ಮಡಿಕೇರಿ ಜೂ.27 : ಮಡಿಕೇರಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ ಅವರು ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ನಗರದಲ್ಲಿ ಶಾಸಕರನ್ನು ಭೇಟಿಯಾದ ಅವರು ಮಡಿಕೇರಿ ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು. ಶಾಶ್ವತ ಕುಡಿಯುವ ನೀರಿನ ಯೋಜನೆ ಎಂದು ಪ್ರತಿಬಿಂಬಿಸಿ ರೂಪಿಸಲಾದ ಕುಂಡಾಮೇಸ್ತ್ರಿ ಯೋಜನೆಯಿಂದ ಕೋಟ್ಯಾಂತರ ರೂ. ನಷ್ಟವಾಗಿದೆ, ಬೇಸಿಗೆ ಕಾಲದಲ್ಲಿ ನೀರಿನ ಕೊರತೆ ಎದುರಾಗಿದೆ. ಆದ್ದರಿಂದ ಈ ಯೋಜನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ನಗರದಲ್ಲಿ ನಿರ್ಮಿಸಲಾಗಿರುವ ಹೈ-ಟೆಕ್ ಖಾಸಗಿ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿ ಪಡಿಸಬೇಕು. ನಗರದಲ್ಲಿರುವ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದ್ದು, ಮಾಂಸ ಮತ್ತು ಮೀನು ಮಾರುಕಟ್ಟೆಯಲ್ಲಿ ನೀರು ಸೇರಿದಂತೆ ಮೂಲಭೂತ ಸೌಲಭ್ಯವಿಲ್ಲದೆ ವ್ಯಾಪಾರಿಗಳು…
ಲೇಖಕ: admin
ಸುಂಟಿಕೊಪ್ಪ,ಜೂ.27: ಕರ್ನಾಟಕ ರಾಜ್ಯ ಸಹಶಿಕ್ಷಕರ ಸಂಘದ ವತಿಯಿಂದ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರನ್ನು ಸನ್ಮಾನಿಸಲಾಯಿತು. ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಸಚಿವ ಎನ್.ಎಸ್. ಬೋಸರಾಜು ಅವರನ್ನು ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಹಾಗೂ ಪದಾಧಿಕಾರಿಗಳು ಮತ್ತಿತರರು ಇದ್ದರು.
ಮಡಿಕೇರಿ ಜೂ.27 : ಕುಶಾಲನಗರದ ಶಾರದಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶಾಂತ ಶ್ರೀಪತಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನಿಂದ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೊಡ್ಡಬಳ್ಳಾಪುರದಲ್ಲಿ ತೋಟಂದಾರ್ಯ ಮಠದ ನಿಜಗುಣ ಪ್ರಭು ಸ್ವಾಮೀಜಿ ಸಾನ್ವಿಧ್ಯದಲ್ಲಿ ನಡೆದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಪರಿಷತ್ತು ರಾಜ್ಯ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಮತ್ತಿತರರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.
ಮಡಿಕೇರಿ ಜೂ.27 : ನಗರದ ತ್ಯಾಗರಾಜನಗರದಲ್ಲಿರುವ ತಣಲ್ ವೃದ್ಧಾಶ್ರಮದ ನಡೆಯಲು ಅಶಕ್ತರಾದವರಿಗೆ ಆಸರೆ ಆಗುವಂತೆ ಮಾನವೀಯ ಸ್ನೇಹಿತರ ಒಕ್ಕೂಟದ ವತಿಯಿಂದ ಒಂದು ಗಾಲಿ ಕುರ್ಚಿಯನ್ನು ವಿತರಿಸಲಾಯಿತು. ಗಾಲಿ ಕುರ್ಚಿ ಹಸ್ತಾಂತರ ದ ಮೂಲಕ ಒಕ್ಕೂಟದ ಅಡ್ಮಿನ್ ಅನಿಲ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ತಣಲ್ ಸಂಸ್ಥೆಯ ವಕ್ತಾರ, ಸ್ನೇಹಿತರ ಒಕ್ಕೂಟದ ಪ್ರತಿನಿಧಿ, ಮಹಮ್ಮದ್ ಮುಸ್ತಫ ಮಾತನಾಡಿ, ಜೀವನದ ಇಳಿ ವಯಸ್ಸಿನಲ್ಲಿ ವಿವಿಧ ಕಾರಣಗಳಿಂದ ನೊಂದು ಬೆಂದ ಸುಮಾರು 40 ಹಿರಿಯ ಬಡ ಜೀವಿಗಳು ತಣಲ್ ಆಶ್ರಮದಲ್ಲಿ ಆಶ್ರಯ ಪಡೆಯುತ್ತಿದ್ದು, ಅವರುಗಳಿಗೆ ತಣಲ್ ಸಂಸ್ಥೆಯಲ್ಲಿ ನೀಡುತ್ತಿರುವ ಸೇವೆಯ ಕುರಿತು ವಿವರಿಸಿ, ಸ್ನೇಹಿತರ ಒಕ್ಕೂಟದ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಒಕ್ಕೂಟದ ಪ್ರತಿನಿಧಿ ಶಶಿಕುಮಾರ್ ಮಾತನಾಡಿ, ಸದ್ಯದಲ್ಲೇ ನಮ್ಮ ಒಕ್ಕೂಟದಿಂದ ತಣಲ್ ಸಂಸ್ಥೆಯ ಎಲ್ಲ ವಯೋವೃದ್ದರಿಗೆ ಸ್ವೆಟರ್ ಗಳ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು. ಒಕ್ಕೂಟದ ಸಮಾಜಮುಖಿ ಕಾರ್ಯಕ್ರಮಗಳಿಗೆ ಸದಸ್ಯರುಗಳು ಕೈಜೋಡಿಸುವಂತೆ ಕೋರಿದರು. ಸ್ನೇಹಿತರ ಒಕ್ಕೂಟದ ಮತ್ತೋರ್ವ ಪ್ರತಿನಿಧಿ, ಮಾಜಿ ಯೋಧ ಡೇವಿಡ್ ವೇಗಸ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸ್ನೇಹಿತರ…
ಮಡಿಕೇರಿ ಜೂ.27 : ಭಾಗಮಂಡಲ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯ 2021- 23 ನೇ ಸಾಲಿನ ತರಬೇತುದಾರರಿಗೆ ಬೀಳ್ಕೊಡುಗೆ ನೀಡಲಾಯಿತು. ತರಬೇತಿ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಮಂಡಲದ ಅಂಬೇಡ್ಕರ್ ವಸತಿ ಸ್ಕೂಲ್ ಪ್ರಾಂಶುಪಾಲೆ ನೀತು ಮಾತನಾಡಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭಹಾರೈಸಿದರು. ಪ್ರಾಚಾರ್ಯರಾದ ಕೆ.ವಿ.ಶ್ರೀಕಾಂತ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಯೊಂದು ವೃತ್ತಿ ವಿಭಾಗದ ಒಬ್ಬ ಅತ್ಯುತ್ತಮ ವಿದ್ಯಾರ್ಥಿಯನ್ನು ಗೌರವಿಸಲಾಯಿತು. ಕಿರಿಯ ತರಬೇತಿ ಅಧಿಕಾರಿ ಕೆ.ಜಿ.ಜಯಪ್ರಕಾಶ್ ವಾರ್ಷಿಕ ವರದಿ ಮಂಡಿಸಿದರು. ಕಿರಿಯ ತರಬೇತಿ ಅಧಿಕಾರಿ ಪುನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ತರಬೇತಿ ಸಂಸ್ಥೆ ಕಛೇರಿ ಅಧೀಕ್ಷಕ ಸಿ.ಕೆ.ವಿನೋದ್ ಸ್ವಾಗತಿಸಿದರು. ದ್ವಿತೀಯ ದರ್ಜೆ ಸಹಾಯಕ ಕೆ.ಟಿ. ಅರುಣ್ ವಂದಿಸಿದರು.
ಮಡಿಕೇರಿ ಜೂ.27 : ಪುಸ್ತಕಗಳು ಸಂವಹನ ಶೀಲತೆ, ಸಾಮಾಜಿಕ ಕಳಕಳಿ, ಕ್ರಿಯಾಶೀಲತೆ, ಸೃಜನಶೀಲತೆ ಮತ್ತು ಬುದ್ದಿಯ ಮಟ್ಟವನ್ನು ಹೆಚ್ಚಿಸುವ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಪುಸ್ತಕಗಳ ಮಹತ್ವದ ಕುರಿತು ಬಾಲ್ಯದಿಂದಲೇ ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಇದು ಮಕ್ಕಳಿಗೆ ಮಾತ್ರವಲ್ಲ ಸಮಾಜಕ್ಕೂ ಸಹಕಾರಿಯಾಗಲಿದೆ ಎಂದು ಮಕ್ಕಳ ತಜ್ಞ ವೈದ್ಯ ಡಾ.ಬಿ.ಸಿ.ನವೀನ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡಗು ಪ್ರೆಸ್ ಕ್ಲಬ್ ನಿರ್ದೇಶಕ ಕೆ.ಆರ್.ಪ್ರಸಿನ್ ಗೌಡ ರಚಿತ ಚೊಚ್ಚಲ ಕೃತಿ “ಮನ ಮಾತಾದಾಗ” ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡರೂ ಅಲ್ಲಿ ನಮ್ಮದೇ ಆದ ಹೆಜ್ಜೆಯನ್ನು ಮೂಡಿಸುವಂತಾಗಬೇಕು. ಇದಕ್ಕೆ ಪುಸ್ತಕಗಳು ಹೆಚ್ಚು ಸಹಕಾರಿಯಾಗಲಿದೆ. ಸಮಾಜಕ್ಕಾಗಿ ತ್ಯಾಗ ಮಾಡಿದವರನ್ನು ಸದಾ ನೆನಪಿಸುವುದು ಪುಸ್ತಕಗಳು. ಹೊರ ಜಗತ್ತಿಗೆ ಪುಸ್ತಕಗಳೇ ಕಿಟಕಿಗಳು, ಆದ್ದರಿಂದ ಪುಸ್ತಕ ಸಂಸ್ಕೃತಿಯನ್ನು ಬೆಳೆಸಬೇಕು, ಉಳಿಸಬೇಕು ಎಂದರು. ಪ್ರತಿ ವ್ಯಕ್ತಿಗೆ ಪುಸ್ತಕವೇ ಜೀವನದ ಅಂಗ, ಪುಸ್ತಕವೇ ಸ್ನೇಹಿತನಿದ್ದಂತೆ, ಪ್ರತಿ…
ನಾಪೋಕ್ಲು ಜೂ.27 : ನಾಪೋಕ್ಲು ಪೊಲೀಸ್ ಠಾಣೆ ವತಿಯಿಂದ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆ, ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಾದಕ ವ್ಯಸನಿ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ ಪ್ರಯುಕ್ತ ನಾಪೋಕ್ಲು ಪಟ್ಟಣದಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಮಾರುಕಟ್ಟೆ ಬಳಿಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಹಾಗೂ ಪೊಲೀಸರು ವಿವಿಧ ಘೋಷ ವಾಕ್ಯಗಳೊಂದಿಗೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ಸಂದರ್ಭ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ಸಮಾಜದಲ್ಲಿ ಮಾದಕ ವ್ಯಸನಿಗಳಿಗೆ, ಮಾದಕ ವಸ್ತು ಸಾಗಣೆ ಮಾಡುವವರ, ಬೆಳೆಯುವವರ ವಿರುದ್ಧ ಎಚ್ಚರಿಕೆ ಹಾಗೂ ಸೇವನೆ ಮಾಡುವವವರ ವಿರುದ್ಧ ಅರಿವು ಮೂಡಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ. ನಮ್ಮ ದೇಶದ ಆರೋಗ್ಯ ಇಲಾಖೆ ವರದಿಯ ಮಾಹಿತಿ ಪ್ರಕಾರ 2022 ರಲ್ಲಿ ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇ.40ರಷ್ಟು ಜನ ಮಾದಕ ವ್ಯಸನಿಗಳಾಗಿದ್ದಾರೆ. ಇದರಲ್ಲಿ ತಂಬಾಕು, ಮದ್ಯ, ಗಾಂಜಾ,…
ಶ್ರೀಮಂಗಲ ಜೂ.27 : ಜುಲೈ 4 ರಂದು ನಡೆಸಲು ನಿಗಧಿಯಾಗಿದ್ದ “ಕೊಡವ ತಕ್ಕ್ ಎಳ್ತ್’ಕಾರಡ ಕೂಟ”ದ “ಬೆಳ್ಳಿಹಬ್ಬವನ್ನು” ಕೆಲವು ತಾಂತ್ರಿಕ ಕಾರಣಗಳಿಂದ ಜು.23ಕ್ಕೆ ಮುಂದೂಡಲಾಗಿದೆ ಎಂದು ‘ಕೂಟ’ದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ತಿಳಿಸಿದರು. ಕೊಡವ ತಕ್ಕ್ ಎಳ್ತ್’ಕಾರಡ ಕೂಟ ಹಾಗೂ ಪೊನ್ನಂಪೇಟೆ ಕೊಡವ ಸಮಾಜದ ಜಂಟಿ ಆಶ್ರಯದಲ್ಲಿ ಸಮಾಜದ ಆವರಣದಲ್ಲಿ ಜು.23ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6.30ರವರೆಗೆ ನಡೆಯುವ ‘ಕೊಡವ ತಕ್ಕ್ ಎಳ್ತ್’ಕಾರಡ ಕೂಟ’ದ “ಬೆಳ್ಳಿ ಹಬ್ಬ”ದಂದು 4 ವಿವಿಧ ಹಂತಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಥೆ, ಕಾದಂಬರಿ, ಕವನ, ಚುಟುಕ, ನಾಟಕ, ವೈಚಾರಿಕ, ಮಕ್ಕಳ ಕಥೆ, ಮಕ್ಕಳ ನಾಟಕ, ಭಕ್ತಿ ಗೀತೆ, ಸಣ್ಣ ಕಥೆಗಳು, ಮಕ್ಕಳ ವಿವಿಧ ಲೇಖನಗಳು, ಪದ್ಧತಿ-ಜಾನಪದ, ಪೌರಾಣಿಕ, ಗಾದೆ, ಯೋಗಾಭ್ಯಾಸ ಸೇರಿದಂತೆ ವಿವಿಧ ಪ್ರಕಾರದ ಸಾಹಿತ್ಯಗಳುಳ್ಳ 25 ಪುಸ್ತಕಗಳನ್ನು ಪ್ರಥಮ ಬಾರಿಗೆ ಏಕ ವೇದಿಕೆಯಲ್ಲಿ ಏಕ ಕಾಲಕ್ಕೆ ಬಿಡುಗಡೆ ಮಾಡಲಾಗುವುದು. ಇದರೊಂದಿಗೆ ‘ಕೊಡವ ತಕ್ಕ್ ಎಳ್ತ್’ಕಾರಡ ಕೂಟ’ ನಡೆದು ಬಂದ ದಾರಿಯ ಸಮಗ್ರ ಚಿತ್ರಣಗಳುಳ್ಳ…
ಮಡಿಕೇರಿ ಜೂ.27 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 4.46 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.92 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 268.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 630.31 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.28 ಮಿ.ಮೀ. ಕಳೆದ ವರ್ಷ ಇದೇ ದಿನ 20.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 399.86 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 854.33 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.88 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.17 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 198.34 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ಕಳೆದ ವರ್ಷ 565.23 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.23 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…
ನಾಪೋಕ್ಲು ಜೂ.27 : ಸ್ಥಳೀಯ ಪೊಲೀಸ್ ಠಾಣಾ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಾಪೋಕ್ಲುವಿನಲ್ಲಿ ಶಾಲಾ ಕಾಲೇಜು ಸಹಯೋಗದೊಂದಿಗೆ ಜನಜಾಗೃತಿ ಜಾಥ ನಡೆಯಿತು. ಈ ಸಂದರ್ಭ ಸ್ಥಳೀಯ ಸರ್ಕಾರಿ ಪದವಿ ಕಾಲೇಜು ಹಾಗೂ ಕೆಪಿಎಸ್ ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳು, ಬೋಧಕರು ಮತ್ತು ಪೊಲೀಸರು ಪಟ್ಟಣದ ಮುಖ್ಯ ಬೀದಿಯಲ್ಲಿ ಜಾತ ನಡೆಸಿ ಘೋಷಣೆಗಳನ್ನು ಕೂಗುದರ ಮೂಲಕ ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಿದರು. ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಕಾವೇರಿ ಮಾತನಾಡಿ, ಯುವ ಪಿಳಿಗೆ ವಿವಿಧ ಮಾದಕ ವಸ್ತುಗಳ ಬಳಕೆ ಮಾಡುವುದರ ಮೂಲಕ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಕೆಲಸ ನಮ್ಮೆಲ್ಲರದಾಗಿದ್ದು, ಸಮಾಜದ ಸ್ವಸ್ಥ ಕಾಪಾಡಬೇಕಾಗಿದೆ ಎಂದರು. ಸ್ಥಳೀಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಮುಂದಾಳತ್ವದಲ್ಲಿ ಜರುಗಿದ ಜಾಥದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಕೆಪಿಎಸ್ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರು, ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಬೋಧಕ…






