ಲೇಖಕ: admin

ಮಡಿಕೇರಿ ಆ.2 :  ಸೋಮವಾರಪೇಟೆಯ ರಾಜ್ಯ ಹೆದ್ದಾರಿಯಲ್ಲಿರುವ ಕಕ್ಕೆಹೊಳೆ ಸೇತುವೆ ಶಿಥಿಲಗೊಂಡು ಅಪಾಯಕಾರಿ ಸ್ಥಿತಿಯಲ್ಲಿರುವ ಹಿನ್ನೆಲೆ  ಶಾಸಕ ಡಾ.ಮಂತರ್ ಗೌಡ  ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ  ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More

ಮಡಿಕೇರಿ ಆ.2 : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ಮಗುವಿನ ಪೋಷಕರು ಆರ್ಥಿಕ ನೆರವಿಗಾಗಿ ಮನವಿ ಮಾಡಿದ್ದಾರೆ. ಚೆಟ್ಟಳ್ಳಿಯ ಪ್ರಕಾಶ್ ಹಾಗೂ ಸುಮಿತ್ರಾ ದಂಪತಿಯ ಒಂದೂವರೆ ವರ್ಷದ ಮಗು ತನುಷ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು,  ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಇಂದಿರಾ ಆಸ್ಪತ್ರೆ ಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಮಗುವಿನ ಚಿಕಿತ್ಸೆಗೆ  ಒಂದೂವರೆ ಲಕ್ಷಕ್ಕೂ ಹೆಚ್ಚು ಹಣ ವೆಚ್ಚವಾಗಲಿದ್ದು,  ದಾನಿಗಳು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ದಾನಿಗಳು  Name : K. R. REENA Bank : Canara Bank, Chettalli A/c No. 11012200041091 IFSC : CNRB 0011101 phonepay or google pay 9141047515 Reena  ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಆ.2 :  ಸೋಮವಾರಪೇಟೆ  ಜ್ಞಾನವಿಕಾಸ ಅಂಗ್ಲ ಮಾಧ್ಯಮ ಶಾಲೆಯಲ್ಲಿ  ಲಯನ್ಸ್ ಸಂಸ್ಥೆ ವತಿಯಿಂದ  ಕಾರ್ಗಿಲ್ ವಿಜಯ್ ದಿವಸ್  ಕಾರ್ಯಕ್ರಮದ ಅಂಗವಾಗಿ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು. ಜೈ ಜವಾನ್ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಮಾತನಾಡಿ, ಕಾರ್ಗಿಲ್ ಗೆಲುವು ದೇಶಪ್ರೇಮಿಗಳಿಗೆ ಮರೆಯದ ಅವಿಸ್ಮರಣೀಯ ದಿನವಾಗಿದೆ. 1999ರ ಮೇ ನಲ್ಲಿ ತಿಂಗಳಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ನಡೆಯಿತು. ಪಾಕಿಸ್ತಾನವನ್ನು ನಮ್ಮ ಭಾರತೀಯ ವೀರ ಯೋಧರು ಸದೆ ಬಡಿದು ಅವರು ಅಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದುಕೊಂಡರು ಎಂದು ಸ್ಮರಿಸಿದರು. ಯುದ್ಧದಲ್ಲಿ ನಮ್ಮ ದೇಶದ 527 ಯೋಧರು ವೀರಮರಣ ಹೊಂದಿದರು. ‘ಅಪರೇಷನ್ ವಿಜಯ್’ ಮೂಲಕ ಕಾರ್ಗಿಲ್-ಡ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಯೋಧರ ಶೌರ್ಯ ಹಾಗೂ ಗೆಲುವಿನ ನೆನಪಿಗಾಗಿ ಜುಲೈ 26 ಅನ್ನು ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ದೇಶವನ್ನು ಪ್ರೀತಿಸಬೇಕು. ದೇಶ ರಕ್ಷಣೆಯಲ್ಲಿ ಸೈನಿಕರ ತ್ಯಾಗ ದೊಡ್ಡದು ಎಂದು ಹೇಳಿದರು. ಸಮಾರಂಭದಲ್ಲಿ ನಿವೃತ್ತ ಸೈನಿಕರಾದ ರಾಜರಾಮ್,…

Read More

ಮಡಿಕೇರಿ ಆ.2 : ಕುಶಾಲನಗರ “ವೀರಶೈವ ಲಿಂಗಾಯತ ಸಮಾಜದ ”  ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಮಾಜದ ಜಿಲ್ಲಾಧ್ಯಕ್ಷ  ಶಿವಪ್ಪ, ಜಿಲ್ಲಾ ನಿರ್ದೇಶಕ ಅಮೃತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.1 : ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಬಳಿಯ ಅಂಗನವಾಡಿಗೆ ಅಪಾಯವನ್ನು ಆಹ್ವಾನಿಸುತ್ತಿದ್ದ ಮೂರು ಮರಗಳನ್ನು ಕೊನೆಗೂ ಅರಣ್ಯ ಇಲಾಖೆ ತೆರವುಗೊಳಿಸಿದೆ. ಮರಗಳಿಂದ ಅಂಗನವಾಡಿಗೆ ಅಪಾಯವಿರುವ ಬಗ್ಗೆ NEWS DESK ವರದಿ ಮಾಡಿ ಅಧಿಕಾರಿಗಳ ಗಮನ ಸೆಳೆದಿತ್ತು. ಕಳೆದ ಅನೇಕ ದಿನಗಳಿಂದ ದೂರು ನೀಡಿದರೂ ಸ್ಪಂದನೆ ದೊರೆಯದೆ ಇರುವ ಬಗ್ಗೆ ಅಂಗನವಾಡಿ ಕೇಂದ್ರದ ಮಕ್ಕಳ ಪೋಷಕರು ಆತಂಕ ವ್ಯಕ್ತಪಡಿಸಿದ್ದರು. NEWS DESK ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಇಂದು ಮೂರು ಮರಗಳನ್ನು ತೆರವುಗೊಳಿಸಿತು. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸಹಕಾರ ನೀಡಿದರು.

Read More

ಮಡಿಕೇರಿ ಆ.1 : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2023 ರ ಆಗಸ್ಟ್ ತಿಂಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ www.kannadapustakapradhikara.com  (ನಮ್ಮ ಪುಸ್ತಕಗಳ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ…

Read More

ಮಡಿಕೇರಿ ಆ.1 : ಅರಣ್ಯ ಇಲಾಖೆ ವತಿಯಿಂದ ವೈಎಂಸಿಎ ಕೂರ್ಗ್ ಸಹಕಾರದಲ್ಲಿ ಶಾಂತಿ ಚರ್ಚ್ ಆವರಣದಲ್ಲಿ ವನಮಹೋತ್ಸವ ನಡೆಯಿತು. ಶಾಂತಿ ಚರ್ಚ್‍ನ ಗುರುಗಳಾದ ರೆವರೆಂಡ್ ಜೈಸನ್, ವೈಎಂಸಿಎ ಕೂರ್ಗ್ ಸಂಸ್ಥೆ ಅಧ್ಯಕ್ಷರಾದ ಕೆ.ಟಿ.ಬೇಬಿ ಮ್ಯಾಥ್ಯೂ ಗಿಡ ನೆಟ್ಟರು. ಬಳಿಕ ಮಾತನಾಡಿದ ಅವರು ಮರ ಗಿಡಗಳನ್ನು ಹೆಚ್ಚು ಬೆಳೆಸಿ ಪರಿಸರ ಸಂರಕ್ಷಿಸಬೇಕಿದೆ. ಶುದ್ಧ ಗಾಳಿ ಮತ್ತು ನೀರು, ಸ್ವಚ್ಚ ಪರಿಸರ ಪಡೆಯಲು ಮರಗಿಡಗಳು ಅಗತ್ಯ ಎಂದು ಹೇಳಿದರು. ವೈಎಂಸಿಎ ಕೂರ್ಗ್ ಸಂಸ್ಥೆಯ ಕಾರ್ಯದರ್ಶಿ ಅಗಸ್ತ್ಯನ್ ಜಯರಾಜ್, ಖಜಾಂಚಿ ರಿಚರ್ಡ್ ಉಲ್ಲಾಸ್, ಜಂಟಿ ಕಾರ್ಯದರ್ಶಿ ಜಾಯ್ಸ್ ಮೆನೇಜಸ್, ಶಾಮುವಲ್ ಜಯಕುಮಾರ್, ವಿನಯ್ ಜೋಯ್ಸ್ ಇತರರು ಇದ್ದರು.

Read More

ಮಡಿಕೇರಿ ಆ.1 : ಮಡಿಕೇರಿ ತಾಲೂಕಿನಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಮಾಡುವುದು ಕಡ್ಡಾಯವಾಗಿದೆ ಎಂದು ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ತಿಳಿಸಿದ್ದಾರೆ. ಈಗಾಗಲೇ ತಮ್ಮ ಅಂಗಡಿ ಅಥವಾ ವಾಣಿಜ್ಯ ಸಂಸ್ಥೆಯನ್ನು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ನೋಂದಣಿಯಾಗದಿರುವ ಸಂಸ್ಥೆಗಳು 15 ದಿನಗಳೊಳಗೆ ಕರ್ನಾಟಕ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ http://www.ekarmika.Karnataka.gov.in/ekarmika/static/home.aspx ನಿಗಧಿತ ಆನ್‍ಲೈನ್ ಮೂಲಕ ಶುಲ್ಕ ಮತ್ತು ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಸಂಸ್ಥೆಗಳ ನೋಂದಣಿ ಪತ್ರ ಪಡೆಯುವಂತೆ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ ಅವರು ಕೋರಿದ್ದಾರೆ. ಹಾಗೆಯೇ ತಮ್ಮ ಸಂಸ್ಥೆಯಲ್ಲಿ ಕೆಲಸಗಾರರು ಇಲ್ಲದಿದ್ದರೂ ಸಹ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ಹಾಗೂ ನಿಯಮಾವಳಿ 1963ರ ಕಲಂ.4(1) ಮತ್ತು (3) ಹಾಗೂ ನಿಯಮ 3 ರ ಮೇರೆಗೆ ಸಂಸ್ಥೆಯನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡಿಸಿಕೊಳ್ಳಲು ತಪ್ಪಿದ ಸಂಸ್ಥೆಯ ಮಾಲೀಕರ ವಿರುದ್ದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು…

Read More

ಮಡಿಕೇರಿ ಆ.1 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 8 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿಬಿಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆದ್ದರಿಂದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ ಮತ್ತು ಶಿಶುಪಾಲನಾ ಭತ್ಯೆ ಈ 8 ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ https://sevasindhu.karnataka.gov.in/Sevasindhu/DepartmentServices ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಇದರ ಪ್ರಯೋಜನವನ್ನು ಜಿಲ್ಲೆಯ ವಿಕಲಚೇತನರು ಪಡೆದುಕೊಳ್ಳಲು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ.ಸಂ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಆ.1 : ಜಿಲ್ಲೆಯಲ್ಲಿ ಕಳೆದ ಏಳು ತಿಂಗಳಲ್ಲಿ ಗಾಂಜಾ ಸಂಬಂಧಿಸಿದಂತೆ 61 ಪ್ರಕರಣಗಳು ದಾಖಲಾಗಿದ್ದು, 157 ಜನರ ಮೇಲೆ ಮೊಕದ್ದಮೆ ಹೂಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ ಮಂಗಳವಾರ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ 36 ಕೆ.ಜಿ.ಯಷ್ಟು ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸುಮಾರು 6 ಕಡೆಗಳಲ್ಲಿ ಗಾಂಜಾ ಬೆಳೆಯುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಹಾಗೆಯೇ 99 ಗ್ರಾಂ ಎಂಡಿಎಂಎ(ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್) ಮತ್ತು 9 ಬ್ಲಾಕ್‍ಗಳಲ್ಲಿ ಸ್ಟ್ರಿಪ್ಸ್ ವಶಪಡಿಸಿಕೊಳ್ಳಲಾಗಿದೆ…

Read More