ಮಡಿಕೇರಿ ಜು.20 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣೆ ಮತ್ತು ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ರೀಲ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಇದಕ್ಕೆ ‘ ಮುಂಗಾರಿನ ಸಂಭ್ರಮ ‘ ಎಂಬ ವಿಷಯ ವಸ್ತು ನೀಡಲಾಗಿದೆ. ರೀಲ್ಸ್ ಅವಧಿ ಒಂದು ನಿಮಿಷ ಮೀರುವಂತಿಲ್ಲ. ಒಬ್ಬರು ಎಷ್ಟು ರೀಲ್ಸ್ ಬೇಕಾದರು ಕಳುಹಿಸಬಹುದಾಗಿದೆ. ಪ್ರಥಮ ಬಹುಮಾನ 3000 ರೂ, ದ್ವಿತೀಯ 2000 ರೂ ತೃತೀಯ 1000 ರೂ ನೀಡಲಾಗುತ್ತದೆ. ರೀಲ್ಸ್ ವೀಡಿಯೋ ಲಂಬ(vertical) ಆಕಾರದಲ್ಲಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಹೆಸರು ವಯಸ್ಸು ಊರಿನ ವಿವರಗಳ ಸಮೇತ 8310826979 ನಂಬರ್ ಗೆ ವಾಟ್ಸ್ಆ್ಯಪ್ ಮಾಡಬೇಕು. ರೀಲ್ಸ್ ಕಳುಹಿಸಲು ಆ.10 ಕೊನೆಯ ದಿನವಾಗಿರುತ್ತದೆ. ರೀಲ್ಸ್ ಅನ್ನು 8310826979 ಗೆ ವಾಟ್ಸ್ ಮಾಡಬಹುದು. ಅಥವಾ kodagupressclub.drushyam@gmail.com ಗೆ ಇ-ಮೇಲ್ ಮಾಡಬಹುದು ರೀಲ್ಸ್ ಗಳ ಪ್ರದರ್ಶನ ಮತ್ತು ಬಹುಮಾನ ವಿತರಣಾ ಸಮಾರಂಭ ವಿಶ್ವ ಛಾಯಾಗ್ರಹಣ ದಿನವಾದ ಆಗಸ್ಟ್ 19 ರಂದು ಮಡಿಕೇರಿಯ ನೂತನ ಗಾಂಧಿಭವನ ಸಭಾಂಗಣದಲ್ಲಿ ನಡೆಯಲಿದೆ.…
ಲೇಖಕ: admin
ಮಡಿಕೇರಿ ಜು.20 : ನಾಪೋಕ್ಲು ಹಳೆ ತಾಲೂಕು ನಿವಾಸಿ ಬಾಬು ಪೂಜಾರಿ ಅವರ ಪತ್ನಿ ಲಕ್ಷ್ಮಿ(60) ಬುಧವಾರ ನಿಧನರಾಗಿದ್ದಾರೆ.
ಸೋಮವಾರಪೇಟೆ ಜು.19 : ತಾಲ್ಲೂಕು ಆಡಳಿತ ಮತ್ತು ಕಂದಾಯ ಇಲಾಖೆಯ ವತಿಯಿಂದ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೌತಿ ಖಾತೆ ಆಂದೋಲನ, ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಪಂಚಾಯಿತಿ ವ್ಯಾಪ್ತಿಯ ಕಂದಾಯ ಗ್ರಾಮಗಳಾದ ಗರ್ವಾಲೆ, ಸೂರ್ಲಬ್ಬಿ, ಶಿರಂಗಳ್ಳಿ ಹಾಗೂ ಉಪ ಗ್ರಾಮಗಳಾದ ಕುಂಬಾರಗಡಿಗೆ, ಕಿರುದಾಲೆ, ಮಂಕ್ಯ ಗ್ರಾಮಗಳ ರೈತರು ಮತ್ತು ಸಾರ್ವಜನಿಕರು ತಮ್ಮ ಆಸ್ತಿಗಳ ಪೌತಿ ಖಾತೆಗೆ ಸಂಬಂಧಿಸಿದಂತೆ, ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಅರ್ಜಿ ಸಲ್ಲಿಸಿದರು. ಈ ಸಂದರ್ಭ ಗರ್ವಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜುಂಡ, ಸದಸ್ಯೆ ಎಚ್.ಎಚ್. ರತ್ನ, ಗ್ರಾಮ ಲೆಕ್ಕಿಗರಾದ ದೀಪಿಕ ಮತ್ತು ಚೈತ್ರ ಇದ್ದರು.
ಸೋಮವಾರಪೇಟೆ ಜು.19 : ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದ ವತಿಯಿಂದ ಜು.23ರ ಹೊಸಳ್ಳಿ ಗ್ರಾಮದಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಎಚ್.ತಿಮ್ಮಯ್ಯ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 9.30 ಗಂಟೆಗೆ ಹೊಸಳ್ಳಿ ಗ್ರಾಮದ ಕುಶಾಲಪ್ಪ ಅವರಿಗೆ ಸೇರಿದ ಗದ್ದೆಯಲ್ಲಿ ಕ್ರೀಡಾಕೂಟ ಆರಂಭಗೊಳ್ಳಲಿದ್ದು, ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥಸ್ವಾಮೀಜಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಹುಣಸೂರು ಶಾಸಕ ಹರೀಶ್ ಗೌಡ, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹರಪಳ್ಳಿ ರವೀಂದ್ರ, ಜಿಲ್ಲಾ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಉದ್ಯಮಿ ಅರುಣ್ ಕೊತ್ನಳ್ಳಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಒಕ್ಕಲಿಗ ಸಮುದಾಯದ ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ. ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆ ಮತ್ತು ಪುರುಷರ ಪ್ರತ್ಯೇಕ ವಿಭಾಗದಲ್ಲಿ ಹಗ್ಗಜಗ್ಗಾಟ,…
ಮಡಿಕೇರಿ ಜು.19 : ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜು.21 ರ ಸಂಜೆ 5 ಗಂಟೆಯಿಂದ ಜುಲೈ, 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು, ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಮತ್ತು ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಜು.19 : ಪ್ರಸಕ್ತ (2023-24) ಸಾಲಿನ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಲ್ಲಿ ತಾಳೆ ಬೆಳೆಯನ್ನು ತೋಟಗಾರಿಕಾ ಇಲಾಖಾ ಪಾಲುದಾರ ಕಂಪನಿಯಾದ ಪತಂಜಲಿ ಫುಡ್ಸ್ ಲಿಮಿಟೆಡ್ ಅವರೊಂದಿಗೆ ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಅದರಂತೆ ತಾಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳಲು ಒಂದು ಹೆಕ್ಟೇರ್‍ಗೆ 143 ಉತ್ಕೃಷ್ಟ ಗುಣ ಮಟ್ಟದ ತಾಳೆ ಸಸಿಗಳು ಬೇಸಾಯ ಹಾಗೂ ಇತರೆ ವೆಚ್ಚ ಸೇರಿ ರೂ.20 ಸಾವಿರ ಸಹಾಯಧನ ನೀಡಲಾಗುತ್ತದೆ. ಹಾಗೆಯೇ ಮುಂದಿನ ಮೊದಲನೇ, ಎರಡನೇ, ಮೂರನೇ ಹಾಗೂ ನಾಲ್ಕನೇ ವರ್ಷದ ಪಾಲನೆಗೆ ರೂ.5,250 ಪ್ರತಿ ಹೆಕ್ಟೇರ್‍ಗೆ ಸಹಾಯಧನ ನೀಡಲಾಗುವುದು. ಇದರ ಜೊತೆಗೆ ತಾಳೆ ಕಟಾವು ಯಂತ್ರ, ಡಿಸೇಲ್ ಪಂಪ್‍ಸೆಟ್ ಖರೀದಿಗೆ ಶೇ.50ರ ಸಹಾಯಧನ ಹಾಗೂ ಅಂತರ ಬೇಸಾಯ ಕೈಗೊಂಡಿದ್ದಲ್ಲಿ ಹೆಕ್ಟೇರ್‍ಗೆ ರೂ. 5 ಸಾವಿರ ಸಹಾಯಧನ ನೀಡಲಾಗುತ್ತದೆ. ಆಸಕ್ತ ರೈತರು ನಿಗದಿತ ಅರ್ಜಿ ನಮೂನೆ, ಪಹಣೆ (ಆರ್‍ಟಿಸಿ) ಆಧಾರ್ ಕಾರ್ಡ್ ಹಾಗೂ ಮತ್ತಿತರ ದಾಖಲಾತಿಗಳನ್ನು ಆಯಾಯ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಜುಲೈ,…
ಮಡಿಕೇರಿ ಜು.19 : ಪ್ರಸಕ್ತ(2023-24) ಸಾಲಿನಿಂದ ಸೋಮವಾರಪೇಟೆ ತಾಲ್ಲೂಕಿನ ಬಿ.ಟಿ.ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಪ್ರಾರಂಭಿಸಲಾಗಿದೆ. ದ್ವಿತೀಯ ಪಿಯುಸಿ ತರಗತಿಯಲ್ಲಿ ಯಾವುದೇ ಸಂಯೋಜನೆಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಪ್ರಥಮ ವರ್ಷ ಬಿಸಿಎ ತರಗತಿಗೆ ಪ್ರವೇಶಾತಿ ಹೊಂದಬಹುದಾಗಿದೆ. ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್, ಭಾವಚಿತ್ರದೊಂದಿಗೆ ಈ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.9591163808, 948007249, 9480057029, 9590433420, 8050252033 ನ್ನು ಸಂಪರ್ಕಿಸಬಹುದು ಎಂದು ಸೋಮವಾಪೇಟೆ ತಾಲ್ಲೂಕಿನ ಬಿ.ಟಿ.ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಜು.19 : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಜುಲೈ ಮಾಹೆಯಲ್ಲಿ “ಪ್ಲಾಸ್ಟಿಕ್ ಮುಕ್ತ ಅಭಿಯಾನ” ಕೈಗೊಂಡಿದ್ದು, ನಗರದಲ್ಲಿ ಈಗಾಗಲೇ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಿರ್ಬಂಧಿಸಿದ್ದು, ನಗರಸಭೆ ವತಿಯಿಂದ ಆಗ್ಗಿಂದಾಗೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‍ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುತ್ತಿದೆ. ಈ ಕಾರ್ಯವನ್ನು ನಗರಸಭೆಯು ಮುಂದುವೆರೆಸಲಿದ್ದು, ಸಾರ್ವಜನಿಕರು ಹಾಗೂ ಉದ್ದಿಮೆದಾರರು ಸಹಕರಿಸಲು ಕೋರಿದೆ. ಸರ್ಕಾರದ ಆದೇಶದಂತೆ ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳ ಅಕ್ರಮ ಮಾರಾಟ, ದಾಸ್ತಾನು ಸಂಗ್ರಹಣೆ ಹಾಗೂ ಬಳಕೆ ಕುರಿತಂತೆ ದಂಡಗಳನ್ನು ವಿಧಿಸಲಾಗುವುದೆಂದು ಈ ಮೂಲಕ ತಿಳಿಯಪಡಿಸಿದೆ. ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಮಾರಾಟಕ್ಕೆ ಮೊದಲನೇ ಅಪರಾಧಕ್ಕೆ ದಂಡ ರೂ.500, 2ನೇ ಅಪರಾಧಕ್ಕೆ ದಂಡ ರೂ.1,000, ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಅಕ್ರಮ ದಾಸ್ತಾನು 1 ಕೆ.ಜಿ. ಮೊದಲನೇ ಅಪರಾಧಕ್ಕೆ ರೂ.500, ಎರಡನೇ ಅಪರಾಧಕ್ಕೆ 1000, 1 ರಿಂದ 10 ಕೆ.ಜಿ.ವರೆಗೆ ಮೊದಲನೆ ಅಪರಾಧಕ್ಕೆ ರೂ.2 ಸಾವಿರ, ಎರಡನೇ ಅಪರಾಧಕ್ಕೆ ರೂ.5 ಸಾವಿರ, 10 ರಿಂದ 50 ಕೆ.ಜಿ.ವರೆಗೆ ಮೊದಲನೇ ಅಪರಾಧಕ್ಕೆ ರೂ.5 ಸಾವಿರ,…
ಮಡಿಕೇರಿ ಜು.19 : ಕೇಂದ್ರದ ಮಾಜಿ ಸಚಿವ ಹಾಗೂ ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ರಾಜ್ಯಸಭಾ ನಿಧಿಯಿಂದ ಕೊಡಗು ಜಿಲ್ಲೆಗೆ ನೀಡಿದ ಅನುದಾನದಲ್ಲಿ ನೂರುಕ್ಕನಾಡ್ ಹಿಲ್ಸ್-ಕತ್ತಲೆಕಾಡ್ ರಸ್ತೆ ಅಭಿವೃದ್ಧಿಯಾಗಿದೆ. ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಡಾ.ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ ಹಾಗೂ ವಿಹೆಚ್‍ಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕೊಡವರು ಹಾಗೂ ಕೊಡಗಿನ ಮೇಲಿನ ಅಭಿಮಾನ ಮತ್ತು ಪ್ರೀತಿಯಿಂದ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಅನುದಾನವನ್ನು ನೀಡಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಪ್ರಯತ್ನದ ಫಲವಾಗಿ ಇಂದು ರಸ್ತೆ ನಿರ್ಮಾಣಗೊಂಡಿದೆ. ಗ್ರಾಮಸ್ಥರು ಕಾಮಗಾರಿಯ ಬಗ್ಗೆ ಹೆಚ್ಚು ಆಸಕ್ತಿ ತೋರಿ ತಮ್ಮನ್ನು ತಾವು ತೊಡಗಿಸಿಕೊಂಡ ಕಾರಣ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗಿದೆ ಎಂದರು. ಯಾವುದೇ ಯೋಜನೆಗಳು ಅನುಷ್ಠಾನಗೊಳ್ಳುವಾಗ ಆಯಾ ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟದ ಬಗ್ಗೆ ನಿಗಾ ವಹಿಸಬೇಕಾಗುತ್ತದೆ. ಹೆದ್ದಾರಿಗಳು ಮಾತ್ರ ಉತ್ತಮವಾಗಿದ್ದರೆ ಸಾಲದು, ಗ್ರಾಮೀಣ…
ಮಡಿಕೇರಿ ಜು.19 : ಜಿಲ್ಲಾ ಸಹಾಯವಾಣಿ 08272-298379, 9535626053, ಮಡಿಕೇರಿ ಸಹಾಯವಾಣಿ 08272-295087, 9980898522, ಸೋಮವಾರಪೇಟೆ ಸಹಾಯವಾಣಿ 08276-200023, 9980955250, ಕುಶಾಲನಗರ ಸಹಾಯವಾಣಿ 08276-200023, 9980955250, ವಿರಾಜಪೇಟೆ ಸಹಾಯವಾಣಿ 7795732295, ಪೊನ್ನಂಪೇಟೆ ಸಹಾಯವಾಣಿ 7795732295.






