ಕುಶಾಲಗರ ಆ.29 : ಲೋಕಕಲ್ಯಾಣಕ್ಕಾಗಿ ಅವಿಸ್ಮರಣೀಯವಾದ ಸೇವೆಗೈವ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆಗಳ ಮೂಲಕ ತಮ್ಮ ಜೀವನವೇ ಒಂದು ಸಂದೇಶವೆಂಬಂತೆ ಬಾಳಿ ಬದುಕಿದ ಮಹಾ ತಪಸ್ವಿ ಸುತ್ತೂರಿನ 23ನೇ ಜಗದ್ಗುರು ಡಾ.ರಾಜೇಂದ್ರ ಮಹಾ ಸ್ವಾಮೀಜಿ ಎಂದು ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಸ್ಮರಿಸಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಸುತ್ತೂರು ಮಠದ 23ನೇ ಪೀಠಾಧಿಪತಿ ಡಾ.ರಾಜೇಂದ್ರ ಸ್ವಾಮೀಜಿಯವರ 108ನೇ ಜಯಂತಿ ಅಂಗವಾಗಿ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಚನ ದಿನಾಚರಣೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ನಾಡಿನ ಕ್ಷೇಮಕ್ಕೆ ಸದಾ ಮಿಡಿಯುತ್ತಿದ್ದ ಮಾತೃ ಹೃದಯದ ಕೋಮಲ ಮನಸ್ಸಿನ ಡಾ.ರಾಜೇಂದ್ರ ಸ್ವಾಮೀಜಿ ಹಲವು ವರ್ಷಗಳ ಕಾಲ ತಪಸ್ಸನ್ನಾಚರಿಸಿದ ಮಹಾ ತಪಸ್ವಿ ಎಂದು ಬಣ್ಣಿಸಿದರು. ಬಡ ಮಕ್ಕಳ ಅನ್ನಕ್ಕಾಗಿ ರುದ್ರಾಕ್ಷಿ ಮಾಲೆಯ ಚಿನ್ನದ ಸರವನ್ನು ಮಾರಿದ, ಹೇಮ ಕಿರೀಟಧಾರಣೆ ಹಾಗೂ ಅಡ್ಡಪಲ್ಲಕ್ಕಿ ಉತ್ಸವವನ್ನು ನಿರಾಕರಿಸಿದ, ಜಾತಿ ಬೇಧ ಲೆಕ್ಕಿಸದೇ ಎಲ್ಲಾ ವರ್ಗಗಳ ಮಕ್ಕಳಿಗೆ…
ಲೇಖಕ: admin
ಮಡಿಕೇರಿ ಆ.29 : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಾನಿಗೆ ಒಳಗಾಗಿದ್ದ ವೀರ ಯೋಧ ಜನರಲ್ ಕೊಡಂದೇರ ಎಸ್.ತಿಮ್ಮಯ್ಯ ಅವರ ಕಂಚಿನ ಪ್ರತಿಮೆಯನ್ನು ದುರಸ್ತಿಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ದುರಸ್ತಿ ಕಾರ್ಯ ನಡೆಸಲಿದ್ದಾರೆ. ಪ್ರತಿಮೆ ಸ್ಥಾಪನೆಗೆ ಕಾರಣಕರ್ತರಾಗಿದ್ದ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಸಲಹೆ ಮೇರೆಗೆ ಪ್ರತಿಮೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಶಾಸಕ ಡಾ.ಮಂಥರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟರಾಜು ಅವರುಗಳು ಪ್ರತಿಮೆಯನ್ನು ಶೀಘ್ರ ಮರು ಪ್ರತಿಷ್ಠಾಪಿಸುವಂತೆ ಸೂಚಿಸಿದ್ದರು. ಶಿಲ್ಪಿ ಅರುಣ್ ಯೋಗಿ ರಾಜ್ ಪ್ರತಿಕ್ರಿಯೆ ನೀಡಿ ಜನರಲ್ ತಿಮ್ಮಯ್ಯ ಅವರ ಬಗ್ಗೆ ಅಪಾರ ಗೌರವವಿದೆ. ಮೂಲ ಸ್ವರೂಪಕ್ಕೆ ದಕ್ಕೆ ಬಾರದ ಹಾಗೆ ಮುಂದಿನ 25 ದಿನಗಳ ಒಳಗಾಗಿ ಪ್ರತಿಮೆಯನ್ನು ದುರಸ್ತಿ ಪಡಿಸಲಾಗುವುದು ಎಂದರು. ತಿಮ್ಮಯ್ಯ ವೃತ್ತದಲ್ಲಿ ಪ್ರತಿಮೆಯ ಅಡಿಪಾಯದ ಬೃಹತ್ ಗಾತ್ರದ ಗ್ರಾನೈಟ್ ಶಿಲೆಯನ್ನು ಕೂಡ ಇದೇ ಸಂದರ್ಭ…
ಮಡಿಕೇರಿ ಆ.29 : ನ್ಯಾಯಯುತವಾಗಿ ತೆರಿಗೆ ಪಾವತಿಸಿ ಅಂಗಡಿ ಮಳಿಗೆಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವರ್ತರಿಗೆ ನಿಯಮ ಬಾಹಿರ ಬೀದಿ ಬದಿ ವ್ಯಾಪಾರದಿಂದ ಅನ್ಯಾಯವಾಗುತ್ತಿದೆ ಎಂದು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಆತಂಕ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್‍ನ ನಗರಾಧ್ಯಕ್ಷ ಎಂ.ಧನಂಜಯ್ ಅಂಗಡಿ ಬಾಡಿಗೆ, ಮಾರಾಟ ಪರವಾನಿಗೆ ಶುಲ್ಕ, ಮಾರಾಟ ತೆರಿಗೆ, ಆದಾಯ ತೆರಿಗೆ, ವೃತ್ತಿಪರ ತೆರಿಗೆ, ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಶುಲ್ಕ, ತೂಕ ಮತ್ತು ಅಳತೆ ಇಲಾಖೆ ನೋಂದಣಿ ಶುಲ್ಕ ಸೇರಿದಂತೆ ಇನ್ನೂ ಅನೇಕ ವಿಧದಲ್ಲಿ ಶುಲ್ಕಗಳನ್ನು ಪಾವತಿಸಿ ವ್ಯಾಪಾರ ಮಾಡುತ್ತಿರುವ ವರ್ತಕ ಇತ್ತೀಚಿನ ದಿನಗಳಲ್ಲಿ ನಷ್ಟ ಅನುಭವಿಸುತ್ತಿದ್ದಾನೆ. ಯಾವುದೇ ಶುಲ್ಕ ಪಾವತಿಸದೆ ರಾಜಾರೋಷವಾಗಿ ಬೀದಿ ಬದಿ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳು ನೈಜ ವರ್ತಕರಿಗೆ ಸಮಸ್ಯೆಯಾಗಿ ಪರಿಣಮಿಸಿದ್ದಾರೆ ಎಂದು ತಿಳಿಸಿದ್ದಾರೆ. ಮಡಿಕೇರಿ ನಗರದ ರಸ್ತೆ ಬದಿಯಲ್ಲಿ ತರಕಾರಿ, ಹಣ್ಣು, ಹೂವು ಮಾತ್ರವಲ್ಲದೆ ಇತರ ವಸ್ತುಗಳನ್ನು ಕೂಡ ಮಾರಾಟ ಮಾಡಲಾಗುತ್ತಿದೆ. ಈ ವ್ಯಾಪಾರಿಗಳು ಯಾವುದೇ ತೆರಿಗೆ…
ಮಡಿಕೇರಿ ಆ.29 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಸರ್ಕಾರವು 100 ದಿನ ಪೂರೈಸಿ, ನುಡಿದಂತೆ ನಡೆದಿದೆ. ಸಾರ್ವಜನಿಕರಿಗೆ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಹುಜನರ ಹಿತ ಕಾಪಾಡುವಲ್ಲಿ ಸರ್ಕಾರ ಯಶಸ್ಸಿನತ್ತ ಸಾಗಿದೆ. ಇದೇ ಮೇ,20 ರಂದು ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಹಲವು ‘ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲರ ಮನಃ ಗೆದ್ದಿದೆ. ಶಕ್ತಿ ಯೋಜನೆ: ಗ್ಯಾರಂಟಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆಯು ಜೂನ್, 11 ರಂದು ಪ್ರಥಮ ಯೋಜನೆಯಾಗಿ ಜಾರಿಗೊಂಡಿದೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿರುವುದು ವಿಶೇಷವಾಗಿದೆ. ಕೊಡಗು ಜಿಲ್ಲೆಯಲ್ಲಿ ಆಗಸ್ಟ್, 27 ರವರೆಗೆ 11,10,983 ಮಂದಿ ಮಹಿಳೆಯರು ಬಸ್‍ನಲ್ಲಿ ಪ್ರಯಾಣ ಬೆಳೆಸಿದ್ದು, 4,10,54,728 ರೂ. ವೆಚ್ಚವನ್ನು ಸರ್ಕಾರ ಭರಿಸಿದೆ. ‘ಅನ್ನಭಾಗ್ಯ ಯೋಜನೆ’ : ಸರ್ಕಾರ ಬಿಪಿಎಲ್, ಎಎವೈ ಫಲಾನುಭವಿಗಳಿಗೆ ಈಗಾಗಲೆ ವಿತರಿಸುತ್ತಿರುವ 05 ಕೆ.ಜಿ ಅಕ್ಕಿಯೊಂದಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲು ಉದ್ದೇಶಿಸಿತ್ತು,…
ಮಡಿಕೇರಿ ಆ.29 : ಕೊಡಗು ಜಿಲ್ಲೆಯಲ್ಲಿ ಒಟ್ಟು 525 ಹಳ್ಳಿಗಳಿದ್ದು, ಅದರಲ್ಲಿ 2,93,378 ಸರ್ವೆ ನಂಬರ್ ಗಳಿದ್ದು, ಈ ಸರ್ವೆ ನಂಬರ್ ಗಳ ಪೈಕಿ 2,64,086 ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದೆ. ಸರ್ಕಾರದ ಆದೇಶದ ಅನುಸಾರ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು https://play.google.com/store/apps/details?id=com.csk.PR_Kharif_2023.cropsurvey ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 316 ಖಾಸಗಿ ನಿವಾಸಿಗಳನ್ನು ನೇಮಿಸಲಾಗಿರುತ್ತದೆ. ರೈತರು ಬೆಳೆ ಸಮೀಕ್ಷೆ ಮೊಬೈಲ್ ಆಪ್ ಅನ್ನು ಬಳಸಲು ಹೊಸ ರೈತರ ಬೆಳೆ ಸಮೀಕ್ಷೆ ಅಪ್ಲಿಕೇಷನ್ ಫ್ರೂಟ್ಸ್ (FRUITS) ತಂತ್ರಾಂಶದ ಎಫ್‍ಐಡಿ (FID) ಸಂಖ್ಯೆಗೆ ಜೋಡಣೆಯಾಗಿರುವುದರಿಂದ ಅಪ್ಲಿಕೇಷನ್ ಬಳಸಲು…
ಮಡಿಕೇರಿ ಆ.29 : ಭಾಗಮಂಡಲದಲ್ಲಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆಯ ಕಾಮಗಾರಿಯನ್ನು ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು. ನಂತರ ಕಾಮಗಾರಿಯನ್ನ ತ್ವರಿತವಾಗಿ ಮುಗಿಸಿ ಸಾರ್ವಜನಿಕ ಉಪಯೋಗಕ್ಕೆ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್‍ರಾಜ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ನಾಗರಿಕರು ಹಾಜರಿದ್ದರು.
ಮಡಿಕೇರಿ ಆ.29 : ಪ್ರಕೃತಿಯ ಆರಾಧಕರಾದ ಕೊಡವ ಬುಡಕಟ್ಟು ಜನಾಂಗ ಆಚರಿಸಿಕೊಂಡು ಬರುತ್ತಿರುವ “ಕೈಲ್ ಪೊಳ್ದ್” ಹಬ್ಬವನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕಳೆದ 28 ವರ್ಷಗಳಿಂದ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದೆ. 29 ನೇ ವರ್ಷದ “ಕೈಲ್ ಪೊಳ್ದ್” ನ್ನು ಈ ಬಾರಿ ಸೆ.1 ರಂದು ಆಚರಿಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನ ಮಂದ್ ನಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸಾಂಪ್ರದಾಯಿಕ ಕೈಲ್ ಪೊಳ್ದ್” ಹಬ್ಬವನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಗುರು ಹಿರಿಯರು, ಕಾವೇರಿ ಮಾತೆ, ಭೂತಾಯಿ, ಬೆಟ್ಟಗುಡ್ಡಗಳು ಮತ್ತು ಸೂರ್ಯಚಂದ್ರರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೀಧಿ ಅರ್ಪಿಸಲಾಗುವುದು. ಸಾಂಪ್ರದಾಯಿಕ ಕೋವಿಗಳನ್ನು ಥೋಕ್ ಪೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಗುವುದು. ಅಲ್ಲದೆ ಗಾಳಿಯಲ್ಲಿ ಗುಂಡು ಹಾರಿಸಿ ಕೋವಿ ಹಕ್ಕನ್ನು ಪ್ರತಿಪಾದಿಸಲಾಗುವುದು. ಇದರೊಂದಿಗೆ ವಿವಿಧ ಕೊಡವ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳು, ತೆಂಗಿನ ಕಾಯಿಗೆ ಗುಂಡು ಹೊಡೆಯುವುದು ಮತ್ತು ಕೊಡವ…
ಮಡಿಕೇರಿ ಆ.29 : ಗ್ರಾಮೀಣ ವಿದ್ಯಾರ್ಥಿನಿಯರು ವಿದ್ಯಾಭ್ಯಾಸದಿಂದ ಎಂದಿಗೂ ವಂಚಿತರಾಗಕೂಡದು ಮತ್ತು ಅವರ ಶೈಕ್ಷಣಿಕ ಗುರಿ ಸಾಧನೆಗೆ ಆರ್ಥಿಕ ಮುಗ್ಗಟ್ಟು ಎದುರಾಗಬಾರದೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ದಿವಂಗತ ಎ.ಕೆ.ಸುಬ್ಬಯ್ಯ ಮತ್ತು ಪೊನ್ನಮ್ಮ ಟ್ರಸ್ಟ್ ವತಿಯಿಂದ ಶಾಸಕರ ನಿವಾಸದಲ್ಲಿ ನಡೆದ ವಿವಿಧ ಪದವಿ ಶಿಕ್ಷಣ ಪಡೆಯುತ್ತಿರುವ 103 ವಿದ್ಯಾರ್ಥಿನಿಯರಿಗೆ ವಿದ್ಯಾನಿಧಿ ಚೆಕ್ ವಿತರಣೆ ಮಾಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಸ್ಥೆಯ ಕಾರ್ಯಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಒಂದು ಭಾಗವಾಗಿದೆ. ತನ್ನ ತಾಯಿಯ ಆಶಯದಂತೆ ಹೆಣ್ಣು ಮಕ್ಕಳ ಮೇಲಿಟ್ಟಿರುವ ಮಮತೆಯನ್ನು ಉಳಿಸುವ ಹಾಗೂ ಗ್ರಾಮೀಣ ಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 2021 ರಿಂದ ಈ ಕಾರ್ಯಕ್ರಮ ಆಯೋಜನೆಗೊಂಡಿತೆಂದು ತಿಳಿಸಿದರು. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಆಯ್ದ ವಿದ್ಯಾರ್ಥಿಗಳಿಂದ ನೂರಾರು ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಶಕ್ತಿ ಬಳಗ ಹಾಗೂ ಇತರರ ಸಹಕಾರದಿಂದ ಒಟ್ಟು 103 ವಿದ್ಯಾರ್ಥಿಗಳನ್ನು ಗುರುತಿಸಿ, ವಿದ್ಯಾನಿಧಿಯ ಚೆಕ್ ವಿತರಣೆ ಮಾಡಲಾಗುತ್ತಿದೆ. ವಿದ್ಯಾರ್ಥಿನಿಯರು ನಿಧಿಯನ್ನು ಸದುಪಯೋಗಪಡಿಸಿಕೊಂಡು…
ಮಡಿಕೇರಿ ಆ.29 : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್, 31 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ವಿಜಯ ತಿಳಿಸಿದ್ದಾರೆ.
ಮಡಿಕೇರಿ ಆ.29 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್‍ಟಿಇಟಿ-2023)ಯು ಸೆ.3 ರಂದು ಮೊದಲನೇ ಅಧಿವೇಶನ ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಹಾಗೂ 2ನೇ ಅಧಿವೇಶನ ಮಧ್ಯಾಹ್ನ 2 ರಿಂದ ಸಂಜೆ 4.30 ಗಂಟೆವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ), ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು(ಬ್ಲಾಕ್-01), ಸರ್ಕಾರಿ ಪದವಿ ಪೂರ್ವ ಕಾಲೇಜು(ಬ್ಲಾಕ್-02) ಮತ್ತು ನಗರದ ಸಂತ ಮೈಕರಲ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಕಚೇರಿಯ ಪರೀಕ್ಷಾ ನೋಡಲ್ ಅಧಿಕಾರಿ ಕೆ.ಆರ್.ಬಿಂದು ಇವರ ಮೊ.ಸಂ.9611 720320 ನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ತಿಳಿಸಿದ್ದಾರೆ.






