ಲೇಖಕ: admin

ಮಡಿಕೇರಿ ಆ.12 : ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 4.37 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಪೆರಂಬಾಡಿ ಚೆಕ್ ಪೋಸ್ಟ್ ರಸ್ತೆ ಬಳಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಬೈಲುಕೊಪ್ಪ ನಿವಾಸಿಗಳಾದ ಬಿ.ಕೆ.ದಿನೇಶ್ (26), ಚಂದ್ರು (24) ಹಾಗೂ ಪೊನ್ನಂಪೇಟೆ ಬೇಗೂರು ಗ್ರಾಮದ ನಿವಾಸಿ ಎ.ಎ.ರಶೀದ್ (34) ಎಂಬುವವರನ್ನು ಮಾಲು ಸಹಿತ ಬಂಧಿಸಿದರು. ಮಡಿಕೇರಿ ಉಪವಿಭಾಗದ ಡಿವೈಎಸ್‍ಪಿ ಎಂ.ಜಗದೀಶ್, ವಿರಾಜಪೇಟೆ ವೃತ್ತದ ಸಿಪಿಐ ಬಿ.ಎಸ್.ಶಿವರುದ್ರಪ್ಪ, ನಗರ ಠಾಣಾ ಪಿಎಸ್‍ಐ ರವೀಂದ್ರ, ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ಪೊಲೀಸರ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯ ಪ್ರಕರಣಗಳು ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಆ.12 : ಕರ್ನಾಟಕ ಸರ್ಕಾರದ ಹೆಚ್ಚುವರಿ ಅಭಿಯೋಜಕರಾಗಿ ವಿರಾಜಪೇಟೆಯ ವಕೀಲ ಕರ್ನಂಡ ರಾಹುಲ್ ಕಾರ್ಯಪ್ಪ ನೇಮಕಗೊಂಡಿದ್ದಾರೆ. ವಿರಾಜಪೇಟೆಯ ಕರ್ನಂಡ ಸೋಮಯ್ಯ ಮತ್ತು ಪದ್ಮಿನಿ ದಂಪತಿ ಪುತ್ರ ಕರ್ನಂಡ ರಾಹುಲ್ ಕಾರ್ಯಪ್ಪ, ವಕೀಲ ವೃತ್ತಿಯಲ್ಲಿ 23 ವರ್ಷಗಳ ಅನುಭವ ಹೊಂದಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಅವರ ಗರಡಿಯಲ್ಲಿ ತಮ್ಮ ವಕೀಲ ವೃತ್ತಿಯನ್ನು ಆರಂಭಿಸಿದ ಇವರು ನಾಗರಿಕರ ಕಾನೂನುಗಳು, ಕ್ರಿಮಿನಲ್, ಆಡಳಿತಾತ್ಮಕ ಕಾನೂನುಗಳು ಮತ್ತು ಚುನಾವಣಾ ಕಾನೂನು ಕ್ಷೇತ್ರಗಳಲ್ಲಿ ಅಭ್ಯಸಿಸಿದ್ದಾರೆ. 

Read More

ಮಡಿಕೇರಿ ಆ.11 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಆ.14 ಮತ್ತು 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಆ.14 ರಂದು ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ವಿರಾಜಪೇಟೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಆ.15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 12.30 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಸರ್ಕಾರದ ಇಂಧನ ಇಲಾಖೆಯ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ  ತಿಳಿಸಿದ್ದಾರೆ.

Read More

ಮಡಿಕೇರಿ ಆ.12 :  ಸರ್ಕಾರಗಳ ಯಾವುದೇ ಕಾನೂನು, ಕಾಯ್ದೆ ವರದಿಗಳು ಜನ ಪರವಾಗಿ ಇರಬೇಕೇ ಹೊರತು ವಿರುದ್ಧವಾಗಿ ಅಲ್ಲ. ಕಸ್ತೂರಿ ರಂಗನ್ ವರದಿಯ ಜಾರಿ ಮೂಲಕ ಕಾಡಂಚಿನಲ್ಲಿರುವ ಆದಿವಾಸಿಗಳನ್ನು, ಗ್ರಾಮೀಣ ಭಾಗದ ಜನರನ್ನು ಒಕ್ಕಲಬ್ಬಿಸುವ ತಂತ್ರ ನಡೆಯುತ್ತಿದೆಯೆಂದು ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ವತಿಯಿಂದ ಸ್ಥಳೀಯ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ಆಯೋಜಿತ ‘ಕಸ್ತೂರಿ ರಂಗನ್’ ವರದಿ ಕುರಿತ ವಿಚಾರಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಂಕಷ್ಟದಲ್ಲಿರುವವರನ್ನು, ಹಿಂದುಳಿದಿರುವ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ಸೇರ್ಪಡೆಗೊಳಿಸಬೇಕಾದ ಸರ್ಕಾರಗಳು ಜನರ ವಿರುದ್ಧವಾಗಿಯೇ ನಡೆದುಕೊಳ್ಳುತ್ತಿರುವುದು ಸರಿಯಲ್ಲ. ಪರಿಸರವನ್ನು ಉಳಿಸಿ ಬೆಳೆಸುವುದರ ಮೂಲಕ ರೈತರಿಗೂ ಪರಿಸರಕ್ಕೂ ಅವಿನಾಭಾವ ಸಂಬಂಧವಿದೆ. ರೈತರನ್ನು ಹೊರತುಪಡಿಸಿ ಪರಿಸರ ಇಲ್ಲ. ರೈತರಿಗೆ ತೊಂದರೆ ಆದರೆ ನಾವು ಸಹಿಸುವುದಿಲ್ಲ, ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆಂದು ಎಚ್ಚರಿಸಿದರು. ಕೊಡಗು ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಡಗು ಜಿಲ್ಲೆಯ ಗ್ರಾಮೀಣ ಭಾಗದ…

Read More

ಮಡಿಕೇರಿ.ಆ.12 :  ಕೊಡಗು ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಛಾಯಾಗ್ರಹಕರ‌ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಂಜಿನ ನಗರಿ ಛಾಯಾಗ್ರಾಹಕ ಸಂಘದ ಆಶ್ರಯದಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆಯನ್ನು ಆ.19 ರಂದು ಮಡಿಕೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಗುಡ್ಡೆಹೊಸೂರಿನ ಹಾಲು ಉತ್ಪಾದಕ ರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಂಘದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಎ.ಮುರಳೀಧರ್, ಜಿಲ್ಲಾ ಛಾಯಾಗ್ರಾಹಕ ಕ್ಷೇಮಾಭಿವೃದ್ಧಿ ಸಂಘ ದ ಅಧ್ಯಕ್ಷ ರಾದ ವಸಂತ್ ಅವರ ಸಮ್ಮುಖದಲ್ಲಿ ಈ ಸಭೆ‌‌‌‌‌ ನಡೆಸಲಾಯಿತು. ಕೊಡಗು ‌ಪತ್ರಕರ್ತರ ಸಂಘದ‌‌‌‌ ಉಪಾಧ್ಯಕ್ಷ ರಾದ ಜಿ.ವಿ.ರವಿ ಕುಮಾರ್, ಛಾಯಾಗ್ರಾಹಕ ಸಂಘದ ಪ್ರಧಾನ ಕಾರ್ಯದರ್ಶಿ ಸೋಲಮಾನ್ ಡೇವಿಡ್, ದಕ್ಷಿಣ ಕೊಡಗು ಛಾಯಾಗ್ರಾಹಕ ಸಂಘದ ‌ಅಧ್ಯಕ್ಷರಾದ ಡಾಡು ಜೋಸೆಫ್, ಪುಷ್ಪ ಗಿರಿ ಛಾಯಾಗ್ರಾಹಕ ರ ಸಂಘ ದ ಅಧ್ಯಕ್ಷರಾದ ಎಸ್. ಸುಬ್ರಮಣಿ, ಕಾವೇರಿ ಛಾಯಾಗ್ರಾಹಕ ರ ಸಂಘ ದ ಅಧ್ಯಕ್ಷ ರಾದ ವಿ.ಜಿ.ಕುಮಾರ್, ಮಂಜಿನ ನಗರಿ ಛಾಯಾಗ್ರಾಹಕ ಸಂಘದ ಅಧ್ಯಕ್ಷರಾದ‌ ಪ್ರದೀಪ್, ಜಿಲ್ಲಾ ಛಾಯಾಗ್ರಾಹಕ…

Read More

ಮಡಿಕೇರಿ ಆ.11 : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಗರದ ಮುಖ್ಯ ಬೀದಿಯಲ್ಲಿ ಹಿಂದೂಪರ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಸಾವಿರಾರು ಕಾರ್ಯಕರ್ತರು ಪಂಜು ಹಿಡಿದು ಮಹದೇವಪೇಟೆಯ ಚೌಡೇಶ್ವರಿ ದೇವಾಲಯದಿಂದ ಸಾಗಿ ಇಂದಿರಾ ಗಾಂಧಿ ವೃತ್ತ, ಸ್ಕ್ವಾ.ಲೀ.ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ವೃತ್ತಕ್ಕೆ ಬಂದು ಅಲ್ಲಿಂದ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪಕ್ಕೆ ಬಂದು ಜಮಾಯಿಸಿದರು. ಜಾಥಾದಲ್ಲಿ ಕಾರ್ಯಕರ್ತರು ಕೇಸರಿ ಧ್ವಜ, ಪಂಜು ಹಿಡಿದು ಹಿಂದೂ ಪರ ಘೋಷಣೆಗಳನ್ನು ಕೂಗಿ ಅಖಂಡ ಭಾರತದ ಸಂಕಲ್ಪ ಮಾಡಿದರು. ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ನೇತೃತ್ವದಲ್ಲಿ ಸೂಕ್ತ ಭದ್ರತೆ ಕಲ್ಪಿಸಲಾಗಿತ್ತು. ಸಭಾ ಕಾರ್ಯಕ್ರಮ :: ಭಾರತದ ಅಖಂಡತೆಗೆ ಧಕ್ಕೆ ಬಂದ ನೈಜ ಇತಿಹಾಸವನ್ನು ಭಾರತೀಯರು ತಿಳಿದುಕೊಳ್ಳಬೇಕೆಂದು ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಹ ಸಂಯೋಜಕ ಸತೀಶ್ ದಾವಣಗೆರೆ ಕರೆ ನೀಡಿದರು. ಹಿಂದೂ ಜಾಗರಣಾ ವೇದಿಕೆ ವತಿಯಿಂದ ನಗರದ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಅಖಂಡ ಭಾರತ ಸಂಕಲ್ಪ…

Read More

ಮಡಿಕೇರಿ ಆ.11 : ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾ.ಪಂ ಅಧ್ಯಕ್ಷರಾಗಿ ಕೆ.ಡಿ.ಪಾರ್ವತಿ ಹಾಗೂ ಉಪಾಧ್ಯಕ್ಷರಾಗಿ ಬಿ.ಎಂ.ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 6 ಬಿಜೆಪಿ ಬೆಂಬಲಿತ ಮತ್ತು 4 ಕಾಂಗ್ರೆಸ್ ಬೆಂಬಲಿತರು ಸೇರಿ ಒಟ್ಟು ಹತ್ತು ಸದಸ್ಯ ಬಲದ ಗ್ರಾ.ಪಂ ಯ ಎರಡನೇ ಅವಧಿಯ ಅಧಿಕಾರಕ್ಕಾಗಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ 9 ಸದಸ್ಯರು ಹಾಜರಿದ್ದರು. ಬಿಜೆಪಿ ಬೆಂಬಲಿತ ಕೆ.ಡಿ.ಪಾರ್ವತಿ ಹಾಗೂ ಬಿ.ಎಂ.ಸತೀಶ್ ಅವಿರೋಧವಾಗಿ ಆಯ್ಕೆಯಾದರು. ::: ರಾಜೀನಾಮೆ ::: ಈ ನಡುವೆ ಬಿಜೆಪಿ ಬೆಂಬಲಿತ ಸದಸ್ಯೆ ಉದಿಯಂಡ ರೀಟಾ ಮುತ್ತಣ್ಣ ಅವರು ತಮ್ಮ ಗ್ರಾ.ಪಂ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಪ್ರಸಂಗವೂ ನಡೆಯಿತು. ತಮಗೆ ಅಧ್ಯಕ್ಷ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಗ್ರಾ.ಪo ಮಾಜಿ ಅಧ್ಯಕ್ಷರಾದ ಡೀನ್ ಬೋಪಣ್ಣ, ಕೊಕ್ಕಲೆರ ಅಯ್ಯಪ್ಪ, ಸದಸ್ಯರಾದ ರಘು, ಕಾಂಗ್ರೆಸ್ ಬೆಂಬಲಿತರಾದ ಜಾನ್ಸನ್ ಪಿಂಟೋ, ಪುಷ್ಪಲತಾ, ಅನಿತಾ ಮತ್ತಿತರರು ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ಆ.11 : ನಗರದ ತಹಶೀಲ್ದಾರ್ ಅವರ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಠಾಣೆ ಮಡಿಕೇರಿ ವತಿಯಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ ನಡೆಯಿತು. ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂ.ಎಸ್.ಪವನ್ ಕುಮಾರ್ ಸಭೆಯಲ್ಲಿ ಪಾಲ್ಗೊಂಡು ತಾಲ್ಲೂಕು ಮಟ್ಟದ ಸರ್ಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಹಾಜರಾತಿ ಪುಸ್ತಕ, ಬಯೋಮೆಟ್ರಿಕ್ ವ್ಯವಸ್ಥೆ, ಚಲನವಲನ ರಿಜಿಸ್ಟರ್, ನಗದು ಘೋಷನಾ ರಿಜಿಸ್ಟರ್‍ನ್ನು ನಿರ್ವಹಿಸಬೇಕು ಹಾಗೂ ಇದರ ನಿರ್ವಹಣೆಯನ್ನು ಖುದ್ದು ಅಧಿಕಾರಿಗಳೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ಲಂಚ ಮತ್ತು ಇತರೆ ಆಮೀಷಗಳಿಗೆ ಒಳಗಾಗದೆ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರನ್ನು ವಿನಾ ಕಾರಣ ಸತಾಯಿಸದೆ ಕಾನೂನು ರೀತಿಯಲ್ಲಿ ಕೆಲಸ ಮಾಡಿಕೊಡುವಂತೆ ಸೂಚಿಸಿದರು. ಸಭೆಯಲ್ಲಿ ಸಾರ್ವಜನಿಕರಿಂದ 15 ಅರ್ಜಿಗಳು ಸ್ವೀಕೃತವಾಗಿದ್ದು, ಇವುಗಳನ್ನು ಪರಿಶೀಲಿಸಿ 3 ಅರ್ಜಿದಾರರಿಗೆ ಲೋಕಾಯುಕ್ತ ಸಂಸ್ಥೆಯ ಫಾರಂ 1 ಮತ್ತು 2 ನ್ನು ನೀಡಲಾಯಿತು. ಉಳಿದಂತೆ…

Read More

ಮಡಿಕೇರಿ ಆ.11 : ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಕುಂಜಿಲ, ಕೊಣಂಜಗೇರಿ ಹಾಗೂ ಕಡಗದಾಳು ಮತ್ತು ವಿರಾಜಪೇಟೆ ತಾಲ್ಲೂಕಿನ ದೇವರಪುರ, ನಿಟ್ಟೂರು, ಪೊನ್ನಪ್ಪಸಂತೆ, ಕೆ.ಬಾಡಗ, ಕಿರುಗೂರು, ಶ್ರೀಮಂಗಲ ಹಾಗೂ ನಾಲ್ಕೇರಿ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್‍ಡಬ್ಲ್ಯೂ) ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸಲು ಸೆ.11 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ, ವಿಕಲಚೇತನತೆ ಪ್ರಮಾಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿಗಳಲ್ಲಿರುವ ಎಂಆರ್‍ಡಬ್ಲ್ಯುಗಳಿಂದ ಉಚಿತವಾಗಿ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.

Read More

ಮಡಿಕೇರಿ ಆ.11 : ಜಿಲ್ಲಾ ಅಗ್ರಣೀ ಬ್ಯಾಂಕ್ 2023-24 ನೇ ಸಾಲಿನ ಕೊಡಗು ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶೇಷ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ನಂತರ ಬ್ಯಾಂಕರುಗಳನ್ನು ಉದ್ದೇಶಿಸಿ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಜನಸಾಮಾನ್ಯರಿಗೆ ಅಗತ್ಯವಿರುವ ಸಾಲ ವಿತರಿಸುವುದರ ಮೂಲಕ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಸಲಹೆ ನೀಡಿದರು. ಈ ಬಾರಿಯ ವಾರ್ಷಿಕ ಸಾಲ ಯೋಜನೆಯು ಜಿಲ್ಲೆಯ ಕೃಷಿಕರಿಗೆ ವರದಾನವಾಗಲಿದೆ ಎಂದು ಸಭೆಗೆ ತಿಳಿಸಿದರು. ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯಸ್ಥರಾದ ಗಂಗಾಧರ್ ನಾಯ್ಕ್ ಅವರು ಮಾತನಾಡಿ 2023-24 ನೇ ಸಾಲಿಗೆ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ವಯ ರೂ.4504 ಕೋಟಿ ಗುರಿ ನಿಗದಿಪಡಿಸಿದ್ದು, ಅದರಲ್ಲಿ 71.56 ಪ್ರತಿಶತ(ರೂ. 3223.95 ಕೋಟಿ) ಆದ್ಯತಾ ವಲಯಕ್ಕೆ ಮೀಸಲಿಟ್ಟಿದ್ದು ಅವುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ರೂ.2400.56 ಕೋಟಿ, ಕಿರು ಮತ್ತು ಮಧ್ಯಮ…

Read More