ಲೇಖಕ: admin

ಮಡಿಕೇರಿ ಸೆ.1 : ಗಾಂಧಿ ಭವನ ನಿರ್ವಹಣೆ ಹಾಗೂ ಗೌರವ ಸಲಹಾ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಗಾಂಧಿ ಭವನದಲ್ಲಿ ನಡೆಯಿತು. ಗಾಂಧಿ ಭವನವನ್ನು ಗಾಂಧೀಜಿ ಅವರ ಚಿಂತನೆ, ತತ್ವ ಹಾಗೂ ಅಧ್ಯಯನಕ್ಕಾಗಿಯೇ ಮೀಸಲಿಡಬೇಕಿದ್ದು, ಆ ನಿಟ್ಟಿನಲ್ಲಿ ಕಾರ್ಯಕ್ರಮಗಳಿಗೆ ಅವಕಾಶ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳ ಸರ್ಕಾರದ ಅಧಿಕೃತ ಕಾರ್ಯಕ್ರಮಗಳು ಹಾಗೂ ಶಾಲಾ-ಕಾಲೇಜುಗಳ ಕಾರ್ಯಕ್ರಮ ಆಯೋಜನೆಗೆ ಅವಕಾಶ ಕಲ್ಪಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸರ್ಕಾರದ ವಿವಿಧ ಇಲಾಖೆಗಳ ಕಾರ್ಯಕ್ರಮ ಆಯೋಜಿಸಲು ಮತ್ತು ಶೈಕ್ಷಣಿಕ ಹಾಗೂ ಸಾಂಸ್ಕøತಿಕ ಚಟುವಟಿಕೆ ಏರ್ಪಡಿಸಲು ಶುಲ್ಕ ಪಾವತಿಯ ವೆಚ್ಚ ನಿಗಧಿ ಮಾಡುವ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ‘ಆ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯಕ್ರಮಗಳಿಗೆ ಒಂದು ದಿನಕ್ಕೆ 3 ಸಾವಿರ ರೂ. ಹಾಗೂ ಶಾಲಾ ಕಾಲೇಜು ಕಾರ್ಯಕ್ರಮಗಳಿಗೆ 2 ಸಾವಿರ ರೂ. ನಿಗದಿ ಮಾಡಲು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.’ ಸರ್ಕಾರಿ ಅಥವಾ ಶಾಲಾ-ಕಾಲೇಜು…

Read More

ಮಡಿಕೇರಿ ಸೆ.1 : ಕೊಡಗು ಜಿಲ್ಲಾ ಪಂಚಾಯತ್‍ನಲ್ಲಿ ಕಳೆದ ಒಂದು ವರ್ಷಗಳಿಂದ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಜಗದೀಶ್ ಎಸ್.ಮತ್ತು ಅಧೀಕ್ಷಕರಾದ ಪಿ.ಪಿ.ಇಂದಿರಾ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ನಗರದ ಜಿ.ಪಂ.ಕಚೇರಿ ಸಭಾಂಗಣದಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಫಲ-ತಾಂಬೂಲ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಯೋಜನಾಧಿಕಾರಿ ಜಗದೀಶ್ ಅವರು 25 ವರ್ಷಕಾಲ ಸರ್ಕಾರಿ ಸೇವೆ ಸಲ್ಲಿಸಿದ್ದು ಖುಷಿ ತಂದಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಸಂತಸ ತಂದಿದೆ ಎಂದರು. ಸರ್ಕಾರಿ ವೃತ್ತಿಯಲ್ಲಿ ಸಮಯ ಪ್ರಜ್ಞೆ ಮತ್ತು ತಾಳ್ಮೆ ಬಹು ಮುಖ್ಯವಾದುದಾಗಿದೆ. ಇವೆರಡನ್ನು ಅಳವಡಿಸಿಕೊಂಡಲ್ಲಿ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದರು. ಅಧೀಕ್ಷಕರಾದ ಪಿ.ಪಿ.ಇಂದಿರಾ ಅವರು ಮಾತನಾಡಿ 35 ವರ್ಷಗಳ ಸರ್ಕಾರಿ ವೃತ್ತಿ ಜೀವನ ಸಾಕಷ್ಟು ತೃಪ್ತಿ ತಂದಿದ್ದು, ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನು ಸ್ಮರಿಸಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ,…

Read More

ಮಡಿಕೇರಿ ಸೆ.1 : ಕೊಡಗು ಪತ್ರಕರ್ತರ ಸಂಘ, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಘಟಕ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸೆ.4 ರಂದು ಪತ್ರಿಕಾ ವಿತರಕರ ದಿನಾಚರಣೆ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಅಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರುಳೀಧರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಮಡಿಕೇರಿ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಹಾಸನ ಜನಮಿತ್ರ ಸಂಪಾದಕ ಹಾಗೂ ಭೂಮಿಕ ನ್ಯೂಸ್ ಏಜೆನ್ಸಿ ಮಾಲೀಕ ಕೆ.ಆರ್.ನವೀನ್, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ಟಿ.ಜಿ.ಸತೀಶ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.1 :   ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಾವು ಸಂಗ್ರಹಿಸಿದ ಹೂವುಗಳನ್ನು ಉಪಯೋಗಿಸಿ ಪೂಕಳಂ (ಹೂವಿನ ರಂಗೋಲಿ) ಬಿಡಿಸಿದರು.  ಶಾಲಾ ಸ್ಥಾಪಕಾಧ್ಯಕ್ಷ  ಟಿ.ಎಂ.ಶಹೀದ್ ತೆಕ್ಕಿಲ್ ಶುಭ ಹಾರೈಸಿದರು. ಹಬ್ಬದ ಅಂಗವಾಗಿ ಆಟ, ವರ್ಣ ರಂಜಿತ ಸ್ಪರ್ಧೆಗಳನ್ನು ನಡೆಯಿತು. ಆಚರಣೆಗೆ ಸಂಬಂಧಿಸಿದಂತೆ ಓಣಂ ಔತಣವನ್ನು ಏರ್ಪಡಿಸಲಾಯಿತು.  ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2023-24 ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು. ಓಣಂ ಗೀತೆಯನ್ನು ಪ್ರಸ್ತುತಪಡಿಲಾಯಿತು. ಈ ಸಂದರ್ಭ ಶಾಲಾ  ಆಡಳಿತ ಮಂಡಳಿಯ ಅಧ್ಯಕ್ಷ  ಉನೈಸ್ ಪೆರಾಜೆ, ಗೌರವಾಧ್ಯಕ್ಷ ತಾಜ್ ಮಹಮ್ಮದ್, ಆಡಳಿತ ಮಂಡಳಿಯ ಸದಸ್ಯ ಉಮ್ಮರ್ ಹಾಜಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನಕರ ಸಣ್ಣಮನೆ, ಶಾಲಾ ಮುಖ್ಯೋಪಾಧ್ಯಾಯ ಜೆ.ಡಿ.ಸಂಪತ್ ,  ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.1 : ಕೈಲ್‍  ಮುಹೂರ್ತ (ಕೈಲ್‍ಪೊಳ್ದ್)  ಅಂಗವಾಗಿ ಮೇಕೇರಿಯಲ್ಲಿ ಸೆ.3 ರಂದು  ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಮೇಕೇರಿಯ ಸ್ವಾಗತ ಯುವಕ ಸಂಘ, ಜಿಲ್ಲಾ ಯುವ ಒಕ್ಕೂಟ ಕೊಡಗು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಕೊಡಗು, ಯುವಸಬಲೀಕರಣ ನೆಹರು ಯುವಕೇಂದ್ರ, ಮಡಿಕೇರಿ ಮತ್ತು ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ   ಸಂಯುಕ್ತಾಶ್ರಯದಲ್ಲಿ  ಬೆಳಗ್ಗೆ 8.30 ರಿಂದ  ಆಟೋಟ ಸ್ಪರ್ಧೆಗಳು ಜರುಗಲಿದ್ದು, ಸಾರ್ವಜನಿಕ ಪುರುಷರಿಗೆ ಬಲೂನಿಗೆ ಗುಂಡು ಹೊಡೆಯುವುದು, ಸಾರ್ವಜನಿಕ ಪುರುಷರಿಗೆ ಮತ್ತು ಮಹಿಳೆಯರಿಗೆ ಭಾರದ ಗುಂಡು ಎಸೆತ, 3ರಿಂದ 4 ವಷದೊಳಗಿನ ಪುಟಾಣಿ ಮಕ್ಕಳಿಗೆ ಕಾಳು ಹೆಕ್ಕುವುದು, 4 ರಿಂದ 5.5 ವರ್ಷದೊಳಗಿನ ಮಕ್ಕಳಿಗೆ ಕಪ್ಪೆ ಕುಪ್ಪಳಿಸುವುದು, 1 ರಿಂದ 10ನೇ ತರಗತಿಗನುಗುಣವಾಗಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ 75 ಮೀ ಹಾಗೂ 100 ಮೀ ಓಟದ ಸ್ಪರ್ಧೆ, ಸಾರ್ವಜನಿಕ ಮಹಿಳೆಯರಿಗೆ ನಿಂಬೆ ಚಮಚ ಓಟ, ಸಂಗೀತ ಕುರ್ಚಿ, ಸಾರ್ವಜನಿಕ ಪುರುಷರಿಗೆ ರಸ್ತೆ ಓಟ, ಸ್ಲೋ ಬೈಕ್‌ ರೇಸ್‌, ಗೋಣಿಚೀಲ ಓಟ,…

Read More

ಬೆಂಗಳೂರು ಸೆ.1 : ಚಂದ್ರಯಾನ-3ರ ಯಶಸ್ಸಿನ ಹುಮ್ಮಸ್ಸಿನಲ್ಲಿರುವ ಇಸ್ರೋ ತಂಡ ಇದೀಗ ಸೂರ್ಯನ ಮೇಲೆ ಅಧ್ಯಯನ ನಡೆಸಲು ಸಜ್ಜಾಗಿದೆ. ಸೆ.2 ಶನಿವಾರದಂದು ಆದಿತ್ಯ ಎಲ್ 1 ಮಿಷನ್ ಉಡಾವಣೆಯಾಗುತ್ತಿದೆೆ. ಇದರ ಯಶಸ್ಸಿಗಾಗಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರು ಇಂದು ತಿರುಪತಿಯ ಸುಳ್ಳೂರುಪೇಟೆಯ ಶ್ರೀಚೆಂಗಾಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿ ಆದಿತ್ಯ ಎಲ್ 1 ಯಶಸ್ಸಿಗಾಗಿ ಪ್ರಾರ್ಥಿಸಿದರು. ಶನಿವಾರ ಬೆಳಗ್ಗೆ 11:50ಕ್ಕೆ “ಆದಿತ್ಯ ಎಲ್ 1” ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿoದ ಉಡಾವಣೆಯಾಗಲಿದೆ. ಈ ಕಾರ್ಯಾಚರಣೆ ಗಮ್ಯ ಸ್ಥಾನವನ್ನು ತಲುಪಲು 125 ದಿನಗಳನ್ನು ತೆಗೆದುಕೊಳ್ಳಲಿದೆ. ಬಳಿಕ ಸೂರ್ಯನ ಮೇಲೆ ಅಧ್ಯಯನ ನಡೆಸಲಿದೆ ಎಂದು ಎಸ್.ಸೋಮನಾಥ್ ತಿಳಿಸಿದ್ದಾರೆ.

Read More

ಬೆಂಗಳೂರು ಸೆ.1 : ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಕಳೆದ ಬಾರಿ ಲೋಕಸಭಾ ಚುನಾವಣೆ ಸಂದರ್ಭ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನುವ ಆರೋಪದಡಿ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿತ್ತು. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋಲು ಕಂಡಿದ್ದ ಅಂದಿನ ಬಿಜೆಪಿ ಅಭ್ಯರ್ಥಿ ಅರಕಲಗೂಡು ಮಂಜು ಅವರು 2019ರಲ್ಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಪ್ರಜ್ವಲ್ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಪ್ರಕರಣದ ವಿಚಾರಣೆಯ ನಂತರ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಆದೇಶಿಸಿದೆ.

Read More

ಮಡಿಕೇರಿ ಸೆ.1 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ನೆಹರು ಯುವ ಕೇಂದ್ರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಹಾಕತ್ತೂರು ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ವತಿಯಿಂದ ಸೆ.3 ರಂದು ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ತ್ರಿನೇತ್ರ ಯುವಕ ಸಂಘದ ಕಾರ್ಯದರ್ಶಿ ಎಂ.ಎಂ.ಅಬೂಬಕ್ಕರ್, ತೊಂಭತ್ತುಮನೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ. ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಹಾಗೂ ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ಅಧ್ಯಕ್ಷರೂ ಆಗಿರುವ ಪಿ.ಪಿ.ಸುಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಹಾಕತ್ತೂರು ಗ್ರಾ.ಪಂ ಅಧ್ಯಕ್ಷ ಬಿ.ಕೆ.ಯತೀಶ್, ಸದಸ್ಯರಾದ ಹೆಚ್.ಟಿ.ಕಿರಣ, ಶೈನಿ, ತೊಂಭತ್ತುಮನೆ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿ ಅಧ್ಯಕ್ಷ ಕೆ.ವೈ.ಜಲೀಲ್, ಮಡಿಕೇರಿ ತಾಲೂಕು ಅಧ್ಯಕ್ಷ ಬಾಳಾಡಿ ದಿಲೀಪ್…

Read More

ನಾಪೋಕ್ಲು ಸೆ.1 : ಪೋಷಕರ ಸಹಕಾರವಿದ್ದರೆ ಮಾತ್ರ ಮಕ್ಕಳು ಕ್ರೀಡೆಯಲ್ಲಿ ಉನ್ನತಿ ಹೊಂದಲು ಸಾಧ್ಯ ಎಂದು ಹಿರಿಯ ಕ್ರೀಡಾಪಟು ಅರೆಯಡ ಗಣೇಶ್ ಬೆಳ್ಯಪ್ಪ ಹೇಳಿದರು. ಭಗವತಿ ಯುವಕ ಸಂಘದ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಕೈಲ್ ಮುಹೂರ್ತ (ಕೈಲ್‍ಪೊಳ್ದ್) ಹಬ್ಬದ ಕ್ರೀಡಾಕೂಟದ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕ್ರೀಡೆಯಲ್ಲಿ ಗೆಲ್ಲುವುದಕ್ಕಿಂತ ಪಾಲ್ಗೊಳ್ಳುವುದು ಮುಖ್ಯ. ಇಂತಹ ಕ್ರೀಡಾಕೂಟದಿಂದ ಗ್ರಾಮೀಣ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಾಧ್ಯ ಎಂದರು. ನಿವೃತ್ತ ಉದ್ಯೋಗಿ ನಾಟೋಳಂಡ ರಮೇಶ್ ಭೀಮಯ್ಯ ಮಾತನಾಡಿ, ಮಾನಸಿಕವಾಗಿ,ಶಾರೀರಿಕವಾಗಿ ಸದೃಢರಾಗಲು ಕ್ರೀಡೆ ಅವಶ್ಯಕ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವಂತಾಗಲು ತಂದೆ ತಾಯಿಯರ ಜವಾಬ್ದಾರಿ ಮುಖ್ಯ ಎಂದು ಹೇಳಿದರು. ಗ್ರಾ.ಪಂ ಸದಸ್ಯ ಕುಲ್ಲೇಟಿರ ಅರುಣ್ ಬೇಬ ಮಾತನಾಡಿ, ಶಾಲೆಯ ಆಟದ ಮೈದಾನದಲ್ಲಿ ಕ್ರೀಡೆಯಲ್ಲಿ ಪಾಲ್ಗೊಂಡು ಹಲವು ಕ್ರೀಡಾಪಟುಗಳು ಹೊರಹೊಮ್ಮಿದ್ದಾರೆ. ಎಲ್ಲರೂ ಒಗ್ಗೂಡಲು ಕ್ರೀಡೆ ಸಹಕಾರಿ ಎಂದರು. ಭಗವತಿ ಯುವಕ ಸಂಘದ ಅಧ್ಯಕ್ಷ ಕುಲ್ಲೇಟಿರ ದೇವಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ರಾಜ್ಯ ಎಫೆಕ್ಸ್…

Read More

ನಾಪೋಕ್ಲು ಸೆ.1 : ಯವಕಪಾಡಿ ಹಾಗೂ ಮರಂದೋಡ ಗ್ರಾಮ ವ್ಯಾಪ್ತಿಯಲ್ಲಿ ಭತ್ತದ ಬೆಳೆಗೆ ನೀರಿಲ್ಲದೆ ಸಮಸ್ಯೆ ಉಂಟಾಗಿದೆ.ಪೈರುಗಳು ಒಣಗುತ್ತಿದ್ದು, ಕೆರೆಗಳಿಂದ ನೀರು ಹಾಯಿಸಿ ಫೈರುಗಳನ್ನು ಉಳಿಸಿಕೊಳ್ಳುವ ಸ್ಥಿತಿ ಉದ್ಭವಿಸಿದೆ ಎಂದು ಈ ಭಾಗದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆ ಸುರಿಯುತ್ತಿತ್ತು.ಈ ಬಾರಿ ಒಂದು ಹನಿ ಮಳೆ ಬಿದ್ದಿಲ್ಲ.ಪ್ರತಿದಿನವೂ ಬಿಸಿಲು ಕಾಯುತ್ತಿದ್ದು ಇದ್ದ ಅಲ್ಪ ಸ್ವಲ್ಪ ನೀರಿನ ಪ್ರಮಾಣವು ಇಂಗುತ್ತಿದೆ. ಬೆಳಗ್ಗೆ ನೀರಿಲ್ಲದೆ ಸಮಸ್ಯೆ ಅನುಭವಿಸುವಂಥಾಗಿದೆ. ಸಂಬಂಧಪಟ್ಟ ಇಲಾಖೆಗಳು ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಿ ಕೊಡಬೇಕು ಎಂದು ರೈತ ಕಕ್ಕಬ್ಬೆ-ಕುಂಜಿಲ ಗ್ರಾ.ಪಂ ಸದಸ್ಯ ಚೋಯಮಾಡಂಡ ಹರೀಶ್ ಮೊಣ್ಣಪ್ಪ ಒತ್ತಾಯಿಸಿದರು. ಇದನ್ನು ಪರಿಗಣಿಸಿ ಮರಂದೋಡ ಗ್ರಾಮದ ರೈತರ ಗದ್ದೆಗಳಿಗೆ ಕೃಷಿ ಇಲಾಖೆ ಅಧಿಕಾರಿ ನಾರಾಯಣ ರೆಡ್ಡಿ, ಕಂದಾಯ ಪರಿರೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗ ಜನಾರ್ಧನ, ಭೇಟಿ ನೀಡಿ ಸಮೀಕ್ಷೆ ನಡೆಸಿ ಗ್ರಾಮದ ರೈತರಿಂದ ಮಾಹಿತಿ ಸಂಗ್ರಹಿಸಿದರು. ವರದಿ : ದುಗ್ಗಳ ಸದಾನಂದ 

Read More