ಲೇಖಕ: admin

ಮಡಿಕೇರಿ ಜು.15 : ಜಮ್ಮಾಭೂಮಿ ಎನ್ನುವುದು ಯಾರೂ ಬಳುವಳಿಯಾಗಿ ನೀಡಿದ ಭೂಮಿಯಲ್ಲ, ಇದು ಕೊಡವರ ಉಸಿರು ಮಾತ್ರವಲ್ಲ ಜನ್ಮಸಿದ್ಧ ಹಕ್ಕಾಗಿದೆ ಎಂದು ಹಿರಿಯ ಸಾಹಿತಿ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕೊಡವ ಎಂ.ಎ.ವಿಭಾಗದ ಉಪನ್ಯಾಸಕ ಬಾಚರಣಿಯಂಡ ಅಪ್ಪಣ್ಣ ತಿಳಿಸಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಕೊಡವ ಎಂ.ಎ.ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ನಡೆದ ಲೇಖಕಿ ಐಚಂಡ ರಶ್ಮಿ ಮೇದಪ್ಪ (ತಾಮನೆ-ಕೈಪಟ್ಟಿರ) ಬರೆದಿರುವ ಕೊಡವ ಮಕ್ಕಡ ಕೂಟದ 67ನೇ ಪುಸ್ತಕ “ಚೆರ್ ಕತೆ ಮತ್ತು ಚೆರ್ ನಾಟಕ”, ಲೇಖಕಿ ಕರವಂಡ ಸೀಮಾ ಗಣಪತಿ (ತಾಮನೆ-ಮಡೆಯಂಡ) ಬರೆದಿರುವ ಕೊಡವ ಮಕ್ಕಡ ಕೂಟದ 68ನೇ ಪುಸ್ತಕ “ಕವನ ಪೊಟ್ಟಿ”, ಕೊಡವ ಎಂ.ಎ ವಿದ್ಯಾರ್ಥಿಗಳಾದ ಬೊಪ್ಪಂಡ ಶ್ಯಾಮ್ ಪೂಣಚ್ಚ, ಲೆ.ಕರ್ನಲ್ ಬಿ.ಎಂ.ಪಾರ್ವತಿ (ಬಲ್ಯಡಿಚಂಡ), ಐಚಂಡ ರಶ್ಮಿ ಮೇದಪ್ಪ, ಪುತ್ತರಿರ ವನಿತ ಮುತ್ತಪ್ಪ (ತಾಮನೆ-ಮನೆಯಪಂಡ), ಆಪಾಡಂಡ ಎನ್.ಹೇಮಾವತಿ(ಜಾನ್ಸಿ-ತಾಮನೆ-ಬೊಳ್ಳಾರ್‍ಪಂಡ), ಬೊಳ್ಳಜಿರ ಅಯ್ಯಪ್ಪ, ಚೌಂಡಿರ ಶಿಲ್ಪ ಪೊನ್ನಪ್ಪ (ತಾಮನೆ-ಚಿಕ್ಕಂಡ), ಬೊಳ್ಳಜಿರ…

Read More

ವಿರಾಜಪೇಟೆ ಜು.15 : ನಗರದಲ್ಲಿ ವಾಹನ ಸಂಚಾರವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆಗೊಳಿಸಿ ತೆರಳುವುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರದಾಡುವಂತಾಗಿದ್ದು, ಸೂಕ್ತ ರೀತಿಯಲ್ಲಿ ವಾಹನ ನಿಲುಗಡೆಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ವಿರಾಜಪೇಟೆ ನಗರದಲ್ಲಿ ವಾಹನಗಳ ದಟ್ಟಣೆ ಕಾಣಿಸಿಕೊಂಡಿದ್ದು, ಬೆಳಿಗ್ಗೆ ಮತ್ತು ಸಂಜೆ ವೇಳೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ರಸ್ತೆ ಸಂಚಾರದಲ್ಲಿ ಅನಾನುಕೂಲವಾಗುತ್ತಿದೆ. ವಿರಾಜಪೇಟೆ ನಗರದ ಮೂರ್ನಾಡು ರಸ್ತೆಯಿಂದ ಚಿಕ್ಕಪೇಟೆ ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲುಗಡೆಗೊಳಿಸಿ ವಾಹನ ಚಾಲಕರು ಹಿಂದುರುಗುತ್ತಿದ್ದಾರೆ. ಸಂತ ಅನ್ನಮ್ಮ ಕಾಲೇಜು, ಸರ್ಕಾರಿ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಜಯಪ್ರಕಾಶ್ ನಾರಾಯಣ್ ಪ್ರೌಢಶಾಲೆ, ಕಾವೇರಿ ಆಂಗ್ಲ ಮಾದ್ಯಮ ಶಾಲೆ ಮತ್ತು ತ್ರಿವೇಣಿ ಆಂಗ್ಲ ಮಾದ್ಯಮ ಶಾಲೆಗಳಿಗೆ ತೆರಳುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಈ ಮಾರ್ಗದಲ್ಲೇ ತೆರಳಬೇಕಾಗಿದ್ದು, ಮಠದ ಗದ್ದೆಯ ಸಮೀಪದ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಬೃಹತ್ ವಾಹನಗಳು ನಿಲುಗಡೆಗೊಳ್ಳುತ್ತವೆ. ಅಲ್ಲದೆ ಇದೇ…

Read More

ನಾಪೋಕ್ಲು ಜು.10 : ವಿರಾಜಪೇಟೆಯಿಂದ ನಾಪೋಕ್ಲುವಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಸ್ತೆಯಂಚಿಗೆ ಸರಿದಿದೆ. ಮರಂದೋಡು ಗ್ರಾಮದ ಮೇರಿಯಂಡ ಮೊಟ್ಟೆ ಎಂಬಲ್ಲಿ ಬಸ್ಸು ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ರಸ್ತೆಯಂಚಿಗೆ ಸರಿದಿದ್ದು, ಪ್ರಯಾಣಿಕರು ಪರಾಗಿದ್ದಾರೆ. ಬಸ್ಸಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸುಮಾರು 25 ಜನ ಇದ್ದು ಪಾಯದಿಂದ ಪಾರಾಗಿದ್ದಾರೆ. ಬಳಿಕ ಇತರ ವಾಹನದ ನೆರವಿನಿಂದ ಬಸ್ ಅನ್ನು ಸ್ಥಳದಿಂದ ತೆರವುಗೊಳಿಸಲಾಯಿತು. ಇಲ್ಲಿನ ರಸ್ತೆ ಕಿರಿದಾಗಿದ್ದು, ವಾಹನ ಸಂಚಾರಕ್ಕೆ ಪದೇಪದೇ ಅಡ್ಡಿಯಾಗುತ್ತಿದೆ. ಮುಖಾಮುಖಿಯಾಗಿ ಎರಡು ವಾಹನಗಳು ಬಂದರೆ ಸಂಚರಿಸಲು ಸಾಧ್ಯವಾಗುತ್ತಿಲ್ಲ. ರಸ್ತೆಯನ್ನು ವಿಸ್ತರಿಸಬೇಕು. ತಪ್ಪಿದಲ್ಲಿ ರಸ್ತೆಯಂಚಿಗೆ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರಾದ ಚೋಯಮಾಡಂಡ ಹರೀಶ್ ಆಗ್ರಹಿಸಿದ್ದಾರೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆಗೆ ಹಾಗೂ ಗ್ರಾಮ ಪಂಚಾಯಿತಿಗೆ ಮನವಿ ಮಾಡಲಾಗಿತ್ತು. ಆದರೂ ಸಂಬಂಧಿಸಿದವರು ಸ್ಪಂದಿಸಿಲ್ಲ ಇದರಿಂದಾಗಿ ಸಮಸ್ಯೆ ಪುನರಾವರ್ತನೆಯಾಗುತ್ತಿದ್ದು, ಸಂಬಂಧಿಸಿದವರು ಜೀವಹಾನಿ ಆಗುವ ಮೊದಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹರೀಶ್ ಒತ್ತಾಯಿಸಿದ್ದಾರೆ . ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಜು.15 : ಸರ್ವರಿಗೂ ಸಮಪಾಲು ಸೂತ್ರದಡಿ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕ್ರೈಸ್ತ ಸಮುದಾಯದ ಕಳೆದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ನಿಗಮವನ್ನು ಘೋಷಿಸಿ 100 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿರುವುದು ಶ್ಲಾಘನಾರ್ಹ ಎಂದು ಹೇಳಿದ್ದಾರೆ. ಪ್ರತ್ಯೇಕ ನಿಗಮ ಸ್ಥಾಪನೆಯಿಂದ ಹಿಂದುಳಿದಿರುವ ಕ್ರೈಸ್ತರ ಅಭ್ಯುದಯಕ್ಕೆ ಸಹಕಾರಿಯಾಗಲಿದೆ. ಶೈಕ್ಷಣಿಕ ಪ್ರಗತಿಗೂ ಪೂರಕವಾಗಿದೆ ಮತ್ತು ಕ್ರೈಸ್ತ ಮಂದಿರಗಳ ಅಭಿವೃದ್ಧಿಯೂ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಲ್ಪಸಂಖ್ಯಾತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು 60 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಪ್ರಸಕ್ತ…

Read More

ಮಡಿಕೇರಿ ಜು.14 : ಅಮ್ಮತ್ತಿಯ ಪುಲ್ಲೇರಿ ಗ್ರಾಮದ ಇಂಜಿಲಗೆರೆಯಲ್ಲಿ ಒಂಟಿ ಸಲಗ ದಾಂಧಲೆ ನಡೆಸಿದೆ. ಸ್ಥಳೀಯ ಬೆಳೆಗಾರ ಬಿ.ಎಸ್.ಮೋಹನ ಎಂಬುವವರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ಹಲಸಿನ ಮರವೊಂದನ್ನು ಬೀಳಿಸಿದೆ. ಮರ ಬಿದ್ದ ಪರಿಣಾಮ ಅನೇಕ ಕಾಫಿ ಗಿಡಗಳಿಗೆ ಹಾನಿಯಾಗಿದೆ. ಮರಕ್ಕೆ ಹಬ್ಬಿಸಲಾಗಿದ್ದ ಕಾಳುಮೆಣಸಿನ ಬಳ್ಳಿ ನಾಶವಾಗಿದೆ. ಸ್ಪಿಂಕ್ಲರ್ ಪೈಪ್ ಗಳು ಮುರಿದು ಹೋಗಿವೆ, ಬಾಳೆ ಗಿಡಗಳನ್ನು ಆನೆ ತಿಂದು ತೇಗಿದೆ. ಒಂಟಿ ಸಲಗ ತೋಟದ ತುಂಬೆಲ್ಲ ಓಡಾಡಿದ ಪರಿಣಾಮ ಗಿಡಗಳೆಲ್ಲವೂ ಹಾನಿಗೊಳಗಾಗಿದ್ದು, ಅಪಾರ ನಷ್ಟ ಉಂಟಾಗಿದೆ. ಕಾಡಾನೆ ದಾಳಿ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಬೆಳೆಗಾರ ಮೋಹನ ನಮ್ಮಂತಹ ಸಣ್ಣ ಬೆಳೆಗಾರರಿಗೆ ಇದು ತುಂಬಲಾರದ ನಷ್ಟವಾಗಿದೆ ಎಂದರು. ಪರಿಹಾರಕ್ಕಾಗಿ ಇಲಾಖೆಯಿಂದ ಇಲಾಖೆಗೆ ಅರ್ಜಿ ಹಿಡಿದು ಅಲೆದಾಡಬೇಕಾಗಿದೆ. ಇದರಿಂದ ನಮ್ಮ ಸಮಯವೂ ವ್ಯರ್ಥ, ಹಣವೂ ವ್ಯರ್ಥ, ಪರಿಹಾರವೂ ಅಲ್ಪ ಮೊತ್ತದ್ದಾಗಿರುತ್ತದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾಡಾನೆ ದಾಳಿ ಮಾಡಿದಾಗ ಅಲ್ಪ ಪರಿಹಾರ ನೀಡಿ ಕಣ್ಣೊರೆಸುವ ಬದಲು ವನ್ಯಜೀವಿಯ ಉಪಟಳ ತಡೆಗೆ ಶಾಶ್ವತ ಪರಿಹಾರ…

Read More

ಮಡಿಕೇರಿ ಜು.15 : ಸರ್ವರಿಗೂ ಸಮಪಾಲು ಸೂತ್ರದಡಿ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕ್ರೈಸ್ತ ಸಮುದಾಯದ ಕಳೆದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ನಿಗಮವನ್ನು ಘೋಷಿಸಿ 100 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿರುವುದು ಶ್ಲಾಘನಾರ್ಹ ಎಂದು ಹೇಳಿದ್ದಾರೆ. ಪ್ರತ್ಯೇಕ ನಿಗಮ ಸ್ಥಾಪನೆಯಿಂದ ಹಿಂದುಳಿದಿರುವ ಕ್ರೈಸ್ತರ ಅಭ್ಯುದಯಕ್ಕೆ ಸಹಕಾರಿಯಾಗಲಿದೆ. ಶೈಕ್ಷಣಿಕ ಪ್ರಗತಿಗೂ ಪೂರಕವಾಗಿದೆ ಮತ್ತು ಕ್ರೈಸ್ತ ಮಂದಿರಗಳ ಅಭಿವೃದ್ಧಿಯೂ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಲ್ಪಸಂಖ್ಯಾತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು 60 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಪ್ರಸಕ್ತ…

Read More

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜು.19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದರು. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಲಿಂಕ್ ಆದ ಖಾತೆಗೆ ಹಣ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಸೋಮವಾರ ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು, ಯೋಜನೆ ಉದ್ಘಾಟಿಸಲು ಕೇಂದ್ರ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ , ನಾಯಕರು ಒಪ್ಪಿಗೆ ಕೊಟ್ಟರೆ ಆಗಸ್ಟ್ 17 ರಂದೇ ಖಾತೆಗೆ ಹಣ ವರ್ಗಾವಣೆಯಾಗಲಿದೆ, ಇಲ್ಲದಿದ್ದರೇ ಆಗಸ್ಟ್ 19ಕ್ಕೆ ಹಣ ಜಮಾವಣೆಯಾಗಲಿದೆ ಎಂದು ಹೇಳಿದ್ದಾರೆ.

Read More

ಬೆಂಗಳೂರು: ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಯಶಸ್ವಿ ಉಡಾವಣೆಗಾಗಿ ಅವರು ಬೆಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು (ಇಸ್ರೋ) ಅಭಿನಂದಿಸಿದರು. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ಆವಿಷ್ಕಾರದಲ್ಲಿ ಹೊಸ ಮೈಲಿಗಲ್ಲು’ ಎಂದು ಮುಖ್ಯಮಂತ್ರಿ ಹೇಳಿದರು.

Read More

ಮಡಿಕೇರಿ ಜು.15 : ಸೋಮವಾರಪೇಟೆ ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ವತಿಯಿಂದ ಶ್ರೀಹರಿಕೋಟದಿಂದ ಉಡಾವಣೆಗೊಂಡ ದೇಶದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ -3 ನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.

Read More

ಸೋಮವಾರಪೇಟೆ ಜು.14 : ಕಕ್ಕೆಹೊಳೆಯ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಜು.17 ರಿಂದ ಭುವನೇಶ್ವರಿ ದೇವಿಗೆ ಆಷಾಢಮಾಸಸದ ದುರ್ಗಾದೀಪ ನಮಸ್ಕಾರ ಪೂಜೆಯು ಒಂದು ತಿಂಗಳು ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಅಂದು ಬೆಳಗ್ಗೆ 7ಗಂಟೆಗೆ ಗಣಪತಿ ಹೋಮದೊಂದಿಗೆ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ಅಂದಿನಿಂದ ಸಂಜೆ 6 ರಿಂದ 8ರವರೆಗೆ ಪ್ರಥಮ ದಿನದ ದುರ್ಗಾದೀಪ ನಮಸ್ಕಾರ ಪೂಜೆಯು ನೆಡೆಯಲಿದ್ದು, ರಾತ್ರಿ 8 ಗಂಟೆಯ ನಂತರ ಅನ್ನದಾನ ಏರ್ಪಡಿಸಲಾಗಿದೆ. ಆಷಾಢ ಮಾಸದ ಪೂಜೆಯು ಆ.15ರಂದು ಬೆಳಗ್ಗೆ 9 ಗಂಟೆಯಿಂದ 12 ಗಂಟೆಯವರೆಗೆ ಹೋಮ ಮತ್ತು ಅನ್ನದಾನಗಳು ನಡೆಯಲಿದೆ. ಕೊನೆಯ ದಿವಸದ ಪೂಜೆಯು ಆ.16ರಂದು ಸಂಪನ್ನಗೊಳಲಿದ್ದು, ಅಂದು ಸಂಜೆ 6ಗಂಟೆಯಿಂದ ಶತ್ರುಸಂಹಾರ ಪೂಜೆಯು ನೆರವೇರಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್‍ಕುಮಾರ್ ತಿಳಿಸಿದ್ದಾರೆ.

Read More