ಮಡಿಕೇರಿ ಜೂ.27 : ಬೆಂಗಳೂರು ಕಟ್ಟಿದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದಲ್ಲಿ ನಗರದ ಕೊಡಗು ಗೌಡ ಸಮಾಜದಲ್ಲಿ ಮಂಗಳವಾರ ನಡೆದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು. ನಾಡಪ್ರಭು ಕೆಂಪೇಗೌಡರು ಕೆರೆ-ಕಟ್ಟೆಗಳು, ದೇವಸ್ಥಾನಗಳು, ಸ್ಮಾರಕಗಳನ್ನು ನಿರ್ಮಾಣ ಮಾಡಿ ಬೆಂಗಳೂರನ್ನು ಇಡೀ ವಿಶ್ವದಲ್ಲೇ ಮಾದರಿ ನಗರವಾಗಿ ನಿರ್ಮಿಸಿದರು ಎಂದು ನುಡಿದರು. ಕೆಂಪೇಗೌಡರ ಆಡಳಿತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಎಲ್ಲರಿಗೂ ಮಾದರಿಯಾದ ಆಡಳಿತವನ್ನು ನೀಡಿದ್ದಾರೆ. ಕೆಂಪೇಗೌಡರ ಆಡಳಿತ ಮತ್ತು ದೂರದೃಷ್ಟಿಯ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ನುಡಿದರು. `ಬಜೆಟ್ ಅಧಿವೇಶನ ನಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ…
ಲೇಖಕ: admin
ಮಡಿಕೇರಿ ಜೂ.27 : ನಾಡಿನ ಜೀವನದಿ, ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿ ನೀಡಿ ಮಳೆಗಾಗಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಕಾವೇರಿಗೆ ಸಂಕಲ್ಪ ಕುಂಕುಮಾರ್ಚನೆ ಮೂಲಕ ವಿಶೇಷ ಪೂಜೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ನೆರವೇರಿಸಿದರು. ನಾಡಿನಲ್ಲಿ ಉತ್ತಮ ಮಳೆಯಾಗಿ ಸುಭೀಕ್ಷೆ ತರುವಂತಾಗಬೇಕು. ಹೆಚ್ಚಿನ ಮಳೆಯಿಂದ ಕೃಷಿ ಚಟುವಟಿಕೆ ಗರಿಗೆದರಬೇಕು. ಉತ್ತಮ ಮಳೆಯಾಗಿ ಆಹಾರ ಬೆಲೆಗಳು ಇಳಿಕೆ ಆಗಬೇಕು ಎಂದು ಸಚಿವರು ವಿಶೇಷ ಪ್ರಾಥನೆ ಸಲ್ಲಿಸಿದರು. ಇದೇ ಮೊದಲ ಬಾರಿಗೆ ತಲಕಾವೇರಿಗೆ ಭೇಟಿ ನೀಡಿದ್ದು, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರಾಜ್ಯ ಸಮೃದ್ಧವಾಗಲಿ ಎಂದು ತಾಯಿ ಕಾವೇರಿ ಮಾತೆಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು. ಶಾಸಕ ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಡಾ.ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಇತರರು…
ಮಡಿಕೇರಿ ಜೂ.27 : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹಾಗೂ ಹುಲಿ ದಾಳಿಯಿಂದ ಜಿಲ್ಲೆಯ ಜನತೆ ಸಂಕಷ್ಟ ಅನುಭವಿಸುತ್ತಿದ್ದು, ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ವನ್ಯ ಪ್ರಾಣಿಗಳ ಹಾವಳಿ ತಡೆಯುವಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದರು. ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಸಲಾಗುವುದು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾಡಾನೆ ಹಾವಳಿ…
ಮಡಿಕೇರಿ ಜೂ.27 : ಕೊಳೆತ ಸ್ಥಿತಿಯಲ್ಲಿ ಕಾಡಾನೆಯೊಂದರ ಮೃತದೇಹ ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಬೆಟ್ಟದಕಾಡು ಗ್ರಾಮದ ಕಾಫಿ ತೋಟವೊಂದರಲ್ಲಿ ಕಂಡು ಬಂದಿದೆ. ಬೆಟ್ಟದಕಾಡು ಸಮೀಪದ ಸಂಪಿಗೆಕೊಲ್ಲಿ ಎಂಬಲ್ಲಿ ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆಯಾಗಿದೆ. ಸುಮಾರು ಇಪ್ಪತ್ತು ದಿನಗಳ ಹಿಂದೆಯೇ ಕಾಡಾನೆ ಮೃತಪಟ್ಟಿದೆ ಎಂದು ಅಂದಾಜಿಸಲಾಗಿದೆ. ತೋಟಕ್ಕೆ ತೆರಳಿದ್ದ ಕಾರ್ಮಿಕರು ಕಾಡಾನೆಯ ಕಳೇಬರ ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಅರಣ್ಯ ಅಧಿಕಾರಿಗಳು ಮತ್ತು ವನ್ಯಜೀವಿ ವೈದ್ಯಾಧಿಕಾರಿ ಡಾ. ಚೆಟ್ಟಿಯಪ್ಪ ಕಳೇಬರದ ಮಹಜರು ಮಾಡಿ ಮರಣೋತ್ತರ ಪರೀಕ್ಷೆ ನಡೆಸಿದರು. ಈ ಸಂದರ್ಭ ಮೃತ ಹೆಣ್ಣಾನೆ 15 ವರ್ಷ ಪ್ರಾಯದ್ದಾಗಿರಬಹುದು ಎಂದು ಅಂದಾಜಿಸಿದ್ದಾರೆ. ಕಾಡಾನೆಗಳ ನಡುವಿನ ಕಾದಾಟದಲ್ಲಿ ಗಾಯಗೊಂಡ ಆನೆ ಸಾವನ್ನಪ್ಪಿರ ಬಹುದೆಂದು ಊಹಿಸಲಾಗಿದೆ. ಸ್ಥಳದಲ್ಲೇ ಜೆಸಿಬಿ ಯಂತ್ರ ಬಳಸಿ ಗುಂಡಿ ತೋಡಿ ಆನೆಯ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಘಟನಾ ಸ್ಥಳದಲ್ಲಿ ಕುಶಾಲನಗರ ಎಸಿಎಫ್ ಗೋಪಾಲ್, ವಲಯ ಅರಣ್ಯಾಧಿಕಾರಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿ ಸುಬ್ರಾಯ, ರವಿ ಯತ್ನಾಳ್, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ…
ಮಡಿಕೇರಿ ಜೂ.27 : ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಕಾಣಿಸಿಕೊಂಡ ಅರಕಲಗೂಡು ಶಾಸಕ, ಕರ್ನಾಟಕ ರಾಜ್ಯ ಕೃಷಿ ಸಹಕಾರ ಮಂಡಲದ ನಿರ್ದೇಶಕ ಎ.ಮಂಜು, ವೇದಿಕೆಯ ಮೇಲೆ ಹೋಗಿ ಮಡಿಕೇರಿ ಶಾಸಕ, ಪುತ್ರ ಡಾ.ಮಂತರ್ ಗೌಡ ಅವರ ಬೆನ್ನು ತಟ್ಟಿ ವಿಶ್ ಮಾಡಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಜೂ.27 : ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜ್ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಅರಕಲಗೋಡು ಜೆಡಿಎಸ್ ಶಾಸಕ ಎ.ಮಂಜು ಅವರು ಪಾಲ್ಗೊಳ್ಳುವ ಮೂಲಕ ಚರ್ಚೆಗೆ ಗ್ರಾಸವಾದರು. ಪುತ್ರ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಕಾರ್ಯವೈಖರಿಯನ್ನು ವೀಕ್ಷಿಸುವ ಕುತೂಹಲದಿಂದ ಮಂಜು ಉಪಸ್ಥಿತರಿದ್ದರೇ ಎನ್ನುವ ಸಂಶಯವನ್ನು ಹುಟ್ಟು ಹಾಕಿದರು. ಕರ್ನಾಟಕ ರಾಜ್ಯ ಕೃಷಿ ಸಹಕಾರ ಮಂಡಲದ (ಎಸ್‍ಎಲ್‍ಡಿಪಿ) ನಿರ್ದೇಶಕನಾಗಿ ನನಗೆ ಕೊಡಗು, ಹಾಸನ ಉಸ್ತುವಾರಿ ಇದೆ, ನನಗೆ ಸಭೆಗೆ ಆಹ್ವಾನ ಇದೆ. ಹಾಗಾಗಿ ನಾನೂ ಕೂಡ ಕೆಡಿಪಿ ಸಭೆಗೆ ಬಂದಿದ್ದೇನೆ. ಜೊತೆಗೆ ಮಗ ನಡೆಸುವ ಸಭೆ ನೋಡಿ ಖುಷಿ ಆಗಿದೆ, ಅದಕ್ಕೆ ಅಧಿಕಾರಿಗಳ ಸಾಲಲ್ಲಿ ಕುಳಿತು ಸಭೆಯಲ್ಲಿ ಭಾಗಿಯಾದೆ. ಜೊತೆಗೆ ಮಗ ನಡೆಸುವ ಸಭೆ ನೋಡಿ ಖುಷಿ ಆಗಿದೆ, ಅದಕ್ಕೆ ಅಧಿಕಾರಿಗಳ ಸಾಲಲ್ಲಿ ಕುಳಿತು ಸಭೆಯಲ್ಲಿ ಭಾಗಿಯಾದೆ ಎಂದು ಕೆಡಿಪಿ ಸಭೆಯಲ್ಲಿ ಭಾಗಿಯಾದ ನಂತರ ಸುದ್ದಿಗಾರರ ಬಳಿ ಸ್ಪಷ್ಟನೆ ನೀಡಿದರು. ::: ಕಾಂಗ್ರೆಸ್…
ಮಡಿಕೇರಿ ಜೂ.27 : ದಕ್ಷಿಣ ಕನ್ನಡದ ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಹಿಂದೂ ಪರ ಸಂಘಟನೆಯ ಪ್ರಮುಖ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಎನ್ ಐಎ ಅಧಿಕಾರಿಗಳು ಇಂದು ತನಿಖೆ ನಡೆಸಿದರು ಎಂದು ತಿಳಿದು ಬಂದಿದೆ. ಸೋಮವಾರಪೇಟೆಯ ಕನ್ವೆಂಟ್ ಬಾಣೆ ಹಾಗೂ ಕಲ್ಕಂದೂರು ಭಾಗದಲ್ಲಿ ಇಬ್ಬರು ವ್ಯಕ್ತಿಗಳ ಮನೆಗೆ ಇಂದು ಬೆಳಿಗ್ಗೆ ದಾಳಿ ಮಾಡಿದ ಅಧಿಕಾರಿಗಳು ಕೆಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ಹೇಳಲಾಗಿದೆ. ಈ ವ್ಯಕ್ತಿಗಳಿಬ್ಬರು ದುಬೈಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಮಧ್ಯ ಪ್ರದೇಶ/ಧಾರವಾಡ: ಬೆಂಗಳೂರು-ಧಾರವಾಡ ಸೇರಿದಂತೆ ಐದು ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಮಧ್ಯ ಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ನಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನಾ ಸಮಾರಂಭದಲ್ಲಿ ರಾಣಿ ಕಮಲಾಪತಿ-ಜಬಾಲ್ಪುರ, ಖಜುರಾಹೊ- ಭೂಪಾಲ್- ಇಂದೋರ್, ಗೋವಾದ ಮಂಡಗಾವ್- ಮುಂಬೈ, ಧಾರವಾಡ- ಬೆಂಗಳೂರು, ಹಟಿಯಾ- ಪಾಟ್ನಾ ನಡುವೆ ಸಂಚರಿಸಲು ರೈಲುಗಳಿಗೆ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು. ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮೇಯರ್ ವೀಣಾ ಭರದ್ವಾಡ ಮತ್ತಿತರರು ಭಾಗವಹಿಸಿದರು.
ಹಾಸನ ಜೂ.27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಡಿನ ಜನತೆಗೆ ಶುಭ ಕೋರಿದರು. ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎನ್. ರಾಜಣ್ಣ, ಶಿವರಾಜ್ ತಂಗಡಗಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಶಾಸಕಕೆ.ಎಂ.ಶಿವಲಿಂಗೇಗೌಡ, ಸಿ.ಎನ್ ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಹೆಚ್.ಕೆ.ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳ ಮತ್ತಿತರರು ಹಾಜರಿದ್ದರು.
ಮಡಿಕೇರಿ ಜೂ.27 : ವೈಭವದಿಂದ ಆಕಾಶವನ್ನು ಸ್ಪರ್ಶಿಸು (Touch the sky with Glory) ಎಂಬ ಭಗವದ್ಗೀತೆಯ 11ನೇ ಅಧ್ಯಾಯದ ಸೂಕ್ತಿಯಂತೆ ನಭಃ ಸ್ಪರ್ಶಃ ದೀಪ್ತಃ ಎಂಬ ಭಾರತೀಯ ವಾಯುಸೇನೆಯು ಧ್ಯೇಯ ವಾಕ್ಯವು ಯುವ ತಲೆಮಾರಿಗೆ ಪ್ರೇರಣಾದಾಯಕವಾಗಿದೆ. ಆ ಮೂಲಕ ಯುವ ತಲೆಮಾರು ಜೀವನಸ್ಪೂರ್ತಿಯ ರೆಕ್ಕೆ ಕಟ್ಟಿಕೊಂಡು ಆಕಾಶದೆತ್ತರಕ್ಕೆ ಹಾರುವ ಕನಸುಗಳನ್ನು ಕಾಣಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಅಭಿಪ್ರಾಯಪಟ್ಟರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾರತೀಯ ವಾಯು ಸೇನೆಯಲ್ಲಿನ ವೃತ್ತಿ ಮಾರ್ಗದರ್ಶನವನ್ನು ಕುರಿತಾದ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಗುರಿ ದೇಶಸೇವೆಯ ಕಡೆಗಿರಲಿ, ಭೂಸೇನೆಯಲ್ಲಿ ಕೊಡಗಿನ ವೀರರು ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದೇ ರೀತಿಯಲ್ಲಿ ವಾಯುಸೇನೆಯಲ್ಲಿಯೂ ಯುವ ತಲೆಮಾರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಮಾತ್ರವಲ್ಲ ಭಾರತೀಯ ವಾಯುಸೇನಯ ಅಧಿಕಾರಿ ವಿಂಗ್ ಕಮಾಂಡರ್ ಸಿ.ಎ.ಭಾನುಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆದಿದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಪ್ಲೈಟ್ ಲೆಪ್ಟಿನೆಂಟಲ್ ಗೌರವ್…






