ಲೇಖಕ: admin

ಮಡಿಕೇರಿ ಏ.25 NEWS DESK : ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಾಪೋಕ್ಲು ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ  ವಿ.ಯು.ಮಿಸ್ಬಾಹ್  ಶೇ.97.76 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಮಿಸ್ಬಾಹ್  ಕುಂಜಿಲ ವಯಕೋಲ್ ಗ್ರಾಮದ ವಿ.ಎ.ಉಸ್ಮಾನ್ – ಖೈರುನ್ನಿಶಾ ದಂಪತಿಯ ಪುತ್ರ.

Read More

ವಿರಾಜಪೇಟೆ ಏ.25 NEWS DESK : ಕೆದಮುಳ್ಳೂರು ಗ್ರಾಮ ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರೀ ಪಾಷಾಣಮೂರ್ತಿ, ಗುಳಿಗ ದೈವಗಳ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಗ್ರಾಮದ ನಿವಾಸಿ ಬಿ.ಇ.ಹೊನ್ನಪ್ಪ ( ನಾರಾಯಣ) ಮನೆಯಲ್ಲಿ ಗಣಪತಿ ಹೋಮ ಮತ್ತು ಸತ್ಯ ನಾರಾಯಣ ಪೂಜೆಯೊಂದಿಗೆ ನೇಮೋತ್ಸವಕ್ಕೆ ಚಾಲನೆ ನೀಡಲಾಯಿತು. ಗುರು ಹಿರಿಯರು, ಕುಟುಂಬ ಸದಸ್ಯರಿಂದ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಎಣ್ಣೆಯನ್ನು ದೈವ ನರ್ತಕರಿಗೆ ನೀಡಲಾಯಿತು. ಸುಳ್ಯದ ಬೊಳಿಯ ಮಜಲು ಜಯರಾಂ ಅವರ( ದೈವ ನರ್ತಕರು) ಸಾನಿದ್ಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಕುಟುಂಬ ಮನೆಯಿಂದ ದೈವಗಳ ಭಂಡಾರ ಇಳಿಸಲಾಯಿತು. ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಪಾಷಾಣಮೂರ್ತಿ ದೈವ ನೇಮ ಮತ್ತು ಗುಳಿಗ ದೈವದ ನೇಮ ದೈವದ ನೇಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರ್ಶಿತ್ ಮತ್ತು ತಂಡ (ದೈವಗಳಿಗೆ ನುಡಿಸುವ ವಿಶೇಷ ವಾದ್ಯ) ನುಡಿಸಿದ ವಾದ್ಯ ಭಕ್ತರನ್ನು ಮಂತ್ರ ಮುಗ್ದವಾಗಿಸಿತು. ನೇಮೋತ್ಸವದಲ್ಲಿ ಕುಟುಂಬ ವರ್ಗ, ಗ್ರಾಮಸ್ಥರು ಹಾಗೂ ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ,…

Read More

ಮಡಿಕೇರಿ NEWS DESK ಏ.25 : ವಿಕಾಸ್ ಜನತಾ ಸೇವಾ ಟ್ರಸ್ಟ್, ಟ್ರಸ್ಟ್ ನ ವ್ಯವಸ್ಥಾಪನಾ ಸಮಿತಿ, ತುರ್ತು ಆರೋಗ್ಯ ಸೇವಾ ಘಟಕ ಸೇರಿದಂತೆ ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಎಲ್ಲಾ ಸಮಿತಿಗಳ ಕಾನೂನು ಸಲಹೆಗಾರರಾಗಿ ಕರ್ನಾಟಕ ಹೈಕೋರ್ಟ್ ವಕೀಲ ರೋಷನ್ ಹೆಚ್.ಸಿ ಅವರು ಆಯ್ಕೆಯಾಗಿದ್ದಾರೆ. ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಿ.ಕರಿಯಪ್ಪ, ಅಧ್ಯಕ್ಷ ನವೀನ್ ಬಿ.ಕೆ ಹಾಗೂ ಗೌರವ ಅಧ್ಯಕ್ಷ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

Read More

ಮೈಸೂರು ಏ. 25 NEWS DESK : ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತು ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಮೈಸೂರಿನಲ್ಲಿ ವಿಮಾನ ನಿಲ್ದಾಣದ ಅಭಿವೃದ್ಧಿ ಕುರಿತ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಂಸದರು, ಕ್ಷಿಪ್ರಗತಿಯಲ್ಲಿ ಕಾರ್ಯಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ. ದೀರ್ಘಕಾಲೀನ ಯೋಜನೆಗೆ ಸ್ಪಷ್ಟ ರೂಪ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದು ತಿಳಿಸಿದರು. ವಿಮಾನ ನಿಲ್ದಾಣ ಅಭಿವೃದ್ಧಿಗೆ ಸಂಬಂಧಿಸಿದ ಸಮಗ್ರವಾದ ಯೋಜನಾ ವರದಿ (DPR) ಅನ್ನು ಶೀಘ್ರದಲ್ಲಿ ಸಿದ್ಧಪಡಿಸಲು ಅಧಿಕಾರಿಗಳು ಮುಂದಾಗಬೇಕು. ಈ ಯೋಜನೆಗೆ ಅಗತ್ಯವಿರುವ ಉಳಿದ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ವೇಗಗೊಳಿಸಲು ಸಂಬಂಧಿತ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಸಂಸದರು ತಿಳಿಸಿದರು. ರ್ಘಕಾಲೀನ ಸಂಪರ್ಕ ಯೋಜನೆ ಅಗತ್ಯ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ದೀರ್ಘಕಾಲೀನ ಪರಿಹಾರ ಒದಗಿಸುವುದು ನಮ್ಮ ಉದ್ದೇಶವಾಗಿದ್ದು, ಕಡಿಮೆ…

Read More

ನಾಪೋಕ್ಲು ಏ.25 NEWS DESK : ಸ್ಥಳೀಯ ಕೆಪಿಎಸ್ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೀಯಕಪೂವಂಡ ಕುಟುಂಬ ಆಯೋಜಿತ 5ನೇ ವರ್ಷದ ಕೊಡವ ಕೌಟುಂಬಿಕ ಕೇರ್ ಬಲಿ ನಮ್ಮೆ(ಹಗ್ಗಜಗ್ಗಾಟ) ಯ ಮೂರನೇ ದಿನದ ಪಂದ್ಯಾಟದಲ್ಲಿ 24 ತಂಡಗಳು ಮುನ್ನಡೆ ಸಾಧಿಸಿ ಏ. 26ರಂದು ನಡೆಯುವ ಚೀಯಕಪೂವಂಡ ಕಪ್‌ಗೆ ಸೆಣಸಾಡಲಿದ್ದಾರೆ.  ಫೈನಲ್ ಪಂದ್ಯದ ತಯಾರಿಯನ್ನು ಚೀಯಕಪೂವಂಡ ಕೇರ್ ಬಲಿ‌ ನಮ್ಮೆ ಸಮಿತಿ ಅದ್ಧೂರಿಯಾಗಿ ನಡೆಸಲು‌ ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಭಾನುವಾರ ಅಪರಾಹ್ನ 3.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಚೀಯಕಪೂವಂಡ ಕುಟುಂಬದ ಅಧ್ಯಕ್ಷ ಸಿ.ಎಂ.ಅಪ್ಪಚ್ಚು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚೀಯಕಪೂವಂಡ ಕೇರ್ ಬಲಿ ನಮ್ಮೆಯ ಅಧ್ಯಕ್ಷ ಸಿ.ಕೆ.ಬೋಪಣ್ಣ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಲೋಕಸಭಾ ಸದಸ್ಯ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕರ್ನಾಟಕ ಸರಕಾರದ ಮುಖ್ಯ ವಿದ್ಯುತ್ ಅಧಿಕಾರಿ ತೀತಿರ ರೋಶನ್ ಅಪ್ಪಚ್ಚು,…

Read More

ಸಿದ್ದಾಪುರ ಏ.25 NEWS DESK : ಕಾಡು ಪ್ರಾಣಿಗಳ ಹಾವಳಿಯಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ವರ್ಷವಿಡಿ ಕಷ್ಟಪಟ್ಟು ಬೆಳೆದ ಫಸಲು ಕಾಡು ಪ್ರಾಣಿಗಳ ಪಾಲಾಗುತ್ತಿದೆ. ರೈತರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಆತಂಕದ ಜೀವನ ನಡೆಸುವಂತಾಗಿದೆ. ಸರ್ಕಾರ ಹಾಗೂ ಅರಣ್ಯ ಇಲಾಖಾ ಅಧಿಕಾರಿಗಳು ವೈಜ್ಞಾನಿಕವಾಗಿ ಕಾಡು ಪ್ರಾಣಿಗಳ ಹಾವಳಿಯನ್ನ ಶಾಶ್ವತವಾಗಿ ತಡೆಗಟ್ಟಬೇಕೆಂದು ಚೆನ್ನಂಗಿ ಕಾವೇರಿ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ಡಾ.ಎ.ಸಿ.ಗಣಪತಿ ಒತ್ತಾಯಿಸಿದರು ಪಾಲಿಬೆಟ್ಟ ಸಮೀಪದ ಚೆನ್ನಂಗಿ ಕಾವೇರಿ ಸೇವಾ ಸಂಘದ ಸಭಾಂಗಣದಲ್ಲಿ ಬೆಳೆಗಾರರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ರೈತರು ಕೃಷಿಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಸಾಲ ಮಾಡಿ ಕಷ್ಟಪಟ್ಟು ಬೆಳೆದ ಕೃಷಿ ಫಸಲು ಕಾಡು ಪ್ರಾಣಿಗಳ ಪಾಲಾಗುತ್ತಿದೆ.ಇದರಿಂದ ರೈತ ಆರ್ಥಿಕ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಟ್ಟೆಪಾಡಿನ ಜೀವನಕ್ಕಾಗಿ ದುಡಿಯುವ ಕಾರ್ಮಿಕರು ಕಾಡುಪ್ರಾಣಿಗಳ ಹಾವಳಿಯಿಂದ ಕೆಲಸಕ್ಕೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಅತಂತ್ರ…

Read More

ಮಡಿಕೇರಿ ಏ.25 NEWS DESK : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ, ಕೊಡಗು ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್‍ನ ಸಹಯೋಗದೊಂದಿಗೆ ಏ.28 ರಂದು ನಗರದಲ್ಲಿ ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ” ನಡೆಯಲಿದೆಯೆಂದು ಅಕಾಡೆಮಿ ಅಧ್ಯಕ್ಷರಾದ ಉಮರ್ ಯು.ಹೆಚ್. ತಿಳಿಸಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಸಮ್ಮೇಳನದ ಕುರಿತು ಮಾಹಿತಿಯನ್ನಿತ್ತ ಅವರು, ಬ್ಯಾರಿ ಭಾಷಾ ಹಿರಿಯ ಸಾಹಿತಿ ಬಿ.ಎ. ಷಂಶುದ್ದೀನ್ ಅವರ ಸರ್ವಾಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನವು ನಡೆಯಲಿದೆ. ಸಮ್ಮೇಳನದಂದು ಬೆಳಗ್ಗೆ 9.30 ಗಂಟೆಗೆ ನಗರದ ಕ್ರೆಸೆಂಟ್ ಶಾಲೆಯಿಂದ ಸಮ್ಮೇಳನ ನಡೆಯುವ ಕಾವೇರಿ ಹಾಲ್‍ವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ನಡೆಸಲಾಗುತ್ತದೆ. ಬಳಿಕ ಧ್ವಜಾರೋಹಣವನ್ನು ತಾನು ನಡೆಸಲಿರುವುದಾಗಿ ಹೇಳಿದರು. ಸಮ್ಮೇಳನವನ್ನು ಬೆಳಿಗ್ಗೆ 10.30ಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್ ಉದ್ಘಾಟಿಸಲಿದ್ದಾರೆ. ಬಿ.ಎ.ಷಂಶುದ್ದೀನ್ ಅವರ ಸಮ್ಮೇಳನಾಧ್ಯಕ್ಷರ ಭಾಷಣದ ಬಳಿಕ, ಹಿರಿಯ ಸಾಹಿತಿ ಮತ್ತು ಚಿಂತಕರಾದ ಎಸ್.ಜಿ.ಸಿದ್ದರಾಮಯ್ಯ ಮುಖ್ಯ ಭಾಷಣ ಮಾಡಲಿದ್ದು, ಹಲ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದು ಮಾಹಿತಿಯನ್ನಿತ್ತರು. :: ಚರ್ಚಾ ಗೋಷ್ಠಿ :: ಅಂದು ಮಧ್ಯಾಹ್ನ…

Read More

ಮಡಿಕೇರಿ ಏ.25 NEWS DESK  : ಮಹಿಳೆಯರಿಗೆ ರಾಜಕೀಯವಾದ ಸ್ಥಾನಮಾನಗಳನ್ನು ಕಲ್ಪಿಸುವ ಕೇಂದ್ರದ “ನಾರಿ ಶಕ್ತಿ ವಂದನ್ ಅಧಿನಿಯಮ”ಕ್ಕೆ ರಾಷ್ಟ್ರದ ಹಿತ ಚಿಂತನೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಒಳಗೊಂಡಂತೆ ವಿಪಕ್ಷಗಳು ಬೆಂಬಲ ನೀಡುವ ವಿಶ್ವಾಸಗಳು ಹುಸಿಯಾಗುವ ಮೂಲಕ, ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್ ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂಸ್ಕೃತಿ ಪರಂಪರೆಗಳ ಸಂರಕ್ಷಣೆಯಲ್ಲಿ ಮಹಿಳೆಯರ ಕೊಡುಗೆ ಅತ್ಯಂತ ಮಹತ್ವಪೂರ್ಣವಾದದ್ದು. ಕರ್ನಾಟಕದ ಇತಿಹಾಸ ಪರಂಪರೆಗಳನ್ನು ಅವಲೋಕಿಸಿದಾಗ ಒಡೆಯರ್ ವಂಶದಲ್ಲಿಯೂ ಮಹಿಳೆಯರ ಕೊಡುಗೆ ಅನನ್ಯವಾಗಿದೆ. ಅದರಂತೆಯೇ ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಲ ಮಹಿಳೆಯರು ಈ ನೆಲದ ಸಂಸ್ಕೃತಿಯ ಸಂರಕ್ಷಣೆಗೆ ಶ್ರಮಿಸಿರುವುದನ್ನು ಕಾಣುತ್ತೇವೆ. ಇಂತಹ ಮಹಿಳೆಯರಿಗೆ ರಾಜಕೀಯವಾದ ಮೀಸಲಾತಿ ನೀಡುವ ಮಸೂದೆಗೆ ಕಾಂಗ್ರೆಸ್ ಒಳಗೊಂಡ ಮಿತ್ರಪಕ್ಷಗಳ ಇಂಡಿಯಾ ಸಂಘಟನೆ ಉದ್ದೇಶಪೂರ್ವಕವಾಗಿ ವಿರೋಧವನ್ನು ಮಾಡುವ ಮೂಲಕ, ವಿಧೇಯಕ ಜಾರಿಯಾಗದಂತೆ ನೋಡಿಕೊಂಡಿರುವುದಾಗಿ ಆರೋಪಿಸಿದರು. :: ಕ್ಷೇತ್ರ ಪುನರ್ವಿಂಗಡಣೆ ಅಪಪ್ರಚಾರ ::…

Read More

ಮಡಿಕೇರಿ NEWS DESK ಏ. 25: ಕೂಡಿಗೆಯ ಸೈನಿಕ ಶಾಲೆ ಕೊಡಗು 2026-27ನೇ ಸಾಲಿನ ದಕ್ಷಿಣ ವಲಯದ ಅಂತರ್ ಗುಂಪು ಫುಟ್ಬಾಲ್ ಪಂದ್ಯಾವಳಿಯಲ್ಲಿ (ಗ್ರೂಪ್-ಹೆಚ್) ಸತತ ಎರಡನೇ ಬಾರಿಗೆ ಚಾಂಪಿಯನ್‌ಶಿಪ್ ಪಟ್ಟವನ್ನು ಉಳಿಸಿಕೊಳ್ಳುವ ಮೂಲಕ ನೂತನ ಇತಿಹಾಸಕ್ಕೆ ಮುನ್ನುಡಿ ಬರೆಯಿತು. 15 ವರ್ಷದೊಳಗಿನ ಬಾಲಕರು, 17 ವರ್ಷದೊಳಗಿನ ಬಾಲಕಿಯರು ಮತ್ತು 17 ವರ್ಷದೊಳಗಿನ ಬಾಲಕರು ಹೀಗೆ ಎಲ್ಲಾ ವಿಭಾಗಗಳಲ್ಲಿಯೂ ಪ್ರಾಬಲ್ಯ ಮೆರೆದ ಸೈನಿಕ ಶಾಲೆ ಕೊಡಗು ಫುಟ್ಬಾಲ್ ಕ್ರೀಡೆಯಲ್ಲಿ ತನ್ನ ಸರ್ವೋಚ್ಚ ಸ್ಥಾನವನ್ನು ಮತ್ತೊಮ್ಮೆ ಸಾಬೀತುಪಡಿಸಿತು. ಸೈನಿಕ ಶಾಲೆ ಕೊಡಗಿನಲ್ಲಿ ನಡೆದ ಅದ್ಧೂರಿ ಸಮಾರೋಪ ಸಮಾರಂಭದೊಂದಿಗೆ ಈ ಪಂದ್ಯಾವಳಿಯು ಮುಕ್ತಾಯಗೊಂಡಿತು. ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಸಮಾರೋಪ ಸಮಾರಂಭಕ್ಕೆ ಆಗಮಿಸಿದ್ದರು. ಕೆಡೆಟ್ ಲವಿಶ್ ಕಶ್ಯಪ್ ಅವರು ಸ್ವಾಗತ ಭಾಷಣ ಮಾಡಿ, ಗಣ್ಯರನ್ನು ಮತ್ತು ವಿವಿಧ ಶಾಲೆಗಳ ತಂಡಗಳನ್ನು ಸ್ವಾಗತಿಸಿದರು. ರೋಚಕ ಅಂತಿಮ ಪಂದ್ಯ: ಸೈನಿಕ ಶಾಲೆ ಕೊಡಗು ಮತ್ತು ಸೈನಿಕ ಶಾಲೆ ಕಝಕೂಟಂ ತಂಡಗಳ ನಡುವೆ ನಡೆದ…

Read More

ಮಡಿಕೇರಿ NEWS DESK ಏ.25 : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡುಗು ಬ್ಯಾರೀಸ್‌ ವೆಲ್ಫೇರ್‌ ಟ್ರಸ್ಟ್‌ನ ಸಹಯೋಗದೊಂದಿಗೆ ಏಪ್ರಿಲ್‌ 28ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಮೊದಲ ಬ್ಯಾರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಪತ್ರಕರ್ತ, ಕವಿ ಬಿ.ಎ. ಶಂಷುದ್ದೀನ್‌ ಮಡಿಕೇರಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್‌ ಯು.ಹೆಚ್.‌ ತಿಳಿಸಿದ್ದಾರೆ. ಬ್ಯಾರಿ ಹಾಡುಗಳ ಮೊದಲ ಧ್ವನಿಸುರುಳಿ ಹೊರತಂದ ಕೀರ್ತಿಗೆ ಪಾತ್ರರಾಗಿರುವ ಶಂಷುದ್ದೀನ್‌ ಮಡಿಕೇರಿ 1983ರಲ್ಲಿ ಹಮ್ಮಿಕೊಂಡಿದ್ದ ‘ಪುದಿಯೊ ಬ್ಯಾರಿ ಪಾಟ್‌ಙ’ ಧ್ವನಿಸುರುಳಿ ಬಿಡುಗಡೆ ಮತ್ತು ಸಂಗೀತ ರಸಮಂಜರಿ ಸಮಾರಂಭವು ಬ್ಯಾರಿ ಭಾಷೆಯ ಮೊದಲ ಸಾಂಸ್ಕೃತಿಕ ಕಾರ್ಯಕ್ರಮವೆಂದು ದಾಖಲಾಗಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ಅಕಾಡೆಮಿ ಹೊರತಂದ ಬ್ಯಾರಿ-ಕನ್ನಡ-ಇಂಗ್ಲೀಷ್ ನಿಘಂಟುವಿನ ಮೂವರು ಸಂಪಾದಕರಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿರುವ ಇವರು ಸಂತ ಕವಿ ಕನಕದಾಸರ ʼಮೋಹನ ತರಂಗಿಣಿʼ ಕಾವ್ಯವನ್ನು ಬ್ಯಾರಿ ಭಾಷೆಗೆ ಅನುವಾದಿಸಿರುತ್ತಾರೆ. ಇವರ ʼನೆನಪುಙʼ (ಬ್ಯಾರಿ ಕವನ ಸಂಕಲನ) ಕೃತಿಯನ್ನು ಕರ್ನಾಟಕ ಬ್ಯಾರಿ…

Read More