ಮಡಿಕೇರಿ ಏ.27 NEWS DESK : ಮಹಿಳಾ ಮೀಸಲಾತಿಯ “ನಾರಿ ಶಕ್ತಿ ವಂದನ್” ವಿಧೇಯಕವನ್ನು ಪ್ರಸ್ತುತ ಇರುವ ಲೋಕಸಭಾ ಸ್ಥಾನಗಳಿಗೆ ಅನ್ವಯಿಸಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವ ಸಹಿ ಅಭಿಯಾನಕ್ಕೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಅವರು, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿತ ಸರಳ ಕಾರ್ಯಕ್ರಮದಲ್ಲಿ, ಬೋರ್ಡ್‍ನಲ್ಲಿ ಸಹಿ ಮಾಡುವ ಮೂಲಕ ಅಭಿüಯಾನಕ್ಕೆ ಚಾಲನೆಯನ್ನಿತ್ತರು. ಕೇಂದ್ರದ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವು ಮಹಿಳೆಯರಿಗೆ ಮೀಸಲಾತಿ ನೀಡುವ ವಿಧೇಯಕದೊಂದಿಗೆ ಕ್ಷೇತ್ರ ಪುನರ್ವಿಂಗಡಣೆಯನ್ನು ಸೇರ್ಪಡೆಮಾಡಿರುವುದನ್ನು ವಿರೋಧಿಸಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ, ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಿಗೆ ಸಂಬಂಧಿಸಿದಂತೆ ಮಹಿಳಾ ಮೀಸಲಾತಿಯನ್ನು ಅನ್ವಯಿಸಿ ಜಾರಿಗೆ ತರುವಂತೆ ಕೇಂದ್ರವನ್ನು ಒತ್ತಾಯಿಸಿದರು. ಸಹಿ ಅಭಿಯಾನದಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಶೀಲಾ ಡಿಸೋಜ, ಮಹಿಳಾ ಕಾಂಗ್ರೆಸ್ ಸದಸ್ಯರು ಹಾಗೂ ಜಿಪಂ ಮಾಜಿ ಸದಸ್ಯರಾದ ಸುನೀತ, ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುಬೀನಾ…
ಲೇಖಕ: admin
ವಿರಾಜಪೇಟೆ ಏ.27 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಬೆಂಗಳೂರು ಇದರ ರಾಜ್ಯ ಮಟ್ಟದ ಪದಗ್ರಹಣ ಸಮಾರಂಭ ಧಾರವಾಡದ ವಿದ್ಯಾವರ್ಧಕ ಸಂಘ ಪಾಟೀಲ್ ಪುಟ್ಟಪ್ಪ ಭವನದಲ್ಲಿ ಜರುಗಿತು. ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಉಪನಿರ್ದೆೇಶಕರ ಕಛೇರಿಯ ಸೂಪರಿಡೆಂಟ್ ಹಾಗೂ ಭರತನಾಟ್ಯ ಕಲಾವಿದ ಎಸ್.ಕೆ.ಕಿರಣ್ ಅವರಿಗೆ ಕಾಯಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭ ರಾಜ್ಯ ಅಧ್ಯಕ್ಷರಾದ ರಮಾ , ಬಸವರಾಜು ಗುರಿಕಾರ್ , ಮೇಲ್ಮನೆ ಸಭಾಪತಿ ಬಸವರಾಜ್ ಹೊರಟ್ಟಿ, ರಾಜ್ಯ ಕಾರ್ಯದರ್ಶಿ ಪರ್ವಿನ್ ಬಾನು ಬೊಳ್ಳಣ್ಣವರ್ ಹಾಗೂ ರಾಜ್ಯದ ಎಲ್ಲ ಪದಾಧಿಕಾರಿಗಳು ಮತ್ತು ರಾಜ್ಯದ ಪ್ರತಿಯೊಂದು ಜಿಲ್ಲೆಯ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದರು. ವೇದಿಕೆಯಲ್ಲಿ ಎಸ್.ಕೆ.ಕಿರಣ್ ಅವರಿಂದ ಭರತನಾಟ್ಯ ಪ್ರದರ್ಶನ ಮೂಡಿ ಬಂದಿತು. ಕರ್ನಾಟಕ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷರಾದ ಕಮಲಮ್ಮ ಕೆ. ಎನ್ ಹಾಗೂ ಪ್ರಧಾನ ಕಾರ್ಯದ ರ್ಶಿ ನೀಲಮ್ಮ ಕೆ.ಪಿ.…
ವಿರಾಜಪೇಟೆ ಏ.27 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಹಾಗೂ ಸಾಹಿತ್ಯ ಪರಿಷತ್ತುನ ರಾಜ್ಯ ಹಾಗೂ ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ್ ಪುಟ್ಟಪ್ಪ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾಗಿ ವಿರಾಜಪೇಟೆ ಉಪ ಖಜಾನೆಯ ಅಧೀಕ್ಷಕ ಗಣೇಶ್ ನಿಲವಾಗಿಲು ಅವರು ಅಧಿಕಾರ ಸ್ವೀಕರಿಸಿದರು. ಸಾಹಿತ್ಯ, ಚಿತ್ರಕಲೆ, ಸಂಗೀತ, ನಾಟಕ, ನೃತ್ಯ ಹಾಗೂ ಮೊದಲಾದ ಲಲಿತ ಕಲೆಗಳ ಸಮಾರಂಭ, ಕಾರ್ಯಾಗಾರ ಹಾಗೂ ಸಾಂಸ್ಕೃತಿಕ ಸಮ್ಮೇಳನಗಳನ್ನು ರಾಜ್ಯವಾರು ಹಮ್ಮಿಕೊಳ್ಳಲು ಮತ್ತು ಸಮಾಜಮುಖಿ ಕಾರ್ಯನಿರ್ವಹಣೆಗೆ ಆದೇಶದಲ್ಲಿ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಗಣೇಶ್ ಅವರನ್ನು ಉಪಸ್ಥಿತರಿದ್ದ ಗಣ್ಯರು ಅಭಿನಂದಿಸಿದರು.
ವಿರಾಜಪೇಟೆ ಏ.27 NEWS DESK : ಹೆಗ್ಗಳ ಗ್ರಾಮದ ಬೂದಿಮಾಳ ಶ್ರೀ ಕಿರಾತೇಶ್ವರ ದೇವಾಲಯದ ವಾರ್ಷಿಕ ಉತ್ಸವ ಹಾಗೂ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಹಬ್ಬದ ಪ್ರಯುಕ್ತ ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು. ಅರ್ಚಕರು ಕ್ಷೇತ್ರದ ಶ್ರೀ ಮಹಾಗಣಪತಿಗೆ ಹಾಗೂ ವನದುರ್ಗೆ ದೇವರುಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥನೆಯನ್ನು ಸಲ್ಲಿಸದರು. ನಂತರ ಶ್ರೀ ಕಿರಾತೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಮೊದಲಿಗೆ ಅರ್ಚಕರು ಸಂಕಲ್ಪ ಪೂಜೆ, ಪ್ರಾರ್ಥನೆ ಹಾಗೂ ಪಂಚಾಮೃತ ಅಭಿಷೇಕವನ್ನು ನೆರವೇರಿಸಿದರು. ಎಳನೀರು ಅಭಿಷೇಕ, ಅಲಂಕಾರ ಪೂಜೆಯನ್ನು ಮಾಡಿದರು. ತದನಂತರ ವಿಶೇಷ ಅರ್ಚನೆಯನ್ನು ಮಾಡಿ ವಿವಿಧ ಸೇವೆಗಳನ್ನು ನೆರವೇರಿಸಲಾಯಿತು. ಬಳಿಕ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆಯು ಜರುಗಿತು. ಕೇರಳದ ಚಂಡೆ ಬಳಗದವರಿಂದ ಚಂಡೆ ಸೇವೆಯು ಈ ಸಂದರ್ಭದಲ್ಲಿ ನಡೆಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯು ಜರುಗಿತು. ಧಾರ್ಮಿಕ ಕಾರ್ಯಕ್ರಮಗಳು ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ರವರ ನೇತೃತ್ವದಲ್ಲಿ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪಕರಾದ ದೇವಪ್ಪ ಪೂಜಾರಿ ಹಾಗೂ…
ವಿರಾಜಪೇಟೆ NEWS DESK ಏ.27 : ಸಮೀಪದ ಬೇಟೋಳಿ ರಾಮನಗರದ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಮೂರು ದಿವಸಗಳ ಕಾಲ ಜರುಗಿದ ಮಕ್ಕಳ ವೈದಿಕ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿತು. ಮೊದಲ ದಿವಸ ಈ ಶಿಬಿರಕ್ಕೆ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಉಪಾಧ್ಯಕ್ಷರಾದ ನಂದ ಬೋರ್ಕರ್ ರವರು ಚಾಲನೆಯನ್ನು ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ಕಳತ್ಮಾಡು ವಿನ ಅರ್ಚಕ ಶ್ರೇಯಸ್ ಭಟ್ ರವರು ವೈದಿಕ ಶಿಬಿರದ ಪ್ರಯುಕ್ತ ಮಕ್ಕಳಿಗೆ ವಿವಿಧ ತರಬೇತಿಯನ್ನು ನೀಡಿದರು.ಅರ್ಚಕರು ವಟುಗಳಿಗೆ ಸಂಧ್ಯಾ ವಂದನೆ, ಕುಲದೇವರ ಪೂಜಾ ವಿಧಾನಗಳು, ಮಂತ್ರ ಪಠಣೆ, ಶ್ಲೋಕ ಪಠಣ, ಜನಿವಾರ ಧರಿಸುವ ವಿಧಾನಗಳು, ಶ್ರೀ ಸತ್ಯನಾರಾಯಣ ಪೂಜೆಯ ಮಂತ್ರಗಳು, ಪಂಚಗವ್ಯದ ಪೂಜಾ ವಿಧಾನ ಇನ್ನೂ ಮುಂತಾದ ಪೂಜಾ ವಿಧಾನಗಳ ಕುರಿತು ತರಬೇತಿಯನ್ನು ನೀಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆ ಸಂಗೀತ ರವರು ಮಕ್ಕಳಿಗೆ ಯೋಗಾಭ್ಯಾಸವನ್ನು ಮಾಡಿಸಿದರು. ಹೆಗ್ಗಳ ಗ್ರಾಮದ ಸುರೇಶ್ ರವರು ಧರ್ಮ ಶಿಕ್ಷಣದ ಮಹತ್ವವನ್ನು ವಿವರಿಸಿದರು.…
ಮಡಿಕೇರಿ ಏ.27 NEWS DESK : ನಮ್ಮ ಗಣತಿ ನಮ್ಮ ಅಭಿವೃದ್ಧಿ 2027 ರ ಜನಗಣತಿ ಸಂಬಂಧ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಕೈಗೊಂಡಿದ್ದು, ಈ ತಿಂಗಳ ಅಂತ್ಯದೊಳಗೆ ಶೇಕಡಾವಾರು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಪ್ರಗತಿಯಲ್ಲಿ ಕೊಡಗು ಜಿಲ್ಲೆ 15ನೇ ಸ್ಥಾನದಲ್ಲಿದ್ದು, ಆದಷ್ಟು ಶೀಘ್ರ ಗಣತಿ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಹಶೀಲ್ದಾರರು, ತಾ.ಪಂ.ಇಒಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಸೇರಿದಂತೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಮನೆ ಬಿಟ್ಟು ಹೋಗದಂತೆ ಗಣತಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಮನೆ ಮನೆ ಗಣತಿ ಕಾರ್ಯಕ್ಕಾಗಿ ಈಗಾಗಲೇ ಜಿಲ್ಲೆಯಲ್ಲಿ 999 ಗಣತಿದಾರರನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ 187, ಮಡಿಕೇರಿ ನಗರಕ್ಕೆ 61, ಸೋಮವಾರಪೇಟೆ…
ಮಡಿಕೇರಿ ಏ.27 NEWS DESK : ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವಲ್ಲಿ ವಿಫಲವಾಗಿದೆ. ಈ ವಿಚಾರದಲ್ಲಿ ಸುಳ್ಳು ಹೇಳುತ್ತಿರುವ ಕೇಂದ್ರ ಸರಕಾರ ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಯತ್ನ ಮಾಡುತ್ತಿದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಮಹಿಳಾ ಕಾಂಗ್ರೆಸ್ ನ ಕೊಡಗು ಉಸ್ತುವಾರಿ ಮಮತಾ ಗಟ್ಟಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಳಾ ಮೀಸಲಾತಿ ಪರ ಸುಮಾರು 10ಲಕ್ಷ ಸಹಿ ಸಂಗ್ರಹದ ಗುರಿಯೊಂದಿಗೆ ಮಹಿಳಾ ಕಾಂಗ್ರೆಸ್ ರಾಜ್ಯವ್ಯಾಪಿ ಅಭಿಯಾನ ನಡೆಸುತ್ತಿದೆ ಎಂದರು. ಭಾರತದ ರಾಜಕೀಯ ಮತ್ತು ಸಾಮಾಜಿಕ ಇತಿಹಾಸದಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡುವಲ್ಲಿ ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಿದೆ. ಆದರೆ ಮಹಿಳಾ ಸಬಲೀಕರಣಕ್ಕೆ ಯಾವುದೇ ಕೊಡುಗೆ ನೀಡದ ಪ್ರಧಾನಿ ಮೋದಿ ನೇತೃತ್ವದ ಸರಕಾರ ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು. ಮಾಜಿ ಪ್ರಧಾನಿಗಳಾದ…
ಮಡಿಕೇರಿ ಏ.27 NEWS DESK : ಮಡಿಕೇರಿ ನಗರದ ಗುರುಭ್ಯೋ ಮುನೀಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಏ.29, 30 ಮತ್ತು ಮೇ 1 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ ಮತ್ತು ಉತ್ಸವ ಸಮಿತಿಯ ಪ್ರಮುಖರು ಮೂರು ದಿನಗಳ ಕಾಲ ನಡೆಯುವ ಗುರುಭ್ಯೋ ಮುನೀಶ್ವರ, ಚಾಮುಂಡೇಶ್ವರಿ ಹಾಗೂ ನಾಗ ದೇವರ ದೇವಾಲಯಗಳ ಲೋಕಾರ್ಪಣೆ ಮತ್ತು ವಿವಿಧ ಧಾರ್ಮಿಕ ವಿಧಿ ವಿಧಾನಗಳ ಕುರಿತು ಮಾಹಿತಿ ನೀಡಿದರು. ಏ.29 ರಂದು ಬೆಳಿಗ್ಗೆ 10-15ಕ್ಕೆ ಸಂಕಲ್ಪ, ಗುರು ಗಣಪತಿ ಪೂಜೆ, ಸ್ವಸ್ತಿ ಪುಣ್ಯವಾಚನ, ಸ್ಥಳ ಶುದ್ಧಿ, ರುದ್ರಪಾಠ ಪಠಣ, ಸುದರ್ಶನ ಪೂರ್ವಕ ಪ್ರಾಯಶ್ಚಿತ ತಿಲ ಹೋಮ ನಡೆಯಲಿದೆ. ಸಂಜೆ 6 ಗಂಟೆಗೆ ಬನ್ನಿ ಮಂಟಪದಿಂದ ಗುರುಭ್ಯೋ ಮುನೀಶ್ವರ ದೇವಾಲಯದವರೆಗೆ ಮಂಗಳವಾದ್ಯದೊಂದಿಗೆ ಕಳಶ ಮೆರವಣಿಗೆ ಸಾಗಲಿದೆ. 7-30 ಗಂಟೆಗೆ ಪ್ರಸನ್ನ ಪೂಜೆ ನೆರವೇರಲಿದೆ. ಏ.30 ರಂದು ಬೆಳಿಗ್ಗೆ 7 ಗಂಟೆಗೆ ಫಲನ್ಯಾಸದ ಪೂರ್ವಕ ಮಹಾಪ್ರಾರ್ಥನೆ, ಮಹಾಸಂಕಲ್ಪ, ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯವಾಚನ, ಪ್ರಸಾದ ಶುದ್ಧಿ,…
ಮಡಿಕೇರಿ ಏ.27 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್‌ನಿಂದ ಈ ಬಾರಿಯೂ 2026-27ನೇ ಸಾಲಿಗೆ ಸಂಬಂಧಿಸಿದಂತೆ ಶೈಕ್ಷಣಿಕ ನೆರವನ್ನು ವಿತರಿಸಲು ನಿರ್ಧರಿಸಲಾಗಿದೆ. ಶಿಕ್ಷಣಕ್ಕಾಗಿ ವಿತರಿಸಲಾಗುವ ಆರ್ಥಿಕ ನೆರವನ್ನು ಪ್ರಾಥಮಿಕ ಶಾಲೆಯಿಂದ ಪದವಿ ತರಗತಿಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಪತ್ರಕರ್ತರ ಮಕ್ಕಳು ಪಡೆಯಲು ಅರ್ಹರಾಗಿರುತ್ತಾರೆ. ನೆರವು ಪಡೆಯಲು ಇಚ್ಛಿಸುವವರು ಅಂಕಪಟ್ಟಿ, ಶಾಲೆಗೆ ಪಾವತಿಸಿದ ಶುಲ್ಕದ ನಕಲು ಪ್ರತಿಯೊಂದಿಗೆ ಅರ್ಜಿಯನ್ನು 16.05.2026 ರ ಶನಿವಾರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದು. ಅರ್ಜಿಗಳನ್ನು ‘ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ), ಪತ್ರಿಕಾ ಭವನ, ಕೈಗಾರಿಕಾ ಬಡಾವಣೆ.ಮಡಿಕೇರಿ-571201’ ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಈ ಶೈಕ್ಷಣಿಕ ನೆರವನ್ನು ಪಡೆಯಲು ಇಚ್ಛಿಸುವ ಕೊಡಗು ಜಿಲ್ಲೆಯ ಪತ್ರಕರ್ತರು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸುವಂತೆ ಎಸ್.ಜಿ.ಉಮೇಶ್, ಪ್ರಧಾನ ಕಾರ್ಯದರ್ಶಿ. ಕೊಡಗು ಪತ್ರಿಕಾ ಭವನ ಟ್ರಸ್ಟ್, ಮಡಿಕೇರಿ ಇವರು ಕೋರಿದ್ದಾರೆ.
ಮಡಿಕೇರಿ ಏ.27 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.28ರ ಪುರುಷರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು. *ಮೈದಾನ 1* ಪುರುಷರ ಕ್ವಾರ್ಟರ್ ಫೈನಲ್ಸ್ (ಲಾಲು ಮುದ್ದಯ್ಯ ಮೈದಾನ) ಬೆಳಿಗ್ಗೆ 9 ಗಂಟೆಗೆ ಚೆಕ್ಕೇರ ಮತ್ತು ಮಲ್ಲಜ್ಜಿರ, 10.30ಕ್ಕೆ ಮೋಟನಾಳಿರ ಮತ್ತು ಪಂದ್ಯಂಡ, ಮಧ್ಯಾಹ್ನ 12 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಅಳಮೇಂಗಡ ಹಾಗೂ 1.30 ಕ್ಕೆ ನೆರವಂಡ ಮತ್ತು ಪಾರುವಂಡ






