ಲೇಖಕ: admin

ವಿರಾಜಪೇಟೆ ಆ.30 : ಸದೃಢ ರಾಷ್ಟ್ರದ ನಿರ್ಮಾಣದಲ್ಲಿ ಎನ್.ಎಸ್.ಎಸ್. ಘಟಕಗಳು ಮಹತ್ತರ ಪಾತ್ರವನ್ನು ವಹಿಸುತ್ತಿವೆ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಕರ್ ಅಭಿಪ್ರಾಯಪಟ್ಟರು. ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ದೈಹಿಕ ಶಿಕ್ಷಣ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ತೊಡಗುವುದರಿಂದ ಮಾನಸಿಕ, ದೈಹಿಕ ಸ್ಥಿರತೆ ಹೊಂದಬಹುದು. ವಿದ್ಯಾರ್ಥಿಗಳು ಸದೃಢ ರಾಷ್ಟ್ರದ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದರು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಹಾಕಿ ಮಾಂತ್ರಿಕ ದ್ಯಾನ್ ಚಂದ್ ಅವರ ನೆನಪಿಗೆ ಆಯೋಜಿಸಲಾಗುತ್ತದೆ. ಸರ್ಕಾರವು ಫಿಟ್ ಇಂಡಿಯಾ ಎಂಬ ವಿಷಯದ ಮೇಲೆ ಈ ಕ್ರೀಡಾಕೂಟಗಳನ್ನು ಆಯೋಜಿಸಲು ನಿರ್ದೇಶನ ನೀಡಿರುತ್ತದೆ. ವಿಶ್ವವಿದ್ಯಾಲಯವು ಸಹ ಸಹಕಾರ ನೀಡಿದ್ದು, ವಿದ್ಯಾರ್ಥಿಗಳು ಇಂತಹ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಗಮನಾರ್ಹ ವಿಷಯವಾಗಿದೆ ಎಂದರು. ಕ್ರೀಡಾಕೂಟವು ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ನಡೆಯಿತು.…

Read More

ಮಡಿಕೇರಿ ಆ.30 :  ಹದಿನೆಂಟು ವರ್ಷ ವಯಸ್ಸಿನ ಮೇಲ್ಪಟ್ಟವರು ನೋಂದಣಿ ಪತ್ರವನ್ನು ತುಂಬುವ ಮೂಲಕ ಅಥವಾ ಜೀವ ಸಾರ್ಥಕತೆ ವೆಬ್‍ಸೈಟ್ https://www.jeevasarthakathe.karnataka.gov.in ಮೂಲಕ ನೇತ್ರದಾನಿಗಳಾಗಲು ನೋಂದಣಿ ಮಾಡಿಸಬಹುದು. ಆದರೆ ನೇತ್ರದಾನಕ್ಕೆ ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ. ನೇತ್ರದಾನ ಮಾಡಲು ಲಿಂಗ, ಶರೀರದ ಖಾಯಿಲೆಗಳಾದ ಸಕ್ಕರೆ, ರಕ್ತದ ಒತ್ತಡ ಮತ್ತು ಕಣ್ಣಿನ ರೋಗಗಳಾದ ದೃಷ್ಠಿದೋಷ, ಪೊರೆ, ಅಕ್ಷಿಪಟಲ ಕೀಳುವಿಕೆ, ಯಾವುದೇ ಶಸ್ತ್ರಚಿಕಿತ್ಸೆಗೆ ಒಳಪಟ್ಟಿರುವಿಕೆ ಇವುಗಳ ಅಡ್ಡಿಯಿಲ್ಲದೆ ಕಣ್ಣಿನ ಪಾರದರ್ಶಕ ಪಟಲ ಆರೋಗ್ಯವಾಗಿದ್ದಲ್ಲಿ ನೇತ್ರದಾನ ಮಾಡಬಹುದು. ರೇಬಿಸ್, ಸಿಫಿಲಿಸ್, ಏಡ್ಸ್, ಹೆಪಟೈಟಿಸ್ ಮುಂತಾದ ಕಾಯಿಲೆಗಳಿಂದ ಸಾಯುವ ವ್ಯೆಕ್ತಿ ನೇತ್ರದಾನ ಮಾಡುವಂತಿಲ್ಲ ಮರಣ ಹೊಂದಿದವರು ನೇತ್ರದಾನಕ್ಕೆ ನೋಂದಣಿ ಮಾಡಿಸದಿದ್ದಲ್ಲಿ ಅವರ ಬಂಧುಗಳು ಮರಣ ಹೊಂದಿದವರ ನೇತ್ರದಾನಕ್ಕೆ ಸಮ್ಮತಿ ನೀಡಬಹುದು. ಮರಣ ಹೊಂದಿದವರ ನೇತ್ರದಾನ ಮಾಡಲು ಹತ್ತಿರದ “ನೇತ್ರ ಭಂಡಾರ” / ನೇತ್ರ ತಜ್ಞರನ್ನು ಯಾವುದೇ ಸಮಯದಲ್ಲಾದರೂ ಸಂಪರ್ಕಿಸಬಹುದು. ಮರಣ ಹೊಂದಿದ 6 ಗಂಟೆಗಳಲ್ಲಿ ನೇತ್ರದಾನ ಮಾಡಬೇಕು. ಅಲ್ಲಿಯವರೆಗೂ ಮರಣ ಹೊಂದಿದವರ ರೆಪ್ಪೆಗಳನ್ನು ಮುಚ್ಚಿರಬೇಕು. ನೇತ್ರಗಳನ್ನು ತೆಗೆಯಲು…

Read More

ಮಡಿಕೇರಿ ಆ.30 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವು ಆ.31 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕುಳುವ ಸಮಾಜದ ಜಿಲ್ಲಾಧ್ಯಕ್ಷರಾದ ಎಚ್.ಪಿ. ಮಹೇಶ್, ಮಡಿಕೇರಿ ಸಾಹಿತಿಗಳು ಟಿ.ಪಿ.ರಮೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಆ.30 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವು ಆ.31 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಬಿಲ್ಲವ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷರಾದ ಬಿ.ವೈ.ಆನಂದ್ ರಘು, ಮಡಿಕೇರಿ ಸಾಹಿತಿಗಳು ಟಿ.ಪಿ.ರಮೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಆ.30 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 18 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ…

Read More

ಮಡಿಕೇರಿ ಆ.30 : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (ಕಲಾ/ ವಾಣಿಜ್ಯ/ ವಿಜ್ಞಾನ ವಿಭಾಗ) ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಕಾರ್ಮಿಕ ಅಧಿಕಾರಿ, ಕೊಡಗು ಉಪ ವಿಭಾಗ, ಮಡಿಕೇರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ, ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿಯವರ ಕಚೇರಿ ಅಥವಾ ಆಯಾಯ ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಎಸ್‍ಎಸ್‍ಎಲ್‍ಸಿ ಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ (ಮೆರಿಟ್ ಆಧಾರದ ಮೇಲೆ) ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸಮಾನ ಅಂಕಗಳನ್ನು ಪಡೆದಿದ್ದರೆ ಫಲಾನುಭವಿಯ ನೋಂದಣಿ ಸದಸ್ಯತ್ವದ ಹಿರಿತನವನ್ನು ಆಯ್ಕೆಗೆ ಪರಿಗಣಿಸಲಾಗುವುದು. ಕರ್ನಾಟಕ ರಾಜ್ಯದ ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಮಾತ್ರ ಅನ್ವಯವಾಗುವುದು. ಮುಕ್ತ ವಿಶ್ವವಿದ್ಯಾನಿಲಯ/ ದೂರ ಶಿಕ್ಷಣ ಮೂಲಕ ವ್ಯಾಸಂಗ ಮಾಡುತ್ತಿರುವವರಿಗೆ…

Read More

ಮಡಿಕೇರಿ ಆ.30 : ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 2023-24 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (ಬಾಲಕರಿಗೆ ಮಾತ್ರ ). ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್, 15 ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಕ್ಕೆ ರೂ 2.50 ಲಕ್ಷಗಳು ಹಾಗೂ ಪ್ರವರ್ಗ 2 (ಎ) , 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ ರೂ. 1 ಲಕ್ಷಗಳು, ಅಭ್ಯರ್ಥಿಯು 10 ನೇ ತರಗತಿಯಲ್ಲಿ ಉತ್ತೀರ್ಣವಾಗಿದ್ದು, ಪ್ರತೀ ವಿಷಯದಲ್ಲಿ ಕನಿಷ್ಟ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) ಡಿಸೆಂಬರ್ 31, 2023 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು…

Read More

ಮಡಿಕೇರಿ ಆ.30 :  ಕೊಡಗು ಜಿಲ್ಲಾ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿವೃತ್ತ ನೌಕರರ ಸಂಘದ ವತಿಯಿಂದ ಶ್ರೀ ನಾರಾಯಣ ಗುರುಗಳ 169ನೇ  ಮತ್ತು ಮಹಾತ್ಮ ಅಯ್ಯನ್ ಕಾಳಿ ಅವರ 160ನೇ ಜಯಂತಿಯನ್ನು ಆಚರಿಸಲಾಯಿತು. ಕುಶಾಲನಗರದ ಮಹಾಲಕ್ಷ್ಮಿ ರೆಸಿಡೆನ್ಸಿ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಶ್ರೀ ನಾರಾಯಣ ಗುರುಗಳು ಹಾಗೂ ಮಹಾತ್ಮ ಅಯ್ಯನ್ ಕಾಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಎಸ್‍ಎನ್‍ಡಿಪಿ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಶ್ರೀ ನಾರಾಯಣ ಗುರುಗಳು ಹಾಗೂ ಮಹಾತ್ಮ ಅಯ್ಯನ್ ಕಾಳಿ ಅವರು ಸಮಾಜದಲ್ಲಿ ಅಸ್ಪೃಶ್ಯರಂತೆ ಕಾಣುತ್ತಿದ್ದ ಸಮುದಾಯವನ್ನು ಗುರುತಿಸುವಂತೆ ಮಾಡಿದ ಮಹಾಪುರುಷರು. ಇಂತಹ ಮಹಾತ್ಮರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದರು. ದಸಂಸ ಭೀಮಾವಾದ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು ಮಾತನಾಡಿ, ಶ್ರೀ ನಾರಾಯಣ ಗುರುಗಳು ಹಾಗೂ ಮಹಾತ್ಮ ಅಯ್ಯನ್ ಕಾಳಿ ಅವರು ಜನರಲ್ಲಿ ಜಾಗೃತಿ ಮೂಡಿಸಿ ಸಮಾನತೆ ಹಾದಿಗೆ ತರಲು ಪ್ರಯತ್ನ ಮಾಡುತ್ತಿದ್ದರು. ಇಂತಹ ನಾಯಕರಿಂದ ಇದೀಗ ಸಮಾಜತೆ,…

Read More

ನಾಪೋಕ್ಲು ಆ.30 : ನಾಲ್ಕುನಾಡು ವ್ಯಾಪ್ತಿಯಲ್ಲಿ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಭತ್ತದ ನಾಟಿ ಕಾರ್ಯದ ಬಳಿಕ ಬರುವ ಈ  ’ಕೈಲ್ ಪೊಲ್ದ್’  ಹಬ್ಬ ಎನ್ನುವುದು ಕೊಡಗಿನ ರೈತಾಪಿ ವರ್ಗದಿಂದ ಆಚರಿಸಲ್ಪಡುವ ಆಯುಧ ಪೂಜೆಯೇ ಆಗಿದೆ. ಈ ಹಬ್ಬದಂದು ಆಯುಧಗಳಾದ ಕೋವಿ, ಕತ್ತಿ, ಕೃಷಿಯುಪಕರಣಗಳಿಗೆ ಕುಟುಂಬಸ್ಥರೆಲ್ಲ ಒಗ್ಗೂಡಿ ಪೂಜೆ ಸಲ್ಲಿಸಿ, ಮಾಂಸಾಹಾರವನ್ನು ಸೇವಿಸಿ ಸಂಭ್ರಮಿಸುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಕೊಡವ ಬಾಂಧವರು ತಮ್ಮ ಐನ್‍ಮನೆಯಲ್ಲಿ ಸಂಪ್ರದಾಯ ಬದ್ಧವಾಗಿ ಆಚರಿಸಿದರು. ಕುಟುಂಬದ ಹಿರಿಯರು, ಪುರುಷರು, ಮಹಿಳೆಯರು ಹಾಗು ಮಕ್ಕಳೆಲ್ಲ ಐನ್‍ಮನೆಯಲ್ಲಿ ಸೇರಿ ನೆಲ್ಲಕ್ಕಿ ನಡುಬಾಡೆಯಲ್ಲಿ ದೇವರ ದೀಪಕ್ಕೆ ನಮಸ್ಕರಿಸಿ ಹಿರಿಯರ ಆಶೀರ್ವಾದ ಪಡೆದರು. ಕೊಡವರ ಸಾಂಪ್ರದಾಯಿಕ ಆಯುಧಗಳಾದ ಕೋವಿ, ಒಡಿಕತ್ತಿ ಹಾಗು ಹಲವು ಆಯುಧಗಳನ್ನಿರಿಸಿ ತೋಕ್‍ಪೂ(ಗೌರಿ ಹೂ)ಗಳಿಂದ ಅಲಂಕರಿಸಿ, ಹಬ್ಬದ ಅಂಗವಾಗಿ ತಯಾರಿಸಿದ ವಿಶೇಷ ಖಾದ್ಯವನ್ನು ಇಟ್ಟು ಪೂಜೆ ಸಲ್ಲಿಸಿದರು. ಹಬ್ಬದೂಟದ ಬಳಿಕ ಹಿರಿಯರು ತೆಂಗಿಕಾಯಿಗೆ ಗುಂಡು ಹೊಡೆದ ನಂತರ ಪುರುಷರು, ಮಹಿಳೆಯರು ಹಾಗೂ ಮಕ್ಕಳು ಐನ್‍ಮನೆಯ ಮುಂದಿನ…

Read More

ಮೈಸೂರು ಆ.30 :   ಕಾಂಗ್ರೆಸ್ ಸರ್ಕಾರವು ರಾಜ್ಯದ 1.10 ಕೋಟಿ ಮಹಿಳೆಯರಿಗೆ ಮಾಸಿಕ ತಲಾ 2,000 ರೂಪಾಯಿ ಸಹಾಯಧನ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅಧಿಕೃತ ಚಾಲನೆ ದೊರೆಯಿತು. ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಾ.ಜಿ.ಪರಮೇಶ್ವರ್, ಡಾ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕೆ.ವೆಂಕಟೇಶ್, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ ಸೇರಿದಂತೆ ಹಲವು ಮುಖಂಡರು  ಹಾಜರಿದ್ದರು. ರಾಜ್ಯದ ಸುಮಾರು 1.10 ಕೋಟಿ ಮಹಿಳೆಯರು ‘ಗೃಹಲಕ್ಷ್ಮಿ’ ಯೋಜನೆಗೆ ತಮ್ಮ ಹೆಸರನ್ನು ಆನ್‌ಲೈನ್‌ ಮೂಲಕ ನೋಂದಾಯಿಸಿಕೊಂಡಿದ್ದು, ರಾಜ್ಯಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

Read More