ಮಡಿಕೇರಿ,ಆ.18: ವಿಶ್ವ ಛಾಯಾಗ್ರಹಣ ದಿನಾಚರಣೆಗೆ ಸಂಬಂಧಿಸಿದಂತೆ ಕೊಡಗು ಪತ್ರಕರ್ತ ಸಂಘದ ಸದಸ್ಯರಿಗಾಗಿ ಆಯೋಜಿತ ಫೋಟೋಗ್ರಫಿ ಮತ್ತು ವಿಡಿಯೋ ಗ್ರಫಿ ಸ್ಪರ್ಧೆಯಲ್ಲಿ ಜಿಲ್ಲೆಯ 4 ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಂಘದಿಂದ ಕೊಡಮಾಡುವ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಅತ್ಯುತ್ತಮ ಫೋಟೋಗ್ರಫಿ ಸ್ಪರ್ಧೆಯಲ್ಲಿ ಸಂಯುಕ್ತ ಕರ್ನಾಟಕದ ಮೂರ್ನಾಡು ವರದಿಗಾರ ಟಿ.ಸಿ.ನಾಗರಾಜ್ ಅವರ ‘ಪೈರು ಹೊತ್ತ ರೈತ’ ಪ್ರಥಮ ಸ್ಥಾನ, ವಿಶ್ವವಾಣಿ ಜಿಲ್ಲಾ ವರದಿಗಾರ ಅನಿಲ್ ಎಚ್.ಟಿ. ಅವರ ‘ಪೈರು ಬೆಳೆಯಲು ಒಂದಾಗಿ ಬಂದೆವು’ ಚಿತ್ರಕ್ಕೆ ದ್ವಿತೀಯ ಸ್ಥಾನ ಲಭಿಸಿದೆ. ಜಲಪಾತ ವೈಭವ ಸಂಬಂಧಿಸಿದ ಅತ್ಯುತ್ತಮ ವಿಡಿಯೋ ಗ್ರಾಫಿ ಪ್ರಶಸ್ತಿಯಲ್ಲಿ ‘ಮೇದುರ ಅಬ್ಬಿ ಸೌಂದರ್ಯ’ಕ್ಕಾಗಿ ಪ್ರಜಾ ಟಿವಿ ಕ್ಯಾಮರಾಮೆನ್ ವಿಜಯ್ ಕಾಟಕೇರಿ ಪ್ರಥಮ ಸ್ಥಾನ, ಮೈಸೂರು ಮಿತ್ರ ಜಿಲ್ಲಾ ವರದಿಗಾರ ಪ್ರಸಾದ್ ಸಂಪಿಗೆಕಟ್ಟೆ ‘ಅವರ ಕೋಟೆ ಅಬ್ಬಿ ವೈಭವ’ ದ್ವಿತೀಯ ಸ್ಥಾನ ಪಡೆದಿದೆ. ದತ್ತಿ ನಿಧಿ ಪ್ರಶಸ್ತಿ: ಅತ್ಯುತ್ತಮ ಮಾನವೀಯ ಮೌಲ್ಯಗಳು: ಸಂಘದ ಹಿರಿಯ ಸಲಹೆಗಾರರು, ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ಪುತ್ರಿ…
ಲೇಖಕ: admin
ಮಡಿಕೇರಿ ಆ.18 : ಪ್ರತಿ ತಿಂಗಳ ಮೂರನೇ ಶನಿವಾರದಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮಡಿಕೇರಿ, ಗೋಣಿಕೊಪ್ಪಲು, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರೊಂದಿಗೆ ಸಂವಹನ (Consumer’s interaction Meeting) ಸಭೆಯು ಉಪ ವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಆಯಾಯ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ. ವಿದ್ಯುತ್ ಗ್ರಾಹಕರು ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಭಾಗವಹಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಆ.18 : ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕೊಡಗು ವಿಶ್ವವಿದ್ಯಾನಿಲಯದ ಆದೇಶದನ್ವಯ 2023-24ನೇ ಶೈಕ್ಷಣಿಕ ಸಾಲಿನ ಪ್ರಥಮ, ದ್ವಿತೀಯ ಮತ್ತು ತೃತೀಯ ಬಿಎ, ಬಿಕಾಂ, ಬಿಬಿಎ ಪದವಿ ತರಗತಿಗಳು ಆ.23 ರಿಂದ ಪ್ರಾರಂಭವಾಗಲಿದೆ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ತಿಳಿಸಿದ್ದಾರೆ.
ಮಡಿಕೇರಿ ಆ.18 : ಕುಶಾಲನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆ.23 ರಂದು ಬೆಳಗ್ಗೆ 11 ಗಂಟೆಗೆ ರಫ್ತುದಾರರ ಉತ್ತೇಜನ ಕಾರ್ಯಕ್ರಮವು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ವಿವಿಧ ಉತ್ಪನ್ನಗಳ ರಫ್ತುದಾರರು ಭಾಗವಹಿಸಲಿದ್ದಾರೆ. ಸದರಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಅವರು ಉದ್ಘಾಟಿಸಲಿದ್ದಾರೆ. ಆದ್ದರಿಂದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ರಫ್ತುದಾರರು ಹಾಗೂ ರಫ್ತು ಮಾಡಲು ಇಚ್ಚಿಸುವ ಉದ್ದಿಮೆದಾರರು ಭಾಗವಹಿಸಿ ರಫ್ತು ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಕೋರಿದ್ದಾರೆ.
ಮಡಿಕೇರಿ ಆ.18 : ಕೊಡಗು ಜಿಲ್ಲೆಯಲ್ಲಿ ಆ.21 ರಿಂದ ಸೆ.2 ರವರೆಗೆ ನಡೆಯುವ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು…
ಮಡಿಕೇರಿ ಆ.18 : ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯು ಆ.21 ರಿಂದ ಸೆ.2 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸುವ ಅಧಿಕಾರಿ ವರ್ಗದವರು ಅನಗತ್ಯ ಕಾರಣಗಳಿಂದ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡದೆ ಪರೀಕ್ಷೆ ಮುಗಿಯುವ ವರೆಗೂ ದಿನದ 24 ಗಂಟೆಯು ಸಹ ಆನ್ ನಲ್ಲಿ ಇಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಅವ್ಯವಹಾರಗಳಿಗೆ ಅವಕಾಶ ಕೊಡದೆ ಪರೀಕ್ಷಾ ಪಾವಿತ್ರತೆಯನ್ನು ಕಾಪಾಡುವಂತೆ ಹಾಗೂ ಗುಣಮಟ್ಟದ ಪರೀಕ್ಷೆ ನಡೆಸಲು ಅವರು ತಿಳಿಸಿದರು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ರೀತಿಯ ವ್ಯವಸ್ಥೆಯನ್ನು ಕಲ್ಪಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಅವುಗಳು ಚಲನೆಯಲ್ಲಿವೆಯೇ ಎಂದು ಪರೀಕ್ಷಿಸಬೇಕು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಯನ್ನು…
ಮಡಿಕೇರಿ ಆ.18 : ಕರ್ಣಂಗೇರಿ ವಿದ್ಯಾಭಾರತಿ ಬಡಾವಣೆಯ ಸ್ಫೂರ್ತಿ ಯುವ ಸಂಘದ ವತಿಯಿಂದ ಸೆ.19 ರಂದು 13ನೇ ವರ್ಷದ ಗೌರಿ ಗಣೇಶೋತ್ಸವ ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಗಣೇಶ ಮೂರ್ತಿಯನ್ನು ಗಣಪತಿ ಹೋಮದೊಂದಿಗೆ ಪ್ರತಿಷ್ಠಾಪಿಸಿ, ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಸೆ.23 ರಂದು ಸಂಜೆ 6 ಗಂಟೆಗೆ ಗಣೇಶ ಮೂರ್ತಿಯನ್ನು ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ದು ವಿಸರ್ಜಿಸಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಮನವಿ ಮಾಡಿದೆ.
ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಿದರು. ಬೆಂಗಳೂರಿನ ಕೆಂಬ್ರಿಡ್ಜ್ ಲೇಔಟ್‌ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್ ಅವರು ಉದ್ಘಾಟಿಸಿದ್ದು, ಬಳಿಕ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ ಬಿಡುಗಡೆ ಮಾಡಿದರು.
ಮಡಿಕೇರಿ ಆ.18 : ಆಲೂರು ಸಿದ್ಧಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ, ಶುಭ ಹಾರೈಸಿದರು.
ವಿರಾಜಪೇಟೆ ಆ.18 : ಬೇಟೋಳಿ ರಾಮನಗರದ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ರಾಮನಗರ ಮಂಡಲ)ದ ವತಿಯಿಂದ ಬೇಟೋಳಿ ಗ್ರಾಮದ ಬಿ.ಆರ್.ಉದಯ ಶಂಕರ್ ಅವರ ಗದ್ದೆಯಲ್ಲಿ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರಾಜಪೇಟೆ ತಾಲೂಕು ವಿವಿಧ ಮಂಡಲದ ಸ್ವಯಂ ಸೇವಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಹಗ್ಗಜಗ್ಗಾಟ, ಕಬಡ್ಡಿ, ಓಟ, ಮಡಿಕೆ ಒಡೆಯುವುದು, ಕಾಲು ಕಟ್ಟಿ ಓಟ ಮುಂತಾದ ಗ್ರಾಮೀಣ ಕ್ರೀಡಾಕೂಟಗಳು ನಡೆಯಿತು. ವಿರಾಜಪೇಟೆ ತಾಲೂಕಿನ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸದಸ್ಯರು ಈ ಕ್ರೀಡಾಕೂಟದಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ಗದ್ದೆಯ ಸುತ್ತವೂ ಕೇಸರಿಮಯವಾಗಿತ್ತು. ಸಣ್ಣ ಮಕ್ಕಳಿಂದ ಹಿಡಿದು ಮದ್ಯ ವಯಸ್ಕರೂ ಸಹ ಕ್ರೀಡಾಕೂಟದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬೇಟೋಳಿ ಮಂಡಲದ ಸ್ವಯಂ ಸೇವಕರು, ವಿರಾಜಪೇಟೆ ತಾಲೂಕಿನ ಹಲವೆಡೆಯಿಂದ ಬಂದಿದ್ದ ಸ್ವಯಂ ಸೇವಕರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.






