ಮಡಿಕೇರಿ ಆ.29 : ಕರ್ನಾಟಕ ಸರ್ಕಾರ- ಕೊಡಗು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಗಳಿಗೆ 2023-24ರ ಪ್ರವೇಶಾತಿ ಪ್ರಾರಂಭ ಪ್ರಾರಂಭವಾಗಿದ್ದು, ವಿವಿಧ ಕೋರ್ಸ್‍ಗಳು ಲಭ್ಯವಿದೆ. ಕೊಡಗು ವಿವಿ, ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಲಭ್ಯವಿರುವ ಕೋರ್ಸ್‌ಗಳು : ಎಂ.ಎಸ್ಸಿ: ಜೀವರಸಾಯನಶಾಸ್ತ್ರ, ಸೂಕ್ಷ್ಮಾಣು ಜೀವವಿಜ್ಞಾನ, ಯೋಗ ವಿಜ್ಞಾನ, ರಸಾಯನಶಾಸ್ತ್ರ, ಗಣಕ ವಿಜ್ಞಾನ, ಸಸ್ಯಶಾಸ್ತ್ರ, ಪರಿಸರ ವಿಜ್ಞಾನ ಎಂ ಕಾಂ ಮತ್ತು ಎಂಎಸ್‌ಡಬ್ಲ್ಯೂ ಎಂ.ಎ : ಕನ್ನಡ, ಕೊಡವ, ರಾಜ್ಯಶಾಸ್ತ್ರ, ಇತಿಹಾಸ, ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್: ಯೋಗ ವಿಜ್ಞಾನ ಮತ್ತು ಕೊಡವ ಅಧ್ಯಯನ FMKMC ಕಾಲೇಜು, ಮಡಿಕೇರಿಯಲ್ಲಿ ಲಭ್ಯವಿರುವ ಕೋರ್ಸ್‌ಗಳು: ಎಂಎಸ್ಸಿ: ಭೌತಶಾಸ್ತ್ರ ಎಂ.ಕಾಂ ಮತ್ತು ಎಂಬಿಎ (TTM) ಎಂ.ಎ: ಕೊಡವ, ಅರ್ಥಶಾಸ್ತ್ರ ಹಾಗೂ ಇಂಗ್ಲೀಷ್ ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್: ಯೋಗ ವಿಜ್ಞಾನ ಮತ್ತು ಕೊಡವ ಅಧ್ಯಯನ ಜ್ಞಾನಕಾವೇರಿ ಕ್ಯಾಂಪಸ್ ನಲ್ಲಿರುವ ಸೌಲಭ್ಯಗಳು: Wi-Fi ಮತ್ತು ಇಂಟರ್ನೆಟ್, ಉತ್ತಮ ಗುಣಮಟ್ಟದ ಪ್ರಯೋಗಾಲಯ, ಮಹಿಳೆಯರ ಮತ್ತು ಪುರುಷರಿಗಾಗಿ ಪ್ರತ್ಯೇಕ…
ಲೇಖಕ: admin
ಮೈಸೂರು ಆ.29 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಜರಿದ್ದರು.
ಮಡಿಕೇರಿ ಆ.28 : ಸರ್ಕಾರ ಪ್ರಕಟಿಸಿದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಡಿ ರಾಜ್ಯದ್ಯಂತ ಸರ್ಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ಜೂ.11 ರಂದು ಜಾರಿಗೆ ತರಲಾಯಿತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವುದಕ್ಕೆ ಅವಕಾಶ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಆ.27 ರವರೆಗೆ 11,10,983 ಮಂದಿ ಮಹಿಳೆಯರು ಬಸ್‍ನಲ್ಲಿ ಪ್ರಯಾಣ ಬೆಳೆಸಿದ್ದು, 4,10,54,728 ರೂ. ವೆಚ್ಚ ಭರಿಸಲಾಗಿದೆ ಎಂದು ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಗೀತಾ ಅವರು ಮಾಹಿತಿ ನೀಡಿದ್ದಾರೆ. ಉಚಿತ ಬಸ್ ಪ್ರಯಾಣ ಯೋಜನೆಯು ಸಾಮಾಜಿಕ ಸಮಾನತೆಗಾಗಿ ಯಾವುದೇ ತಾರತಮ್ಯವಿಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಕಾರಿಯಾಗಿದೆ. ಸಮಾಜ ಏಳಿಗೆ ಕಾಣಬೇಕಾದರೆ ಪುರುಷ ಹಾಗೂ ಮಹಿಳೆಯರ ಪಾಲ್ಗೊಳ್ಳುವಿಕೆ ಅತಿ ಮುಖ್ಯ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಉದ್ಯೋಗಸ್ಥ ಮಹಿಳೆಯರ ಸಂಖ್ಯೆ ಕಡಿಮೆಯಾಗಿದ್ದು, ಶಕ್ತಿ…
ಮಡಿಕೇರಿ ಆ.29 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಡಗು ಇವರ ವತಿಯಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮ ಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮ ಶಕ್ತಿ (ವಿಶೇಷ ಮಹಿಳಾ ಯೋಜನೆ), ಸಮುದಾಯ ಆಧಾರಿತ ತರಬೇತಿ ಯೋಜನೆಯ ಸಾಲ ಹಾಗೂ ಸಹಾಯಧನವನ್ನು ನೀಡಲಾಗುತ್ತದೆ. ಅರಿವು ಯೋಜನೆಯಲ್ಲಿ ವೃತ್ತಿಪರ ಶಿಕ್ಷಣ ಅಂದರೆ ಎಂಬಿಬಿಎಸ್, ಎಂಡಿ, ಎಂಎಸ್, ಬಿಇ, ಬಿಟೆಕ್, ಎಂಇ, ಎಂಟೆಕ್, ಬಿಡಿಎಸ್, ಎಂಡಿಎಸ್, ಬಿ.ಆಯುಷ್, ಎಂ.ಆಯುಷ್, ಎಂಬಿಎ, ಎಂಸಿಎ, ಎಲ್‍ಎಲ್‍ಬಿ, ಬಿಆರ್ಚ್, ಎಂ.ಆರ್ಚ್ ಕೋರ್ಸ್ ಮಾಡಬಯಸುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ಆಯ್ಕೆಯಾಗಿರುವಂತಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅವರು ವ್ಯಾಸಾಂಗ ಪೂರ್ಣಗೊಳಿಸುವವರೆಗೆ…
ಮಡಿಕೇರಿ ಆ.29 : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯುಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್, 31 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಲನ್ನು ಅಪ್‍ಲೋಡ್ ಮಾಡಬಹುದು. ಅಲ್ಲದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಎರಡು ದಿನ ಈಗಾಗಲೇ ಸಲ್ಲಿಸಿದ ಅರ್ಜಿಯಲ್ಲಿ ಏನಾದರೂ ಅಂದರೆ ಅಭ್ಯರ್ಥಿಯ ಲಿಂಗ, ಜಾತಿ, ಪರೀಕ್ಷಾ ಮಾಧ್ಯಮ ಹಾಗೂ ಇತರ ಅಂಶಗಳಲ್ಲಿ ತಿದ್ದುಪಡಿ ಮಾಡಬೇಕಿದ್ದಲ್ಲಿ ಅವಕಾಶ ನೀಡಲಾಗಿದ್ದು, ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಆ.29 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ ಯು.ಜಿ.ಸಿ. ಅನುಮೋದಿತ (ಯುಜಿ) ಕೋರ್ಸ್‍ಗಳಾದ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿ.ಲಿಬ್, ಐಎಸ್‍ಸಿ, ಬಿಎಸ್‍ಸಿ, (ಎಚ್‍ಒಎನ್‍ಎಸ್), ಇನ್‍ಫಾರ್ಮಮೇಷನ್ ಟೆಕ್ನಾಲಜಿ, ಬಿಎಸ್‍ಡಬ್ಲ್ಯು(ಎಎಸ್ಸಿ ಕಾಂಬಿನೇಷನ್(ಪಿಸಿಎಂ, ಪಿಎಂಸಿ, ಬಿಸಿಬಿಜೆಡ್, ಸಿಬಿಜೆಡ್, ಬಿಸಿಬಿಎಂಐ, ಸಿಬಿಎಂಐ, ಬಿಸಿಎಂಐಎಫ್‍ಎಸ್, ಸಿಜೆಡ್‍ಇ, ಬಿಸಿಜೆಡ್‍ಇ, ಸಿಬಿಇ, ಸಿಎಂಇ, ಬಿಜೆಡ್‍ಇ, ಬಿಬಿಇ, ಬಿಎಂಇ, ಪಿಷಿಕ್ಸ್, ಕೆಮೆಸ್ಟ್ರಿ, ಮೆಥಾಮೆಟಿಕ್ಸ್, ಕಂಪ್ಯೂಟರ್ ಸೈನ್ಸ್, ಬಯೋಕೆಮಸ್ಟ್ರಿ, ಬಟಾಣಿ, ಜಿಯೋಲಜಿ, ಮೈಕ್ರೋ ಬಯೋಲಜಿ, ಫುಡ್ ಸೈನ್ಸ್, ಎನ್ವಾರ್ನ್‍ಮೆಂಟಲ್ ಸೈನ್ಸ್). ಪಿಜಿ ಕೋರ್ಸ್‍ಗಳಾದ ಎಂ.ಎ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಲಿಬ್,ಐಎಸ್ಸಿ, ಎಂಸಿಎ, ಎಂಎಸ್‍ಡಬ್ಲ್ಯು ಪಿಜಿ ಸರ್ಟಿಫಿಕೇಟ್ ಪ್ರೋಗ್ರಾಂ (1 ವರ್ಷ), ಡಿಪ್ಲೊಮಾ ಪ್ರೋಗ್ರಾ(1 ವರ್ಷ), ಸರ್ಟಿಫಿಕೇಟ್ ಪ್ರೋಗ್ರಾಂ(6 ತಿಂಗಳು), ಈ ಎಲ್ಲಾ ಶೈಕ್ಷಣಿಕ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ನ್ಯಾಕ್‍ನಿಂದ ಎ+ ಮಾನ್ಯತೆ ಪಡೆದಿದೆ. ಗ್ರಾಮೀಣ ಭಾಗ, ಬಡ ಕುಟುಂಬಗಳ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮುಕ್ತ ವಿಶ್ವವಿದ್ಯಾನಿಲಯ ಕಾರ್ಯನಿರ್ವಹಿಸುತ್ತಿದೆ. ಮಡಿಕೇರಿ ಪ್ರಾದೇಶಿಕ…
ಬೆಂಗಳೂರು ಆ.28 : *ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸತತ 7 ಗಂಟೆಗಳ ಕಾಲ ನಡೆದ ಮೈಸೂರು ಕೆಡಿಪಿ ಸಭೆಯ ದ್ವಿತೀಯಾರ್ಧ* *ಸುಳ್ಳು ಸುದ್ದಿಗಳಿಗೆ ಬ್ರೇಕ್* : ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರು, ಶಾಂತಿ ಕದಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಜೈಲಿಗೆ ತಳ್ಳಿ ಎಂದು ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದರು. ಡ್ರಗ್ಸ್ ವಿಚಾರದಲ್ಲಿ ಮೈಸೂರು ವಲಯದಲ್ಲಿ ಝೀರೋ ಟಾಲರೆನ್ಸ್ ಇರಬೇಕು. ಮೈಸೂರು ಸಾಂಸ್ಕೃತಿಕ ನಗರಿ. ಇಲ್ಲಿ ಡ್ರಗ್ಸ್ ಮೇನಿಯಾ, ಮಾಫಿಯಾಗೆ ಅವಕಾಶ ಇರಬಾರದು. ಗೃಹ ಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮದ ವೇಳೆ ಸಾರ್ವಜನಿಕರಿಗೆ ಟ್ರಾಫಿಕ್ ಕಿರಿಕಿರಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. *ಆದಿವಾಸಿಗಳಿಗೆ 4 ತಿಂಗಳಿoದ ಆಹಾರ ನೀಡುತ್ತಿಲ್ಲ ಎನ್ನುವ ವರದಿಗೆ ಸಂಬಂಧಪಟ್ಟಂತೆ ಗರಂ ಆದ ಮುಖ್ಯಮಂತ್ರಿಗಳು ನಿಮಗೆ ಆರು ತಿಂಗಳು ಸಂಬಳ ನಿಲ್ಲಿಸಿದರೆ ಏನಾಗುತ್ತದೆ ಎನ್ನುವ ಪ್ರಜ್ಞೆ ಇದೆಯೇ…
ಬೆಂಗಳೂರು ಆ.28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಇಂದು ಸಂಜೆ ಮಾನಸ ಗಂಗೋತ್ರಿಯ ಆಯ್ದ ವಿದ್ಯಾರ್ಥಿ ಸಮೂಹದ ಜತೆ ಸಂವಾದ ನಡೆಸಿದರು. 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಈ ವೇಳೆ ಉಪಸ್ಥಿತರಿದ್ದರು.
ಮಡಿಕೇರಿ ಆ.28 : ಆಟೋ ಚಾಲಕರ ಹಾದಿ ತಪ್ಪಿಸುವ ಪ್ರಯತ್ನದಲ್ಲಿ ತೊಡಗಿರುವ ಬೆರಳೆಣಿಕೆಯಷ್ಟು ಮಂದಿ ಆಟೋ ಮಾಲೀಕ, ಚಾಲಕರ ಸಂಘಕ್ಕೆ ಕಾನೂನಿನ ಪಾಠ ಮಾಡುವ ಅಗತ್ಯವಿಲ್ಲವೆಂದು ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್.ಮೇದಪ್ಪ ತಿರುಗೇಟು ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಘದ ಸದಸ್ಯತ್ವ ಹೊಂದಬೇಕು ಎನ್ನುವ ಅರಿವು ಎಲ್ಲಾ ಚಾಲಕರಿಗಿದೆ. ಆದರೆ ಕೆಲವು ಚಾಲಕರು ಗುಂಪುಗಾರಿಕೆ ಮಾಡಿಕೊಂಡು ಸಂಘವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸುಮಾರು ಒಂದು ಸಾವಿರ ಆಟೋ ಚಾಲಕರ ಪೈಕಿ ಬೆರಳೆಣಿಕೆಯ ಆಟೋ ಚಾಲಕರು ಸಂಘದ ಜನಪರ ಕಾಳಜಿಯನ್ನು ವಿರೋಧಿಸುತ್ತಿದ್ದಾರೆ. ಚಾಲಕರ ಹಾಗೂ ಸಾರ್ವಜನಿಕರ ಹಿತ ಕಾಯಲು ಸಂಘ ತೆಗೆದುಕೊಂಡ ನಿರ್ಧಾರಗಳನ್ನು ಸಹಿಸಲಾಗದೆ ವಿನಾಕಾರಣ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅಕ್ರಮ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸಂಘ ಇಲಾಖೆಗಳ ಸಹಕಾರದೊಂದಿಗೆ ಕೆಲವು ಕಟ್ಟುನಿಟ್ಟಿನ ನಿರ್ಧಾರಗಳನ್ನು ಕೈಗೊಂಡಿದೆ. ಅತ್ಯAತ ದಕ್ಷತೆಯಿಂದ ಆಟೋ ಚಾಲನೆ ಮಾಡಿ ಜೀವನ ಸಾಗಿಸುತ್ತಿರುವ ಚಾಲಕರಿಗೆ ಇದುವೇ ವೃತ್ತಿಯಾಗಿದೆ. ವೃತ್ತಿ ಜೀವನಕ್ಕೆ ದ್ರೋಹ ಬಗೆದು ರಾಜಕೀಯ…
ಸೋಮವಾರಪೇಟೆ ಆ.28 : ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ರೈತನ ಕುಟಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರು 15 ಲಕ್ಷ ರೂ.ಗಳ ಪರಿಹಾರದ ಚೆಕ್‌ನ್ನು ವಿತರಿಸಿದರು. ಸೋಮವಾರ ಸಂಜೆ ಶಾಸಕ ಡಾ.ಮಂತರ್‌ಗೌಡ ಅವರೊಂದಿಗೆ ಆಡಿನಾಡೂರು ಗ್ರಾಮಕ್ಕೆ ತೆರಳಿದ ಸಚಿವರು, ಮೃತ ಈರಪ್ಪ ಅವರ ಪತ್ನಿ ಹೇಮಾವತಿ ಅವರಿಗೆ ಸಾಂತ್ವಾನ ಹೇಳಿದರು. ಘಟನೆ ನಡೆಯಬಾರದಿತ್ತು. ನಿಮ್ಮ ನೋವು ಅರ್ಥವಾಗುತ್ತದೆ. ಹೋದ ಜೀವವನ್ನು ತಂದು ಕೊಡಲು ಸಾಧ್ಯವಿಲ್ಲ. ದೈರ್ಯ ತೆಗೆದುಕೊಳ್ಳಿ, ಮೊಮ್ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಸಮಾಧಾನ ಪಡಿಸಿದರು. ಕಾಡಾನೆಗಳು ನಿರಂತರವಾಗಿ ಹಾವಳಿ ಮಾಡುತ್ತಿವೆ. ಸಂಜೆ ಸಮಯದಲ್ಲಿ ಕೃಷಿ ಭೂಮಿಯಲ್ಲಿ ಇರುತ್ತವೆ. ಕೃಷಿ ಹಾನಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಆಡಿನಾಡೂರು ಗ್ರಾಮದಲ್ಲೇ ಮೂವರು ರೈತರು ಕಾಡಾನೆ ದಾಳಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡರು. ಮನುಷ್ಯ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಗುರುತಿಸಿ, ಹಿಡಿದು ಸ್ಥಳಾಂತರ ಮಾಡಲು ಕೂಡಲೆ ಕ್ರಮಕೈಗೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ…






