ಲೇಖಕ: admin

ಮಡಿಕೇರಿ ಸೆ.4 : ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಆರ್ ಅರ್ ಟಿ ಸಿಬ್ಬಂದಿ ಗಿರೀಶ್ ಅವರ ಕುಟುಂಬದ ಸದಸ್ಯರಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಸಾಂತ್ವನ ಹೇಳಿದರು. ವೈಯುಕ್ತಿವಾಗಿ ಧನ ಸಹಾಯ ಮಾಡಿದರು. ಮಡಿಕೇರಿಯ ಶವಾಗಾರದಲ್ಲಿ ಮೃತದೇಹವನ್ನು ವೀಕ್ಷಿಸಿ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ರೂ.15 ಲಕ್ಷ ಪರಿಹಾರವನ್ನು ನೀಡಲು ಸೂಚಿಸಿದರು.

Read More

ಸುಂಟಿಕೊಪ್ಪ ಸೆ.4 : ಕಾಡಾನೆಯ ದಾಳಿಯಿಂದ ಎರಡು ಜೀವಗಳು ಪಾರಾದ ಬೆನ್ನಲ್ಲೇ ಗ್ರಾಮಸ್ಥರ ಪ್ರಾಣ ಉಳಿಸಲು ಬಂದ ಅರಣ್ಯ ಸಿಬ್ಬಂದಿಯ ಪ್ರಾಣ ಪಕ್ಷಿಯೇ ಹಾರಿ ಹೋಗಿರುವುದು ವಿಪರ್ಯಾಸ. ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷವನ್ನು ಹತ್ತಿಕ್ಕುವ ಯುದ್ಧದಲ್ಲಿ ಸದಾ ಸೋಲುತ್ತಿರುವ ಆಡಳಿತ ವ್ಯವಸ್ಥೆ ತಲೆ ತಗ್ಗಿಸಿ ಸೋಲು ಒಪ್ಪಿಕೊಳ್ಳಲೇಬೇಕಾದ ಅನಿವಾರ್ಯ ಪರಿಸ್ಥಿತಿ ಇದು. ಸುಂಟಿಕೊಪ್ಪ ಹೋಬಳಿಯ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ಬ್ಲಾಕ್ ಬಳಿಯಲ್ಲಿ ಒಂಟಿ ಸಲಗ ಇಂದು 2 ಬೈಕ್‌ಗಳ ಮೇಲೆ ದಾಳಿ ಮಾಡಿತು. ಬೈಕ್ ಸವಾರರಾದ ಸುಂಟಿಕೊಪ್ಪದ ನಿವಾಸಿ ಮುರುಗೇಶ್ ಹಾಗೂ ಜಗದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದರು. ಇವರ ಚೀರಾಟ ಮತ್ತು ಜನರು ದೊಡ್ಡ ಮಟ್ಟದಲ್ಲಿ ಕೂಗು ಎಬ್ಬಿಸಿದ್ದರಿಂದ ಅಲ್ಲಿಂದ ಪಲಾಯನ ಮಾಡಿದ ಕಾಡಾನೆ ಕಾಡಿನೊಳಗೆ ಓಡಿಹೋಗಿದೆ. ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಬಂದ ಕಾಡಾನೆ ಓಡಿಸುವ ಆರ್‌ಆರ್‌ಟಿ ತಂಡದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಗಿರೀಶ್(35) ಕಾಡಾನೆ ದಾಳಿಗೆ ಸಿಲುಕಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ…

Read More

ಮಡಿಕೇರಿ ಸೆ.4 : ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಹರೀಶ್ ಜಿ.ಆಚಾರ್ಯ ಆಯ್ಕೆಯಾಗಿದ್ದಾರೆ. ಮಾನವ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಲಂಚ ಮುಕ್ತ ಸಮಾಜ ನಿರ್ಮಿಸಲು ಸಂಘಟನೆ ಕಟಿಬದ್ಧವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ದೇಶಸೇವೆ ಮಾಡಿದ ಹಿರಿಯ ಅಧಿಕಾರಿಗಳು ಸಂಘಟನೆಯಲ್ಲಿದ್ದಾರೆ. ಕಾನೂನು ಬದ್ಧವಾಗಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಶ್ರಮ ಪಡುತ್ತಿದ್ದಾರೆ ಎಂದು ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ಹೆಚ್ಚಾಗುತ್ತಿದೆ. ಸರಕಾರಗಳು ಕೂಡ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಎಡವುತ್ತಿವೆ. ಸಕಾಲದಲ್ಲಿ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಆದ್ದರಿಂದ ಕರ್ನಾಟಕ ರಾಜ್ಯದಲ್ಲೂ ಮಾನವ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವ ಮೂಲಕ ನ್ಯಾಯದ ಪರ ಹೋರಾಟ ನಡೆಸಲು ಸಂಘಟನೆ ಸಜ್ಜಾಗಿದೆ. ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು, ಯೋಧರು, ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಂಘಟನೆಯನ್ನು…

Read More

ಮಡಿಕೇರಿ ಸೆ.4 :  ‘ಕರ್ನಾಟಕ’ ಎಂಬ ಹೆಸರನ್ನು ನಾಮಕರಣ ಮಾಡಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಮೈಸೂರು ವಿಭಾಗ ಮಟ್ಟದ ಸಾಹಿತಿ- ಕಲಾವಿದರೊಂದಿಗೆ  ಕನ್ನಡ ಮತ್ತು ಸಂಸ್ಕೃತಿ ಸಚಿವ  ಶಿವರಾಜ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆಯು ಮೈಸೂರಿನ ಕಿರು ರಂಗಮಂದಿರದಲ್ಲಿ  ನಡೆಯಿತು. ಕೊಡಗು‌ ಜಿಲ್ಲೆಯಿಂದ‌ ಕಸಾಪ ಮಾಜಿ ಅಧ್ಯಕ್ಷ  ಟಿ.ಪಿ.ರಮೇಶ್, ಲೋಕೇಶ್ ಸಾಗರ್, ಪದ್ಮಶ್ರೀ‌ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ‌ಅಕಾಡೆಮಿ ಮಾಜಿ ಅಧ್ಯಕ್ಷ  ಪಾರ್ವತಿ ಅಪ್ಪಯ್ಯ, ಬಿ.ಎಸ್.ತಮ್ಮಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ‌ ಮತ್ತು ಸಂಸ್ಕೃತಿ ಅಕಾಡೆಮಿ ಮಾಜಿ‌ ಅಧ್ಯಕ್ಷ  ಕೊಲ್ಯದ ಗಿರೀಶ್, ಕೊಡಗು ಜಾನಪದ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಅನಿಲ್ ಎಚ್.ಟಿ, ರೇಖಾ ವಸಂತ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ಲಿಯಾಕತ್ ಅಲಿ, ನಾಗೇಶ್ ಕಾಲೂರು, ಟಿ.ಜಿ.ಪ್ರೇಮಕುಮಾರ್, ವೆಂಕಟ ನಾಯಕ್, ರೇವತಿ ರಮೇಶ್, ಕುಡಿಯರ ಶಾರದ, ಕಲಾವಿದ ಈ.ರಾಜು ಇತರರು ಇದ್ದರು. ನಾಡಹಬ್ಬ ಮಡಿಕೇರಿ‌ ಜನೋತ್ಸವವ ದಸರಾಗೆ ಆಗಮಿಸುವಂತೆ ಇದೇ…

Read More

ಮಡಿಕೇರಿ ಸೆ.4 : ನಿರ್ದೇಶನಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು, ಇಲಾಖೆಗೆ ಖಾಲಿ ಇರುವ 6 ಉಪ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮೇಜರ್/ ಲೆಫ್ಟಿನೆಂಟ್ ಕರ್ನಲ್ ಅಥವಾ ನೌಕಾ ಸೇನಾ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ‍್ಯಾಂಕ್ ನಿಂದ ಬಿಡುಗಡೆ/ ನಿವೃತ್ತಿ ಹೊಂದಿರುವ, ದಿನಾಂಕ 01/01/2024 ಕ್ಕೆ 52 ವರ್ಷದೊಳಗಿನ ವಯೋಮಾನದ, ಎಸ್‍ಎಸ್‍ಎಲ್‍ಸಿ/ ತತ್ಸಮಾನ ತರಗತಿಯಲ್ಲಿ ಒಂದು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದ ಸೈನ್ಯಾಧಿಕಾರಿಗಳು ಸೆಪ್ಟೆಂಬರ್, 16 ರೊಳಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಂಬಂಧಿಸಿದ ಎಲ್ಲಾ ದಾಖಲೆಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ, ಕಚೇರಿಗೆ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಕಛೇರಿಯಲ್ಲಿ ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ ಹಾಗೂ ಹೆಚ್ಚಿನ ವಿವರಕ್ಕೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂ.ಸಂ.080-25589459 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು…

Read More

ಮಡಿಕೇರಿ ಸೆ.4 : ಕೊಡಗಿನ ಆಯುಧಪೂಜೆ ಎಂದೇ ಕರೆಯಲ್ಪಡುವ “ಕೈಲ್ ಪೊಳ್ದ್” ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವರ ನರಮೇಧ ನಡೆದ ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿತು. ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಬುಡಕಟ್ಟು ಕೊಡವರ ಸಾಂಪ್ರದಾಯಿಕ ಹಬ್ಬಗಳ ಆಚರಣೆಯ ಸಂದರ್ಭ ಹಿರಿಯರನ್ನು ಸ್ಮರಿಸುವುದು ವಾಡಿಕೆ ಎಂದರು. “ಕೆಳದಿ/ಪಾಲೇರಿ ರಾಯಲ್ಸ್ ಮತ್ತು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32 ಕ್ಕೂ ಹೆಚ್ಚು ಬಾರಿ ಕೊಡವರು ರಾಜ್ಯವನ್ನು ಕಾಪಾಡಿದರು. ಆದ್ದರಿಂದ ತನ್ನ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಬುಡಕಟ್ಟು ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶ ಮಾಡಲು ಸಂಚು ರೂಪಿಸಿ ಹತ್ಯಾಕಾಂಡ ನಡೆಸಿದನು ಎಂದು ಆರೋಪಿಸಿದರು. ಷಡ್ಯಂತ್ರಕ್ಕೆ ಬಲಿಯಾದ ಅಮಾಯಕ ಕೊಡವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು ಎಂದರು. ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣಕ್ಕಾಗಿ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು,…

Read More

ಮಡಿಕೇರಿ ಸೆ.4 : ಪ್ರಸಕ್ತ (2023-24) ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುತ್ತಿರುವ ರೈತರಿಗೆ ವಿತರಿಸಲಾಗುವುದು. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ಕೆಯಾದ ಜಿಲ್ಲೆಯ 10 ರೈತರಿಗೆ ತಲಾ ರೂ. 25 ಸಾವಿರ ಹಾಗೂ ತಾಲೂಕು ಮಟ್ಟದ ಪ್ರಶಸ್ತಿಯನ್ನು ಆಯಾಯ ತಾಲೂಕಿನ 5 ರೈತರಿಗೆ ತಲಾ 10 ಸಾವಿರ ರೂ.ವನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು. ಪ್ರಶಸ್ತಿಗೆ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಹಸಿರು ಮನೆ, ಕಸಿ ಅಭಿವೃದ್ದಿ ಸಸ್ಯಕಾಶಿ, ಕೃಷಿ ಸಂಸ್ಕರಣೆ ಅರಣ್ಯ ಕೃಷಿ, ಆಡು, ಕುರಿ,ಮೊಲ ಸಾಕಾಣಿಕೆ…

Read More

ಮಡಿಕೇರಿ ಸೆ.4 : ಸೆ.18 ರಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗು ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್…

Read More

ಮಡಿಕೇರಿ ಸೆ.4 : ಕರಿಕೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ ಐದು ವರ್ಷಗಳ ಅವಧಿಗೆ ಸೆ.9 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಮಾಜಿ ಗ್ರಾ.ಪಂ ಅಧ್ಯಕ್ಷ ಹೊಸಮನೆ ಬಿ.ಚಂಗಪ್ಪ, ಜಿ.ಪಂ ಮಾಜಿ ಸದಸ್ಯೆ ಕವಿತಾ ಪ್ರಭಾಕರ್, ಗ್ರಾ.ಪಂ ಸದಸ್ಯರಾ ಕೆ.ಎ.ನಾರಾಯಣ, ಪಿ.ಟಿ.ಇಸಾಕ್, ಬೂತ್ ಅಧ್ಯಕ್ಷ ಪಾಂಡಿ, ನಂಜುಂಡ, ನಾರಾಯಣ ಹಾಜರಿದ್ದರು. 

Read More

ಮಡಿಕೇರಿ ಸೆ.4 : ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಡಿಕೇರಿ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತಶ್ರಯದಲ್ಲಿ ಹಾಕತ್ತೂರು ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ವತಿಯಿಂದ ಗ್ರಾಮೀಣ ಕ್ರೀಡಾಕೂಟ ನಡೆಯಿತು. ತೊಂಭತ್ತುಮನೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂಜೆ ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ.ಪಿ.ಸುಕುಮಾರ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಹಾಕತ್ತೂರು ಗ್ರಾ.ಪಂ ಅಧ್ಯಕ್ಷ ಬಿ.ಕೆ.ಯತೀಶ್, ಸದಸ್ಯರಾದ ಹೆಚ್.ಟಿ.ಕಿರಣ, ಶೈನಿ, ತೊಂಭತ್ತುಮನೆ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿ ಅಧ್ಯಕ್ಷ ಕೆ.ವೈ.ಜಲೀಲ್, ತೊಂಭತ್ತುಮನೆ ತ್ರೀನೇತ್ರ ಯುವಕ ಸಂಘದ ಸಲಹೆಗಾರ ಎ.ಕೆ.ನಾಗೇಶ್ ನಾಯ್ಡ್, ಕ್ರೀಡಾಕೂಟದ ಅನ್ನದಾನಿ ಬಿ.ಎ.ಮೊಹಮ್ಮದ್ ಅಲಿ, ಮಡಿಕೇರಿ ತುಳುವೆರ ಜನಪದ ಕೂಟದ ಸಂಚಾಲಕ ಬಿ.ಎನ್.ಪ್ರಸಾದ್, ಪತ್ರಕರ್ತ ಕಿಶೋರ್ ರೈ, ಮೀನು…

Read More