ಲೇಖಕ: admin

ಸೋಮವಾರಪೇಟೆ ಆ.5 : ಸೋಮವಾರಪೇಟೆ ತಾಲ್ಲೂಕಿನ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಟಿ 18ರ ಸಂಭ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು. ಔಷಧೀಯ ಗುಣಗಳುಳ್ಳ ಮಧುಬನ ಸೊಪ್ಪಿನ ಪಾಯಸವನ್ನು ಸೇವಿಸಿದರು. ಕೊಡಗಿನಲ್ಲಿ ಆಟಿ ಹಬ್ಬದ ವಿಶೇಷತೆಯ ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿದರು.

Read More

ವಿರಾಜಪೇಟೆ ಆ.4 : ವಿರಾಜಪೇಟೆ ತಾಲ್ಲೂಕಿನ ಮಗ್ಗುಲ ಗ್ರಾಮದ ಕುಪ್ಪಚ್ಚಿರ ದಿ॥ ಭೀಮಯ್ಯ ಮತ್ತು ಕವಿತ ಭೀಮಯ್ಯರವರ ಪುತ್ರ ಕುಪ್ಪಚ್ಚಿರ ಭರತ್ ಅವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 57ನೇ ಘಟಿಕೋತ್ಸವದಲ್ಲಿ ಎಂ.ಎಸ್ಸಿ.(ಕೃಷಿ) ಪದವಿಯೊಂದಿಗೆ ಮೂರು ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಕೃಷಿ ವಿಶ್ವವಿದ್ಯಾನಿಲಯದ ರೇಷ್ಮೆಕೃಷಿ ಸ್ನಾತಕೋತ್ತರ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿ, “Bio-management of root-knot nematode in mulberry ( _Morus alba_ L.) and its impact on silkworm rearing” ಎಂಬ ವಿಷಯದ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ರಚಿಸಿರುವುದಕ್ಕೆ ಭರತ್ ಅವರಿಗೆ ಕರ್ನಾಟಕದ ರಾಜ್ಯಪಾಲರು ಹಾಗು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ಪ್ರಶಸ್ತಿ ಪತ್ರ ಮತ್ತು ಮೂರು ಸ್ವರ್ಣ ಪದಕಗಳನ್ನು ಪ್ರದಾನ ಮಾಡಿದರು. ಈ ಸಂದರ್ಭ ಡಾ. ಹಿಮಾಂಶು ಪಾಠಕ್, ಮಹಾನಿರ್ದೇಶಕರು – ಭಾರತೀಯ ಕೃಷಿ ಅನುಸಂಧಾನ ಪರಿಷತ್ತು, ನವದೆಹಲಿ; ಶ್ರೀ. ಎನ್. ಚೆಲ್ಲುವರಾಯಸ್ವಾಮಿ, ಕರ್ನಾಟಕ ಸರ್ಕಾರದ ಮಾನ್ಯ ಕೃಷಿ ಸಚಿವರು;…

Read More

ಮಡಿಕೇರಿ ಆ.4 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಆಕ್ಷೇಪಾರ್ಹ ಹೇಳಿಕೆ ಖಂಡನೀಯವೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಸತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಬಗ್ಗೆ ಆರಗ ಜ್ಞಾನೇಂದ್ರ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೀಗ ವಿಷಾದ ವ್ಯಕ್ತಪಡಿಸುವ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಕೇವಲ ವಿಷಾದ ವ್ಯಕ್ತಪಡಿಸಿದರೆ ಹಿರಿಯ ದಲಿತ ನಾಯಕನಿಗೆ ಆದ ನೋವು ಸರಿ ಹೋಗಲು ಸಾಧ್ಯವಿಲ್ಲ, ತಾವು ಮಾಡಿದ ತಪ್ಪಿಗೆ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಆರಗ ಜ್ಞಾನೇಂದ್ರ ಅವರ ಹೇಳಿಕೆ ಬಿಜೆಪಿಗೆ ದಲಿತರ ಬಗ್ಗೆ ಎಷ್ಟು ಗೌರವವಿದೆ ಎನ್ನುವುದನ್ನು ಸಾಬೀತು ಪಡಿಸಿದೆ. ದಲಿತ ನಾಯಕರ ಬೆಳವಣಿಗೆಯನ್ನು ಸಹಿಸಲಾಗದ ಬಿಜೆಪಿ ಮಂದಿ ಈ ರೀತಿಯ ಕೀಳು ಮಟ್ಟದ ಭಾಷೆಗಳನ್ನು ಬಳಸಿ ನೋವುಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ನಾಡಿನ ಜನ ಸಹಿಸುವುದಿಲ್ಲ ಎಂದು…

Read More

ಸುಂಟಿಕೊಪ್ಪ ಆ.4 : ಕೊಡಗು ಜಿಲ್ಲಾ ಶಿಕ್ಷಣ ಪೌಂಡೇಶನ್ ವತಿಯಿಂದ ಗರಗಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಆರೋಗ್ಯ ಅರಿವು’ ಕಾರ್ಯಕ್ರಮ ನಡೆಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರೋಗ್ಯ ಕಾರ್ಯಕರ್ತೆ ಗ್ರೀಷ್ಮ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯು ಸಂಪೂರ್ಣವಾಗಿ ಆರೋಗ್ಯವಂತರಾಗಿ ಇರಬೇಕಾದರೆ, ವೈಯಕ್ತಿಕ ಸ್ವಚ್ಚತೆಯನ್ನು ಕಾಯ್ದುಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ. ನಾವು ನಿತ್ಯ ಜೀವನದಲ್ಲಿ ಸ್ವಚ್ಚತೆಗೆ ಆಧ್ಯತೆ ನೀಡುವುದರಿಂದ ಹೆಚ್ಚು ದಿನಗಳಕಾಲ ಉತ್ತಮ ಆರೋಗ್ಯವಂತರಾಗಿ ಜೀವಿಸಲು ಸಾಧ್ಯವಾಗಲಿದೆ ಎಂದರು. ವೈಯಕ್ತಿಕ ಮುನ್ನಚ್ಚರಿಕ ಕ್ರಮಗಳ ಬಗ್ಗೆ ಕಿವಿಮಾತು ಹೇಳಿದರು. ಸಿಆರ್‍ಪಿ ಬಿಪಿನ್ ಮಾತನಾಡಿ, ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕಾದರೆ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಅತ್ಯವಶ್ಯಕವಾಗಿದೆ. ಆದುದ್ದರಿಂದ ದೈನಂದಿನ ಆಹಾರ ಸೇವನೆಯಲ್ಲಿ ಪೌಷ್ಠಿಕ ಆಹಾರವನ್ನೇ ಸೇವೆನೆ ಮಾಡುವುದ್ದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಬಹುದೆಂದರು. ಸಮಾರಂಭದ ವೇದಿಕೆಯಲ್ಲಿ ಸಿಎಚ್‍ಓ ರಫೀನಾ, ಪ್ರೇರಣಾ, ಕಾರ್ಯಕ್ರಮ ಜಿಲ್ಲಾ ಸಂಯೋಜಕ ಶಿವಕುಮಾರ್, ಮಾದಾಪುರ ಕ್ಲಸ್ಟರ್ ಸಿಆರ್‍ಪಿ ಬಿಪಿನ್, ಆಶಾ ಕಾರ್ಯಕರ್ತೆ ಚಿತ್ರ, ಪ್ರೇಮ ಮತ್ತಿತರರು ಇದ್ದರು. ಸಮಾರಂಭದ ಮೊದಲಿಗೆ ಶಾಲಾ…

Read More

ಮಡಿಕೇರಿ ಆ.4 :  ಜಿಲ್ಲೆಯಲ್ಲಿ ನಿರಂತರವಾಗಿ  ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು,  ತಕ್ಷಣ ಸಮಸ್ಯೆ ಬಗೆಹರಿಸಲು ಕ್ರಮ  ಕೈಗೊಳ್ಳುವಂತೆ  ಆಮ್ ಆದ್ಮಿ ಪಕ್ಷ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಪಕ್ಷದ  ಜಿಲ್ಲಾಧ್ಯಕ್ಷರು ಭೋಜಣ್ಣ ಸೋಮಯ್ಯ ಅವರ ನೇತೃತ್ವದಲ್ಲಿ  ಸಹಾಯಕ ಕಾರ್ಯಪಾಲಕ ಅಭಿಯಂತರು ದಿಲೀಪ್  ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ವಿದ್ಯುತ್ ಅಡಚಣೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಮುಂಗಾರು ಆರಂಭಕ್ಕೂ ಮೊದಲೇ ಸೆಸ್ಕ್ ಇಲಾಖೆಯವರು ವಿದ್ಯುತ್ ರಸ್ತೆಬದಿಗಳಲ್ಲಿ ಮತ್ತು ತೋಟಗಳಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳಿಗೆ ಹೊಂದಿಕೊಂಡಿರುವ ಮರಗಳನ್ನು ತೆರವು ಗೊಳಿಸಬೇಕು, ಅದರಂತೆ ಹಳೆಯ ಕಂಬಗಳನ್ನು ಬದಲಿಸಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಪೂರ್ವ ಸಿದ್ಧತೆಗಳನ್ನು ನಡೆಸಬೇಕಾಗಿತ್ತು. ಆದರೆ ನಾಪೋಕ್ಲು ವಿಭಾಗದಲ್ಲಿ ಇದರಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದೆರುವುದರಿಂದ ಸಣ್ಣ ಮಳೆಗೆ ವಿದ್ಯುತ್ ಕಡಿತಗೊಂಡು ಜನರು ವಿದ್ಯುತ್ ಸಮಸ್ಯೆಯನ್ನು ಎದುರಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಹುತೇಕ ಎಲ್ಲಾ ಕಡೆ ವಿದ್ಯುತ್ ಸಮಸ್ಯೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಈ ಸಮಸ್ಯೆ ಮುಂಗಾರು ಪ್ರವೇಶಕ್ಕೂ…

Read More

ನಾಪೋಕ್ಲು ಆ.4 : ಸರ್ಕಾರದ ವಿವಿಧ ಇಲಾಖೆಯಲ್ಲಿರುವ ಅಧಿಕಾರಿವರ್ಗದವರು ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿರುವವರು ಜನಸಾಮಾನ್ಯರ ಕಷ್ಟವನ್ನು ಅರಿತು ಅದನ್ನು ನಿವಾರಿಸಲು ಬದ್ಧರಾಗಿರಬೇಕೆಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲು ಹಳೇತಾಲೂಕುವಿನ ಶ್ರೀ ಭಗವತಿ ಸಮುದಾಯ ಭವನದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ಪಿಂಚಣಿ ಆದೇಶ ಪ್ರತಿ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರ ಸಮಸ್ಯೆಯನ್ನು ನಿವಾರಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಹಲವಾರು ವ್ಯಕ್ತಿಗಳನ್ನು ನೇಮಿಸಿದೆ. ಆದರೆ ಅದನ್ನು ಆಡಳಿತ ಕಾರ್ಯಾಂಗದವರು ಕಾರ್ಯಪ್ರವೃತ್ತರಾಗಿ ಜನರಿಗೆ ಸ್ಪಂದಿಸುವ ರೀತಿಯಲ್ಲಿ ಕೆಲಸ ಮಾಡಬೇಕೆಂದರು. ಕ್ಷೇತ್ರದಲ್ಲಿ ವಸತಿ, ರಸ್ತೆ ಕಾಮಗಾರಿ, ಆಸ್ಪತ್ರೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲೆಗಳನ್ನು ಉನ್ನತಿಗೇರಿಸಬೇಕು. ಕಂದಾಯ ಇಲಾಖೆಯಲ್ಲಿ ಒಂದು ಕ್ರಾಂತಿಯನ್ನೇ ತರುವಂತ ಸಮಸ್ಯೆಗಳು ನಮ್ಮ ಕ್ಷೇತ್ರದಲ್ಲಿ ಕಾಡುತ್ತಿದೆ. ಇದನ್ನು ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಕೆಲಸ ಮಾಡಲು ಬದ್ಧನಾಗಿದ್ದೇನೆ. ಇದಕ್ಕೆ ಇಲಾಖೆಯ ಅಧಿಕಾರಿಗಳು ಪೂರ್ವಕವಾಗಿ ನನ್ನೊಂದಿಗೆ ಕೈಜೋಡಿಸಬೇಕು ಎಂದರು.…

Read More

ಮಡಿಕೇರಿ ಆ.4 : ತೀವ್ರತರವಾದ ಮತ್ತು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್‍ಗಳನ್ನು ತಲುಪಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ನಿರ್ಮೂಲನೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬಿಟ್ಟು ಹೋಗಿರುವ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ನಿರ್ಮೂಲನೆ ಮಾಡಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಸಂಬಂಧಿಸಿದಂತೆ ವಿಶೇಷವಾಗಿ ದಡಾರ ಮತ್ತು ರುಬೆಲ್ಲಾ ರೋಗ ನಿರೋಧಕತೆಯ ಅಂತರ ಕಡಿಮೆ ಮಾಡುವುದು, ಇದುವರೆಗೆ ಲಸಿಕೆ ಡೋಸ್ ಪಡೆಯದಿದ್ದಲ್ಲಿ ಲಸಿಕೆಯನ್ನು ತಲುಪಿಸುವುದು, ಲಸಿಕೆ ಪಡೆದಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಹಾಗೆಯೇ ಹೊಸ ಲಸಿಕೆಗಳ ಲಸಿಕಾ ಪ್ರಗತಿಯನ್ನು…

Read More

ಮಡಿಕೇರಿ ಆ.4 : ಬೆಳೆಹಾನಿ ಸಮೀಕ್ಷೆ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು. ಜುಲೈ ಮೂರನೇ ವಾರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಾಫಿ ಸೇರಿದಂತೆ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು, ಈ ಸಂಬಂಧ ನಿಖರ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಹೆಚ್ಚಿನ ಮಳೆಯಾಗಿ ಬೆಳೆ ಹಾನಿಯಾಗಿರುವ ಬಗ್ಗೆ ಸಮೀಕ್ಷೆ ಮಾಡಿ ವರದಿ ನೀಡಬೇಕು. ಬೆಳೆ ಹಾನಿ ಸಮೀಕ್ಷೆ ಸಂಬಂಧಿಸಿದಂತೆ ಸ್ಥಳೀಯರಿಗೆ ಮಾಹಿತಿ ಇರಬೇಕು. ಆ ನಿಟ್ಟಿನಲ್ಲಿ ಬೆಳೆ ಹಾನಿ ಸಮೀಕ್ಷೆಯನ್ನು ಕೈಗೊಂಡು ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಮತ್ತು ಕಾಫಿ ಮಂಡಳಿ ಉಪ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾತನಾಡಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು. ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಪ್ರಮೋದ್, ಎಸ್.ಎನ್.ನರಗುಂದ, ಪ್ರಕಾಶ್ ಅವರು…

Read More

ಮಡಿಕೇರಿ ಆ.4 : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2023-24ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರ.ವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ 2.50 ಲಕ್ಷ ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1 ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 2 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರನ ವಯಸ್ಸು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷದ ಒಳಗಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಲ್ಪಟ್ಟಿರಬೇಕು.…

Read More

ಮಡಿಕೇರಿ ಆ.4 : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ವಿರಾಜಪೇಟೆ ಮತ್ತು ಇತಿಹಾಸ ವೇದಿಕೆ ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಇತಿಹಾಸ ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿಯ ಗೌರವಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಮಾತನಾಡಿ, ಹಿಂದೆ ನಾವು ಹೇಗಿದ್ದೇವು ಎಂಬುದನ್ನು ತಿಳಿಯಬೇಕಾದರೆ ನಾವು ಇತಿಹಾಸವನ್ನು ಒದಲೇಬೇಕು ಹಾಗೂ ಇತಿಹಾಸವನ್ನು ನಾವು ಎಂದಿಗೂ ಮರೆಯಬಾರದು. ಅದರದಲ್ಲಿ ಹಲವು ಸ್ವಾರಸ್ಯಕರವಾದ ವಿಷಯವಿರುತ್ತದೆ ಎಂದು ಹೇಳಿದರು. ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಕಾರ್ಲ ಮಾತನಾಡಿ ಇತಿಹಾಸದ ಮಹತ್ವ ಹೊಂದಿರುವ ಭಾರತದ ಚರಿತ್ರೆಯನ್ನು ಮರೆಯಬಾರದು, ಬ್ರಿಟಿಷರು ಬರೆದಿಟ್ಟ ಇತಿಹಾಸವನ್ನು ಮಾತ್ರ ಓದುವುದರ ಬದಲು ನಮ್ಮ ಭಾರತಾಂಬೆಯ ಚರಿತ್ರೆಯನ್ನು ಎಲ್ಲೆಲ್ಲೂ ಹಬ್ಬಿಸುವ ಕೆಲಸವನ್ನು ಉಪನ್ಯಾಸಕರು ಮಾಡಬೇಕೆಂಬುವುದಾಗಿ ಕಿವಿ ಮಾತನಾಡಿದರು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಂಪಾಜೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಲ್ಯೋಖ್ಯಾ ನಾಯ್ಕ್, ಕೊಡಗು ಇತಿಹಾಸ ವೇದಿಕೆ ಅಧ್ಯಕ್ಷ…

Read More