ಮಡಿಕೇರಿ ಆ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕೋಶಾಧಿಕಾರಿಯಾಗಿ ಎಸ್.ಎಸ್. ಸಂಪತ್ ಕುಮಾರ್ ಆಯ್ಕೆಯಾಗಿದ್ದಾರೆ. ಹಿಂದಿನ ಕೋಶಾಧಿಕಾರಿ ಎಂ.ಬಿ.ಜೋಯಪ್ಪ ಅವರ ತೆರವಾದ ಸ್ಥಾನಕ್ಕೆ ಸಂಪತ್ ಕುಮಾರ್ ಅವರನ್ನು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ನಿಯುಕ್ತಿಗೊಳಿಸಿದ್ದಾರೆ ಎಂದು ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಬೆಂಗಳೂರು : ಗೂಗಲ್ ಕ್ರೋಮ್ ಬಳಕೆದಾರರಿಗೆ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಕಾರ್ಯನಿರ್ವಹಿಸುವ CERT ಎಚ್ಚರಿಕೆ ನೀಡಿದೆ. ಕ್ರೋಮ್‌ನ ನಿರ್ದಿಷ್ಟ ಆವೃತ್ತಿಗಳಲ್ಲಿ ದೋಷ ಪತ್ತೆಹಚ್ಚಿರುವ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ, ಸಂಭಾವ್ಯ ಭದ್ರತಾ ಅಪಾಯದ ಬಗ್ಗೆ ಎಚ್ಚರಿಕೆ ರವಾನಿಸಿದೆ. ಫಿಲ್ಡಿಂಗ್ ಅಟ್ಯಾಕ್, ಡೇಟಾ ಉಲ್ಲಂಘನೆಗೆ ಸಂಬಂಧಿಸಿದಂತೆ ಅಪಾಯ ಎದುರಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಆ್ಯಪ್ ಆಪ್‌ಡೇಟ್ ಮಾಡುವಂತೆ ಬಳಕೆದಾರರಿಗೆ ತಿಳಿಸಿದೆ.
ನಾಪೋಕ್ಲು ಆ.11 : ಬಲ್ಲಮಾವಟಿ ಗ್ರಾ.ಪಂ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಂತಿ ಪೂವಯ್ಯ ಹಾಗೂ ಉಪಾಧ್ಯಕ್ಷರಾಗಿ ಚೋಕಿರ ಬಾಬಿ ಭೀಮಯ್ಯ ಆಯ್ಕೆಯಾದರು. ಗ್ರಾ.ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾ ಅಧಿಕಾರಿಯಾಗಿ ಮಡಿಕೇರಿ ತಾಲೂಕು ತಹಸಿಲ್ದಾರ್ ಪ್ರವೀಣ್ ಕುಮಾರ್ ಕಾರ್ಯನಿರ್ವಹಿಸಿದರು. ಈ ಸಂದರ್ಭ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಪ್ಪಚೆಟ್ಟೊಳಂಡ ಮನು ಮುತ್ತಪ್ಪ, ಶಕ್ತಿ ಕೇಂದ್ರದ ಪ್ರಮುಖರಾದ ಚಂಗೆಟ್ಟಿರ ಕುಮಾರ್ ಸೋಮಣ್ಣ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕರವಂಡ ಲವ ನಾಣಯ್ಯ, ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣಗಳ ಸದಸ್ಯರಾದ ಕರವಂಡ ಅಪ್ಪಣ್ಣ, ಬೂತ್ ಅಧ್ಯಕ್ಷರಾದ ಚಿಯಂಡಿರ ದಿನೇಶ್, ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ,ಬಿಜೆಪಿಯ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಆ.11 : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಯನ್ನು ಅಂಬಾರಿಯಲ್ಲಿ ಹೊತ್ತು ಸಾಗಲು ದಸರಾ ಗಜಪಡೆ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಈ ಬಾರಿ 9 ಆನೆಗಳಿಗೆ ದಸರಾ ಗಜ ಪಡೆಯಲ್ಲಿ ಸ್ಥಾನ ನೀಡಲಾಗಿದ್ದು, ಈ ಪೈಕಿ ಆರು ಆನೆಗಳು ಕೊಡಗಿನ ಶಿಬಿರಗಳಿಂದ ಆಯ್ಕೆಗೊಂಡಿದೆ. ಬೆಂಗಳೂರಿನ ಅಶೋಕಪುರದಲ್ಲಿರುವ ಅರಣ್ಯಭವನದಲ್ಲಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಜಿ.ವಿ.ರಂಗರಾವ್ ಅಧ್ಯಕ್ಷತೆಯಲ್ಲಿನ ಸಭೆಯಲ್ಲಿ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ಈ ಬಾರಿಯ ದಸರಾ ಮಹೋತ್ಸವದಲ್ಲಿ ಮೊದಲ ತಂಡದಲ್ಲಿ 9 ಆನೆಗಳು ಪಾಲ್ಗೊಳ್ಳಲಿವೆ. ಇವುಗಳಲ್ಲಿ ಏಳು ಗಂಡಾನೆ ಹಾಗೂ ಎರಡು ಹೆಣ್ಣಾನೆಗಳು ಸೇರಿದೆ. ಗಜಪಡೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೆಣ್ಣಾನೆಗಳ ಗರ್ಭಧಾರಣಾ ಪರೀಕ್ಷಾ ವರದಿ ಬಾರದ ಕಾರಣ ಗಜಪಡೆ ಆಯ್ಕೆ ತಡವಾಗಿತ್ತು. ಆದರೆ ಸೋಮವಾರದಂದು ವರದಿ ಕೈ ಸೇರಿದೆ. ಈ ನಿಟ್ಟಿನಲ್ಲಿ ಗಜಪಡೆಯ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ನಾಪೋಕ್ಲು ಆ.11 : ವಿರಾಜಪೇಟೆ ಅರಣ್ಯ ವಲಯ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳ ತೋಟಗಳಲ್ಲಿ ಬೀಡು ಬಿಟ್ಟು ಫಸಲು ಹಾಗೂ ಗಿಡಗಳನ್ನು ನಾಶಪಡಿಸುತ್ತಿದ್ದ ಹತ್ತು ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು. ಕಾರ್ಯಾಚರಣೆಯಲ್ಲಿ ವಿರಾಜಪೇಟೆ, ಅಮ್ಮತ್ತಿ ಅರಣ್ಯ ವಲಯ ಹಾಗೂ ಆನೆಕ್ಷಿಪ್ರ ಕಾರ್ಯಪಡೆಯ ತಂಡಗಳು ಜಂಟಿಯಾಗಿ ಎರಡು ದಿನ ಕಾರ್ಯಾರಣೆ ನಡೆಸಿ ಕಾಡಾನೆಗಳ ಹಿಂಡನ್ನು ಬಲ್ಯಾಯಾಟ್ರ ಕಾಡಿಗೆ ಓಡಿಸಿದರು. ಒಟ್ಟು 30ಕ್ಕ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಹರಸಾಹಸಪಟ್ಟರು. ಮತ್ತೆ ಕಾಡಾನೆಗಳು ಮರಂದೋಡ ಗ್ರಾಮದ ಮುಕ್ಕಾಟಿರ ಪ್ರಕಾಶ್ ಎಂಬವರ ತೋಟದ ಗೇಟ್ ಅನ್ನು ಜಖಂಗೊಳಿಸಿವೆ. ಮರಂದೋಡ ಶಾಲೆಯ ಗೇಟನ್ನು ಕೂಡ ಜಖಂಗೊಳಿಸಿವೆ. ತೋಟಗಳಲ್ಲಿ ಅಡ್ಡಾಡುತ್ತಿದ್ದ ಕಾಡಾನೆಗಳನ್ನು ಮತ್ತೆ ಕಾಡಿಗಟ್ಟಲಾಗಿದೆ. ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ ನೆಹರು ಮಾರ್ಗದರ್ಶನದಲ್ಲಿ ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಕಳ್ಳಿರದೇವಯ್ಯ ನೇತೃತ್ವದಲ್ಲಿ ಅರಣ್ಯ ಆನೆ ಕ್ಷಿಪ್ರ ಕಾರ್ಯಪಡೆ ತಂಡ ಕೆದಮುಳ್ಳೂರು ಹಾಗೂ ಚೆಯ್ಯಂಡಾಣೆ…
ನಾಪೋಕ್ಲು ಆ.11 : ರಾಜ್ಯದ ಹಲವು ಭಾಗಗಳಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರ ಸಬಲೀಕರಣಕ್ಕೆ ಕಾರಣವಾಗಿದೆ ಎಂದು ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಶ್ರೀ ಭಗವತಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ನಾಪೋಕ್ಲು ಸುಭಾಷ್ ನಗರ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಉತ್ತಮ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ. ಕಾರ್ಯಕರ್ತರು ಕೈಗೊಳ್ಳುತ್ತಿರುವ ಕಾರ್ಯ ಶ್ಲಾಘನೀಯ. ಹಲವು ಭಾಗಗಳಲ್ಲಿ ಸಂಘಗಳು ಕ್ರಿಯಾಶೀಲವಾಗಿವೆ. ಕೆಲವೆಡೆ ಅರಿವಿನ ಕೊರತೆಯಿಂದ ಹೆಚ್ಚಿನ ಪ್ರಗತಿ ಸಾಧಿಸಿಲ್ಲ. ಈ ಸಂಘವು 30 ಲಕ್ಷ ಉಳಿತಾಯ ಮಾಡಿದ್ದು, ಹೆಮ್ಮೆಯ ವಿಚಾರ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಇರುವ ಸಂಘಗಳು ಗ್ರಾಮೀಣ ಕುಟುಂಬಗಳನ್ನು ಒಗ್ಗೂಡಿಸಲು ನೆರವಾಗಿವೆ ಎಂದರು. ಗ್ರಾ.ಪಂ ಸದಸ್ಯ ಅರುಣ್ ಬೇಬ ಮಾತನಾಡಿ, ಸಮಾಜದಲ್ಲಿ ಕಟ್ಟ ಕಡೆ ಶೋಷಿತ ವ್ಯಕ್ತಿಗೂ ಪಕ್ಷಾತೀತವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೆರವು ನೀಡಲಾಗುತ್ತಿದೆ ಎಂದರು. ಮೇಲ್ವಿಚಾರಕರಾದ ಸುನಿಲ್ ಮಾತನಾಡಿ, ಬ್ಯಾಂಕಿನವರು ಸಂಘಕ್ಕೆ ಸಹಾಯಧನ ನೀಡುವ…
ಸುಂಟಿಕೊಪ್ಪ ಆ.11 : ಸುಂಟಿಕೊಪ್ಪ ಗ್ರಾ.ಪಂ ಸದಸ್ಯೆ, ಎಸ್.ಡಿ.ಪಿ.ಐ ಕಾರ್ಯಕರ್ತೆಯಾಗಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ರೇಷ್ಮಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಗ್ರಾಮ ಪಂಚಾಯತಿ ಎರಡನೇ ಹಂತದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೇರಲು ಕಾರಣರಾದ ಎಸ್.ಡಿ.ಪಿ.ಐ ಪಕ್ಷದ ಮುಖಂಡರ ನಿಲುವನ್ನು ಖಂಡಿಸಿ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೇ ವೇಳೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಜಿ.ಪಂ ಮಾಜಿ ಅಧ್ಯಕ್ಷ ಕೆ.ಪಿ.ಚಂದ್ರಕಲಾ, ಮತ್ತು ಪಿ.ಎಂ ಲತೀಫ್, ಗ್ರಾ.ಪಂ ಉಪಾಧ್ಯಕ್ಷೆ ಶಿವಮ್ಮ, ಸದಸ್ಯ ರಫೀಕ್ ಖಾನ್ ಹಾಗೂ ಪ್ರಮುಖರು ಹಾಜರಿದ್ದರು.
ಮಡಿಕೇರಿ ಆ.10 : ಕೊಡಗು ಜಿಲ್ಲಾಡಳಿತ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಆ.10 : ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಆಗಸ್ಟ್, 12, 13 ಮತ್ತು 14 ರಂದು ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಆಗಸ್ಟ್, 11 ರ ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಬೆಳಗ್ಗೆ 6 ಗಂಟೆಯವರೆಗೆ ಮಾದಾಪುರ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, 12 ರಂದು ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ವ್ಯಾಪ್ತಿಯ ಸುತ್ತಮುತ್ತಲಿನ 10 ಕಿ,ಮೀ. ಹಾಗೂ ಆಗಸ್ಟ್, 14 ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್, 14 ರ ಮಧ್ಯರಾತ್ರಿ 12…
ಮಡಿಕೇರಿ ಆ.12 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾ ಡಿಸೋಜಾ ಅವರ ಹೆಸರಿನಲ್ಲಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿದೆ. ನಾ ಡಿಸೋಜಾ ದತ್ತಿ ಕಾರ್ಯಕ್ರಮವಾಗಿ ಈ ಸ್ಪರ್ಧೆ ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಬೆಳವಣಿಗೆ ಉಂಟಾಗಲು ಮತ್ತು ಆಸಕ್ತಿ ಮೂಡಲು ಇದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮತ್ತು ಕನ್ನಡ ನಾಡು, ನುಡಿ, ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಜಿಲ್ಲೆಯ ಶಾಲೆ-ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಡಿಕೇರಿಯಲ್ಲಿ ಈ ಸ್ಪರ್ದೆ ನಡೆಯುವುದು. ಈ ಕುರಿತು ಅರ್ಜಿ ಸಲ್ಲಿಸಲು ಆ.15 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಸ್.ಜಿ.ಆರ್.ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಸಂಪರ್ಕಿಸಲು ದೂರವಾಣಿ ಸಂಖ್ಯೆ:…






