ಲೇಖಕ: admin

ಮಡಿಕೇರಿ ಆ.29 : ಕೊಡಗು ಜಿಲ್ಲಾ ವ್ಯಾಪ್ತಿಯ ಎಲ್ಲಾ ಆಹಾರ ವಸ್ತುಗಳ/ ಪದಾರ್ಥಗಳ ಉತ್ಪಾದಕರು, ಪ್ಯಾಕರ್‍ಗಳು, ಸಾಗಣಿಕೆದಾರರು, ಸಗಟು/ ಚಿಲ್ಲರೆ ಮಾರಾಟಗಾರರು, ವಿತರಕರು, ಹೋಟೆಲ್ ರೆಸಾರ್ಟ್, ಕ್ಯಾಂಟೀನ್, ಸಂಚಾರಿ ಸಿದ್ಧಪಡಿಸಿದ ಆಹಾರ ಮಾರಾಟಗಾರರು, ವೈನ್‍ಸ್ಟೋರ್, ಕ್ಲಬ್‍ಗಳು, ಬಾರ್ ಅಂಡ್ ರೆಸ್ಟೋರೆಂಟ್‍ಗಳು, ಹೋಮ್ ಸ್ಟೇ ಗಳು, ಬೇಕರಿ, ಸಿಹಿತಿಂಡಿ, ಹಾಲು, ಹಾಲಿನ ಉತ್ಪನ್ನ, ಪ್ಯಾಕೇಜ್ಡ್ ಕುಡಿಯುವ ನೀರು ಘಟಕ/ ಮಾರಾಟಗಾರರು, ಹಣ್ಣು, ತರಕಾರಿಗಳು, ಕೋಳಿ, ಮೀನು, ಮಾಂಸ ಮಾರಾಟ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟ, ಉಗ್ರಾಣಗಳು, ಸಂಸ್ಕರಣ ಘಟಕಗಳು, ಧಾರ್ಮಿಕ ಸ್ಥಳ, ಸಮುದಾಯ ಭವನ, ಕಲ್ಯಾಣ ಮಂಟಪಗಳಲ್ಲಿ ಪ್ರಸಾದ/ ಊಟೋಪಚಾರ ಸಂಯೋಜಕರು, ಕ್ಯಾಟರಿಂಗ್ ವ್ಯವಹಾರಸ್ಥರು, ನ್ಯಾಯಬೆಲೆ ಅಂಗಡಿ, ಕಚೇರಿಗಳ ಕ್ಯಾಂಟೀನ್, ಸರ್ಕಾರಿ/ ಸರ್ಕಾರೇತರ ವಸತಿ ನಿಲಯಗಳು, ಅಕ್ಷರ ದಾಸೋಹದ ಶಾಲೆಗಳು, ಅಂಗನವಾಡಿಗಳು ಹಾಗೂ ಎಲ್ಲಾ ರೀತಿಯ ಆಹಾರ ಪದಾರ್ಥ ವಹಿವಾಟುದಾರರಿಗೆ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಮಡಿಕೇರಿ, ಕೊಡಗು ಜಿಲ್ಲೆ ಹಾಗೂ ಕೊಡಗು ಜಿಲ್ಲಾ ಚೇಂಬರ್ ಆಫ್…

Read More

ಮಡಿಕೇರಿ ಆ.29 : ಸಮಸ್ತ ಕೊಡಗು ಜಿಲ್ಲಾ ಜಂಞಯ್ಯತುಲ್ ಉಲಮಾದ ವತಿಯಿಂದ ಸಿದ್ದಾಪುರದಲ್ಲಿ ಆತ್ಮೀಯ ಸಂಗಮ ಹಾಗೂ ಮಳೆಗಾಗಿ ಪ್ರತ್ಯೇಕ ಪ್ರಾರ್ಥನೆ ನಡೆಯಿತು. ಸಿದ್ದಾಪುರದ ವರಕ್ಕಲ್ ಸ್ಮಾರಕ ಸೌಧದಲ್ಲಿ ನಡೆದ ಕಾರ್ಯಕ್ರಮನ್ನು ಸಮಸ್ತ ಕೇರಳ ಜಂಯಿಯ್ಯತುಲ್ ಉಲಮಾದ ಕೇಂದ್ರ ಸದಸ್ಯ ಎಂ.ಅಬ್ದುಲ್ಲ ಫೈಝಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರವಾದಿ ಸ.ಅ ತೋರಿಸಿದ ಮಾದರಿ ಜೀವನವನ್ನು ಮೈಗೂಡಿಸಿಕೊಂಡು ಸಮುದಾಯಕ್ಕೆ ಅರಿವು ಮೂಡಿಸಬೇಕಾಗಿದೆ ಎಂದು ಕರೆ ನೀಡಿದರು. ಕೇಂದ್ರ ತರಬೇತುದಾರ ಮುಹಮ್ಮದ್ ಫೈಝಿ ರಬೀಅ ಸಂದೇಶವನ್ನು ಹೇಳಿ, ಜನತೆ ಪ್ರವಾದಿ ಸ.ಅ ಅವರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಕೊಡಗಿನ ಸಮಸ್ತ ಚಾಲಕ ಶಕ್ತಿ ಎಂ.ಅಬ್ದುಲ್ ರಹಮಾನ್ ಮುಸ್ಲಿಯಾರ್, ವಿದ್ಯಾರ್ಥಿಗಳಿಗೆ ಸಮಸ್ತ ಸಂಘಟಿಸುವ ಮುಸಾಬಖಾ ಕಲಾ ಸಾಹಿತ್ಯ ಸ್ಪರ್ಧೆಯ ಅನಿವಾರ್ಯತೆ ಮತ್ತು ಅದರ ರೂಪುರೇಷೆಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಕೆ.ಪಿ.ಅಬೂಬಕ್ಕರ್ ಮೌಲವಿ, ಎಂ.ತಮ್ಲೀಖ್ ದಾರಿಮಿ, ಬಶೀರ್, ಹಸನಿ, ಹನೀಫ್, ರಝಾಕ್ ಫೈಝಿ, ಸೂಫಿ ದಾರಿಮಿ, ನೌಫಲ್ ಹುದವಿ ಮುಂತಾದ ಗಣ್ಯರು ಹಾಜರಿದ್ದರು. ಎಸ್‍ಕೆಜೆಎಂಸಿಸಿ ಪ್ರಧಾನ ಕಾರ್ಯದರ್ಶಿ…

Read More

ಮಡಿಕೇರಿ ಆ.29 :  ಬಡವರ, ಶೋಷಿತರ ಪರವಾದ ಕಾಂಗ್ರೆಸ್ ಸರಕಾರ 100 ದಿನಗಳನ್ನು ಪೂರೈಸುತ್ತಿದ್ದು, ಈ ಅವಧಿಯಲ್ಲಿ ನುಡಿದಂತೆ ನಡೆದಿದೆಯೆಂದು ಶಾಸಕ ಎ.ಎಸ್.ಪೊನ್ನಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. ತಿತಿಮತಿಯ ಲ್ಯಾಂಪ್ ಸೊಸೈಟಿ ವತಿಯಿಂದ ಆಯೋಜಿತ ಕಾರ್ಯಕ್ರಮದಲ್ಲಿ, ಸಂಸ್ಥೆ ನಿಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರು ಅನುಷ್ಠಾನಕ್ಕೆ ತಂದ ಪಂಚಾಯತ್ ರಾಜ್ ಕಾನೂನುಗಳಿಂದ ಮಹಿಳೆಯರಿಗೆ ಮತ್ತು ಪರಿಶಿಷ್ಟ ಜಾತಿ, ಪಂಗಡ ಸಮುದಾಯಕ್ಕೆ ಸಹಕಾರಿ ಸಂಘಗಳಲ್ಲಿ ಬಹಳಷ್ಟು ಪ್ರೋತ್ಸಾಹ ನೀಡುವಂತಹ ಹಲವಾರು ನೀತಿಗಳನ್ನು ರೂಪಿಸಲಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಚುನಾವಣಾ ಪೂರ್ವ ಘೋಷಿಸಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದಾಗ, ವಿಪಕ್ಷಗಳು ಲೇವಡಿ ಮಾಡಿದ್ದವು.ಗ್ಯಾರಂಟಿ ಯೋಜನೆಗಳು ಜಾರಿಯಾದಲ್ಲಿ ರಾಜ್ಯ ದಿವಾಳಿಯಾಗುತ್ತದೆ ಎಂದು ಬಡವರ, ಶೋಷಿತರ, ಅವಕಾಶ ವಂಚಿತರ ವಿರೋಧಿಗಳು ಹಂಗಿಸಿದ್ದರು. ಆದರೆ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರಕಾರ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ…

Read More

ಮಡಿಕೇರಿ ಆ.29 :  ರೋಟರಿ ಮಡಿಕೇರಿ ವುಡ್ಸ್ ನಿಂದ, ಮಾದಾಪುರದ ಶ್ರೀಮತಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ರಕ್ತದಾನ ಬೖಹತ್ ಶಿಬಿರ ಮತ್ತು ಶಾಲಾ ಮಕ್ಕಳಿಗಾಗಿ ರಕ್ತದ ಗುಂಪನ್ನು ಗುರುತಿಸುವ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಶಿಬಿ ಹರದೂರು ಗ್ರಾಮಪಂಚಾಯತ್ ಅಧ್ಯಕ್ಷೆ ಉಷಾ ಶಿಬಿರ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಕ್ತದ ಬೇಡಿಕೆ ಹೆಚ್ಚಾಗುತ್ತಿದ್ದು, ಈ ಸಂದರ್ಭದಲ್ಲಿ ಯುವಜನತೆ ಮುಂದೆ ಬಂದು ರಕ್ತದಾನ ಮಾಡುವುದರ ಮೂಲಕ ಮತ್ತೊಂದು ಜೀವಕ್ಕೆ ಸಹಾಯ ಸೇತುವಾಗಬೇಕು ಎಂದು ಕೋರಿದರು. ಕೊಡಗು ರೆಡ್ ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ ಮಾತನಾಡಿ, ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದದ್ದು ರಕ್ತದಾನವಾಗಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸವನ್ನು ಸಂಘ ಸಂಸ್ಥೆಗಳು ಮಾಡುವುದರೊಂದಿಗೆ ಜನಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು. ರಕ್ತದಾನ ಮತ್ತು ಅದರ ಅವಶ್ಯಕತೆಗಳ ಬಗ್ಗೆ ಮಾತನಾಡಿದ ಮಡಿಕೇರಿ ರಕ್ತನಿಧಿಯ ಅಧಿಕಾರಿ ಡಾ.ಕರುಂಬಯ್ಯ ಸಮಾಜದಲ್ಲಿ ರಕ್ತದಾನದ ಬಗೆಗಿನ ಜಾಗೃತಿ ಮೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರವೂ ಬಹಳ ಮುಖ್ಯ, ಆರೋಗ್ಯವಂತ ಮಹಿಳೆಯಾಗಿದ್ದರೆ ಪ್ರತೀ ನಾಲ್ಕು ತಿಂಗಳಿಗೊಮ್ಮೆ,…

Read More

ಮೈಸೂರು ಆ.29:  ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು  ಘೋಷಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಜರಿದ್ದರು.   

Read More

ಕಡಂಗ ಆ.29 : ಎಸ್‍ಎಸ್‍ಎಫ್ ಐವತ್ತನೇ ವಾರ್ಷಿಕೋತ್ಸವ “ಗೋಲ್ಡನ್ ಫಿಫ್ಟಿ” ಮಹಾ ಸಮ್ಮೇಳನ ಸೆ.10 ರಂದು ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಐತಿಹಾಸಿಕವಾಗಿ ನಡೆಯಲಿದ್ದು, ಅದರ ಪ್ರಚಾರಾರ್ಥ ಕೊಡಗು ಜಿಲ್ಲೆಯ ಪ್ರತಿಷ್ಠಿತ ಸಮನ್ವಯ ವಿದ್ಯಾ ಸಂಸ್ಥೆ ಅನ್ವಾರುಲ್ ಹುದಾದಲ್ಲಿ ಉಚಿತ ಯುನಾನಿ ವೈದ್ಯಕೀಯ ಶಿಬಿರ ಹಾಗೂ ಸುನ್ನತ್ ಹಿಜಾಮ ನಡೆಯಿತು. ಡಾ. ಸುಹೈಲ್ ಹಾಗೂ ತಂಡ ವೈದ್ಯಕೀಯ ತಪಾಸಣೆ ನಡೆಯಿತು. ಸುಮಾರು 200 ಕ್ಕಿಂತಲೂ ಹೆಚ್ಚು ಮಂದಿ ಶಿಬಿರವನ್ನು ಸದುಪಯೋಗ ಪಡಿಸಿಕೊಂಡರು. ರಾಷ್ಟ್ರೀಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ಜುನೈದ್ ಅನ್ವಾರಿ, ಸತ್ತಾರ್ ರಝ್ವಿ, ವಿರಾಜಪೇಟೆ ಸೆಕ್ಟರ್ ನಾಯಕರಾದ ತನ್ವೀರ್ ಅನ್ವಾರಿ, ಇಲ್ಯಾಸ್ ಅನ್ವಾರಿ, ತ್ವಾಹಿರ್ ಅನ್ವಾರಿ, ಜಂಶೀರ್ ಅನ್ವಾರಿ ಹಾಜರಿದ್ದರು. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಆ.29 :  ಕೇರಳೀಯರ ಪವಿತ್ರ ಹಬ್ಬವಾದ ಓಣಂ ಹಬ್ಬವನ್ನು ಮಲೆಯಾಳಿ ಬಾಂಧವರು  ತಾಲ್ಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮನೆಯ ಹಾಗೂ ಮಳಿಗೆಗಳ ಮುಂಭಾಗ ವಿವಿಧ ಹೂವುಗಳಿಂದ ರಂಗೋಲಿ ‘ಪೂಕೊಳಂ’ ರಚಿಸಿ ಸಂಭ್ರಮಿಸಿದರು.  

Read More

ಮಡಿಕೇರಿ ಆ.29 : ಚೀನಾದ ಹ್ಯಾಂಗ್‍ಝೌನಲ್ಲಿ ಸೆ.23 ರಿಂದ ನಡೆಯಲಿರುವ ಏಷ್ಯನ್‍ಗೇಮ್ಸ್‍ನ ಭಾರತ ಬಾಕ್ಸಿಂಗ್ ತಂಡದ ಪುರುಷ ಹಾಗೂ ಮಹಿಳಾ ಸ್ಪರ್ಧಿಗಳನ್ನು ಒಳಗೊಂಡ ತಂಡಕ್ಕೆ ಮುಖ್ಯ ಕೋಚ್ ಆಗಿ ಕೊಡಗಿನ ಚೇನಂಡ ಸಿ.ಕುಟ್ಟಪ್ಪ (ವಿಶು) ಅವರನ್ನು ನೇಮಕ ಮಾಡಲಾಗಿದೆ. ಕೊಡಗಿನ ಆರು ಕ್ರೀಡಾಪಟುಗಳಾದ ಅಶ್ವಿನಿ ಪೊನ್ನಪ್ಪ, ಜೋಶ್ನಾ ಚಿಣ್ಣಪ್ಪ, ರೋಹನ್ ಬೋಪಣ್ಣ, ಅಪ್ಪಚಂಗಡ ಬೆಳ್ಯಪ್ಪ, ಕೇಳಪಂಡ ಗಣಪತಿ, ತೀತರಮಾಡ ಸಿಂಚಲ್ ಕಾವೇರಮ್ಮ ಹಾಗೂ ಇವರೊಂದಿಗೆ ಕುಟ್ಟಪ್ಪ ಅವರೂ ಸೇರಿ ಕೊಡಗಿನಿಂದ ಒಟ್ಟು ಏಳು ಮಂದಿ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಆ.29 : ಅಮ್ಮತ್ತಿಯ ನೇತಾಜಿ ಶಾಲೆಯಲ್ಲಿ ನಡೆದ ಅಮ್ಮತ್ತಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿದ್ದಾರೆ. ಪ್ರಾಥಮಿಕ ಬಾಲಕರ ಹಾಗೂ ಬಾಲಕಿಯರ ವಿಭಾಗದ ಖೊಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಬಾಲಕರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಶಾಲೆಯ ದೈಹಿಕ ಶಿಕ್ಷಕಿ ಎಂ.ಪಿ.ಮೋನಿಕಾ ಕಾವೇರಿ ಹಾಗೂ ಬಿ.ವಿ.ಲಾವಣ್ಯ ಅವರಲ್ಲಿ ತರಬೇತಿ ಪಡೆದಿದ್ದು, ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ,ಶಾಲಾ ಸಂಯೋಜಕರು, ಶಿಕ್ಷಕ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Read More

 ಸುತ್ತೂರು ಆ.29 :  ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಸುತ್ತೂರು ಮಠದಲ್ಲಿ ಆಯೋಜಿಸಿದ್ದ ಪರಮಪೂಜ್ಯ ಜಗದ್ಗುರು ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 108 ನೇ ಜಯಂತಿ ಮಹೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿದರು. ಸುತ್ತೂರು ಕ್ಷೇತ್ರ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಮತ್ತು ಆದಿಚುಂಚನಗಿರಿ ಮಹಾಸಂಸ್ಥಾಮ ಮಠದ ಜಗದ್ಗುರು ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ  ವಹಿಸಿದ್ದರು.  

Read More