ಮಡಿಕೇರಿ ಆ.11 : ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮನೋಹರ್ ನಾಯ್ಕ ಅವರ ಮೇಲೆ ಹಲ್ಲೆ, ನಡೆಸಿ, ಸುಳ್ಳು ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ಗಿರೀಶ್, ಒಟ್ಟು ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯೋಪಾಧ್ಯಾಯ ಮನೋಹರ್ ನಾಯ್ಕ್ ಅವರು ತಮ್ಮ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಆರೋಪಿಗಳಲ್ಲಿ ಎಂಟು ಮಂದಿ ಜಾಮೀನು ಪಡೆದುಕೊಂಡಿದ್ದು, ಉಳಿದ ಇಬ್ಬರನ್ನು ವಾರದ ಒಳಗಾಗಿ ತನಿಖಾಧಿಕಾರಿಯಾದ ಡಿವೈಎಸ್‍ಪಿ ಅವರು ಬಂಧಿಸಬೇಕು. ಇಲ್ಲವಾದಲ್ಲಿ ರಾಜ್ಯ ಮಟ್ಟದ ‘ಮಡಿಕೇರಿ ಚಲೋ’ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ನರಿಯಂದಡ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಮನೋಹರ್ ನಾಯ್ಕ್ 2017 ರಲ್ಲಿ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ನಿಯಮ ಬಾಹಿರ ಕಾರ್ಯಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಕಾರಣಕ್ಕೆ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು. ಒಟ್ಟು…
ಲೇಖಕ: admin
ಮಡಿಕೇರಿ ಆ.11 : ಜಿಲ್ಲಾಡಳಿತ ಭವನದ ಕಳಪೆ ತಡೆಗೋಡೆ ಪ್ರಕರಣದ ತನಿಖೆ ಪ್ರಗತಿಯಲ್ಲಿರುವ ಹಂತದಲ್ಲೆ ಸಾಕ್ಷ್ಯಾಧಾರಗಳ ನಾಶ ಪಡಿಸುವ ಬೆಳವಣಿಗೆ ನಡೆದಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ತೆನ್ನಿರ ಮೈನಾ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಸರ್ಕಾರ ರಚಿತವಾಗಿದ್ದು, ಜಿಲ್ಲೆಯ ನೂತನ ಶಾಸಕರ ಪ್ರಯತ್ನದಿಂದ ಜಿಲ್ಲಾಡಳಿತ ಭವನದ ತಡೆಗೋಡೆ ಕಾಮಗಾರಿ ಕುರಿತು ತನಿಖೆ ಚುರುಕು ಪಡೆದುಕೊಂಡಿದೆ. ಈ ನಡುವೆ ಲೋಕೋಪಯೋಗಿ ಇಲಾಖೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶವಾಗಿದೆ ಎಂದು ತಿಳಿಸಿದರು. ಎಂಬಿ ಪುಸ್ತಕವೊಂದರ ಹಾಳೆಗಳು ಹರಿದು ಹೋಗಿರುವುದು ಕಂಡು ಬಂದಿದ್ದು, ಅಧಿಕಾರಿಗಳೆ ದಾಖಲೆಯನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿದರು. ಸಾಕ್ಷ್ಯ ನಾಶವಾಗುವುದಕ್ಕೂ ಮೊದಲೇ ದೃಢೀಕೃತ ಎಂಬಿ ಪುಸ್ತಕದ ಪ್ರತಿಯನ್ನು ತಾನು ಪಡೆದುಕೊಂಡಿದ್ದೆ ಎಂದು ದಾಖಲೆ ಪ್ರದರ್ಶಿಸಿದರು. ಜಿಲ್ಲಾಡಳಿತ ಭವನದ ತಡೆಗೊಡೆಗೆ ಸಂಬಂಧಿಸಿಂತೆ 6.25 ಕೊಟಿ ಹಣ ಡ್ರಾ ಆಗಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ಅಗತ್ಯ ಮಾಹಿತಿಯನ್ನು ನೀಡಲಾಗಿದೆ ಎಂದು ತಿಳಿಸಿದ ಮೈನಾ, ಒಟ್ಟು ಪ್ರಕರಣಕ್ಕೆ…
ನಾಪೋಕ್ಲು ಆ.11 : ನರಿಯಂದದ ಗ್ರಾ.ಪಂ ಯ ಎರಡನೇ ಅವಧಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪೆಮ್ಮಂಡ ಕಾವೇರಮ್ಮ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೋಡಿರ ಎಂ. ನಾಣಯ್ಯ ಆಯ್ಕೆಯಾದರು. ಗ್ರಾ.ಪಂ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪೆಮ್ಮಂಡ ಕಾವೇರಮ್ಮ ಮಾತನಾಡಿ, ಈ ಹಿಂದೆ ಕೊಕೇರಿ ಗ್ರಾಮ ಪಂಚಾಯಿತಿ ಜವಾಬ್ದಾರಿ ಮಾತ್ರ ಇತ್ತು ಈಗ ಕೋಕೇರಿ ಸೇರಿದಂತೆ ಏಳು ಗ್ರಾಮಗಳ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರ ಬೆಂಬಲದೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು. ನೋಡಲ್ ಅಧಿಕಾರಿಯಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಗ್ರಾ.ಪಂ ಮಾಜಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಓಬಿಸಿ ತಾಲೂಕು ಅಧ್ಯಕ್ಷ ಕೋಳೆಯ0ಡ ಗಿರೀಶ್ ಜಿ.ಪಂ ಮಾಜಿ ಸದಸ್ಯರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನೆರೆಯಡಮ್ಮಂಡ ಉಮಾ ಪ್ರಭು, ಶಕ್ತಿ ಕೇಂದ್ರದ ಅಧ್ಯಕ್ಷರಾದ ಉಪಾಧ್ಯಕ್ಷರಾದ ಪ್ಕೋಳoಡ್ರ ಧನುಜ್,…
ಮಡಿಕೇರಿ ಆ.11 : ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ “ಜಾತ್ಯಾತೀತತೆ ಭಾರತದ ಧರ್ಮ” ಎಂಬ ಘೋಷಣೆಯೊಂದಿಗೆ ಆ.15 ರಂದು ನೆಲ್ಯಹುದಿಕೇರಿಯಲ್ಲಿ “ರಾಷ್ಟ್ರ ರಕ್ಷಾ ಸಂಗಮ” ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಕಾರ್ಯದರ್ಶಿ ಸಿ.ಎಂ.ಹಮೀದ್ ಮೌಲವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ನೆಲ್ಯಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಹಾಯಕ ಖಾಝಿಗಳಾದ ಎಂ.ಎಂ.ಅಬ್ದುಲ್ಲ ಫೈಝಿ ಉದ್ಘಾಟಿಸಲಿದ್ದು, ಸಂಘಟನೆಯ ಜಿಲ್ಲಾಧ್ಯಕ್ಷ ಬಶೀರ್ ಹಾಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ, ಚೆಟ್ಟಳ್ಳಿಯ ಕ್ರೈಸ್ತ ಧರ್ಮ ಗುರುಗಳಾದ ಫಾದರ್ ಜೆರಾಲ್ಡ್ ಸ್ಕ್ವೇರಿಯ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಸಕಲೇಶಪುರದ ಆನೆಮಹಲ್ ಇಬ್ರಾಹಿಂ ಮುಸ್ಲಿಯಾರ್ ಭಾಗವಹಿಸಲಿದ್ದು, ಜಿಲ್ಲೆಯ ಸರ್ವ ಜನಾಂಗದ ಬಂಧುಗಳು ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ…
ಬೆಂಗಳೂರು ಆ.11 : ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ, ಜನರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ರಾಜ್ಯದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಂ.ಆರ್.ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಹೆಚ್ಚುವರಿಯಾಗಿ ಆರಂಭಿಸಲು ರೂ.47 ಕೋಟಿ ವೆಚ್ಚದ ಪ್ರಸ್ತಾವನೆಗೆ ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಮಡಿಕೇರಿ ಆ.11 : ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾ.ಪಂ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪಿ.ಆರ್.ಅಮ್ಮಣಿ, ಉಪಾಧ್ಯಕ್ಷರಾಗಿ ಚಕ್ಕೇರ ಸೂರ್ಯ ಅಯ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಡಿಕೇರಿ ಆ.11 : ಯುವಕನೊಬ್ಬನ ಮೃತದೇಹ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ – ಪಾಲಿಬೆಟ್ಟ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಹಲ್ಲೆಯಿಂದ ಮೃತಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸಿದ್ದಾಪುರದ ಅಂಬೇಡ್ಕರ್ ನಗರ ಬಡಾವಣೆ ನಿವಾಸಿ ಕ್ರಿಸ್ಟಲ್ (28) ಮೃತ ಯುವಕ. ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
ಮಡಿಕೇರಿ ಆ.11 : ಟಿಪ್ಪು ಕಾಲದಲ್ಲಿ ಕೊಡವರ ಹತ್ಯೆಯಾದ ದೇವಟ್ ಪರಂಬು ಪ್ರದೇಶದಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಕುತಂತ್ರದಿಂದ ಜೀವ ಕಳೆದುಕೊಂಡ ಹಿರಿಯರಿಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ನಾಚಪ್ಪ ಅವರು ಸಿಎನ್‍ಸಿಯ ನಿರಂತರ ಹೋರಾಟದ ಫಲವಾಗಿ ಪ್ರಮುಖ ಹಕ್ಕೊತ್ತಾಯಗಳಿಗೆ ಹಂತ ಹಂತವಾಗಿ ಸ್ಪಂದನೆ ದೊರೆಯುತ್ತಿದೆ. ಅರಸರ ಸಂಚಿನಿಂದ ಮೃತಪಟ್ಟ ಅಮಾಯಕ ಹಿರಿಯರ ಆಶೀರ್ವಾದ ಪಡೆದು ಶಾಂತಿಯುತ ಹೋರಾಟವನ್ನು ಮುಂದುವರೆಸಲು ಪುಷ್ಪನಮನದ ಮೂಲಕ ಸಂಕಲ್ಪ ತೊಟ್ಟಿರುವುದಾಗಿ ಹೇಳಿದರು. 1785 ರ ಡಿ.12 ರಂದು ದೇವಟ್ ಪರಂಬುವಿನಲ್ಲಿ ಘೋರ ದುರಂತ ನಡೆದಿದ್ದು, ಸಹಸ್ರ ಸಹಸ್ರ ಸಂಖ್ಯೆಯ ಕೊಡವರು ಅಸುನೀಗಿದ್ದಾರೆ. ಪ್ರಾಣ ಕಳೆದುಕೊಂಡ ಹಿರಿಯರ ಸ್ಮರಣೆಗಾಗಿ ಅಂತರರಾಷ್ಟ್ರೀಯ ಮಟ್ಟದ ಸ್ಮಾರಕವೊಂದನ್ನು ಇಲ್ಲಿ ನಿರ್ಮಿಸಬೇಕು. ಕೊಡವ ನರಮೇಧವನ್ನು ಯುಎನ್‍ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣಕ್ಕಾಗಿ ಕೊಡವಲ್ಯಾಂಡ್…
ಮಡಿಕೇರಿ ಆ.11 : ಸುಂಟಿಕೊಪ್ಪ ಗ್ರಾ.ಪಂ ಯ ಎಸ್‍ಡಿಪಿಐ ಬೆಂಬಲಿತ ಸದಸ್ಯೆ ರೇಷ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಿರುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್ ತಿಳಿಸಿದ್ದಾರೆ. ಎರಡನೇ ಅವಧಿಯ ಆಡಳಿತಕ್ಕಾಗಿ ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಸಂದರ್ಭ ರೇಷ್ಮಾ ಅವರು ಎಸ್‍ಡಿಪಿಐ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸದೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಆ.11 : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕೊಡಗು ಘಟಕದ ವತಿಯಿಂದ ಆ.14 ರಂದು ಮಡಿಕೇರಿಯಲ್ಲಿ ರಕ್ತದಾನ ಶಿಬಿರ ಆಯೋಜಿತವಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ, ಜಿಲ್ಲಾ ರಕ್ತನಿಧಿ ಕೇಂದ್ರ, ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿತವಾಗಿರುವ ರಕ್ತದಾನ ಶಿಬಿರವು ಮಡಿಕೇರಿಯ ಸ್ವೀವಟ್೯ ಹಿಲ್ ನಲ್ಲಿರುವ ರೆಡ್ ಕ್ರಾಸ್ ಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ ಎಂದು ರೆಡ್ ಕ್ರಾಸ್ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 9448108234 ಸಂಪರ್ಕಿಸಬಹುದಾಗಿದೆ.






