ಲೇಖಕ: admin

ಮಡಿಕೇರಿ ಜೂ.28 : ಪ್ರಕೃತಿಯ ಬಗ್ಗೆ ಮಕ್ಕಳಿಗೆ ಕಾಳಜಿ ಮತ್ತು ಪ್ರೀತಿ ಹೆಚ್ಚಾಗಬೇಕಾದರೆ ವರ್ಷಕ್ಕೊಮ್ಮೆಯಾದರೂ ಶಿಕ್ಷಣ ಸಂಸ್ಥೆಗಳಿಂದ ಹಾಗೂ ಅರಣ್ಯ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಕಾಡು ಪರಿಚಯಿಸುವ ಕೆಲಸವಾಗಬೇಕು ಎಂದು ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆ ತಾಲ್ಲೋಕು ಪತ್ರಕರ್ತರ ಸಂಘದ ವತಿಯಿಂದ ನಗರದ ಕಾವೇರಿ ಕಾಲೇಜಿನಲ್ಲಿ ಏರ್ಡಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿ ಒಂದು ಅದ್ಭುತವಾದ ಶಕ್ತಿ. ಇಂದಿನ ಯುವಜನತೆ ಪ್ರಕೃತಿಯ ಮಹತ್ವವನ್ನು ಚೆನ್ನಾಗಿ ಅರಿಯಬೇಕು. 1950 ರ ಸುಮಾರಿಗೆ ಮುನ್ಷಿಯವರು ವನಮಹೋತ್ಸವ ಕಾರ್ಯಕ್ರಮವನ್ನು ಆರಂಭ ಮಾಡಿದರು. ಮಳೆಗಾಲದ ಆರಂಭದಲ್ಲಿ ಗಿಡಗಳನ್ನು ನೆಡುವುದರಿಂದ ಚೆನ್ನಾಗಿ ಬೆಳೆದು ಪ್ರಕೃತಿಯ ಶಕ್ತಿಯನ್ನು ಹೆಚ್ಚಿಸುತ್ತವೆ. ಕಾಡು ಇಂದು ಅಲ್ಪಪ್ರಮಾಣದಲ್ಲಿ ನಮ್ಮ ನಡುವೆ ಇದೆ. ಮಕ್ಕಳಿಗೆ ಕಾಡಿನ ಬಗ್ಗೆ ಆಸಕ್ತಿ ಮೂಡಿಸುವುದರಿಂದ ಭವಿಷ್ಯದಲ್ಲಿ ನಾವು ಪ್ರಕೃತಿಯ ರಕ್ಷಣೆಯ ಹೊಣೆಗಾರಿಕೆಯನ್ನು ಅವರಿಗೆ ಕಲಿಸಬಹುದು ಎಂದು ಅಭಿಪ್ರಾಯಪಟ್ಟರು. ಸಾಮಾಜಿಕ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಮಧುಕುಮಾರ್ ಮಾತನಾಡಿ, ವನಮಹೋತ್ಸವವನ್ನು ಹಮ್ಮಿಕೊಳ್ಳುವುದರ…

Read More

ವಾಷಿಂಗ್ಟನ್ : ‘ಕಾಂತಾರ’ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದರು. ರಿಷಬ್ ಶೆಟ್ಟಿ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಜೊತೆಗೂಡಿ ವಾಷಿಂಗ್ಟನ್‌ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ ತೆರಳಿ ಪ್ರಶಸ್ತಿ ಸ್ವೀಕರಿಸಿದರು. ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಹನಿಯೊಳಗೊಂದು ಸಾಗರವೇ ಇರುವಂತೆ, ಕನ್ನಡವನ್ನು ಹೃದಯದಲ್ಲಿಟ್ಟುಕೊಂಡು ದೂರದ ಅಮೇರಿಕಾದಲ್ಲಿ ನೆಲೆಸಿರುವ ಸಹಸ್ರಾರು ಹೆಮ್ಮೆಯ ಕನ್ನಡಿಗರ ಸಮ್ಮುಖದಲ್ಲಿ – ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿದ್ದಾರೆ. ಈ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಆಭಾರಿ ಎಂದು ಟ್ವಿಟರ್ ಮೂಲಕ ರಿಷಬ್ ಶೆಟ್ಟಿ ಧನ್ಯವಾದ ಸಲ್ಲಿಸಿದ್ದಾರೆ.

Read More

ನಾಪೋಕ್ಲು ಜೂ.29 : ಕಲ್ಪನೆಗಳಿಗೆ ಸೃಜನಶೀಲತೆಯ ಅಕ್ಷರ ಸೇರಿಸಿದಾಗ ಕಾವ್ಯವಾಗುತ್ತದೆ. ಕಾವ್ಯ ಮನೋವಿಕಾಸಕ್ಕೆ ಕಾರಣವಾಗುತ್ತದೆ ಎಂದು ಮಡಿಕೇರಿ ಮೆಡಿಕಲ್ ಕಾಲೇಜು ನಿವೃತ್ತ ಆಡಳಿತ ಅಧಿಕಾರಿ ಬಿದ್ದಾಟಂಡ ಮೇರಿ ನಾಣಯ್ಯ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಸಹಯೋಗದಲ್ಲಿ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ನಡೆದ “ಮಳೆಗಾಲದ ಕವಿಗೋಷ್ಠಿ” ಸಮಾರಂಭವನ್ನು ಜ್ಯೋತಿ ಬೆಳಗಿಸಿ ಕವನ ವಾಚಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಶ್ರೇಯಸ್ಸನ್ನು ಕಾಣುವಂತಾಗಬೇಕೆಂದು ಹೇಳಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುದಿಯ ನೆರವನ ರೇವತಿ ರಮೇಶ್ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಜಿಲ್ಲೆಯಲ್ಲಿ ಮಹಿಳಾ ಬರಹಗಾರರು ವಿರಳವಾಗಿದ್ದು, ಮಹಿಳೆಯರನ್ನು ಸಾಹಿತ್ಯ ಕ್ಷೇತ್ರದಲ್ಲಿ ಪ್ರೋತ್ಸಾಹಿಸಿ ಗುರುತಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘವನ್ನು ಕಟ್ಟಲಾಯಿತು ಪ್ರತಿ ತಿಂಗಳು ಸಂಘದ ವತಿಯಿಂದ ಸಾಹಿತ್ಯ ಬರವಣಿಗೆ ಇಂತಹ ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲೆಡೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.…

Read More

ಮಡಿಕೇರಿ ಜೂ.28 : ಮಣಿಪುರದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಕ್ರೈಸ್ತ ಸಮುದಾಯದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಸಂತ ಮೈಕಲರ ದೇವಾಲಯದಲ್ಲಿ ಜಮಾಯಿಸಿದ ಕ್ರೈಸ್ತ ಬಾಂಧವರು, ಚರ್ಚ್‍ನಲ್ಲಿ ಹಿಂಸಾಚಾರ ಕೊನೆಯಾಗಲು ಕೈಗೆ ಕಪ್ಪು ಪಟ್ಟಿ ಧರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಾಲಯದಿಂದ ಇಂದಿರಾಗಾಂಧಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿದರು. ಮೆರವಣಿಗೆಯುದ್ದಕ್ಕೂ ಮಣಿಪುರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅಲ್ಲಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆಗೆ ಆಗ್ರಹಿಸಿದರು. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಹಿಂಸಾಚಾರ ಅಂತ್ಯಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಮೆರವಣಿಗೆಯಲ್ಲಿ ಶವಪೆಟ್ಟಿಗೆಯನ್ನು ಹೊತ್ತೊಯ್ಯುವ ಮೂಲಕ ದೌರ್ಜನ್ಯವನ್ನು ಖಂಡಿಸಲಾಯಿತು. ಈ ಸಂದರ್ಭ ಮಾತನಾಡಿದ ಕ್ರೈಸ್ತ ಮುಖಂಡ ಸುನಿಲ್ ಪತ್ರಾವೊ, ಮಣಿಪುರದಲ್ಲಿ ನಿರಂತರವಾಗಿ ಕ್ರೈಸ್ತರು, ಅವರ ಪ್ರಾರ್ಥನಾ ಮಂದಿರ, ಆಸ್ತಿಪಾಸ್ತಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ. ಅಲ್ಲಿನ ಚುನಾಯಿತ ಸರ್ಕಾರ ರಾಜ್ಯಧರ್ಮ ಪಾಲಿಸಲು ನಿಷ್ಕ್ರಿಯವಾಗಿದೆ. ಒಂದು ಕಣ್ಣಿಗೆ ಸುಣ್ಣ…

Read More

ಮಡಿಕೇರಿ ಜೂ.28 : ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಅರಕಲಗೋಡು ತಾಲ್ಲೂಕು ದಡ್ಡದಳ್ಳಿ ಗ್ರಾಮದ ನಿವಾಸಿ ಮಂಜು ಮಂಜುನಾಥ್ (25) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಶನಿವಾರಸಂತೆ ಹಾಗೂ ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗಿರುವ ಬಗ್ಗೆ ದೂರು ಬಂದಿದ್ದ ಹಿನ್ನೆಲೆ ಪೊಲೀಸರು ಆರೋಪಿಯ ಪತ್ತೆಗಾಗಿ ತನಿಖೆ ಕೈಗೊಂಡಿದ್ದರು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ಪಿ.ಗಂಗಾಧರಪ್ಪ ಹಾಗೂ ಶನಿವಾರಸಂತೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಪರಶಿವಮೂರ್ತಿ.ಎಸ್ ಅವರು ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ ನೀಡಿ ::: ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಜಿಲ್ಲಾ ಪೊಲೀಸ್ ಅಥವಾ ಸಮೀಪದ ಪೊಲೀಸ್…

Read More

ಸುಂಟಿಕೊಪ್ಪ ಜೂ.28 : ಪ್ರವಾಸಿಗರ ಟೆಂಪೋ ಟ್ರಾವಲರ್ ಹಾಗೂ ಕೂಲಿ ಕಾರ್ಮಿಕರನ್ನು ಕರೆತರುತ್ತಿದ್ದ ಜೀಪ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ ಗದ್ದೆಹಳ್ಳ ತಿರುವಿನಲ್ಲಿ ನಡೆದಿದೆ. ಮಡಿಕೇರಿಯ ಅಬ್ಬಿಪಾಲ್ಸ್ ಸಮೀಪದ ತೋಟದಿಂದ ಕಾರ್ಮಿಕರನ್ನು ಸುಂಟಿಕೊಪ್ಪದ ಕಡೆಗೆ ಕರೆದುಕೊಂಡು ಬರುತ್ತಿದ್ದ ಜೀಪ್ ಹಾಗೂ ಮೈಸೂರಿನಿಂದ ಭಾಗಮಂಡಲ, ತಲಕಾವೇರಿಗೆ ಪ್ರವಾಸಿಗರು ಬರುತ್ತಿದ್ದ ಟೆಂಪೋ ಟ್ರಾವಲರ್ ನಡುವೆ ಡಿಕ್ಕಿ ಸಂಭವಿಸಿತು. ಘಟನೆಯಲ್ಲಿ ಜೀಪ್ ನಲ್ಲಿದ್ದ ಸುಂಟಿಕೊಪ್ಪದ ಕಾರ್ಮಿಕರಾದ ಮಂಜುನಾಥ, ರಾಮ, ಜೀಪ್ ಚಾಲಕ ಎನ್.ಮಂಜೇಶ, ಅಸ್ಸಾಂ ಮೂಲದ ಕಾರ್ಮಿಕರಾದ ನಿಸಾಬುಲ್, ಅಬುಸಮ, ಇಜಾರಿ, ಅಕ್ಲೀಮ್, ಅನಾರ್ ಹುಸೈನ್ ಹಾಗೂ ನೂರ್ ಜಾನ್ ಅವರುಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಟೆಂಪೋ ಟ್ರಾವಲರ್ ವಾಹನದಲ್ಲಿದ್ದ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಎಎಸ್‌ಐ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ…

Read More

ಮಡಿಕೇರಿ ಜೂ.28 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 21.33 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.93 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 289.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 648.24 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.97 ಮಿ.ಮೀ. ಕಳೆದ ವರ್ಷ ಇದೇ ದಿನ 25.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 438.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 879.48 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 216.74 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ಕಳೆದ ವರ್ಷ 581.41 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…

Read More

ಮಡಿಕೇರಿ ಜೂ.28 :  ನಮ್ಮ ಕೊಡಗು ಚಾರಿಟೇಬಲ್ ಟ್ರಸ್ಟ್  ವತಿಯಿಂದ ಕೊಡಮಾಡುವ 2023ನೇ ಸಾಲಿನ ಕೊಡಗು ಸೇವಾ ರತ್ನ ಪ್ರಶಸ್ತಿಗೆ ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ ಅಧ್ಯಕ್ಷ ವಿನು ಮತ್ತು ಬನವಾಸಿ ಕನ್ನಡಿಗ ಬಳಗದ ಜೈ ಕಿರಣ್, ಕಿರಣ್ಮಯಿ ಶರ್ಮ ಮತ್ತು ಶಮಂತ್ ಹೊಸಹೊಳಲು ಆಯ್ಕೆಯಾಗಿದ್ದಾರೆ. ಮಡಿಕೇರಿಯ ನಗರದ ರಾಜ್‍ದರ್ಶನ್ ಹೊಟೇಲ್ ಸಭಾಂಗಣದಲ್ಲಿ ನಡೆದ ನಮ್ಮ ಕೊಡಗು ಟ್ರಸ್ಟ್ ನ 5ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ಕೊಡಗು ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ  ನೌಶಾದ್ ಜನ್ನತ್ತ್ ಮಾತನಾಡಿ, ಕೊಡಗಿನಲ್ಲಿ ನಡೆದ  ಪ್ರಾಕೃತಿಕ ವಿಕೋಪದ ನಂತರ ಸಂತ್ರಸ್ತರು, ಆದಿವಾಸಿಗಳು, ಸರಕಾರಿ ಶಾಲೆ, ರಕ್ತ ಪೂರೈಕೆ ಮುಂತಾದ ಸಮಾಜ ಸೇವೆಯನ್ನು ಮಾಡುತ್ತಿರುವವರನ್ನು ಗುರುತಿಸಿ ಕೊಡಗು ಸೇವಾ ರತ್ನ ಪ್ರಶಸ್ತಿ ನೀಡುತ್ತಾ ಬಂದಿದ್ದು, ಈ ಬಾರಿ ನಾಲ್ವರಿಗೆ ನೀಡಲಾಗಿದೆ ಎಂದು ತಿಳಿಸಿದರು.

Read More

ಮಡಿಕೇರಿ ಜೂ.27 : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ದ ಕೊನೆಯ ಸೆಮಿಸ್ಟರ್‍ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) 3 ವರ್ಷ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) 2 ವರ್ಷ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ(ವಿಜ್ಞಾನ), ಐಟಿಐ (ಫಿಟ್ಟರ್, ಟರ್ನರ್, ಮೆಕಾನಿಸ್ಟ್) ಮತ್ತು ಬಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ಹಾಜರಾದವರು…

Read More

ಮಡಿಕೇರಿ ಜೂ.28 : ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮವು ಶ್ರೀ ಶಕ್ತಿ ಅಸೋಷಿಯೇಷನ್, ಶಕ್ತಿದಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ, ಜ್ಞಾನ ಕಾವೇರಿ, ಚಿಕ್ಕಅಳುವಾರ, ಕೊಡಗು ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಯುವಕರು ವ್ಯಸನಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಆದ್ದರಿಂದ ಮಕ್ಕಳಲ್ಲಿ ಯುವಕ ಯುವತಿಯರಲ್ಲಿ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕಾಗಿದೆ. ಹಾಗೂ ಸಮಾಜದಲ್ಲಿ ತುಂಬಾ ವ್ಯಸನಕ್ಕೆ ಒಳಗಾದವರನ್ನು ಶಕ್ತಿಧಾಮ ಕೇಂದ್ರಕ್ಕೆ ದಾಖಲಿಸಿ ವ್ಯಸನಮುಕ್ತ ಚಿಕಿತ್ಸೆ ಪಡೆದುಕೊಳ್ಳಲು ಸಲಹೆ ನೀಡಿದರು. ಕೂಡ್ಲೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪಿ.ಮೋಹನ್‍ರಾಜು ಅವರು ಮಾತನಾಡಿ ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳು ಬೀರುತ್ತದೆ. ಯುವಕ ಯುವತಿಯರು ಆಕರ್ಷಣೆ ಫ್ಯಾಸನ್, ಮೋಜು ಮಸ್ತಿಗಾಗಿ ಈ ವಸ್ತುಗಳ ಸೇವನೆಗೆ ಹೆಚ್ಚಾಗಿ ಬಲಿಯಾಗಿ ತಮ್ಮ ಜೀವನವನ್ನು ಹಾಳು…

Read More