ಲೇಖಕ: admin

ಮಡಿಕೇರಿ ಜೂ.7 : ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಾಪೋಕ್ಲುವಿನ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್ (34) ಮೃತ ದುರ್ದೈವಿ. ನಾಪೋಕ್ಲು ಸಮೀಪದ ಹಳೆ ತಾಲೂಕಿನಲ್ಲಿ ಕಳೆದ ಎರಡು ತಿಂಗಳಿಂದ ಸಹೋದ್ಯೋಗಿಗಳೊಂದಿಗೆ ಕಟ್ಟಡ ಕಾಮಗಾರಿ ಕೆಲಸಕ್ಕೆಂದು ಕೇರಳದ ಕಣ್ಣೂರಿನಿಂದ ಬಂದಿದ್ದ ಶ್ರೀಜೇಶ್, ಬುಧವಾರ ಮಧ್ಯಾಹ್ನ ಮೂರು ಜನ ಸಹೋದ್ಯೋಗಿಗಳೊಂದಿಗೆ ಚೆರಿಯಪರಂಬು ಗ್ರಾಮದಲ್ಲಿರುವ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಎಎಸ್‍ಐ ಗೋಪಾಲಕೃಷ್ಣ, ಸಿಬ್ಬಂದಿಗಳಾದ ರವಿಕುಮಾರ್, ಶರತ್, ಲವ ಕುಮಾರ್, ಶರೀಫ್, ಪ್ರಸನ್ನ, ಗಣೇಶ್, ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತ ದೇಹವನ್ನು ನಾಪೋಕ್ಲು  ವಾಹನ ಚಾಲಕರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಸ್ಥಳೀಯರಾದ, ಅನಿಫ್, ಕರೀಮ್, ರಜಾಕ್, ಒಂದು ಗಂಟೆಯ ಕಾಲ ನೀರಿನಲ್ಲಿ  ಕಾರ್ಯಾಚರಣೆ ನಡೆಸಿ  ಮೃತ…

Read More

ಮಡಿಕೇರಿ ಜೂ.7 : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ 24ನೇ ವಾರ್ಷಿಕೋತ್ಸವವು ಜೂ.9 ಮತ್ತು 10 ರಂದು ನಡೆಯಲಿದೆ. ಜೂ.9 ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಚಿವ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರಾ ಎಸ್ ಪೊನ್ನಣ್ಣ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ವಿದ್ಯಾಶಂಕರ್ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ ಸಾ೦ಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜೂ.10 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಖ್ಯಾತ ಚಲನಚಿತ್ರ ನಟರು ಮತ್ತು ಅನೇಕ ಅತಿಥಿಗಣ್ಯರು ಭಾಗವಹಿಸಲಿದ್ದಾರೆ. ಎರಡುದಿನ ಕಾಲ ನೃತ್ಯ, ಗೀತೆ, ಸಂಗೀತಕಲರವದೊಂದಿಗೆ ಕಾರ್ಯಕ್ರಮ ರೂಪುಗೊಂಡು ಕಲಾರಸಿಕರ ಕಣ್ಮನಸೆಳೆಯಲಿದೆ. ವಿವಿಧ ಸೆಲಿಬ್ರಿಟಿಗಳು ಪಾಲ್ಗೊಂಡು ಕಾರ್ಯಕ್ರಮದ ರಂಗನ್ನು ಹೆಚ್ಚಿಸಲಿದ್ದಾರೆ. ಪ್ರಮುಖವಾಗಿ ಕನ್ನಡ ಪ್ರಸಿದ್ಧ ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಗೀತದ ಮೂಲಕ ರಂಜಿಸಲ್ಲಿದ್ದಾರೆ ಎಂದು ಸಿ.ಐ.ಟಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.7 : ರಾಜ್ಯ ವಿಧಾನ ಪರಿಷತ್‍ನ ತೆರವಾಗಿರುವ ಮೂರು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಸಂದರ್ಭ ಕೊಡಗಿಗೆ ಒಂದು ಸ್ಥಾನವನ್ನಾದರೂ ನೀಡಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಹಾಗೂ ವಕ್ತಾರ ತೆನ್ನೀರ ಮೈನಾ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿರುವ ಕೊಡಗು ಜಿಲ್ಲೆಗೆ ಜೂ.30 ರಂದು ನಡೆಯಲಿರುವ ಎಂ.ಎಲ್.ಸಿ. ಚುನಾವಣೆಯಲ್ಲಿ ಒಂದು ಸ್ಥಾನವನ್ನಾದರು ನೀಡಬೇಕು ಎಂದ ಒತ್ತಾಯಿಸಿದ ಅವರು, ಕೊಡಗು ಜಿಲ್ಲಾ ಕಾಂಗ್ರೆಸ್‍ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ತಿಳಿಸಿದರು. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಪೆಟ್ರೋಲ್, ಡೀಸೆಲ್, ಅಕ್ಕಿ, ಎಣ್ಣೆ, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳಿಗೆ ಬೆಲೆ ಏರಿಕೆಯಾದಾಗ ಸಮರ್ಥಿಸಿಕೊಂಡಿದ್ದವರು, ಈಗ ಬೀದಿಗೆ ಬಂದು ನಿಂತಿರುವುದು ಎಷ್ಟು ಸರಿ. ಬೆಲೆ ಏರಿಕೆ ಬಗ್ಗೆ ಪ್ರಶ್ನೆ ಮಾಡುವ ನೈತಿಕತೆಯನ್ನು…

Read More

ಮಡಿಕೇರಿ ಜೂ.7 : ಮಡಿಕೇರಿ ಬ್ಲಾಕ್ ಹಾಗೂ ವಲಯಗಳಿಗೆ ಶಾಸಕರ ಕೃತಜ್ಞತಾ ಸಲ್ಲಿಕೆ ಪ್ರವಾಸದ ಪೂರ್ವಭಾವಿ ಸಭೆಯು ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತಮಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಸಜ್ಜಾಗುವಂತೆ ಕರೆ ನೀಡಿದರು. ಇದೇ ಸಂದರ್ಭ ಶಾಸಕರುಗಳ ಕೃತಜ್ಞತಾ ಸಲ್ಲಿಕೆ ಪ್ರವಾಸದ ಬಗ್ಗೆ ಚರ್ಚೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಂದ್ರಿರ ಮೋಹನ್ ದಾಸ್, ಮಾತನಾಡಿ, ಶಾಸಕರ ಕೃತಜ್ಞತಾ ಸಲ್ಲಿಕೆ ಪ್ರವಾಸದ ಸಂದರ್ಭ ವಿಜಯೋತ್ಸವವನ್ನು ಉತ್ತಮ ಮಟ್ಟದಲ್ಲಿ ಆಚರಿಸುವಂತೆ ಕರೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರಂಟಿಗಳ ನಿರ್ಣಯಗಳನ್ನು ಮನೆಮನೆಗೆ ತಲುಪಿಸುವಂತೆ ಕರೆ ನೀಡಿದರು. ನಗರಸಭಾ ಮಾಜಿ ಅಧ್ಯಕ್ಷ ಕಾವೇರಮ್ಮ ಸೋಮಣ್ಣ ಮಾತನಾಡಿ, ಕೊಡಗಿನಲ್ಲಿ ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭ ಮೂವರು ಸಚಿವರುಗಳಿದ್ದರು. ಈಗ ಜಿಲ್ಲೆಯಲ್ಲಿ ಎರಡು ವಿಧಾನ ಸಭಾ ಕ್ಷೇತ್ರವಿದ್ದು, ಈ ಬಾರಿಯ…

Read More

ಮಡಿಕೇರಿ ಜೂ.7 : ಉದ್ಯೋಗಗಳ ಅವಕಾಶ ಕಡಿಮೆಯಾಗುತ್ತಿರುವ ಇತ್ತೀಚಿನ ದಿನಗಳಲ್ಲಿ ಐಬಿಪಿಎಸ್ (IBPS) ವತಿಯಿಂದ ರೀಜನಲ್ ರೂರಲ್ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 8600 ಕ್ಕೂ ಹೆಚ್ಚು ಕ್ಲರಿಕಲ್ ಮತ್ತು ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಜೂನ್, 21 ರವರೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://ibps.in/ ವೀಕ್ಷಿಸಬಹುದಾಗಿದೆ. ಈಗಾಗಲೇ ಅರ್ಜಿ ಆಹ್ವಾನಿಸಿರುವ ಐಬಿಪಿಎಸ್ ರೀಜನಲ್ ರೂರಲ್ ಬ್ಯಾಂಕ್ ಕ್ಲೆರಿಕಲ್ ಮತ್ತು ಆಫೀಸರ್ಸ್ ಹುದ್ದೆಗಳ ನೇಮಕಾತಿ ಪರೀಕ್ಷೆ ಮತ್ತು ಎಸ್‍ಎಸ್‍ಸಿ (SSC) ನೇಮಕಾತಿ ಪರೀಕ್ಷೆಗಳಿಗೆ ಹಾಗೂ ಮುಂಬರುವ ಎಲ್ಲಾ ಬ್ಯಾಂಕ್, ಎಸ್‍ಎಸ್‍ಸಿ ಪರೀಕ್ಷೆಗಳಿಗೆ ಅನುಭವಿ ನುರಿತ ವಿಷಯ ತಜ್ಞರಿಂದ ಟೈಮ್ ಮ್ಯಾನೇಜ್‍ಮೆಂಟ್ ಸ್ಕಿಲ್ಸ್ ನೊಂದಿಗೆ ರಿಯಾಯಿತಿ ದರದಲ್ಲಿ ತರಬೇತಿ ನೀಡಲಾಗುವುದು. ಆಸಕ್ತರು ಜೂ.15 ರೊಳಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್‍ನ ಕಾರ್ಯದರ್ಶಿ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.7 : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ(ಆರ್‍ಆರ್‍ಐ) 75ನೇ ವಾರ್ಷಿಕೋತ್ಸವ ಹಾಗೂ ಬೆಂಗಳೂರು ಪರಿಸರ ಸಂಘದ(ಇಎಬಿ) 25ನೇ ವಾರ್ಷಿಕೋತ್ಸವದ ಅಂಗವಾಗಿ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಅರ್ಬನ್ ಮ್ಯಾನೇಜ್‍ಮೆಂಟ್ ಅಂಡ್ ವಾಟರ್ ಕನ್ಸರ್‍ವೇಷನ್’ ವಿಷಯದ ಬಗ್ಗೆ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ (ವಿಳಾಸ: ಲಿಖಿತ ಮತ್ತು ಮೌಖಿಕ) ಜೂ.27 ರಂದು ಅಕಾಡೆಮಿಯ ಕಚೇರಿಯಲ್ಲಿ (ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಜಿಕೆವಿಕೆ ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು-560097 ದೂ.ಸಂ.080-29721550) ನಡೆಯಲಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಗಳು ಜೂ.23 ರೊಳಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್ www.kstacademy.in ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.7 : ಕೊಡಗು ವಿಶ್ವ ವಿದ್ಯಾನಿಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗ ವತಿಯಿಂದ ಪೊನ್ನಂಪೇಟೆ ತಾಲ್ಲೂಕಿನ ಕೋತೂರು ಆಶ್ರಮ ಶಾಲೆಯಲ್ಲಿ ಗ್ರಾಮೀಣ ಅಧ್ಯಯನ ಶಿಬಿರ ನಡೆಯಿತು. ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ ಆಲೂರ ಉದ್ಘಾಟಿಸಿ ಮಾತನಾಡಿ, ಶಿಬಿರದ ಅವಧಿಯಲ್ಲಿ ಈ ಭಾಗದ ಆದಿವಾಸಿ ಜನರ ಸಾಮಾಜಿಕ ಹಾಗೂ ಸಾಂಸ್ಕೃತಿಕ ವಿಚಾರಗಳನ್ನು ಅಧ್ಯಯನ ಮಾಡಿ, ಅದರಲ್ಲಿರುವ ವಿಶೇಷತೆಗಳನ್ನು ತಿಳಿಯುವಂತಾಗಬೇಕು ಎಂದರು. ಸಾಮಾಜಿಕ ಪಿಡುಗುಗಳ ಬಗ್ಗೆ ಅರಿವು ಮೂಡಿಸಬೇಕು. ಈ ವಿಚಾರದಲ್ಲಿ ಅವರಲ್ಲಿ ಸ್ವಲ್ಪವಾದರೂ ಬದಲಾವಣೆ ತರಬೇಕು. ಈ ನಿಟ್ಟಿನಲ್ಲಿ ಶಿಬಿರಾರ್ಥಿಗಳು ಹೆಚ್ಚು ಜವಾಬ್ದಾರಿಯುತವಾಗಿ ಹಾಗೂ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು” ಎಂದು ಕರೆ ನೀಡಿದರು. ಹಾಗೆಯೇ ಆದಿವಾಸಿ ಸಮುದಾಯದಲ್ಲಿ ಅವರದೇ ಆದಂತಹ ವಿಶೇಷವಾದ ದೇಸಿ ಜ್ಞಾನವಿದ್ದು, ಅದು ನಶಿಸಿ ಹೋಗದ ಹಾಗೆ ದಾಖಲಿಸಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು. ಅರಣ್ಯ ಮಹಾವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ.ಎಂ.ಜಡೇಗೌಡ ಮಾತನಾಡಿ, ಆದಿವಾಸಿಗಳ ಶ್ರೇಯೋಭಿವೃದ್ಧಿಯಲ್ಲಿ ವೃತ್ತಿಪರ ಸಮಾಜ ಕಾರ್ಯಕರ್ತರು ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು. ಕೊಡಗು ವಿಶ್ವವಿದ್ಯಾನಿಲಯದ…

Read More

ಸುಂಟಿಕೊಪ್ಪ ಜೂ.7 :   ಜಿಲ್ಲೆಯಲ್ಲಿ ಈ ಹಿಂದೆ ಭೂಕುಸಿತ ಉಂಟಾದ ಸಮಯದಿಂದ ಇಲ್ಲಿಯವರೆಗೂ ಬೆಂಗಳೂರಿನ ಜಾಗೃತಿ ಸಂಸ್ಥೆ ಹಾಗೂ ಸಿಸ್ಕೋ ಕಂಪನಿಯು ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳ ಜನತೆಯೊಂದಿಗೆ ಒಡನಾಟವನ್ನಿರಿಸಿಕೊಂಡಿದ್ದು ಅವರಿಗೆ ಅಗತ್ಯ ನೆರವು ಸಹಕಾರಗಳನ್ನು ನೀಡುತ್ತಾ ಬಂದಿದೆ. ಇತ್ತೀಚೆಗೆ ಸೂರ್ಲಬ್ಬಿ, ಹಮ್ಮಿಯಾಲ, ಮುಟ್ಲು, ಮಾದಾಪುರ ಗ್ರಾಮಗಳ ಜನರ ಪರಿಸ್ಥಿತಿ ಅವಲೋಕಿಸಿ ಬೆಂಗಳೂರಿನ ಜಾಗೃತಿ ಸಂಸ್ಥೆ ಮತ್ತು ಸಿಸ್ಕೋ ಕಂಪನಿಯ 84 ಮಂದಿ ಸ್ವಯಂಸೇವಕರ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಡಿತರ ಕಿಟ್, ಹೆಣ್ಣು ಮಕ್ಕಳಿಗೆ ನೈರ್ಮಲ್ಯ ಕಿಟ್, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಮಾಗ್ರಿಗಳನ್ನು ವಿತರಿಸಿದರು. ಇದೇ ಸಂದರ್ಭ ಮಾದಾಪುರ ಸರ್ಕಾರಿ ಶಾಲೆಯ ಗೋಡೆಯಲ್ಲಿ ಮಂಡಲ ಚಿತ್ರಗಳನ್ನು ಬಿಡಿಸಲಾಯಿತು. ಇದರಿಂದ ಹಲವು ರೀತಿಯಲ್ಲಿ ದಿನನಿತ್ಯ ಮಕ್ಕಳಿಗೆ ಶಾಲೆಯಲ್ಲಿ ಸಹಾಯವಾಗಲಿದೆ. ಈ ಸಂದರ್ಭ ಸಿಸ್ಕೋ ಕಂಪನಿಯ ಬಾನಂಡ ಸಂಪತ್, ಜಾಗೃತಿ ಸಂಸ್ಥೆಯ ಕಣ್ಣನ್, ಶರಣ್, ನೋಯೇಲ್ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

Read More

ಸುಂಟಿಕೊಪ್ಪ ಜೂ.7 :   ಕೊಡಗು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆ ಕುಶಾಲನಗರ ತಾಲ್ಲೂಕು ತಹಸೀಲ್ದಾರ್‌ರ ಮಾರ್ಗದರ್ಶನದಡಿ ಸುಂಟಿಕೊಪ್ಪ ಉಪ ತಹಸೀಲ್ದಾರ್ ನೇತೃತ್ವದಲ್ಲಿ  ನಾಡ ಕಚೇರಿ ಸಭಾಂಗಣದಲ್ಲಿ ಪೌತಿ ಖಾತೆ ಆಂದೋಲನ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪತಹಸೀಲ್ದಾರ್ ಶಿವಪ್ಪ ಮಾತನಾಡಿ, ಸರಕಾರ ಮಹತ್ತರ ಯೋಜನೆಗಳಲ್ಲಿ ಪೌತಿ ಖಾತೆ ಆಂದೋಲನ ಒಂದಾಗಿದೆ. ಪೌತಿಖಾತೆ ಹೊಂದಲು ರೈತಾಪಿ ವರ್ಗದವರು ಕಛೇರಿಯಿಂದ ಕಛೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲಿ ಅಧಿಕಾರಿಗಳನ್ನು ಕಳುಹಿಸಿ ಪೌತಿ ಖಾತೆ ದಾಖಲೆ ಮಾಡಿಕೊಡಲಾಗುತ್ತಿದೆಯೆಂದು ತಿಳಿಸಿದರು. ಸುಂಟಿಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಅಯೋಜಿತ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ, ಉಲುಗುಲಿ ಹಾಗೂ ನಾರ್ಗಾಣೆ ಗ್ರಾಮದ ಕೃಷಿಕರು ಹಾಗೂ ಸಾರ್ವಜನಿರು ಪಾಲ್ಗೊಂಡಿದ್ದರು. ಈ ಸಂದರ್ಭ ಕಂದಾಯ ಪರಿವೀಕ್ಷಕರಾದ ಪ್ರಶಾಂತ್,ಗ್ರಾಮ ಲೆಕ್ಕಿಗರಾದ ನಾಗೇಂದ್ರ, ಜಯಂತ್, ನಸೀಮ ಹಾಗೂ ಗ್ರಾಮ ಸಹಾಯಕರು ಇದ್ದರು.

Read More

ಮಡಿಕೇರಿ ಜೂ.7 :  ಶಿಥಿಲಾವಸ್ಥೆಯಲ್ಲಿರುವ ನಾಗರಹೊಳೆ ಅಂಗನವಾಡಿ ಕೇಂದ್ರದ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಅಂಗನವಾಡಿ ಕೇಂದ್ರಕ್ಕೆ ಶೆಡ್ ಅಳವಡಿಸುವ ಕಾರ್ಯ ಪ್ರಾರಂಭಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ  ಎನ್.ಮಂಜುನಾಥ್  ತಿಳಿಸಿದ್ದಾರೆ.

Read More