ಮಡಿಕೇರಿ ಜು.12 : ಕೊಡಗು ಜಿಲ್ಲೆಯಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿ, ಸಮೀಕ್ಷೆಯಲ್ಲಿ ಪತ್ತೆಯಾದ ಬಾಲ ಕಾರ್ಮಿಕರನ್ನು ಜಿಲ್ಲೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಬಾಲಕರ ಹಾಗೂ ಬಾಲಕಿಯರ ಬಾಲಮಂದಿರಗಳಲ್ಲಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ವಸತಿ ಶಾಲೆಗಳಲ್ಲಿ ಹಾಗೂ ಮುಖ್ಯವಾಹಿನಿ ಶಾಲೆಗಳಲ್ಲಿ ದಾಖಲಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಂಬಂಧ ಗುರುವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಕಾಯ್ದೆಯಂತೆ ತಪಾಸಣೆ ಕೈಗೊಂಡ ವರದಿಯನ್ನು ಪ್ರತೀ ಮಾಹೆ ಒದಗಿಸುವಂತೆ ಕಾರ್ಮಿಕ ಅಧಿಕಾರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳಬಾರದು. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ನಿಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ‘ಪ್ರತಿಯೊಬ್ಬ ಮಕ್ಕಳಿಗೂ ಶಿಕ್ಷಣ ದೊರೆತಲ್ಲಿ ಸಮಾಜದಲ್ಲಿ ಬದಲಾವಣೆ…
ಲೇಖಕ: admin
ಮಡಿಕೇರಿ ಜು.13 : ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.18 ಮತ್ತು 19 ರಂದು ಕರ್ನಾಟಕ ಲೋಕಾಯುಕ್ತದ ಕಾರ್ಯಪಾಲಕ ಅಭಿಯಂತರರಾದ ಆರ್.ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಕಾಮಗಾರಿ ಕಳಪೆ ಎಂದು ಆರೋಪಿಸಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಕಿರಿಯ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಜು.18 ಮತ್ತು 19 ರಂದು ಲೋಕಾಯುಕ್ತ ತನಿಖಾಧಿಕಾರಿಗಳಾದ ಕಾರ್ಯಪಾಲಕ ಅಭಿಯಂತರ ಆರ್.ರವಿಶಂಕರ್ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಲೋಕಯುಕ್ತದಿಂದ ಪ್ರಕರಣದ ತನಿಖೆ ನಡೆಯಲಿದ್ದು, ಈ ಸಂಬಂಧ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಕೂಡ ಶ್ರಮವಹಿಸಿದ್ದಾರೆ ಎಂದು ತೆನ್ನಿರ ಮೈನಾ ತಿಳಿಸಿದ್ದಾರೆ.
ಸಿದ್ದಾಪುರ ಜು.13 : ಸಿದ್ದಾಪುರ ಗ್ರಾಮ ಪಂಚಾಯಿತಿಯ ಗುಹ್ಯ 2ನೇ ವಾರ್ಡ್ ಸದಸ್ಯ ಹಸ್ಸನ್ 137 ಕುಟುಂಬಗಳಿಗೆ ಉಚಿತವಾಗಿ ತನ್ನ ಸ್ವಂತ ಖರ್ಚಿನಲ್ಲಿ ಮನೆ ಮನೆಗೆ ಗೃಹಜ್ಯೋತಿ ಯೋಜನೆಯನ್ನು ಮಾಡಿಕೊಡುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸದಸ್ಯನ ಸಕಾಲದ ಸ್ಪಂದನೆಯಿಂದಾಗಿ ಕೆಲಸ ರಜೆ ಮಾಡಿ ನಾಗರೀಕ ಸೇವಾಕೇಂದ್ರಕ್ಕೆ ಅಲೆದಾಡುವುದು ತಪ್ಪಿದ್ದು, ಸೇವಾಕೇಂದ್ರಗಳಿಗೆ ಖರ್ಚು ಮಾಡಬೇಕಾದ ನೂರಾರು ರೂಪಾಯಿ ಹಣವನ್ನು ತಾವೇ ಭರಿಸಿ ಮಾದರಿಯಾಗಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು,ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ. ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ. ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ. ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಸಮಾಜದಲ್ಲಿ…
ಮಡಿಕೇರಿ ಜು.13 : ಕುಶಾಲನಗರ ತಾಲೂಕು ವ್ಯಾಪ್ತಿಯ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕೊಳೆತ ಮೊಟ್ಟೆಗಳನ್ನು ಸರಬರಾಜು ಮಾಡಿರುವ ಬಗ್ಗೆ ಆರೋಪಗಳು ಕೇಳಿ ಬಂದಿದೆ. ತಾಲ್ಲೂಕಿನ ಕೂಡಿಗೆ, ಬಸವನತ್ತೂರು ಸೇರಿದಂತೆ ಕೆಲವು ಅಂಗನವಾಡಿಗಳಲ್ಲಿ ಗರ್ಭಿಣಿ ಮಹಿಳೆಯರು, ಬಾಣಂತಿಯರು ಹಾಗೂ ಕೇಂದ್ರದ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ಸರಬರಾಜು ಮಾಡಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ. ಮೊಟ್ಟೆಗಳನ್ನು ಬೇಯಿಸಿದ ಸಂದರ್ಭ ದುರ್ವಾಸನೆಯಿಂದ ಕೂಡಿದ್ದು ಈ ಬಗ್ಗೆ ತನಿಖೆ ನಡೆಸಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ರಾಜ್ಯ ಮಟ್ಟದಲ್ಲಿ ಟೆಂಡರ್ ಪಡೆದಿರುವ ಹೊರ ಜಿಲ್ಲೆಯ ಗುತ್ತಿಗೆದಾರರ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಟೆಂಡರ್ ವಹಿಸಿರುವ ಸಂಸ್ಥೆಗೆ ನೋಟಿಸ್ ನೀಡಿದ್ದಾರೆ. ಇಲಾಖೆ ಅಧಿಕಾರಿಗಳಾದ ನಟರಾಜ್ ಹಾಗೂ ವಿಮಲಾ ಅವರುಗಳು ಕುಶಾಲನಗರ ಸಮೀಪದ ಬಸವನತ್ತೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ…
ಮಡಿಕೇರಿ ಜು.13 : ಕೊಡಗು ಜಿಲ್ಲಾ ಪೊಲೀಸ್ ಮತ್ತು ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಡ್ರಗ್ ದುರುಪಯೋಗ ಮತ್ತು ಸೈಬರ್ ಅಪರಾಧದ ಕುರಿತು ಅರಿವು ಮೂಡಿಸಲಾಯಿತು. ಈ ಸಂದರ್ಭ ಕಾಲೇಜು ವಿದ್ಯಾರ್ಥಿಗಳೊಂದಿಗೆ ಡ್ರಗ್ ದುರುಪಯೋಗ ಮತ್ತು ಸೈಬರ್ ಅಪರಾಧ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸಂವಾದ ನಡೆಸಿದರು. ಕಾರ್ಯಾಗಾರದಲ್ಲಿ ಸಿಐಟಿ ಕಾಲೇಜಿನ ಅಧ್ಯಕ್ಷ ಡಾ. ಕಾರ್ಯಪ್ಪ, ಉಪಾಧ್ಯಕ್ಷ ರಾಜೇಶ್ ಪೂವಯ್ಯ, ಪ್ರಾಂಶುಪಾಲ ಡಾ: ಬಸವರಾಜು, ಕಾಲೇಜಿನ ವಿದ್ಯಾರ್ಥಿವರ್ಗ, ಬೋಧಕ ವರ್ಗ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಏಡಿ ಕೇವಲ ರುಚಿಕರ ಮಾತ್ರವಲ್ಲ ಪ್ರೋಟೀನ್ ಸಮೃದ್ಧ ಆಹಾರವೂ ಆಗಿದೆ. ಜೊತೆಗೆ ಹಲವಾರು ಅಮೈನೋ ಆಮ್ಲಗಳಿದ್ದು ಇವು ಪ್ರೋಟೀನ್ ಉತ್ಪಾದನೆಗೆ ನೆರವಾಗುತ್ತವೆ. ವಿಶೇಷವಾಗಿ, ಕೊರೆಯುವ ಮಳೆ ಹಾಗೂ ಚಳಿಗೆ ಬಿಸಿ ಬಿಸಿ ಏಡಿ ಸಾಂಬಾರು ಸೂಪರ್ ಆಗಿರುತ್ತದೆ. ಬೇಕಾಗುವ ಸಾಮಗ್ರಿಗಳು : ಸಾಂಬಾರಿಗೆ ಬೇಕಾಗುವಷ್ಟು ಏಡಿ. (ಹಳ್ಳದ ಏಡಿ, ಸಮುದ್ರದ ಏಡಿ ಯಾವುದಾದರೂ), ಟೊಮೋಟೊ 2, ತೆಂಗಿನತುರಿ ಸ್ವಲ್ಪ, ಈರುಳ್ಳಿ-1 (ಕತ್ತರಿಸಿದ್ದು), ಬೆಳ್ಳುಳ್ಳಿ-5 ಎಸಳು , ಶುಂಠಿ ಅಗತ್ಯಕ್ಕೆ ತಕ್ಕಷ್ಟು (ಕತ್ತರಿಸಿದ್ದು), ಹುಣಸೆಹಣ್ಣು-ಅಗತ್ಯಕ್ಕೆ ತಕ್ಕಷ್ಟು, ಜೀರಿಗೆ-ಅಗತ್ಯಕ್ಕೆ ತಕ್ಕಷ್ಟು, ಕಾಳುಮೆಣಸು-ಅಗತ್ಯಕ್ಕೆ ತಕ್ಕಷ್ಟು, ಬ್ಯಾಡಿಗೆ ಮೆಣಸಿನಕಾಯಿ-5, ಕೊತ್ತಂಬರಿ ಬೀಜ-ಅಗತ್ಯಕ್ಕೆ ತಕ್ಕಷ್ಟು, ಕರಿಬೇವಿನ ಸೊಪ್ಪು, ಕೊತ್ತಂಬರಿ ಸೊಪ್ಪು (ಕತ್ತರಿಸಿದ್ದು-ಸ್ವಲ್ಪ). ಮಾಡುವ ವಿಧಾನ :: ಮೊದಲಿಗೆ ಏಡಿಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು, ನಂತರ ಬ್ಯಾಡಗಿ ಮೆಣಸಿನಕಾಯಿ ಕೊತ್ತಂಬರಿ ಮತ್ತು ಈರುಳ್ಳಿ, ಕೊತ್ತಂಬರಿಸೊಪ್ಪು ಮತ್ತು ಜೀರಿಗೆ ಬೆಳ್ಳುಳ್ಳಿ ಶುಂಠಿ ಎಲ್ಲವನ್ನೂ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಬೇಕು. ಟೊಮೊಟೊ ಮತ್ತು ತೆಂಗಿನ ತುರಿ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಬೇಕು. ಅದಾದ ಮೇಲೆ ಒಂದು ಪಾತ್ರೆ ಇಟ್ಟು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ ಕರಿಬೇವಿನ…
ಸುಂಟಿಕೊಪ್ಪ,ಜು.13: ನಾಕೂರು ಶಿರಂಗಾಲ ಗ್ರಾ.ಪಂ ಯ 2023-24ನೇ ಸಾಲಿನ ಗ್ರಾಮ ಸಭೆಯು ಜು.14 ರಂದು ಗ್ರಾ.ಪಂ. ಅಧ್ಯಕ್ಷ ಎಂ.ಸಿ.ಜಗನ್ನಾಥ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜು.13 : ಕುಡಿದ ಅಮಲಿನಲ್ಲಿ ಪುತ್ರನೇ ತಾಯಿಯನ್ನು ಹತ್ಯೆ ಮಾಡಿರುವ ಆರೋಪದಡಿ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಲಿತ (45) ಎಂಬುವವರು ಮೃತ ದುರ್ದೈವಿಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕಟ್ಟೆಪುರ ಹಾಡಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಜೇನುಕುರುಬರ ರಾಜಶೇಖರ್ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಿ, ಮಗನ ನಡುವೆ ಕಲಹ ತಾರಕಕ್ಕೇರಿದಾಗ ಆರೋಪಿ ದೊಣ್ಣೆಯಿಂದ ತಲೆಗೆ ಹೊಡೆದು ಲಲಿತಳನ್ನು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಸ್ಥಳಕ್ಕೆ ಶನಿವಾರಸಂತೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಜು.13 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಜು.25 ರಂದು ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಪತ್ರಕರ್ತರು ಸೇರಿದ್ದಂತೆ ಸಾರ್ವಜನಿಕರು ರಕ್ತದಾನ ಮಾಡಲಿದ್ದಾರೆಂದು ಕಾರ್ಯಕ್ರಮ ಸಂಚಾಲಕ ಪುತ್ತಂ ಪ್ರದೀಪ್ ಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರ ಹಾಗೂ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ. ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ರಕ್ತಧಾನ ಮಾಡುವವರು ಜು.20 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ತಮ್ಮ ಹೆಸರನ್ನ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ವಿ.ವಿ.ಅರುಣ್ ಕುಮಾರ್ (9448331229) ಅವರಲ್ಲಿ ನೋಂದಾಯಿಸಿಕೊಳ್ಳಬಹುದು.






