ಚೆಯ್ಯಂಡಾಣೆ ಜು.24 : ಎಡಪಾಲದ ನಜ್ಮುಲ್ ಹುದಾ ಮದರಸದ “ಮುಅಲಿಂ ಡೇ” ಕಾರ್ಯಕ್ರಮ ಎಡಪಾಲ ಜುಮಾ ಮಸೀದಿಯಲ್ಲಿ ನಡೆಯಿತು. ಪೊಯಾಪಳ್ಳಿ ಜುಮಾ ಮಸೀದಿಯ ಅಧ್ಯಕ್ಷ ಕೆ.ಯು.ಶಾಫಿ ಧ್ವಜಾರೋಹಣ ನೆರವೇರಿಸಿದರು. ಸಮಸ್ತ ಕೇಂದ್ರ ಮುಶಾವರ ಸದಸ್ಯರು ಹಾಗೂ ಕೊಡಗು ಜಿಲ್ಲಾ ನಾಇಬ್ ಖಾಝಿಗಳಾದ ಅಬ್ದುಲ್ಲ ಫೈಝಿ ಕಾರ್ಯಕ್ರವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬೂಬಕ್ಕರ್ ಮುಸ್ಲಿಯಾರ್ ವಹಿಸಿ ಮಾತನಾಡಿದರು. ನೌಫಲ್ ಹುದವಿ ಮುಅಲಿಂ ಡೇ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದಕ್ಕೂ ಮೊದಲು ಎಡಪಾಲ ಜುಮಾ ಮಸೀದಿ ಮುದರ್ರಿಸ್ ನಿಝಾರ್ ಫೈಝಿ ನೇತೃತ್ವದಲ್ಲಿ ಅಂಡತ್ ಮಾನಿ ದರ್ಗಾ ಹಾಗೂ ಸಮೀಪದ ಖಬರ್ ಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಜಮಾಅತ್ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್, ಎನ್.ಎಚ್.ವೈಎ ಅಧ್ಯಕ್ಷ ರಿಯಾಝ್, ಮದರಸ ಅಧ್ಯಾಪಕರು, ಮತಿತ್ತರರು ಉಪಸ್ಥಿತರಿದ್ದರು. ಸ್ವಾಗತ ಹಾಗೂ ವಂದನೆಯನ್ನು ಸದರ್ ಮುಅಲಿಂ ಹಮೀದ್ ಮುಸ್ಲಿಯಾರ್ ನೆರವೇರಿಸಿದರು. ವರದಿ : ಅಶ್ರಫ್
ಲೇಖಕ: admin
ಮಡಿಕೇರಿ ಜು.24 : ಮಡಿಕೇರಿ ತಾಲೂಕು ಮೇಘತ್ತಾಳು ಗ್ರಾಮದ ಐ.ಜಿ ಕಾರ್ಯಪ್ಪ ಅವರು ನಿರ್ಮಿಸಿರುವ ಕೆರೆಯು ಒಡೆದು ಸಿ.ಸಿ.ಸೋಮಯ್ಯ ಅವರ ಕಾಫಿ ತೋಟ, ರಸ್ತೆಗೆ ಹಾನಿಯಾಗಿದೆ. ಅಲ್ಲದೆ ಕಾಫಿ ಒಣ ಹಾಕಲು ನಿರ್ಮಿಸಿರುವ ಕಣದ ಮೇಲೆ ಮಣ್ಣು ತುಂಬಿದೆ. ಈ ಹಿನ್ನೆಲೆ ಜೆಸಿಬಿಯಿಂದ ತೋಡಿನಲ್ಲಿ ಬಂದಿರುವ ದೊಡ್ಡ ದೊಡ್ಡ ಮರದ ದಿಮ್ಮಿಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಗಿದೆ.
ಮಡಿಕೇರಿ ಜು.24 : ಸಂಪಾಜೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯನಾಡು ಸಮೀಪದ ಕಿಂಡಿ ಅಣೆಕಟ್ಟಿನ ಸೇತುವೆ ಬಳಿ ನೀರಿನ ಹರಿವು ಹೆಚ್ಚಾಗಿದೆ. ಕಿಂಡಿ ಅಣೆಕಟ್ಟಿನಲ್ಲಿ ಮಳೆಯ ನೀರು ಸರಾಗವಾಗಿ ಹರಿಯುತ್ತಿದೆ.
ಮಡಿಕೇರಿ ಜು.24 : ಮಡಿಕೇರಿ ನಗರದ ವಿವಿಧ ಬಡಾವಣೆಗಳಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಪೀಲ್ಟ್ರ್ ಹೌಸ್ ನಲ್ಲಿ ಎರಡು ಮೋಟಾರ್ , ಕೂಟುಹೋಳೆಯಲ್ಲಿ ಟಿಸಿ ಹಾಳಾಗಿದ್ದನ್ನು ಮನಗಂಡ ಸದಸ್ಯರು ಖುದ್ದು ಸ್ಥಳಕ್ಕೆ ಧಾವಿಸಿ ನೀರಿನ ಸಮಸ್ಯೆಯನ್ನು ಸರಿಪಡಿಸಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯೆ ಸಭೀತಾ ಸೇರಿದಂತೆ ನಗರಸಭಾ ಸದಸ್ಯರು ಹಾಜರಿದ್ದರು.
ಮಡಿಕೇರಿ ಜು.24 : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕುಶಾಲನಗರ ಸಮೀಪದ ಕಣಿವೆ ತೂಗು ಸೇತುವೆ ಬಳಿ ಜೀವನದಿ ಕಾವೇರಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಈ ದೃಶ್ಯ ನೋಡಲು ನಯನ ಮನೋಹರವಾಗಿದೆ. ಆದರೆ ಕ್ಷಣದಿಂದ ಕ್ಷಣಕ್ಕೆ ನೀರು ಏರಿಕೆಯಾಗುತ್ತಲೇ ಇರುವುದರಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಮಡಿಕೇರಿ ಜು. 24 : ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ಜು.26 ರಂದು ಕಾಗಿ೯ಲ್ ವಿಜಯ ದಿನಾಚರಣೆ ಆಯೋಜಿಸಲಾಗಿದೆ. ಜು.23 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನ ಅಮರ್ ಜವಾನ್ ಸ್ಮಾರಕದಲ್ಲಿ ಕಾಗಿ೯ಲ್ ವಿಜಯ ದಿನಾಚರಣೆಯೊಂದಿಗೆ ಕಾಗಿ೯ಲ್ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ. ಇದೇ ಸಂದಭ೯ ವಾಯುಸೇನೆಯ ನಿವೖತ್ತ ಅಧಿಕಾರಿ ಕಿಗ್ಗಾಲು ಗಿರೀಶ್ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುತ್ತದೆ. ಜಿಲ್ಲಾಧಿಕಾರಿ ವೆಂಕಟ ರಾಜ, ರೋಟರಿ ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್, ರೋಟರಿ ವುಡ್ಸ್ ಕಾಯ೯ದಶಿ೯ ಹರೀಶ್ ಕಿಗ್ಗಾಲು ಪಾಲ್ಗೊಳ್ಳಲಿದ್ದಾರೆ ಎಂದು ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜು.24 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2853.77 ಅಡಿಗಳು. ಕಳೆದ ವರ್ಷ ಇದೇ ದಿನ 2856.05 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 62.40 ಮಿ.ಮೀ., ಕಳೆದ ವರ್ಷ ಇದೇ ದಿನ 5.20 ಮಿ.ಮೀ. ಇಂದಿನ ನೀರಿನ ಒಳಹರಿವು 17972 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2766 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 23937 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 2800 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.
ಮಡಿಕೇರಿ ಜು.24 : ಕೊಡಗು ಜಿಲ್ಲೆಯಲ್ಲಿ ಸೋಮವಾರವೂ ಮಳೆಯ ತೀವ್ರತೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 5 ಇಂಚಿಗೂ ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 118.77 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 14.02 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1310.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1869.78 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 173.43 ಮಿ.ಮೀ. ಕಳೆದ ವರ್ಷ ಇದೇ ದಿನ 26.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1923.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2618.21 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 76.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 977.58 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1481.37 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ…
ಮಡಿಕೇರಿ ಜು.24 : ಸೋಮವಾರಪೇಟೆ ಹೋಬಳಿ ಜಂಬೂರು ಗ್ರಾಮದ ನಿವಾಸಿ ವತ್ಸಲ ಹಾಗೂ ಸಂತೋಷ್ ಅವರ ವಾಸದ ಮನೆಯು ಭಾರಿ ಮಳೆಗಾಳಿಯಿಂದ ಮನೆಯ ಹಿಂಭಾಗದ ಗೋಡೆಯು ಕುಸಿದಿದ್ದು ಮೇಲ್ಚಾವಣಿ, ಗೋಡೆ , ಶೀಟ್ ಗಳು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ.
ಕರಿಕೆ ಜು.24 : ಭಾರೀ ಮಳೆಯಿಂದಾಗಿ ಕರಿಕೆಯ ಬಾಳೆ ಬಳಪು-ಕುಂಡತ್ತಿಕಾನ ಕಾಲೋನಿಯ ಹೊಸ ರಸ್ತೆ ಕುಸಿದಿದೆ. ಚರಂಡಿ ನಿರ್ಮಾಣ ಮಾಡದೆ ಇರುವುದರಿಂದ ಮತ್ತು ತೋಡಿಗೆ ಮೋರಿ ನಿರ್ಮಿಸದೆ ಇರುವುದರಿಂದ ರಸ್ತೆ ಕುಸಿದಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಜನ ಸಂಚಾರ ಅಸಾಧ್ಯವಾಗಿದ್ದು, ಅತಂತ್ರ ಪರಿಸ್ಥಿತಿ ಎದುರಾಗಿದೆ. ಈ ಹಿಂದೆಯೇ ಹಲವು ಬಾರಿ ಗ್ರಾ.ಪಂ ಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಆರೋಪಿಸಿರುವ ಸ್ಥಳೀಯರು, ಜಿಲ್ಲಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.






