ಲೇಖಕ: admin

ಮಡಿಕೇರಿ ಏ.28 NEWS DESK  : ಆರು ಕಿ.ಮೀ.ಗಳ ಬಸ್‌ನಲ್ಲಿನ ಪಯಣ., ನಂತರ ಅಲ್ಲಿಂದ ಮೂರು ಕಿ.ಮೀ.ನಷ್ಟು ರಸ್ತೆಯಲ್ಲೇ ನಡಿಗೆ., ಬಳಿಕ ಕಾಡಿನೊಳಗೆ ಕಠಿಣ ಹಾದಿಯಲಿ ಮೂರು ಕಿ.ಮೀ.ಗಳಷ್ಟು ನಡಿಗೆ., ಕೊನೆಗೆ ತಲಪಿದ್ದು ನಿಸರ್ಗದ ಸಿರಿಯ ತುತ್ತ ತುದಿಯ ನಿಶಾನಿ ಮೊಟ್ಟೆಗೆ..! ಇಲ್ಲಿ ನಡೆದದ್ದು ಹವ್ಯಾಸಿ ಚಾರಣಿಗರಲ್ಲ., ಪುಟಾಣಿ ಮಕ್ಕಳು.., ಬೆಟ್ಟವನ್ನೇರಿ ಪ್ರಕೃತಿಯ ಸೊಬಗನ್ನು ಸವಿದ ಮಕ್ಕಳ ಸಂಭ್ರಮ ಹೇಳತೀರದ್ದಾಗಿತ್ತು., ದಣಿವು ಎಂಬ ಪದದ ಅರ್ಥವೇ ಇಲ್ಲಿ ಮಾಯವಾಗಿತ್ತು..! ಈ ಒಂದು ಸುಂದರ ಚಿತ್ರಣ ಕಂಡುಬಂದಿದ್ದು ಮಡಿಕೇರಿಯ ವಾಂಡರರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಏರ್ಪಡಿಸಲಾಗಿದ್ದ ಮಕ್ಕಳ ಚಾರಣ ಕಾರ್ಯಕ್ರಮದಲ್ಲಿ., ವಾಂಡರ‍್ರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ. ಶಂಕರ್ ಸ್ವಾಮಿ ಸ್ಮರಣಾರ್ಥ ನಡೆಯುತ್ತಿರುವ ಮಕ್ಕಳ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರದ ಅಂಗವಾಗಿ ಮಕ್ಕಳಿಗೆ ನಿಶಾನಿ ಮೊಟ್ಟೆಗೆ ಚಾರಣ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕ್ರೀಡಾಂಗಣದಿಂದ ೧೧೫ ಮಂದಿಯನ್ನು ಹೊತ್ತುಕೊಂಡು ಹೊರಟ ಕೊಡಗು ವಿದ್ಯಾಲಯದ ಎರಡು ಬಸ್‌ಗಳು ಮದೆನಾಡು ಬಳಿಯ ಎರಡನೇ ಮೊಣ್ಣಂಗೇರಿಯಲ್ಲಿ ಮಕ್ಕಳನ್ನು ಇಳಿಸಿತು.…

Read More

ಮಡಿಕೇರಿ ಏ.28 NEWS DESK : ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಐತಿಹಾಸಿಕ ಹಿನ್ನೆಲೆಯ ಶ್ರೀ ಅರ್ಧನಾರೀಶ್ವರ ದೇವಾಲಯದ ವಾರ್ಷಿಕೋತ್ಸವವು ಏ.27ರ ಸೋಮವಾರದಿಂದ ಆರಂಭಗೊಂಡಿದ್ದು, ಮೇ1 ರವರೆಗೆ ನಡೆಯಲಿದೆ. ಉತ್ಸವದ ಆರಂಭಿಕ ದಿನವಾದ ಇಂದು ಬೆಳಿಗ್ಗೆ ಬೊಟ್ಲಪ್ಪ ದೇವಾಲಯದಿಂದ ತೀರ್ಥವನ್ನು ತಂದು ಶ್ರೀ ಅರ್ಧನಾರೀಶ್ವರನಿಗೆ ಅಭಿಷೇಕ ಪೂಜೆ ನೆರವೇರಿತು. ಇದರೊಂದಿಗೆ ಗಣಪತಿ ಹೋಮ, ಮಹಾಪೂಜೆಯೊಂದಿಗೆ ಅನ್ನಸಂತರ್ಪಣೆ ನಡೆಯಿತು.ಸಂಜೆ ದೇವರ ಭಂಡಾರ ತರುವುದು, ದೇವರ ಬಲಿ, ಅಂದಿಬೆಳಕು , ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಕಾರ್ಯಗಳು ನಡೆದವು. ಏ.28 ರಂದು ಬೆಳಿಗ್ಗೆ 5 ಗಂಟೆಗೆ ದೇವರ ನೃತ್ಯ ಬಲಿ, 10 ಗಂಟೆಗೆ ಹಬ್ಬದ ಕಟ್ಟು ಮುರಿಯುವುದು, ಮಹಾಪೂಜೆ, ದೇವರು ನೆರಪು ಬಲಿ ಬರುವುದು, ವಸಂತ ಪೂಜೆ, ದೇವರ ಶಯನ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ಹಾಗೂ ಸಂಜೆ 4 ಗಂಟೆಗೆ ದೇವರ ಜಳಕ ಕಾರ್ಯ ನಡೆಯಲಿದೆ. ದೇವರ ನೃತ್ಯ ಬಲಿ ಬಳಿಕ ಅನ್ನಸಂತರ್ಪಣೆ ನೆರವೇರಲಿದೆ. ಏ.29 ರಂದು ಬೆಳಗ್ಗೆ 10ಗಂಟೆಗೆ ಶುದ್ಧ ಕಲಶ, ಮಹಾಪೂಜೆ, ಪ್ರಸಾದ…

Read More

ಮಡಿಕೇರಿ NEWS DESK ಏ.28 : ಉತ್ತರ ಭಾರತದಲ್ಲಿ ತಾನು ಆವರಿಸಿಕೊಂಡಿರುವ ಸ್ಥಾನಗಳನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳುವುದಕ್ಕಾಗಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಶೇ.50 ರಷ್ಟು ಏರಿಕೆ ಮಾಡಲು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮುಂದಾಗಿದ್ದು, ದಕ್ಷಿಣ ಭಾರತದ ಬಗ್ಗೆ ತಾರತಮ್ಯ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜನಸಂಖ್ಯಾ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಗೆ ಕೇಂದ್ರ ಮುಂದಾಗಿದೆ. ಉತ್ತರ ಭಾರತದಲ್ಲಿ ಶೇ.195 ರಷ್ಟು ಜನಸಂಖ್ಯೆ ಏರಿಕೆಯಾಗಿದ್ದರೆ, ದಕ್ಷಿಣ ಭಾರತದಲ್ಲಿ ಶೇ.135 ರಷ್ಟು ಮಾತ್ರ ಅಧಿಕವಾಗಿದೆ. ಜನಸಂಖ್ಯಾ ಆಧಾರದಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆಯಾದರೆ ಉತ್ತರ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳು ಹೆಚ್ಚಾಗಲಿದೆ. ಇದು ಬಿಜೆಪಿಗೆ ಲಾಭವಾಗಲಿದೆ ಎನ್ನುವ ದುರುದ್ದೇಶ ಕೇಂದ್ರದ ಮುಂದಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎನ್ನುವ ಸತ್ಯ ಕೇಂದ್ರಕ್ಕೆ ತಿಳಿದಿದೆ ಎಂದು ಟೀಕಿಸಿದರು. ದಕ್ಷಿಣ ಭಾರತವನ್ನು ನಿರ್ಲಕ್ಷಿಸುವ ಮತ್ತು ತಾರತಮ್ಯ ಧೋರಣೆ ಹೊಂದಿರುವ ಮಸೂದೆಗಳನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದರು.…

Read More

ಗೋಣಿಕೊಪ್ಪ ಏ.28 NEWS DESK : ಭಗತ್‍ಸಿಂಗ್ ಯುವಕ ಸಂಘ ಮೇ ತಿಂಗಳಲ್ಲಿ ನಡೆಸಲಿರುವ 6ನೇ ಆವೃತ್ತಿಯ ಜಿಸಿಎಲ್ ಕ್ರಿಕೆಟ್ ಪಂದ್ಯಾಟದ ಬಿಡ್ಡಿಂಗ್ ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪ ಸ್ವಾತಂತ್ಯ್ರ ಹೋರಾಟಗಾರರ ಭವನದಲ್ಲಿ ಭಗತ್ ಸಿಂಗ್ ಯುವಕ ಸಂಘದ ಅಧ್ಯಕ್ಷ ಸತೀಶ್ ಸಿಂಗಿ ಅಧ್ಯಕ್ಷತೆಯಲ್ಲಿ ಹರಾಜು ಪ್ರಕ್ರಿಯೆ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಭಗತ್‍ಸಿಂಗ್ ದೇಶಕ್ಕೆ ಸ್ವ್ವಾತಂತ್ರ್ಯ ತಂದು ಕೊಡುವಲ್ಲಿ ತನ್ನದೇ ಆದ ಹೋರಾಟದ ಮೂಲಕ ಗಮನ ಸೆಳೆದಿದ್ದಾರೆ. ಕೆಚ್ಚೆದೆಯ ವೀರ, ಹೋರಾಟಗಾರರ ಹೆಸರಿನಲ್ಲಿ ಸಂಘ ಸ್ಥಾಪಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟಗಾರರ ಭವನ ಸಂಚಾಲಕ ಕೊಳ್ಳಿಮಾಡ ಅಜಿತ್‍ಅಯ್ಯಪ್ಪ ಮಾತನಾಡಿ, ದೇಶ ಸೇವೆ ಮಾಡಿರುವ ಮಹಾನ್ ವ್ಯಕ್ತಿಯ ಹೆಸರಿನಲ್ಲಿ ಸಂಘ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಬಹಳ ಹೆಮ್ಮೆಯ ವಿಚಾರ.ಇದರ ಜತೆಗೆಕ್ರೀಡಾಚಟುವಟಿಕೆಯಲ್ಲಿಯೂ ತೊಡಗಿಸಿಕೊಳ್ಳುವ ಮೂಲಕ ಸಂಘದ ಸೇವೆ ವಿಸ್ತರಣೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಯುವಕರು ಈ ಮೂಲಕ…

Read More

ಮಡಿಕೇರಿ NEWS DESK ಏ.28 : ಕೊಡಗು ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯ ಬಳಿ ಕೊಡಗು ಬಂಟರ ಭವನ ನಿರ್ಮಾಣ ಕಾಮಗಾರಿಗೆ ಮೇ 1 ರಂದು ಶಂಕುಸ್ಥಾಪನೆ ನೆರವೇರಲಿದೆ ಎಂದು ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 12 ರಿಂದ 15 ಕೋಟಿ ರೂ. ವೆಚ್ಚದಲ್ಲಿ ಬಂಟರ ಭವನ ನಿರ್ಮಾಣಗೊಳ್ಳಲಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿಯ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು…

Read More

ಮಡಿಕೇರಿ NEWS DESK ಏ.28 : ಕೊಡಗು ಜಿಲ್ಲೆಯಲ್ಲಿ ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂ. ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಜಾಗ ಗುರುತಿಸುವಂತೆ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಬ್ಯಾರೀಸ್ ವೆಲ್‌ಫೇರ್ ಟ್ರಸ್ಟ್ ಮಡಿಕೇರಿ ಇವರ ಸಹಯೋಗದಲ್ಲಿ ನಗರದ ಕಾವೇರಿ ಹಾಲ್‌ನಲ್ಲಿ ಮಂಗಳವಾರ ನಡೆದ ಕೊಡಗು ಜಿಲ್ಲಾ ಬ್ಯಾರಿ ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಸ್ಥಳೀಯ ಶಾಸಕರಾದ ಡಾ.ಮಂತರ್‌ಗೌಡ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಸಹಕಾರದಿಂದ ಒಟ್ಟು ಒಂದು ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರು ಭರವಸೆ ನೀಡಿದರು. ಬ್ಯಾರಿ ಸಂಸ್ಕೃತಿ, ಸಾಹಿತ್ಯ, ಪರಂಪರೆಗೆ ತನ್ನದೇ ಇತಿಹಾಸ ಇದ್ದು, ಬ್ಯಾರಿ ಸಂಸ್ಕೃತಿ, ಸಾಹಿತ್ಯ, ಪರಂಪರೆ ಉಳಿಸಿ ಬೆಳೆಸಲು ಶ್ರಮಿಸಬೇಕು ಎಂದು ಕರೆ ನೀಡಿದರು. ಬ್ಯಾರಿ ಸಾಹಿತ್ಯ ಸಮ್ಮೇಳನದಿಂದ ಬ್ಯಾರಿ…

Read More

ಮಡಿಕೇರಿ ಏ.28 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.29ರ ಸೆಮಿಫೈನಲ್ ಪಂದ್ಯಗಳು. *ಮೈದಾನ 1* ಪುರುಷರ ಸೆಮಿಫೈನಲ್ (ಲಾಲು ಮುದ್ದಯ್ಯ ಮೈದಾನ) ಬೆಳಿಗ್ಗೆ 9.30 ಗಂಟೆಗೆ ಚೆಕ್ಕೇರ ಮತ್ತು ಪಂದ್ಯಂಡ 11 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಪಾರುವಂಡ  *ಮಹಿಳೆಯರ ಸೆಮಿಫೈನಲ್* ಮಧ್ಯಾಹ್ನ 1 ಗಂಟೆಗೆ ಅರಮಣಮಾಡ (ಬೆಸಗೂರು) ಮತ್ತು ಮಣವಟ್ಟಿರ 2ಕ್ಕೆ ಮುಕ್ಕಾಟಿರ (ಹರಿಹರ ) ಮತ್ತು ಚೆಕ್ಕೇರ

Read More

ಮಡಿಕೇರಿ ಏ.28 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.28 ರಂದು ನಡೆದ ಪುರುಷರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ಚೆಕ್ಕೇರ ಮತ್ತು ಮಲ್ಲಜ್ಜಿರ ತಂಡಗಳ ನಡುವಿನ ಪಂದ್ಯದಲ್ಲಿ ಚೆಕ್ಕೇರ 64 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 8 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 100 ರನ್ ಗಳ ಸಾಧನೆ ಮಾಡಿತು. ಮಲ್ಲಜ್ಜಿರ 8 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 36 ರನ್ ಗಳನ್ನಷ್ಟೇ ಸೇರಿಸಿ ಸೋಲೊಪ್ಪಿಕೊಂಡಿತು. ಚೆಕ್ಕೇರ ಆಕರ್ಷ್ 47 ರನ್ ಗಳನ್ನು ಗಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಮಲ್ಲಜ್ಜಿರ ಪರ ರೋಷನ್ 2 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೋಟನಾಳಿರ ಮತ್ತು ಪಂದ್ಯಂಡ ನಡುವಿನ ಪಂದ್ಯದಲ್ಲಿ ಪಂದ್ಯಂಡ…

Read More

ಮಡಿಕೇರಿ ಏ.28 NEWS DESK : ಕಾಡಾನೆ ದಾಳಿಯಿಂದ ಗಬ್ಬದ ಹಸುವೊಂದು ಸಾವನ್ನಪ್ಪಿರುವ ಘಟನೆ ನೆಲ್ಯಹುದಿಕೇರಿ ಗ್ರಾಮದ ನಾಲ್ಕನೇ ವಿಭಾಗದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಶೇಖರ್ ಅವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವನ್ನು ಸೋಮವಾರ ಮಧ್ಯರಾತ್ರಿ ಕಾಡಾನೆ ತುಳಿದು ಕೊಂದು ಹಾಕಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೈನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿರುವ ರೈತ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಾಡಾನೆ ಸಂಚಾರದಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.  

Read More

ಮಡಿಕೇರಿ NEWS DESK ಏ.28 : ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರವನ್ನು ಘೋಷಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ 1 ರಿಂದ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೇ 1 ರಂದು ಬೆಳಿಗ್ಗೆ 9 ಗಂಟೆಗೆ ಕೊಡವರ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಆದಿಮಸಂಜಾತ ಮೂಲನಿವಾಸಿ, ಏಕ-ಜನಾಂಗೀಯ, ಪ್ರಕೃತಿ ಆರಾಧಕ-ಅನಿಮಿಸ್ಟಿಕ್ ಕೊಡವರಿಗಾಗಿ ಕೊಡವ ಪ್ರದೇಶದ ಗಡಿಗಳನ್ನು ಬದಲಾಯಿಸದೆ ಕೊಡವ ಸಾಂಪ್ರದಾಯಿಕ ನೆಲೆಯಲ್ಲೇ ಪ್ರತ್ಯೇಕ ಕೊಡವ ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳನ್ನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೊಡವಲ್ಯಾಂಡ್ ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ-ಆಡಳಿತ, ಆಂತರಿಕ ಸ್ವಯಂ-ನಿರ್ಣಯದ ಹಕ್ಕುಗಳು, ಕೊಡವರನ್ನು ಬುಡಕಟ್ಟು ಪಟ್ಟಿಗೆ ವರ್ಗೀಕರಿಸುವುದು, ವಿಧಾನಸಭೆ ಮತ್ತು ಸಂಸತ್ತಿನಲ್ಲಿ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡುವುದು, ವಿಶ್ವಸಂಸ್ಥೆಯಿoದ ಆದಿಮಸಂಜಾತ ನಿವಾಸಿಗಳೆಂದು ಮಾನ್ಯತೆ ಪಡೆಯಲು…

Read More