ನಾಪೋಕ್ಲು ಸೆ.5 : ಇಂದಿರಾನಗರದ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ 18ನೇ ವರ್ಷದ ಗೌರಿ ಗಣೇಶ ಉತ್ಸವವನ್ನು ಸೆ.19 ರಂದು ಸಂಭ್ರಮದಿಂದ ಆಚರಿಸಲಾಗುವುದು. ಇಂದಿರಾನಗರದಲ್ಲಿ ಬೆಳಿಗ್ಗೆ 9.30 ಗಂಟೆಗೆ ಗಣಪತಿ ಹೋಮದೊಂದಿಗೆ ಗೌರಿ ಗಣೇಶ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಗುವುದು. ನಂತರ ಐದು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಪೂಜಾ ಕಾರ್ಯಕ್ರಮ ನಡೆಯಲಿದೆ. 20 ರಂದು ಸಂಜೆ 7 ಗಂಟೆಗೆ ಸ್ಥಳೀಯರಿಂದ ಹಾಡುಗಾರಿಕೆ, 21 ರಂದು ಸಂಜೆ 7 ಗಂಟೆಗೆ ರವಿ ಬಳಗದಿಂದ ಸಂಗೀತ ಸಂಜೆ, 22 ರಂದು ಸಂಜೆ 7 ಗಂಟೆಗೆ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, 23 ರಂದು ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಬಳಿಕ ಭವ್ಯ ಅಲಂಕೃತ ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಕೊಂಡೊಯ್ದು ಪವಿತ್ರ ಕಾವೇರಿ ನದಿಯಲ್ಲಿ ಸಂಜೆ 7 ಗಂಟೆಗೆ ಉತ್ಸವ ಮೂರ್ತಿಯನ್ನು ವಿಸರ್ಜಿಸಲಾಗುವುದು ಎಂದು ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ಲೇಖಕ: admin
ನಾಪೋಕ್ಲು ಸೆ.4 : ಕ್ರೀಡೆ, ವಿದ್ಯಾಭ್ಯಾಸ ಸೇರಿದಂತೆ ಮಕ್ಕಳ ಅಭ್ಯುದಯದಲ್ಲಿ ಪೋಷಕರ ಪಾತ್ರ ಮುಖ್ಯ ಎಂದು ಲಯನ್ಸ್ ಕ್ಲಬ್ ನಾಪೋಕ್ಲು ವಲಯಾಧ್ಯಕ್ಷ ಮುಕ್ಕಾಟಿರ ವಿನಯ್ ಹೇಳಿದರು. ಪೇರೂರು ಗ್ರಾಮದ “ಕೈಲ್’ಪೊಳ್ದ್” ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪೇರೂರು ಸರಕಾರಿ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು, ಮಾತನಾಡಿದರು. ಇಂದಿನ ಮಕ್ಕಳು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದ ವಿನಯ್ ಪೇರೂರು ಗ್ರಾಮ ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಇಲ್ಲಿ ಜೀವಂತವಾಗಿರುವ ಪದ್ದತಿ ಪರಂಪರೆ ಇತರ ಗ್ರಾಮಗಳಿಗೂ ಮಾದರಿಯಾಗಿದೆ ಎಂದರು. ಮಾಜಿ ಸೈನಿಕ ತಾಪಂಡ ನಾಗೇಶ್ ತೆಂಗಿನಕಾಯಿಗೆ ಗುಂಡು ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಮಂಡಲ ಪ್ರಧಾನರಾದ ಮೂವೇರ.ಸಿ.ನಾಣಪ್ಪ ವಹಿಸಿದ್ದರು. ಬಲ್ಲಮಾವಟಿ ಗ್ರಾ.ಪಂ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ಮೇಕುಮಣಿಯಂಡ ಡಾಟಿ ಪೂವಯ್ಯ, ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಬೊಟ್ಟೋಳಂಡ ರವಿ ಕರುಂಬಯ್ಯ ಹಾಜರಿದ್ದರು. ಗ್ರಾಮಸ್ಥರಿಗೆ ಹಗ್ಗಜಗ್ಗಾಟ, ವಾಲಗತ್ತಾಟ್, ಸೇರಿದಂತೆ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.…
ನಾಪೋಕ್ಲು ಸೆ.5 : ನಾಪೋಕ್ಲು ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳ ತೋಟದ ಮಾಲೀಕರು ತಮ್ಮ ತಮ್ಮ ತೋಟಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯ ಎಲ್ಲಾ ಕೂಲಿ ಕಾರ್ಮಿಕರ ಬಗ್ಗೆ ಸೂಕ್ತ ಮಾಹಿತಿಯನ್ನು ಠಾಣೆಗೆ ನೀಡಬೇಕು. ಕೆಲಸಕ್ಕೆ ಸೇರಿಸಿಕೊಳ್ಳುವ ಮೊದಲು ಕಾರ್ಮಿಕರ ವಿಳಾಸ ಮತ್ತು ದಾಖಲಾತಿಗಳನ್ನು ಪಡೆದುಕೊಳ್ಳುವಂತೆ ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ. ಕಾರ್ಮಿಕರ ಕುಟುಂಬದ ಸದಸ್ಯರ ಸಹಿತ ಠಾಣೆಗೆ ಕರೆತಂದು ಅವರ ವಿವರ ದಾಖಲಾತಿಗಳೊಂದಿಗೆ ನೋಂದಾಯಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ತೋರಿ ಯಾವುದಾದರು ಅಹಿತಕರ ಘಟನೆ ನಡೆದರೆ ತೋಟದ ಮಾಲೀಕರೇ ನೇರ ಹೊಣೆಗಾರರಾಗುತ್ತಾರೆ ಎಂದು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ : ದುಗ್ಗಳ)
ಸೋಮವಾರಪೇಟೆ ಸೆ.5 : ಬುದ್ಧ, ಬಸವ, ಅಂಬೇಡ್ಕರ್ ಕನಸಿನ ಸಮಾಜ ನಿರ್ಮಾಣವಾಗಬೇಕು ಎಂದು ಚಿತ್ರದುರ್ಗ ಬೃಹನ್ಮಠದ ಉಸ್ತುವಾರಿ ಪೀಠಾಧ್ಯಕ್ಷರಾದ ಶ್ರೀ ಬಸವಪ್ರಭು ಸ್ವಮೀಜಿ ಆಶಯ ವ್ಯಕ್ತಪಡಿಸಿದರು. ಶ್ರಿ ಜಗದ್ಗುರು ಮುರುಘ ರಾಜೇಂದ್ರ ಎಸ್ಟೇಟ್ ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಬೇಳೂರು ಬಸವನ ಹಳ್ಳಿ ಮತ್ತು ಕುಸುಬೂರು ಗ್ರಾಮದ ವತಿಯಿಂದ ಬೇಳೂರು ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಲಿಂಗೈಕ್ಯ ಶ್ರೀ ಜಯಾನಂದ ಸ್ವಾಮೀಜಿ ಸಂಸ್ಮರಣೋತ್ಸವ ಹಾಗೂ ಗದ್ದುಗೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಶಾಂತಿ, ನೆಮ್ಮದಿಯ ಬದುಕಿನ ಜಾತ್ಯಾತೀತ ಸಮಾಜ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವಂಥ ಸಮಾಜದ ಕಲ್ಪನೆ, ಕನಸು ಕಂಡಿದ್ದರು ಅವರ ಕನಸು ಸಾಕಾರ ಗೊಳ್ಳಬೇಕು ಎಂದರು. ಜಯಾನಂದ ಸ್ವಾಮೀಜಿ ಸರಳ ವ್ಯಕ್ತಿತ್ವದಿಂದ ಜನಮಾನಸದಲ್ಲಿ ಉಳಿಯುವಂತಾಗಿದೆ, ಅವರ ಸ್ಮರಣೆ ಅಗತ್ಯವೆಂದರು. ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಈ ಸಮಾಜಕ್ಕೆ ಮಠಮಾನ್ಯಗಳ ಕೊಡುಗೆ ಅಪಾರವಾದದ್ದು, ಶಿಕ್ಷಣ, ದಾಸೋಹಗಳ ಮೂಲಕ ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಶೀಮಂತ ಗೊಳಿಸಿದ್ದಾರೆ…
ಮಡಿಕೇರಿ ಸೆ.5 : ಕೆದಕಲ್ ಗ್ರಾ.ಪಂ ವ್ಯಾಪ್ತಿಯಲ್ಲಿ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಆರ್ ಆರ್ ಟಿ ಸಿಬ್ಬಂದಿ ಗಿರೀಶ್ ಕಾಡಾನೆ ದಾಳಿಗೊಳಗಾಗಿ ಮೃತಪಟ್ಟ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಅರಣ್ಯ ಇಲಾಖೆ ಅಧಿಕಾರಿಗಳ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ಕೆದಕಲ್ ಗ್ರಾ.ಪಂ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದಲೂ ಆನೆ-ಮಾನವ ಸಂಘರ್ಷಣೆ ಗಳು ನಡೆಯುತ್ತಿದ್ದರು ವ್ಯವಸ್ಥಿತವಾಗಿ ಸರ್ಕಾರದ ಗಮನಕ್ಕೆ ತರದೇ ನಿರ್ಲಕ್ಷ್ಯ ವಹಿಸಿದ್ದ ವಿಚಾರವಾಗಿ ಸಭೆಯಲ್ಲಿ ಹಾಜರಿದ್ದ ಅರಣ್ಯ ಅಧಿಕಾರಿಗಳಿಗೆ ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ಇನ್ನೂ ಮುಂದೆ ವನ್ಯ ಪ್ರಾಣಿಗಳಿಂದ ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮವಹಿಸುವಂತೆ ಆದೇಶ ನೀಡಿದರು. ಕಾಡಿನಿಂದ ಆನೆಗಳು ಜನವಾಸ ಪ್ರದೇಶಗಳು, ತೋಟಗಳಿಗೆ ಬರದಂತೆ ರೈಲ್ವೆ ಬ್ಯಾರಿಗೇಟ್ ಗಳು, ಟ್ರೆಂಚ್ ಗಳು, ಸೋಲಾರ್ ತಂತಿಗಳನ್ನು ತತ್ ಕ್ಷಣವೇ ಅಳವಡಿಸುವಂತೆ ಸೂಚಿಸಿ, ಅದಕ್ಕೆ ಸರ್ಕಾರದಿಂದ ಬೇಕಾಗುವ ಅನುದಾನಗಳನ್ನು ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು.…
ಕಡಂಗ ಸೆ.5 : ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್ ಎಸ್ ಎಸ್ ) ಕಡಂಗ ಯೂನಿಟ್ ವತಿಯಿಂದ ಬದ್ರಿಯ ಮದರಸ ಸಭಾಂಗಣದಲ್ಲಿ “ನಾವು ಭಾರತೀಯರು” ಎಂಬ ಧ್ಯೇಯ ವಾಕ್ಯದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಎಸ್ ಎಸ್ ಎಫ್ 50ನೇ ವರ್ಷಚರಣೆಯ ಅಂಗವಾಗಿ ಎಲ್ಲಾ ಯುನಿಟ್ ಗಳಲ್ಲಿ ಆಯೋಜಿಸುವ ಪೀಪಲ್ ಕಾನ್ಫರೆನ್ಸ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಬದ್ರಿಯಾ ಮಸೀದಿ ಖತೀಬ್ ಇಸ್ಮಾಯಿಲ್ ಲತೀಫಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್ ಎಸ್ ಎಫ್ ಕಡಂಗ ಯೂನಿಟ್ ಅಧ್ಯಕ್ಷ ರಾಫಿ ಝನಿ ವಹಿಸಿದರು. ಎಸ್.ಎಸ್.ಎಫ್ ರಾಷ್ಟ್ರೀಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ತರಗತಿಗೆ ನೇತೃತ್ವ ವಹಿಸಿ ಮಾತನಾಡಿ, ಸಂಘಟನೆಯ ಉದ್ದೇಶ, ಸ್ವಾತಂತ್ರಕ್ಕೆ ಮುಸ್ಲಿಂಮರ ಕೊಡುಗೆಯ ಬಗ್ಗೆ ವಿಸ್ತಾರವಾಗಿ ವಿವರಿಸಿದರು. ಈ ಸಂದರ್ಭ ಬದ್ರಿಯಾ ಜಮಾಅತ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಅರಫಾ, ಕಾರ್ಯದರ್ಶಿ ರಾಶೀದ್, ಎಸ್ ವೈ ಎಸ್ ಕಡಂಗ ಅಧ್ಯಕ್ಷ ಸಿ.ಎ.ಅಶ್ರಫ್, ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅಬ್ದುಲ್ ಸಲಾಂ, ಎಸ್ ಎಸ್ ಎಫ್ ವಿರಾಜಪೇಟೆ…
ಕಡಂಗ ಸೆ.5 : ಬೆಂಗಳೂರಿನ ಕೇಮ್‌ವೆಲ್ ಬಯೋಫಾರ್ಮಾ ಸಂಸ್ಥೆ ವತಿಯಿಂದ ಕಡಂಗ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ , ನೋಟ್ ಪುಸ್ತಕ, ರೇಖಾಗಣಿತ ಪೆಟ್ಟಿಗೆ ಇನ್ನಿತರ ವಸ್ತುಗಳನ್ನು ವಿತರಿಸಿದರು. ಈ ಸಂದರ್ಭ ಮಾತನಾಡಿದ ಸಂಸ್ಥೆಯ ಉಪಾಧ್ಯಕ್ಷ ಮಾಳೆಯಂಡ ಪ್ರಕಾಶ್ ನಾಣಯ್ಯ, ವಿದ್ಯಾರ್ಥಿಗಳು ಸೌಲಭ್ಯದ ಸದುಪಯೋಗವನ್ನು ಪಡೆದುಕೊಂಡು ಉನ್ನತ ಹುದ್ದೆಗೇರುವಂತೆ ಪ್ರಯತ್ನಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಶಾಲಾ ಸ್ಥಳದಾನಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ನೌಫಲ್ ಕಡಂಗ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಮಾರುತಿಪುರ ಸಮೀಪದ ಮೇಲಿನಸಂಪಳ್ಳಿ ಗ್ರಾಮದ ನಿವಾಸಿ ಶಶಿಕಲಾ ಅವರ ಸಂಕಷ್ಟದ ಬದುಕಿಗೆ ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಡುಬಡತನದ ಜೊತೆಗೆ ಅಂಗವೈಕಲ್ಯದ ಸಮಸ್ಯೆಯಿಂದ ಬಳಲುತ್ತಿರುವ 20 ವರ್ಷದ ಮಗಳ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತಿರುವ ಶಶಿಕಲಾ ಅವರ ಬಳಿ ಸ್ವಂತ ಮನೆಯಾಗಲೀ, ಆಧಾರ್ ಕಾರ್ಡ್ ಆಗಲೀ ಮತ್ತು ಪಡಿತರ ಚೀಟಿಯಾಗಲೀ ಈ ಯಾವುದು ಇಲ್ಲದಿರುವ ಕಾರಣಕ್ಕೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿ, ಅನ್ನಭಾಗ್ಯವೂ ಸೇರಿ ಇನ್ನಿತರೆ ಯೋಜನೆಯಿಂದ ವಂಚಿತರಾಗಿದ್ದರು. ಈ ವಿಚಾರವನ್ನು ಪತ್ರಕರ್ತರಾದ ರವಿ ಬಿದನೂರು ಅವರು ನಮ್ಮ ಕಚೇರಿಯ ಗಮನಕ್ಕೆ ತಂದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳನ್ನು ಅವರ ಮನೆಗೆ ಕಳುಹಿಸಿ ಆಧಾರ್ ಕಾರ್ಡ್ ಅಪ್ಲೋಡ್ ಮಾಡಿಸಲಾಗಿದೆ. ಜೊತೆಗೆ ಆದಷ್ಟು ಶೀಘ್ರ ತಾಯಿ ಮಗಳಿಗೆ ಪಡಿತರ ಚೀಟಿಯನ್ನು ಒದಗಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಸೌಲಭ್ಯ ವಂಚಿತ ಬಡ ತಾಯಿ – ಮಗಳ…
ಮಡಿಕೇರಿ ಸೆ.4 : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋಣಿಕೊಪ್ಪ – ಬಾಳೆಲೆ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು/ಮಾರಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ತಿತಿಮತಿ ಗ್ರಾಮದ ನಿವಾಸಿಗಳಾದ ರಾಶಿಕ್ ಟಿ.ಎ (22), ಹಾಗೂ ಜುನೈದ್ ಸಿ.ಎಸ್ (23) ಎಂಬುವವರನ್ನು 107 ಗ್ರಾಂ ಗಾಂಜಾ ಮಾದಕ ವಸ್ತುವಿನೊಂದಿಗೆ ವಶಕ್ಕೆ ಪಡೆದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಗೋಣಿಕೊಪ್ಪ ಸಿಪಿಐ ಗೋವಿಂದರಾಜು.ಎಂ.ಎ, ಪಿಎಸ್ಐ ರೂಪಾದೇವಿ ಬಿರಾದಾರ್, ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.
ಸುಂಟಿಕೊಪ್ಪ ಸೆ.4 : ಯುವ ಪೀಳಿಗೆ ದುಶ್ಚಟಗಳ ವಿರುದ್ಧ ಸಮರ ಸಾರುವುದರಿಂದ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಸಾಧ್ಯವೆಂದು ಸುಂಟಿಕೊಪ್ಪ ಎಎಸ್‌ಐ ಶ್ರೀನಿವಾಸ್ ಮಂಜಿಕೆರೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಮಂಜಿಕೆರೆ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ದ್ಘಾಟಿಸಿ ಮಾತನಾಡಿದ ಅವರು ಯುವಜನತೆ ದುಶ್ಚಟಗಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಸಮಾಜ ಘಾತುಕ ಕಹಿ ಘಟನೆಗಳು ಸಂಭವಿಸುತ್ತಿದೆ. ಪೋಷಕರು ಸಮಾಜದಲ್ಲಿ ತಲೆತಗ್ಗಿಸುವಂತ್ತಾಗಿದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಪ್ರೇರಣೆ ನೀಡುವ ಮತ್ತು ಪ್ರೇರೆಪಿಸುವ ಜನತೆಯಿಂದ ದೂರ ಇರಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿಗಳು ಸಹಕರಿಸುವಂತೆ ಕಿವಿಮಾತು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಮೂರ್ತಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದಾಗ ಆರೋಗ್ಯವಂತರಾಗಿ ಬದುಕಬಹುದೆಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಭವ್ಯ, ಕಾನ್‌ಬೈಲ್ ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಶಾಲಾ ಶಿಕ್ಷಕರುಗಳಾದ ಮಾಲಾದೇವಿ, ಬಸವರಾಜು,ಮಹೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…






