ಲೇಖಕ: admin

ಮಡಿಕೇರಿ ಆ.13 : ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅರೆಕಾಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ದೇವಪ್ಪ ಅವರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಸಿದ್ದಾಪುರ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ನೋಡಿದ ನಂತರ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರುಗಳು ಕಾಡಾನೆ ಉಪಟಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

Read More

ಮಡಿಕೇರಿ ಆ.13 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಂಜಿನ ನಗರಿ ಛಾಯಾಗ್ರಾಹಕರ ಸಂಘದ ಆಶ್ರಯದಲ್ಲಿ ಆಗಸ್ಟ್ 19ರಂದು ಮಡಿಕೇರಿಯಲ್ಲಿ ವಿಶ್ವ ಛಾಯಾಚಿತ್ರ ದಿನವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಗೆ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸಂಘದ ಹಿರಿಯ ಸಲಹೆಗಾರರು ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಅವರು ತಮ್ಮ ಪುತ್ರಿ ಡಾ.ಅನುಶ್ರೀ ಅವರ ಹ್ಯಾಪಿ ಟೀತ್ ಡೆಂಟಲ್ ಕ್ಲಿನಿಕ್ ಹೆಸರಿನಲ್ಲಿ ಸ್ಥಾಪಿಸಿರುವ ‘ಮಾನವೀಯ ಮೌಲ್ಯ’ಗಳನ್ನು ಒಳಗೊಂಡ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿಗೆ ಛಾಯಾ ಚಿತ್ರಗಳನ್ನು ಕಳುಹಿಸಬಹುದಾಗಿದೆ. 2023ರ ಜನವರಿಯಿಂದ 2023ರ ಆಗಸ್ಟ್ 1ರೊಳಗೆ ತೆಗೆದ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಕಳುಹಿಸಬೇಕು. ಛಾಯಾಚಿತ್ರವನ್ನು ಎಡಿಟ್ ಮಾಡುವಂತಿಲ್ಲ. ಅದೇ ರೀತಿ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಕೊಡಗಿನ ಕೃಷಿಗೆ ಸಂಬಂಧಿಸಿದಂತೆ ನೀಡುವ ಅತ್ಯುತ್ತಮ ಛಾಯಾಚಿತ್ರ ಪ್ರಶಸ್ತಿ ಹಾಗೂ ಕೊಡಗಿನ ಜಲಪಾತಗಳ ವೈಭವಕ್ಕೆ ಸಂಬಂಧಿಸಿದ ವೀಡಿಯೋ ಗ್ರಫಿ ಪ್ರಶಸ್ತಿಗೆ ವೀಡಿಯೋ ಹಾಗೂ ಛಾಯಾಚಿತ್ರಗಳನ್ನು ಕಳುಹಿಸಬಹುದಾಗಿದೆ. 2023ರ…

Read More

ಕಡಂಗ ಆ.13 : ಕೊಡಗು ಜಿಲ್ಲಾ ಆಮಿಲಾ ಸಮಿತಿಯ ಅಧ್ಯಕ್ಷ ಹ್ಯಾರಿಸ್ ನೇತೃತ್ವದಲ್ಲಿ ಕಾಕೋಟುಪರಂಬು ಹಾಗೂ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಪಟ್ಟಣದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಚ್ಛತ್ತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛತ್ತಾ ಕಾರ್ಯಕ್ರಮವು ವಿಜಯ ಪ್ರೌಢ ಶಾಲೆಯಿಂದ ಆರಂಭ ಗೊಂಡು ಪಟ್ಟಣದ ಕೆಡಿಸಿಸಿ ಬ್ಯಾಂಕ್ ನ ವರೆಗೆ ರಸ್ತೆಯ ಬದಿಗಳಲ್ಲಿದ್ದ ಕಸ,ಕಡ್ಡಿ, ಪ್ಲಾಸ್ಟಿಕ್,ಪ್ಲಾಸ್ಟಿಕ್ ಬಾಟಲ್ ಹಾಗೂ ರಸ್ತೆಯ ಬದಿಯಲ್ಲಿದ್ದ ಕಾಡುಗಳನ್ನು ಕಡಿದು ಸ್ವಚ್ಛ ಗೊಳಿಸಲಾಯಿತು. ವಿರಾಜಪೇಟೆ ತಾಲೂಕು ಕಾಕೋಟುಪರಂಬು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕಡಂಗ ಮುರೂರು ಗ್ರಾಮಕ್ಕೆ ಒಳಪಟ್ಟ ಕಡಂಗ ಪಟ್ಟಣದ ವಿಜಯ ಪ್ರೌಢ ಶಾಲೆಯ ಸಮೀಪ ಹಾಗೂ ಮಸೀದಿಯ ಸಮೀಪ ಸ್ಥಳೀಯರು ಕಸವನ್ನು ತಂದು ಸುರಿಯುತ್ತಿದ್ದು ಗ್ರಾಮ ಪಂಚಾಯಿತಿ ಇತ್ತ ಗಮನ ಹರಿಸುತ್ತಿಲ್ಲ. ಪ್ರೌಢ ಶಾಲೆಯ ಸಮೀಪದಲ್ಲೇ ಇರುವ ಬಸ್ ತಂಗುದಾಣದಲ್ಲಿ ಮದ್ಯ ಕುಡಿದು ಬಾಟಲಿಗಳನ್ನು ಅಲ್ಲೇ ಹಾಕಿದ್ದಾರೆ ಇದರಿಂದ ನಿತ್ಯ ಬಸ್ ಗಾಗಿ ತಂಗುದಾಣದಲ್ಲಿ ಕಾಯುವ ವಿದ್ಯಾರ್ಥಿಗಳು ಗೋಳು ಹೇಳತಿರದು, ಕೂಡಲೇ ಸಂಬಂಧ ಪಟ್ಟ ಗ್ರಾಮ ಪಂಚಾಯಿತಿ…

Read More

ಮಡಿಕೇರಿ ಆ.13 : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ನೆಹರು ನಗರದ ನಿವಾಸಿ ಎಂ.ಕೆ.ಸಜೀರ್(31) ಆರೋಪಿಯಾಗಿದ್ದು, 205 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ವಿರಾಜಪೇಟೆಯ ಬಿಟ್ಟಂಗಾಲ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಎಂ.ಕೆ.ಸಜೀರ್ ನನ್ನು ಮಾಲು ಸಹಿತ ಬಂಧಿಸಿದರು. ಮಡಿಕೇರಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಜಗದೀಶ್, ವಿರಾಜಪೇಟೆ ಪಟ್ಟಣದ ವೃತ್ತ ನಿರೀಕ್ಷಕ ಬಿ.ಎಸ್.ಶಿವರುದ್ರಪ್ಪ, ಗ್ರಾಮಾಂತರ ಠಾಣಾಧಿಕಾರಿ ಸಿ.ಸಿ.ಮಂಜುನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಆ.13 : ಜಗತ್ತಿನ ಜನಸಂಖ್ಯೆ ಕೃಷಿಯನ್ನೇ ಅವಲಂಭಿಸಿದ್ದು, ಕೃಷಿಯೇ ಜನರ ಜೀವಾಳವಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಉತ್ಪಾದನಾ ಕ್ಷೇತ್ರಕ್ಕೆ ತಾಂತ್ರಿಕತೆಯ ಸ್ಪರ್ಶದ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ ವಿಸ್ತರಣ ಘಟಕ ಮಡಿಕೇರಿ ಇದರ ವತಿಯಿಂದ ಪೊನ್ನಂಪೇಟೆ ನಲ್ಲೂರು ಗ್ರಾಮದ ಪ್ರಗತಿಪರ ಕೃಷಿಕ ಸೋಮೇಂಗಡ ಗಣೇಶ್ ತಿಮ್ಮಯ್ಯ ಅವರ ಭತ್ತದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿಯ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಕೊಡಗು ಜಿಲ್ಲೆಯ ಜಮ್ಮಾ ಭೂಮಿಗಳು ಮೊದಲು ಭತ್ತದ ಗದ್ದೆಗಳಾಗಿದ್ದು, ಅತೀ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಾಗುತ್ತಿತ್ತು. ಕೃಷಿ ಸಂಬಂಧಿತ ಜಮ್ಮಾಬಾಣೆಗಳನ್ನು ಜಾನುವಾರುಗಳನ್ನು ಮೇಯಿಸಲು ಬಳಸಲಾಗುತ್ತಿತ್ತು. ಕಾಫಿ ಬೆಳೆ ಕಾಲಿಟ್ಟ ಬಳಿಕ ಆರ್ಥಿಕತೆಯ ದೃಷಿಯಿಂದ ಅತ್ತ ಕಡೆ ಕೃಷಿಕರು ಮುಖ ಮಾಡಿದರು ಎಂದು ಹೇಳಿದರು. ಈ ಮೊದಲು ಕೊಡಗು…

Read More

ಮಡಿಕೇರಿ ಆ.13 : ಹಾರಂಗಿ ಅಣೆಕಟ್ಟೆಯಿಂದ ಮುಂದಿನ 15 ದಿನಗಳವರೆಗೆ ಪ್ರತಿ ದಿನ 1500 ಕ್ಯೂಸೆಕ್ ನೀರು ನದಿ ಮತ್ತು ಕಾಲುವೆ ಮೂಲಕ ಹರಿಸಲು ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ ನಿರ್ಧರಿಸಿದೆ. ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕಛೇರಿಯಲ್ಲಿ ಸಲಹಾ ಸಮಿತಿ ಸಭೆ ನಡೆಯಿತು. ಉತ್ತಮ ಮಳೆಯಾಗದ ಕಾರಣ ನೀರಿನ ಅಭಾವ ಉಂಟಾಗಿರುವುದರಿಂದ ರೈತರು ಹಾಗೂ ಜನ, ಜಾನುವಾರುಗಳಿಗೆ ನೀರು ಹರಿಸುವ ಸಂಬಂಧ ಚರ್ಚಿಸಲಾಯಿತು. 15 ದಿನಗಳ ಅಂತರದಲ್ಲಿ ನೀರು ಸ್ಥಗಿತಗೊಳಿಸಿ, ಮುಂದಿನ 15 ದಿನಗಳ ಕಾಲ ಕಟ್ಟುಪದ್ಧತಿಯಲ್ಲಿ ನೀರು ಹರಿಬಿಡಲು ಇಂದಿನಿಂದಲೇ ಕ್ರಮ ಕೈಗೊಳ್ಳುವಂತೆ ನಿಗಮದ ಅಧಿಕಾರಿಗಳಿಗೆ ಸಚಿವರು ಹಾಗೂ ಶಾಸಕರು ಸೂಚನೆ ನೀಡಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಶಾಸಕರಾದ ಎ.ಮಂಜು, ರವಿಶಂಕರ್, ವಿಧಾನ ಪರಿಷತ್ ಸದಸ್ಯ ಮರಿ ತಿಬ್ಬೇಗೌಡ, ಹಾರಂಗಿ ಜಲಾಶಯ…

Read More

ಮಡಿಕೇರಿ ಆ.13 : ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅರೆಕಾಡು ಗ್ರಾಮದ ನೇತಾಜಿ ನಗರದಲ್ಲಿ ನಡೆದಿದೆ. ಕಟ್ಟೆಮಾಡು ಗ್ರಾಮದ ಪರಂಬು ನಿವಾಸಿ ದೇವಪ್ಪ (60) ಮೃತ ದುರ್ದೈವಿ. ಅರೆಕಾಡು ಗ್ರಾಮದ ಕೃಷಿಕರೊಬ್ಬರ ಗದ್ದೆ ಹದ ಮಾಡಲೆಂದು ತಮ್ಮ ಟ್ರ್ಯಾಕ್ಟರ್ ನಲ್ಲಿ ಬಂದಿದ್ದ ಅವರು ಕೆಲಸ ಮುಗಿಸಿ ಮರಳುತ್ತಿದ್ದ ಸಂದರ್ಭ ಕಾಡಾನೆ ದಿಢೀರ್ ಪ್ರತ್ಯಕ್ಷವಾಗಿ ದಾಳಿ ಮಾಡಿದೆ. ದೇವಪ್ಪ ಅವರನ್ನು ಎಸೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಓಡಾಡುತ್ತಿದ್ದ ಕಾಡಾನೆ ನೇತಾಜಿ ನಗರದ ಜನನಿಬಿಡ ಪ್ರದೇಶಕ್ಕೆ ಬಂದಾಗ ಜನರು ಬೊಬ್ಬೆ ಹಾಕಿ ತಪ್ಪಿಸಿಕೊಂಡಿದ್ದಾರೆ. ಅಲ್ಲಿಂದ ಕಾಲ್ಕಿತ್ತ ಕಾಡಾನೆ ದೇವಪ್ಪ ಅವರಿದ್ದ ಪ್ರದೇಶಕ್ಕೆ ನುಸುಳಿ ದಾಳಿ ಮಾಡಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರನ್ನು ಸಮಾಧಾನ ಪಡಿಸುವ ಯತ್ನ ಮಾಡಿದರು. ಅಲ್ಲದೆ ರೂ.15 ಲಕ್ಷ ಪರಿಹಾರ ನೀಡುವುದಾಗಿ…

Read More

ಮಡಿಕೇರಿ ಆ.12 : ಕೊಡಗು ಜಿಲ್ಲೆಯ ಹಲವೆಡೆ ಕಾಡಾನೆಗಳ ಮೇಲೆ ದ್ವೇಷ ಸಾಧನೆ ಆಗುತ್ತಿದ್ದು ವನ್ಯಜೀವಿಗಳ ಹತ್ಯೆಗಳು ನಡೆಯುವುದು ಕಂಡು ಬಂದಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ತಿಳಿಸಿದ್ದಾರೆ. ಅವರು ಕುಶಾಲನಗರದ ಸಮೀಪದ ಹಾರಂಗಿ ಆನೆ ಶಿಬಿರದಲ್ಲಿ ನಡೆದ ಆನೆ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಆನೆಗಳು ಪರಿಸರದ ಭಾಗವಾಗಿದ್ದು, ಪ್ರಕೃತಿಯ ಸಂರಕ್ಷಣೆ ಆದಲ್ಲಿ ಮಾತ್ರ ಮಾನವನ ಉಳಿವುಸಾಧ್ಯ ಎಂದರು. ದೇಶದಲ್ಲಿ ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ರಾಜ್ಯದಲ್ಲಿ 6 ಸಾವಿರಕ್ಕೂ ಅಧಿಕ ಆನೆಗಳಿದ್ದು ಜಿಲ್ಲೆಯಲ್ಲಿ ಕೂಡ ಆನೆಗಳ ಸಂಖ್ಯೆ ಏರಿಕೆ ಕಂಡು ಬಂದಿದೆ. ಆನೆ ಮಾನವ ಸಂಘರ್ಷಕ್ಕೆ ನಾವುಗಳೇ ಪರಿಹಾರ ಹುಡುಕಬೇಕಾಗಿದೆ. ಅವುಗಳ ಸಂರಕ್ಷಣೆ ನಮ್ಮಿಂದಲೇ ಆಗಬೇಕಾಗಿದೆ ಎಂದರು. ಈ ಸಂದರ್ಭ ಮಾತನಾಡಿದ ವನ್ಯಜೀವಿ ತಜ್ಞರಾದ ಡಾ ಚಿಟ್ಟಿಯಪ್ಪ, ಆನೆಗಳ ಆಹಾರ, ಓಡಾಡುವ ಪ್ರದೇಶಗಳ ಕೊರತೆ ಹಾಗೂ ಪ್ರಾಕೃತಿಕ ಪರಿಸರ ನಾಶ ಪ್ರಸಕ್ತ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಅರಣ್ಯ ನಾಶ ಕಾಡಿನಲ್ಲಿ ಕಂಡು…

Read More

ಸುಂಟಿಕೊಪ್ಪ, ಆ.12: ಗದ್ದೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನೂತನವಾಗಿ ಆಯ್ಕೆಯಾದ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸುಂಟಿಕೊಪ್ಪ ಗ್ರೇಡ್ 1 ಗ್ರಾ.ಪಂ 2ನೇ ಅವಧಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನೇಮಕಗೊಂಡ ಪಿ.ಆರ್.ಸುನಿಲ್‍ಕುಮಾರ್ ಅವರನ್ನು ಶಾಲೆಯ ಮುಖ್ಯೋಪಾದ್ಯಾಯನಿ ಹೇಮಾಕುಮಾರಿ ಶಾಲು ಹೊದೆಸಿ, ಫಲತಾಂಬೂಲ ನೀಡಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಆಯ್ಕೆಯಾಗಿರುವ ನನ್ನನು ಶಾಲೆಯ ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದವು ಪ್ರಪ್ರಥಮವಾಗಿ ಗೌರವಿಸುವ ಮೂಲಕ ನನ್ನ ಮೇಲೆ ಇರಿಸಿರುವ ಅಭಿಮಾನಕ್ಕೆ ಚಿರಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿಯೂ ಶಾಲೆಯ ಸರ್ವೊತ್ತೋಮುಖ ಅಭಿವೃದ್ಧಿಗೆ ಪೂರಕವಾಗಿ ಆದ್ಯತೆಯನ್ನು ನೀಡುವ ಭರವಸೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭ ಶಿಕ್ಷಕಿಯಾರಾದ ಶೈಲಾ ಜಾಯ್, ಮೀನಾ ಕುಮಾರಿ,ಅನಿತಾ, ಅಕ್ಷರ ದಾಸೋಹದ ಶ್ರೀಜಾ, ಹೀನ ಹಾಗೂ ವಿದ್ಯಾರ್ಥಿಗಳು ಇದ್ದರು.

Read More

ಮಡಿಕೇರಿ ಆ.12 : ಗ್ರಾಮೀಣ ಸೊಗಡಿನ ಜಾನಪದ ಕಲೆಯ ‘ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ’ ಮಡಿಕೇರಿ ಸಮೀಪ ಕಗ್ಗೋಡ್ಲುವಿನ ಗದ್ದೆ ಬಯಲಿನಲ್ಲಿ, ಉತ್ಸಾಹಿ ಕ್ರೀಡಾಳುಗಳು ಹಾಗೂ ಕ್ರೀಡಾ ಪ್ರೇಮಿಗಳ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಮತ್ತು ತಾಲ್ಲೂಕು ಯುವ ಒಕ್ಕೂಟ, ಕಗ್ಗೋಡ್ಲು ಕಾವೇರಿ ಯುವಕ ಸಂಘ ಹಾಗೂ ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಸಂಯುಕ್ತಾಶ್ರಯದಲ್ಲಿ ಕಗ್ಗೋಡ್ಲುವಿನ ದಿವಂಗತ ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ಜಿಲ್ಲೆ ಮಾತ್ರವಲ್ಲದೆ ನೆರೆಯ ಜಿಲ್ಲೆಯ ಹಲವು ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದವು. ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ, ಸಾರ್ವಜನಿಕ ಪುರುಷರ ವಾಲಿಬಾಲ್, ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್, ಪ್ರೌಢ ಶಾಲಾ ಬಾಲಕಿಯರಿಗೆ ಥ್ರೋಬಾಲ್ ಪಂದ್ಯಾವಳಿ, ಪ್ರೌಢಶಾಲಾ ಬಾಲಕ-ಬಾಲಕಿಯರ ಹಗ್ಗಜಗ್ಗಾಟ ಸ್ಪರ್ಧೆಗಳು ನಡೆದವು, ಅದರಲ್ಲೂ ಹಗ್ಗಜಗ್ಗಾಟ ಸ್ಪರ್ಧೆ ಅತ್ಯಂತ ಕುತೂಹಲಕಾರಿಯಾಗಿ ನಡೆದು ಗಮನ ಸೆಳೆಯಿತು. ::: ಕೆಸರಿನಲ್ಲಿ ಮಿಂದೆದ್ದ ಪುಟಾಣಿಗಳು ::: ವಿಶಾಲವಾದ ಗದ್ದೆ…

Read More