ಲೇಖಕ: admin

ಮಡಿಕೇರಿ NEWS DESK ಫೆ.10 : ಕಳೆದ 6 ವರ್ಷಗಳಲ್ಲಿ ಕಳ್ಳತನವಾಗಿದ್ದ ಸುಮಾರು 104 ಮೊಬೈಲ್ ಫೋನ್ ಗಳನ್ನು ಅವುಗಳ ವಾರಸುದಾರರಿಗೆ ಕೊಡಗು ಜಿಲ್ಲಾ ಪೊಲೀಸ್ ಇಂದು ಹಸ್ತಾಂತರಿಸಿತು. ಕೊಡಗು ಜಿಲ್ಲಾ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಕಳ್ಳತನವಾಗಿದ್ದ 104 ಮೊಬೈಲ್ ಫೋನ್ ಗಳ ಮೌಲ್ಯ ಒಟ್ಟು 11 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. 2020ರಿಂದ 2025ರವರೆಗಿನ ಮೊಬೈಲ್ ಫೋನ್ ಕಳವು ಪ್ರಕರಣಗಳು ಇದಾಗಿದ್ದು, ಕೇರಳ ಮತ್ತು ತಮಿಳುನಾಡು ರಾಜ್ಯಗಳಿದಂಲೂ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು ಮತ್ತು ಮೊಬೈಲ್ ಫೋನ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಸಿಇಐಆರ್ ಪೋರ್ಟ್ ಮೂಲಕ ಮೊಬೈಲ್‌ಗಳ ಲೊಕೇಶನ್ ಆಧರಿಸಿ 2026ರ ಜನವರಿ ತಿಂಗಳಿನಲ್ಲಿ ಈ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೊಡಗು ಸೈಬರ್ ಕ್ರೆöÊಂ ಪೊಲೀಸರ ಕಾರ್ಯ ಶ್ಲಾಘನೀಯವೆಂದು ಎಸ್.ಪಿ. ಮೆಚ್ಚುಗೆ ವ್ಯಕ್ತಪಡಿಸಿದರು. ಇಂದು ಹಾಜರಾಗಲು ಸಾಧ್ಯವಾಗದವರು ದೂರು ದಾಖಲಾಗಿರುವ ಪೊಲೀಸ್ ಠಾಣೆಗಳ…

Read More

ಬೆಂಗಳೂರು ಫೆ.10 NEWS DESK :  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ…

Read More

ಮಡಿಕೇರಿ ಫೆ.10 NEWS DESK :  ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುತ್ತದೆ. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1ರ (ಬೆಸ್ತರ್)ಬುಂಡ್, ಬೈಲಪತ್ತರ್, ಬೈರಾಗಿ(ಬಾವ), ಬಜಿನಿಯ, ಬಾಲಸಂತೋಶಿ-ಜೋಶಿ, ಬಾಜಿಗರ್, ಭರಡಿ, ಬುಡ್ ಬುಡಕಿ-ಜೋಶಿ-ಗೋಂದಳಿ, ಚಾರ, ಚಿತ್ರಕಶಿ-ಜೋಶಿ, ದರ್ ವೇಶ್, ದವೇರಿ, ಧೋಲಿ, ದೊಂಬರಿ, ದೊಂಬಿದಾಸ, ದುರ್ಗ ಮುರ್ಗ (ಬುರ್ ಬುರುಚ), ಗರಡಿ, ಘಿಸಡಿ, ಗೊಲ್ಲ, ಗೊಂದಳಿ, ಗೋಪಲ್, ಹೆಳವ, ಹಾವ್ ಗಾರ(ಹಾವಾಡಿಗರ್), ಜೋಗಿ, ಜೋಶಿ ಸಾದಾ ಜೋಶಿ, ಕಾಶಿಕಪಾಡಿ, ಕಟಬು, ಕೆಲ್‍ಕಾರಿ, ಕಿಳ್ಳೆಕ್ಯಾತಸ್, ಕೊಲಾತಿ, ಮಸನಿಯ ಯೋಗಿ,…

Read More

ಮಡಿಕೇರಿ NEWS DESK  ಫೆ.10 : ಕಾರುಗುಂದದ ಚೇರಂಬಾಣೆ ಗೌಡ ಸಮಾಜ ಹಾಗೂ ಚೇರಂಬಾಣೆ ಗೌಡ ಯುವ ವೇದಿಕೆಯ ವತಿಯಿಂದ ಫೆ.15 ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ ನಡೆಯಲಿದೆ. ಇದೇ ಏಪ್ರಿಲ್ ತಿಂಗಳಿನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಕೂಡ ಆಯೋಜಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಂಬಾಣೆ ಗೌಡ ಯುವ ವೇದಿಕೆಯ ಅಧ್ಯಕ್ಷ ಪಾರೆಮಜಲು ಪ್ರದೀಪ್ ಹಾಗೂ ಕಾರ್ಯದರ್ಶಿ ಯಶವಂತ್ ಕೇಟೋಳಿ ಕ್ಯಾರಂಬೋರ್ಡ್ ಕ್ರೀಡಾಕೂಟ ಗೌಡ ಜನಾಂಗಗಳಿಗೆ ಸೀಮಿತವಾಗಿದ್ದು, ಡಬಲ್ಸ್ ಮತ್ತು ಸಿಂಗಲ್ಸ್ ವಿಭಾಗದಲ್ಲಿ ನಡೆಯಲಿದೆ. 15 ವರ್ಷದೊಳಗಿನ ಮಕ್ಕಳು ಹಾಗೂ 15 ವರ್ಷ ಮೇಲ್ಪಟ್ಟವರಿಗಾಗಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಡಬಲ್ಸ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ 10 ಸಾವಿರ ರೂ ಮತ್ತು ದ್ವಿತೀಯ 5 ಸಾವಿರ ರೂ. ನೀಡಲಾಗುತ್ತದೆ. ಸಿಂಗಲ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ 5 ಸಾವಿರ ರೂ. ಮತ್ತು ದ್ವಿತೀಯ 2,500 ರೂ. ನೀಡಲಾಗುವುದು ಎಂದರು. ಕಾರುಗುಂದ ಗೌಡ ಸಮಾಜದಲ್ಲಿ ನಡೆಯುವ ಕ್ರೀಡಾಕೂಟವನ್ನು ಬೆಳಿಗ್ಗೆ 9…

Read More

ಮಡಿಕೇರಿ ಫೆ.10 NEWS DESK : ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಎ ನಲ್ಲಿ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ/ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನಕೊಳಗ/ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಆಹಾರ ವಾಹಿನಿ(ಆಹಾರ ಕಿಯೋಸ್ಟ್) ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಒಕ್ಕಲಿಗ…

Read More

ಮಡಿಕೇರಿ ಫೆ.10 NEWS DESK : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 205-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಅರ್ಜಿ ಸ್ವೀಕೃತಿ; ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನವನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ,…

Read More

ಮಡಿಕೇರಿ ಫೆ.10 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆಬ್ರವರಿ, 11 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.10 NEWS DESK : 220/66/11 ಕೆ.ವಿ ಕುಶಾಲನಗರ ಹಾಗೂ 66/11 ಕೆ.ವಿ ಸುಂಟಿಕೊಪ್ಪ, ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಫೆಬ್ರವರಿ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ಸರಬರಾಜಾಗುವ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಕಣಿವೆ, ಮಲ್ಲೇನಹಳ್ಳಿ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕೂಡುಮಂಗಳೂರು, ಶಿರಂಗಾಲ, ಕಾನ್ ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಪನ್ಯ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ. ಹಾಗೆಯೇ 66/11 ಕೆ.ವಿ ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ ಉಪಕೇಂದ್ರ ಹಾಗೂ 66/33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಸೋಮವಾರಪೇಟೆ ಪಟ್ಟಣ, ಹಾನಗಲ್ಲು, ನಗರೂರು, ದುದ್ದಗಲ್ಲು, ಗಾಧಿನಗರ, ಬಸವೇಶ್ವರ…

Read More

ವಿರಾಜಪೇಟೆ NEWS DESK ಫೆ.9: ಮಕ್ಕಳಿಗೆ ಮಹನೀಯರ ಆದರ್ಶವನ್ನು ನೀಡಿ ಉತ್ತಮ ವ್ಯಕ್ತಿತ್ವ ರೂಪಿಸುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ವಿರಾಜಪೇಟೆ ಡಿವೈಎಸ್ ಪಿ ಮಹೇಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು . ವಿರಾಜಪೇಟೆ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವತಿಯಿಂದ ಆಯೋಜಿಸಲಾದ ಸ್ಪೋರ್ಟ್ಸ್ ಸ್ಪೆಕ್ಟ್ರಾ 2026 ಕಾರ್ಯಕ್ರಮವು ನಾಂಗಾಲ ಗ್ರಾಮದಲ್ಲಿರುವ ಎಲ್. ಎಸ್. ಎ. ಯ ನೂತನ ಕ್ಯಾಂಪಸ್ ನಲ್ಲಿ ಜರುಗಿತು. ಕ್ರೀಡಾ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿವೈಎಸ್‌ಪಿ ಮಹೇಶ್ ಕುಮಾರ್ ಪ್ರಸ್ತುತ ನಾವು ಪ್ರತಿಷ್ಠೆಯ ಶಿಕ್ಷಣ ವ್ಯವಸ್ಥೆಯಲ್ಲಿದ್ದೇವೆ . ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಕೇವಲ ಪಠ್ಯದ ಶಿಕ್ಷಣವನ್ನು ನೀಡಿದರೆ ಸಾಲದು. ಅದರೊಂದಿಗೆ ಸಾತ್ವಿಕ ಶಿಕ್ಷಣವನ್ನು ನೀಡುವಂತಹ ಜವಾಬ್ದಾರಿಯು ಪೋಷಕರ ಮೇಲಿದೆ. ನಮ್ಮ ಸಮಾಜದ ಮೂಲ, ಸಂಪ್ರದಾಯ, ಸಂಸ್ಕೃತಿ, ಸಾಮಾಜಿಕ ಜವಾಬ್ದಾರಿ ,ಇತರರಿಗೆ ತೊಂದರೆಯನ್ನು ನೀಡದಿರುವಂತಹ ರೀತಿ ಬದುಕುವುದನ್ನು ಮಕ್ಕಳಿಗೆ ಕಲಿಸಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಗಣನೀಯವಾಗಿ…

Read More

ಸೋಮವಾರಪೇಟೆ NEWS DESK ಫೆ.9 : ಸೋಮವಾರಪೇಟೆ ತಾಲ್ಲೂಕು  ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಐಗೂರು ಗ್ರಾಮದಲ್ಲಿ ಸೋಮವಾರ ನಡೆದ 9ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಐಗೂರು ಕಬ್ಬಿಣ ಸೇತುವೆಯಿಂದ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಿತು. ತೆರೆದ ವಾಹನದಲ್ಲಿ ಸಮ್ಮೇಳನಾಧ್ಯಕ್ಷೆ ಸಾಹಿತಿ ಜಲಜಾ ಶೇಖರ್, ಕ.ಸಾ.ಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವಕಾಮತ್, ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ಅವರುಗಳನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು. ಸಾಂಪ್ರದಾಯಿಕ ವಾದ್ಯಗಳು, ಜನಪದ ಕಲಾವಿದರ ನೃತ್ಯ, ಕನ್ನಡ ಧ್ವಜಗಳು ಮತ್ತು ಘೋಷಣೆಗಳೊಂದಿಗೆ ನಡೆದ ಮೆರವಣಿಗೆಗೆ ಗ್ರಾಮಸ್ಥರು ಸಾಕ್ಷಿಯಾದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ ಕುಮಾರ್ ಮೆರವಣಿಗೆಯನ್ನು ಉದ್ಘಾಟಿಸಿದರು. ಕಬ್ಬಿಣ ಸೇತುವೆಯಿಂದ, ಯಡವಾರೆ ಮಾರ್ಗವಾಗಿ ಕಾಜೂರು ಸರ್ಕಾರಿ ಕಾಲೇಜು ಮೂಲಕ ಸಭಾಂಗಣದ ವರೆಗೆ ಮೆರವಣಿಗೆ ಸಾಗಿತು. ಬೆಳಿಗ್ಗೆ 6.30 ಗಂಟೆಗೆ ಶಾಲಾ ಮೈದಾನದಲ್ಲಿ ತಾಲ್ಲೂಕು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ನಂತರ ಕನ್ನಡ ಸಾಹಿತ್ಯ…

Read More