ಲೇಖಕ: admin

ಸೋಮವಾರಪೇಟೆ ಆ.25 : ಹರಗ ಗ್ರಾಮದಲ್ಲಿ ಜೇನು ಕೃಷಿಯ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು. ಗ್ರಾಮದ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಪ್ರವೀಣ್, ಸರ್ಕಾರದ ಯೋಜನೆಗಳು ಮತ್ತು ಕೃಷಿ ಕೈಗೊಳ್ಳುವ ಕುರಿತು ಮಾಹಿತಿ ನೀಡಿದರು. ಕೊಡಗು ಜಿಲ್ಲೆಯಲ್ಲಿ ಔಷಧಯುಕ್ತ ಹಾಗೂ ಉತ್ತಮ ಗುಣಮಟ್ಟದ ಜೇನು ಉತ್ಪಾದನೆಯಾಗುತ್ತಿದ್ದು, 1990ರಿಂದ ಜೇನು ಹುಳುಗಳಿಗೆ ಥಾಯ್ ಸ್ಯಾಕ್ ಬ್ರೂಡ್ ವೈರಸ್ ನಿಂದಾಗಿ ಉತ್ಪಾದನೆ ಕುಂಠಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ರೈತರ ಉಪ ಕಸುಬು ಜೇನು ಕೃಷಿಯನ್ನು ಪುನಶ್ಚೇತನಗೊಳಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ರೈತರಿಗೆ ಸಹಾಯಧನದಲ್ಲಿ ಒಂದೊಂದು ಜೇನುಪೆಟ್ಟಿಗೆಯನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು. ರೈತರಿಗೆ ಉಪ ಕಸುಬಾದ ಜೇನು ಸಾಕಾಣೆ ಯಾವುದೇ ಕಾರ್ಮಿಕರ ನೆರವನ್ನು ಬಯಸದೇ ಲಾಭ ತಂದುಕೊಡುತ್ತದೆ. ಇದರಲ್ಲಿ ಮನೆಯವರು ಮಾತ್ರ ಕೆಲಸ ಮಾಡಿದರೆ, ನಾವು ಎಷ್ಟು ಪ್ರಮಾಣದಲ್ಲಿ ಜೇನು ಪೆಟ್ಟಿಗೆಯನ್ನಿಟ್ಟು ಸಾಕುತ್ತೇವೆಯೋ ಅಷ್ಟು ಲಾಭಗಳಿಸಲು ಸಾಧ್ಯವಾಗುತ್ತದೆ. ಇದರಲ್ಲಿ ಕೃಷಿ ಚಟುವಟಿಕೆಯೊಂದಿಗೆ ಮಹಿಳೆಯರು ಕೃಷಿ ಮಾಡಬಹುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತೋಟಗಾರಿಕಾ…

Read More

ಸೋಮವಾರಪೇಟೆ ಆ.25 : ಕುವೆಂಪು ಶಾಲೆಯಲ್ಲಿ ನಡೆದ ವಲಯ ಎ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಬಾಲಕಿಯರ ಮತ್ತು ಬಾಲಕರ ವಿಭಾಗದಲ್ಲಿ ಕುವೆಂಪು ಶಾಲೆ ಪ್ರಥಮ ಸ್ಥಾನಗಳನ್ನು ಪಡೆದಿದೆ. ಚೆಸ್ ಸ್ಪರ್ಧೆಯಲ್ಲಿ 5 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕಿ ಮಿಲ್‍ಡ್ರೆಡ್ ಗೋನ್ಸಾಲ್ವೆಸ್, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕರುಂಬಯ್ಯ, ಇಂದಿರಾ, ನಾಗೇಶ್ ಮತ್ತು ಶಿಕ್ಷಕರು ಇದ್ದರು.

Read More

ಮಡಿಕೇರಿ ಆ.24 :  ಕಥೆ ಸರಳ ಭಾಷೆಯಲ್ಲಿ ಇರಬೇಕು ಆಗ ಅದು ಎಲ್ಲರ ಮನಸ್ಸನ್ನು ತಲುಪುತ್ತದೆ. ಕಥೆಯೊಳಗೆ ಒಂದಾಗಿ ಬೆರೆತು ಕಥೆಯ ಪಾತ್ರಧಾರಿ ನಾನೇ ಎಂಬ ಭಾವನೆಯೊಂದಿಗೆ ಕತೆ ಬರೆದಾಗ ಅದು ಅತ್ಯುತ್ತಮ ಕಥೆಯಾಗುತ್ತದೆ ಎಂದು ಹಿರಿಯ ಸಾಹಿತಿ ಗಿರೀಶ್ ಕಿಗ್ಗಾಲು ನುಡಿದರು. ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಕೊಡಗಿನ ಗೌರಮ್ಮ ಕಥಾಸ್ಪರ್ಧೆಯಲ್ಲಿ ಸ್ಪರ್ಧಿಸಲು ಬಂದಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ,  ಮಾತನಾಡಿದ ಅವರು,  ಕಥೆಗಳ ರಚನೆ ಮಾಡುವ ಸಂದರ್ಭ ಅದು ಉತ್ಪ್ರೇಕ್ಷ ರಹಿತವಾಗಿರಬೇಕು, ಕಥೆಯ ವೇಗ ಆರಂಭದಿಂದ ಕೊನೆಯವರೆಗೂ ಒಂದೇ ರೀತಿ ಇರಬೇಕು ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿಕ್ಷಣ ಇಲಾಖೆಯ ಉಪಯೋಜನಾ ಸಮನ್ವಯ ಅಧಿಖಾರಿ ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯ ಕಥೆ ಕಾದಂಬರಿ ಇವುಗಳಿಂದ ದೂರ ಹೋಗಿ ಮೊಬೈಲ್ ಮೊರೆಹೋಗಿರುವ ಈ ಕಾಲದಲ್ಲಿ ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಬೆಳೆಯಬೇಕು ಎನ್ನುವ ನಿಟ್ಟಿನಲ್ಲಿ ಕಥೆ ಬರೆಯುವ ಸ್ಪರ್ಧೆಯನ್ನು ಸಾಹಿತ್ಯ ಪರಿಷತ್ ನಡೆಸುತ್ತಿದೆ ಸಾಹಿತ್ಯ ಪರಿಷತ್ತು ನಡೆಸುವ ಎಲ್ಲ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ಎಲ್ಲಾ ರೀತಿಯ…

Read More

ಬೆಂಗಳೂರು : ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಕೇಂದ್ರ ಸರ್ಕಾರ 2023ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದೆ. ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರಕ್ಕೆ ಪ್ರಾದೇಶಿಕ ವಿಭಾಗದಲ್ಲಿ ‘ಬೆಸ್ಟ್ ಕನ್ನಡ ಚಿತ್ರ’ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ‘ಸರ್ದಾರ್ ಉದಾಮ್ ಅತ್ಯುತ್ತಮ ಹಿಂದಿ ಚಿತ್ರ ಹಾಗೂ ‘ಛೆಲೋ ಶೋ ಅತ್ಯುತ್ತಮ ಗುಜರಾತಿ ಚಿತ್ರವಾಗಿ ಆಯ್ಕೆಯಾಗಿದೆ.

Read More

ಮಡಿಕೇರಿ ಆ.24 :  ಸ್ವಾಮಿ ವಿವೇಕಾನಂದ ಯೌತ್ ಮೊಮೆಂಟ್ ಕೊಡಗು ಶಾಖೆ,   ಮಡಿಕೇರಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರ, ಕುಟ್ಟ ಸಮುದಾಯ ಆರೋಗ್ಯ ಕೇಂದ್ರ , ಜನಸ್ನೇಹಿ ಆಟೋ ಚಾಲಕರ ಹಾಗೂ ಮಾಲೀಕರ ಸಂಘ, ಕುಟ್ಟ ಗ್ರಾ.ಪಂ  ಸಂಯುಕ್ತ ಆಶ್ರಯದಲ್ಲಿ ಕುಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಗ್ರಾ.ಪಂ  ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಉದ್ಘಾಟಿಸಿ ಮಾತನಾಡಿ,  ಅಪಘಾತ ಸಂದರ್ಭದಲ್ಲಿ ರಕ್ತ ಅವಶ್ಯಕತೆ ಹೆಚ್ಚಿದ್ದು, ಅಗತ್ಯವಿರುವ ರಕ್ತವನ್ನು ರಕ್ತ ನಿಧಿ ಕೇಂದ್ರದಲ್ಲಿ ಸಂಗ್ರಹ ಮಾಡಲು ಇಂತಹ ಶಿಬಿರವನ್ನು ಏರ್ಪಡಿಸುವುದು ಸಂತಸದ ವಿಷಯ ಎಂದರು. ರಕ್ತ ನಿಧಿ ಕೇಂದ್ರದ ಡಾ. ಕರುಂಬಯ್ಯ ಮಾತನಾಡಿ, ಒಬ್ಬರು ರಕ್ತದಾನ ಮಾಡಿದರೆ ಅದರಿಂದ ಮೂರು ಜನರಿಗೆ ಪ್ರಯೋಜನವಾಗಲಿದೆ. ಪುರುಷರು 3 ತಿಂಗಳಿಗೊಮ್ಮೆ ಒಂದು ಬಾರಿ ಹಾಗೂ ಮಹಿಳೆಯರು ನಾಲ್ಕು ತಿಂಗಳಿಗೊಮ್ಮೆ  ರಕ್ತದಾನ ಮಾಡಬಹುದು. ಯುವಕ ಯುವತಿಯರು ರಕ್ತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕು ಎಂದರು. ರಕ್ತದಾನ ಶಿಬಿರದಲ್ಲಿ 50 ರಕ್ತದಾನಿಗಳು…

Read More

ಮಡಿಕೇರಿ ಆ.24 : ಕನ್ನಡ ಚಿತ್ರರಂಗದ ತಾರೆಗಳಾದ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರ ವಿವಾಹ ಅಮ್ಮತ್ತಿ ಕೊಡವ ಸಮಾಜದಲ್ಲಿ ವಿಜೃಂಭಣೆಯಿಂದ ಕೊಡವ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ವಿವಾಹ ಸಮಾರಂಭಕ್ಕೆ ಬಂದು ನವವಧುವರರಿಗೆ ಶುಭ ಹಾರೈಸಿದರು. ಹರ್ಷಿಕಾ ಹಾಗೂ ಭುವನ್ ಕಳೆದ 10 ವರ್ಷಗಳಿಂದ ಸ್ನೇಹಿತರಾಗಿದ್ದರು. ಗೆಳೆಯನನ್ನೇ ವಿವಾಹವಾಗುತ್ತಿರುವುದು ಸಂತೋಷ ತಂದಿದೆ. ಇಬ್ಬರೂ ಸಮಾನ ಮನಸ್ಕರಾಗಿದ್ದು ಹೀಗಾಗಿ ಮತ್ತಷ್ಟು ಸಂತೋಷವಾಗಿದೆ ಎಂದು ಹರ್ಷಿಕಾ ಹರ್ಷ ವ್ಯಕ್ತಪಡಿಸಿದರು. ಅಮ್ಮತ್ತಿ ಕೊಡವ ಸಮಾಜದಲ್ಲಿ ಕೊಡವ ಸಾಂಪ್ರದಾಯಿಕ ರೀತಿಯಲ್ಲಿ ವಿವಾಹ ಕಾರ್ಯಗಳು ಜರುಗಿದವು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂಥರ್ ಗೌಡ, ಚಿತ್ರಕಲಾವಿದೆಯರಾದ ಗೋಲ್ಡಲ್ ಸ್ಟಾರ್ ಗಣೇಶ್, ಅನುಪ್ರಭಾಕರ್, ತಬಲ ನಾಣಿ, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್ ಮತ್ತಿತರ ಪ್ರಮುಖರು ವಧುವರನಿಗೆ ಶುಭ ಕೋರಿದರು. ಅಮೆರಿಕಾದಲ್ಲಿ ಗೆಳೆಯನ ವಿವಾಹ ಮುಂದಿನ ವಾರ ಇದೆ. ಹೀಗಾಗಿ ಈ…

Read More

ಮಡಿಕೇರಿ ಆ.24 : ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಆ.28 ರಂದು  ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಅಂದು  ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಗ್ರಾಮಸ್ಥರು, ಗ್ರಾಮವ್ಯಾಪ್ತಿಯ ನಾಗರಿಕರು ರಕ್ದದಾನ ಮಾಡಬಹುದಾಗಿದೆ. ಅದೇ ದಿನ ಶ್ರೀಮತಿ ಡಿ.ಚೆನ್ನಮ್ಮ ಪ.ಪೂ.ಕಾಲೇಜಿನ ವಿದ್ಯಾಥಿ೯ಗಳಿಗೆ ರಕ್ತಗುಂಪು ಪತ್ತೆ ಶಿಬಿರವೂ ನಡೆಯಲಿದೆ ಎಂದು ರೋಟರಿ ವುಡ್ಸ್ ಅಧ್ಯಕ್ಷ ಕೆ.ವಸಂತ್ ಕುಮಾರ್ ತಿಳಿಸಿದ್ದಾರೆ. ಶಿಬಿರಕ್ಕೆ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ಹರದೂರು ಗ್ರಾಮ ಪಂಚಾಯಿತಿ, ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜು ಮಾದಾಪುರ, ಜಿಲ್ಲಾ ರಕ್ತನಿಧಿ ಕೇಂದ್ರ , ಪ್ರಾಥಮಿಕ ಆರೋಗ್ಯ ಕೇಂದ್ರ, ಮಾದಾಪುರ, ಶ್ರೀ ವಿನಾಯಕ ಸೇವಾ ಸಮಿತಿ ಗರಗಂದೂರು, ಸುಂಟಿಕೊಪ್ಪ ಜೆಸಿಐ ಸೇರಿದಂತೆ ವಿವಿಧ ಸಂಘಟನೆಗಳು ಸಹಕಾರ ನೀಡಿವೆ.

Read More

ಮಡಿಕೇರಿ ಆ.24 : ಕೊಡಗು ಜಿಲ್ಲೆಯಲ್ಲಿ 2023ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ಮಕ್ಕಳನ್ನು ಪ್ರೋತ್ಸಾಹಿಸಲು ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ನಾವೀನ್ಯತೆ ಕ್ಷೇತ್ರ-2, ತಾರ್ಕಿಕ ಸಾಧನೆಗಳು-2, ಕ್ರೀಡೆ-2, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ-2 ಈ 4 ವಿಭಾಗದಲ್ಲಿ ತಲಾ 2 ರಂತೆ ಒಟ್ಟು 8 ಪ್ರಶಸ್ತಿಗಳನ್ನು ನೀಡಲಾಗುವುದು. ಅಸಾಧಾರಣ ಸಾಧನೆ ಮಾಡಿ ಪ್ರತಿಭೆ ತೋರಿರುವ 5 ರಿಂದ 18 ವರ್ಷದೊಳಗಿನ (ಜುಲೈ 31 ಕ್ಕೆ) ಮಕ್ಕಳನ್ನು 2023-24ನೇ ಸಾಲಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ರೂ.10 ಸಾವಿರ ನಗದು ಬಹುಮಾನ ಒಳಗೊಂಡಿದೆ. ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, 4 ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ…

Read More

ಮಡಿಕೇರಿ ಆ.24 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 18 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ…

Read More

ಮಡಿಕೇರಿ ಆ.24 : ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಬಿ.ಎನ್.ವೀಣಾ ಕೆಎಎಸ್ (ಹಿರಿಯ ಶ್ರೇಣಿ) ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಬಿ.ಎನ್.ವೀಣಾ ಅವರು ಈ ಹಿಂದೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೆಯೇ ತುಮಕೂರು ಜಿಲ್ಲೆಯ ಮಧುಗಿರಿ ಮತ್ತು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

Read More