಾರಪೇಟೆ ತಾಲ್ಲೂಕಿನ ಹಟ್ಟಿಹೊಳೆ ಸ.ಕಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಶಾಂತಶೀಲ, ರಂಗಸಮುದ್ರ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಕೆ.ಕೆ.ಸುನಿತ, ಕೂಡುಮಂಗಳೂರು ಸ.ಪ್ರೌಢ ಶಾಲೆಯ ಹಿಂದಿ ಭಾಷಾ ಶಿಕ್ಷಕರಾದ ಎಂ.ಟಿ.ದಯಾನಂದ ಪ್ರಕಾಶ್, ವಿರಾಜಪೇಟೆ ತಾಲ್ಲೂಕಿನ ಎಲಿಯಂಗಾಡು ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಪಿ.ಎಂ.ಸುಬ್ರಮಣ್ಯ, ಗೋಣಿಕೊಪ್ಪ ಸ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಕೆ.ಕುಮಾರ್, ಜೆಪಿಎಸ್ ಪ್ರೌಢಶಾಲೆಯ(ಅನುದಾನಿತ) ಮುಖ್ಯ ಶಿಕ್ಷಕರಾದ ಲಾಲ್‍ಕುಮಾರ್ ಅವರಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ…






