ಮಡಿಕೇರಿ ಸೆ.22 NEWS DESK : ಪೊನ್ನಂಪೇಟೆ ನಗರದಲ್ಲಿ ಸೆ.23ರಂದು ಸಂಜೆ 6 ಗಂಟೆಯಿಂದ ಸೆ.24ರ ಬೆಳಗ್ಗೆ 6 ಗಂಟೆಯವರೆಗೆ ಗಣಪತಿ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ. ಸುಮಾರು 9 ಮಂಟಪಗಳ ಮೆರವಣಿಗೆ ನಗರದ ಮುಖ್ಯ ಬೀದಿಯಲ್ಲಿ ನಡೆಯಲಿದ್ದು, 5,000ರಿಂದ 6,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಮೆರವಣಿಗೆ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವುದರಿಂದ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಡಕು ಉಂಟಾಗುವ ಹಾಗೂ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ವಾಹನ ಸವಾರರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ಎಸ್.ಜಿ., ಭಾ.ಅ.ಸೇ. ಅವರು ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 221ಎ(5)ರಡಿ ಆದೇಶ ಹೊರಡಿಸಿದ್ದಾರೆ.…
ಲೇಖಕ: admin
ಮಡಿಕೇರಿ ಸೆ.22 NEWS DESK : ರಾಷ್ಟ್ರೀಯ ಹೆದ್ದಾರಿ 275 ಆನೆಕಾಡು ಬಳಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಆನೆಕಾಡು ಬಳಿಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತ ಸಂಭವಿಸಿ ಸಾವು ನೋವುಗಳು ಉಂಟಾಗುತ್ತಿದ್ದು, ಇದನ್ನು ತಡೆಯಬೇಕಿದೆ. ಆ ನಿಟ್ಟಿನಲ್ಲಿ ಎಚ್ಚರಿಕೆಯ ಫಲಕಗಳು, ವೇಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಹೆದ್ದಾರಿ ವಿಭಾಗದ ಎಂಜಿಯರ್‍ಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಾಕೀತು ಮಾಡಿದರು. ರಸ್ತೆ ಸುರಕ್ಷತಾ ಮಾರ್ಗಸೂಚಿ ಸಂಬಂಧ ತಾತ್ಕಾಲಿಕವಾಗಿ ಆಗಬೇಕಿರುವ ಕೆಲಸಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಹೆದ್ದಾರಿಯಲ್ಲಿ ರಸ್ತೆ ಉಬ್ಬು ನಿರ್ಮಾಣ, ಜೀಬ್ರಾ ಕ್ರಾಸ್ ಮತ್ತಿತರ ವೇಗ ನಿಯಂತ್ರಕಗಳನ್ನು ಅಳವಡಿಸಬೇಕು. ರಸ್ತೆ ಸುರಕ್ಷಿತ ಸಂಬಂಧ ಹಲವು ಮಾರ್ಗ ಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು. ಹೆದ್ದಾರಿ ವಿಭಾಗದಲ್ಲಿ ಬ್ಲಾಕ್ ಸ್ಪಾಟ್‍ಗಳನ್ನು ಗುರುತಿಸಲಾಗಿದ್ದು, ಈ ಬಗ್ಗೆ ಹೆದ್ದಾರಿ ವಿಭಾಗದ ಎಂಜಿನಿಯರ್‍ಗಳು ಅಗತ್ಯ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕಿದೆ ಎಂದು…
ವಿರಾಜಪೇಟೆ ಸೆ.22 NEWS DESK : ಹಬ್ಬಗಳನ್ನು ಎಲ್ಲರೊಂದಿಗೆ ಒಗ್ಗಟ್ಟಾಗಿ ಸೇರಿ ಆಚರಿಸುವುದರಿಂದ ಸಿಗುವ ಸಂತಸವೇ ವಿಭಿನ್ನ ಎಂದು ವಿರಾಜಪೇಟೆ ಕೊಡವ ಸಮಾಜದ ಕೊಡವ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್ ಹೇಳಿದರು. ವಿರಾಜಪೇಟೆಯ ಕೊಡವ ಸಮಾಜದಲ್ಲಿ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಕೈಲ್ ಪೊಲ್ಧ್ ನಮ್ಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೈಲ್ ಪೊಲ್ಧ್ ಹಬ್ಬವು ತನ್ನದೇ ಆದ ವೈಶಿಷ್ಟ್ಯ ಹೊಂದಿದ್ದು, ಕೃಷಿ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡುವ ಹಬ್ಬವಾಗಿದೆ. ಜನರೆಲ್ಲರೂ ಒಂದೆಡೆ ಸೇರಿ ಸಂಭ್ರಮದಿಂದ ಆಚರಿಸುವ ಮೂಲಕ ಹಬ್ಬದ ಸಡಗರ ಹೆಚ್ಚುತ್ತದೆ. ಒಕ್ಕೂಟದ ವತಿಯಿಂದ ಈ ಬಾರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸರ್ವ ಸದಸ್ಯರು ಸಹಕಾರ ನೀಡಿದ್ದಾರೆ ಎಂದು ಹೇಳಿದರು. ಒಕ್ಕೂಟದ ಸದಸ್ಯರೆಲ್ಲರೂ ಸಭೆ, ಸಮಾರಂಭಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸದಸ್ಯರು ತಮ್ಮ ಮನೆಯ ಕರ್ತವ್ಯಗಳನ್ನು ನಿಭಾಯಿಸುವ ರೀತಿಯಲ್ಲಿಯೇ ಒಕ್ಕೂಟದ ಜವಾಬ್ದಾರಿಗಳನ್ನೂ ನಿರ್ವಹಿಸಿದಲ್ಲಿ ಸಂಘಟನೆ ಮತ್ತಷ್ಟು ಯಶಸ್ಸು ಕಾಣಲು ಸಾಧ್ಯವಾಗುತ್ತದೆ. ಎಲ್ಲರೂ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.…
ಮಡಿಕೇರಿ ಸೆ.22 NEWS DESK : ಮಡಿಕೇರಿ ನಗರಸಭೆಯ ಪೌರಾಯುಕ್ತ ಹೆಚ್.ಆರ್.ರಮೇಶ್ ಅವರ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದರು. ಆದಾಯಕ್ಕೂ ಮೀರಿ ಆಸ್ತಿ ಗಳಿಕೆಯ ಆರೋಪ ಕೇಳಿ ಬಂದ ಹಿನ್ನೆಲೆಯಲಿದೀ ದಾಳಿ ನಡೆದಿದ್ದು, ಚಿನ್ನಾಭರಣ, ನಗದು ಹಾಗೂ ಜಮೀನಿನ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ 6.30ರ ಸುಮಾರಿನಲ್ಲಿ ಮೈಸೂರು ಲೋಕಾಯುಕ್ತ ಎಸ್.ಪಿ. ಉದೇಶ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಲೋಕಾಯುಕ್ತ ಡಿವೈಎಸ್‍ಪಿ, ತನಿಖಾಧಿಕಾರಿ ದಿನಕರ್ ಶೆಟ್ಟಿ ಹಾಗೂ ಅಧಿಕಾರಿಗಳು ದಾಳಿ ನಡೆಸಿದರು. ನಗರದ ದಾಸವಾಳ ರಸ್ತೆಯಲ್ಲಿರುವ ಪೌರಾಯುಕ್ತರ ವಸತಿಗೃಹ, ಕಚೇರಿ ಮತ್ತು ಮಕ್ಕಂದೂರು ಗ್ರಾಮದಲ್ಲಿರುವ ಸ್ವಂತ ಮನೆಗಳ ಮೇಲೆ ದಾಳಿ ನಡೆಸಲಾಯಿತು. ದಾಳಿ ಸಂದರ್ಭ ಪತ್ತೆಯಾದ ಚಿನ್ನಾಭರಣ, ಬೆಳ್ಳಿಯ ಆಭರಣಗಳು, ಲಕ್ಷಾಂತರ ನಗದು, ಜಮೀನಿನ ಪತ್ರ, 1 ಅಂಗಡಿ ಮಳಿಗೆ, 1 ಕಾರು, 1 ಬೈಕ್ ನ ದಾಖಲೆಗಳು ಮತ್ತು ಕೆಲವು ಕಡತಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕ್…
ಮಡಿಕೇರಿ ಸೆ.22 NEWS DESK : ಯೋಗಾಸನದಲ್ಲಿ ಈಗಾಗಲೆ ವಿವಿಧ ಹದಿನೈದು ದಾಖಲೆಗಳನ್ನು ಮಾಡಿರುವ ಕೊಡಗಿನ ಹೆಮ್ಮೆಯ ಕುವರಿ ಸಿಂಚನಾರಿಂದ ನೂತನ ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ ಕಾರ್ಯಕ್ರಮ ಸೆ.25ರಂದು ಮದೆ ಗ್ರಾಮದ ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮದೆನಾಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಗೋಳಿಕಜೆ ಪಿ.ಧನಂಜಯ ಅವರು, ಮದೆನಾಡಿನ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಿಂಚನಾ ಅವರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸೇರ್ಪಡೆಯ ಸಲುವಾಗಿ ಯೋಗಾಸನಗಳನ್ನು ಪ್ರದರ್ಶಿಸಲಿದ್ದಾರೆ ಎಂದು ತಿಳಿಸಿದರು. ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ಕಲಾ ಮಂದಿರದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಯಶೋಧರ ಬಿ.ಜೆ. ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಗೋಲ್ಡನ್…
ಮಡಿಕೇರಿ ಸೆ.22 NEWS DESK : ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಡಿಕೇರಿ ತಾಲ್ಲೂಕು ಲೋಕೋಪಯೋಗಿ ಗುತ್ತಿಗೆದಾgರ ಸಂಘದ ನೇತೃತ್ವದಲ್ಲಿ ಕೊಡಗು ಜಿಲ್ಲೆಯ ಗುತ್ತಿಗೆದಾರರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ಮಡಿಕೇರಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗುತ್ತಿಗೆದಾರರು 2019-20ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ನಿರ್ವಹಿಸಲಾದ ಕಾಮಗಾರಿಗಳ ಬಿಲ್‍ಗಳನ್ನು ತಕ್ಷಣ ಪಾವತಿಸಬೇಕು ಹಾಗೂ ಹೊರ ಜಿಲ್ಲೆಯ ಗುತ್ತಿಗೆದಾರರಿಗೆ ಕಾಮಗಾರಿ ನೀಡಬಾರದು ಎಂದು ಒತ್ತಾಯಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಗುತ್ತಿಗೆದಾರರ ಸಮಸ್ಯೆಗಳನ್ನು ಆಲಿಸಿದರು. ಬಾಕಿ ಇರುವ ಕಾಮಗಾರಿಗಳ ಬಿಲ್ ಮತ್ತಿತರ ಸಮಸ್ಯೆಗಳ ಕುರಿತು ಸೆ.23ರಂದು ಗುತ್ತಿಗೆದಾರ ಪ್ರತಿನಿಧಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಭಿಯಂತರರೊಂದಿಗೆ ಸಭೆ ನಡೆಸಿ, ಅಗತ್ಯ ಪರಿಹಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಭರವಸೆಗೆ ಗುತ್ತಿಗೆದಾರರ ಸಂಘಗಳು ಸಮ್ಮತಿ ಸೂಚಿಸಿದವು. ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಮಾತನಾಡಿ…
ಕುಶಾಲನಗರ, ಸೆ 21 NEWS DESK : ಕುಶಾಲನಗರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಒತ್ತಾಯಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಸೆ.24 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರ ತಹಸೀಲ್ದಾರ್ ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ಬಿಜೆಪಿ ಅಧ್ಯಕ್ಷ ಎಂ.ಎಲ್.ಗೌತಮ್ ಹಾಗೂ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ.
ಮಡಿಕೇರಿ NEWS DESK ಸೆ.22 : ಸುಂಟಿಕೊಪ್ಪದಲ್ಲಿ ಬಿಳಿ ಫಲಕದ ಖಾಸಗಿ ವಾಹನಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸುತ್ತಿರುವುದರಿಂದ ಹಳದಿ ಫಲಕದ ವಾಣಿಜ್ಯ ವಾಹನಗಳ ಮಾಲೀಕರು ಹಾಗೂ ಚಾಲಕರಿಗೆ ಭಾರೀ ಆರ್ಥಿಕ ನಷ್ಟವಾಗುತ್ತಿದೆ ಎಂದು ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿ ಎಂ.ಐ.ರಿಜ್ವಾನ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಿಯಮಬಾಹಿರವಾಗಿ ಬಿಳಿ ಫಲಕದ ಖಾಸಗಿ ವಾಹನಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸುತ್ತಿರುವ ಕುರಿತು ಈ ಹಿಂದೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಅಧಿಕಾರಿಗಳ ಎಚ್ಚರಿಕೆಯ ನಡುವೆಯೂ ಬಿಳಿ ಫಲಕದ ಖಾಸಗಿ ವಾಹನಗಳು ರಾಜಾರೋಷವಾಗಿ ಬಾಡಿಗೆಯಲ್ಲಿ ತೊಡಗಿವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲು ಹಳದಿ ಫಲಕದ ವಾಹನ ಹೊಂದಿರುವ ಮಾಲೀಕರು ಸರಕಾರಕ್ಕೆ ದುಬಾರಿ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಆದರೆ ತೆರಿಗೆ ಪಾವತಿಸದ ಬಿಳಿ ಫಲಕದ ಖಾಸಗಿ ವಾಹನಗಳು ಹಳದಿ ಫಲಕದ ವಾಹನಗಳೊಂದಿಗೆ ಪೈಪೋಟಿಗಿಳಿದು ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವ ಮತ್ತು ಸಾರಿಗೆ ನಿಯಮವನ್ನು ಪಾಲಿಸುತ್ತಿರುವ ಮಾಲೀಕರುಗಳಿಗೆ ಹಾಗೂ…
ಮಡಿಕೇರಿ NEWS DESK ಸೆ.22 : ಶಾಂತಿನಿಕೇತನ ಯುವಕ ಸಂಘದ ವತಿಯಿಂದ 48ನೇ ವರ್ಷದ ಅದ್ದೂರಿ ಗಣೇಶೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು. ಒಟ್ಟು 51 ಮಂದಿ ರಕ್ತದಾನ ಮಾಡಿದರು. ರಕ್ತದಾನ ಮಾಡಿದ ಎಲ್ಲಾ ರಕ್ತದಾನಿಗಳಿಗೆ, ಶಿಬಿರದ ಯಶಸ್ಸಿಗೆ ಸಹಕರಿಸಿದ ಸಾರ್ವಜನಿಕರಿಗೆ ಹಾಗೂ ಕಾರ್ಯಕ್ರಮಕ್ಕೆ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷ ಕೆ.ಹೆಚ್.ಚೇತನ್ ಹಾಗೂ ಪದಾಧಿಕಾರಿಗಳು ಧನ್ಯವಾದಗಳನ್ನು ಸಲ್ಲಿಸಿದರು. “ರಕ್ತದಾನವು ಮತ್ತೊಂದು ಜೀವವನ್ನು ಉಳಿಸುವ ಮಹತ್ವದ ಸೇವೆಯಾಗಿದೆ. ಸಾರ್ವಜನಿಕರಿಂದ ದೊರೆತ ಸಹಕಾರ ಮತ್ತು ಸ್ಪಂದನೆ ಇನ್ನಷ್ಟು ಸೇವಾ ಕಾರ್ಯಗಳನ್ನು ಕೈಗೊಳ್ಳಲು ಪ್ರೇರಣೆಯಾಗಿದೆ,” ಎಂದು ಕೆ.ಹೆಚ್.ಚೇತನ್ ತಿಳಿಸಿದರು. ಗಣೇಶೋತ್ಸವದ ಪ್ರಯುಕ್ತ ಸೆ.23ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗಪೂಜೆ ಏರ್ಪಡಿಸಲಾಗಿದೆ. ಸೆ.26ರಂದು ಮಹಾಪೂಜೆಯ ನಂತರ ಶ್ರೀ ಮಹಾ ಗಣಪತಿ ಮೂರ್ತಿಯನ್ನು ಕಥಾ ಸಾರಾಂಶವುಳ್ಳ ಅಲಂಕೃತ…
ಮೂರ್ನಾಡು ಸೆ.21 NEWS DESK : ಮೂರ್ನಾಡು ಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣೇಶೋತ್ಸವದ ಗಣೇಶ ಮೂರ್ತಿಗಳನ್ನು ಏಳು ದಿನಗಳ ಪೂಜಾ ಕೈಂಕರ್ಯಗಳ ಬಳಿಕ ಭಾನುವಾರ ರಾತ್ರಿ ಬಲಮುರಿ ಕಾವೇರಿ ನದಿಯಲ್ಲಿ ಭಕ್ತಿಭಾವದಿಂದ ವಿಸರ್ಜಿಸಲಾಯಿತು. ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ 35ನೇ ವರ್ಷದ ಗೌರಿ-ಗಣೇಶೋತ್ಸವ, ಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ 34ನೇ ವರ್ಷದ ಗೌರಿ-ಗಣೇಶೋತ್ಸವ, ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ ಟಿ-ಜಂಕ್ಷನ್‌ನಲ್ಲಿ 32ನೇ ವರ್ಷದ ಗಣೇಶೋತ್ಸವ, ಗಜೇಂದ್ರ ಯುವಶಕ್ತಿ ಸಂಘದ ವತಿಯಿಂದ 7ನೇ ವರ್ಷದ ಗಣೇಶೋತ್ಸವ, ಅಯ್ಯಪ್ಪ ಗೆಳೆಯರ ಬಳಗ (ಎಂ-ಟೌನ್) ವತಿಯಿಂದ 3ನೇ ವರ್ಷದ ಗಣೇಶೋತ್ಸವ ಹಾಗೂ ಕೋಡಂಬೂರಿನ ವಿಘ್ನೇಶ್ವರ ಗೆಳೆಯರ ಬಳಗದ ವತಿಯಿಂದ 18ನೇ ವರ್ಷದ ಗಣೇಶೋತ್ಸವ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪಗಳಲ್ಲಿ ಇರಿಸಿ ಮೂರ್ನಾಡಿನ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಆರು ವಿದ್ಯುತ್ ಅಲಂಕೃತ ಮಂಟಪಗಳೊಂದಿಗೆ ನಡೆದ ಶೋಭಾಯಾತ್ರೆಯಲ್ಲಿ ಡಿಜೆ ಸೌಂಡ್‌ಗಳ ಸದ್ದುಗದ್ದಲವೂ ಕಂಡುಬಂತು. ಮೂರ್ನಾಡು ಪಟ್ಟಣ…






