ಲೇಖಕ: admin

ಮಡಿಕೇರಿ ಆ.9 : ಡಿವೈನ್ ಪಾರ್ಕ್ ಟ್ರಸ್ಟ್(ರಿ)ಸಾಲಿಗ್ರಾಮ ಅಂಗಸಂಸ್ಥೆಗಳಾದ ವಿವೇಕ ಜಾಗೃತ ಬಳಗ ಮಡಿಕೇರಿ, ಮೂರ್ನಾಡು, ಕುಶಾಲನಗರ, ಸೋಮವಾರಪೇಟೆ ಬಳಗದ ವತಿಯಿಂದ ಆ.12ರಂದು “ಯೋಗ ಪರ್ಯಟನ’ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕ್ರಮದ ಸಂಚಾಲಕ ಡಿ.ಎಸ್.ಯಶವಂತ್, ಅಂದು ಬೆಳಿಗ್ಗೆ 11 ಗಂಟೆಗೆ ಮೂರ್ನಾಡುವಿನ ಗೌಡ ಸಮಾಜದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಮತ್ತು ಪ್ರಕೃತಿ ಚಿಕಿತ್ಸೆ ಆಯುರ್ವೇದ ಆಸ್ಪತ್ರೆಯ ಮುಖ್ಯಸ್ಥ ಡಾ.ವಿವೇಕ ಉಡುಪ ದಿವ್ಯ ಉಪಸ್ಥಿತರಿರಲಿದ್ದಾರೆ ಎಂದರು. ಕಾರ್ಯಕ್ರಮಕ್ಕೆ ಬಳಗದ ಸದಸ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ ಅವರು, ಸಾಂಸಾರಿಕ ಭಿನ್ನಭಿಪ್ರಾಯಗಳು, ಯುವ ಜನತೆಯಲ್ಲಿ ನಡೆಯುವ ಸಂದಿಗ್ನ ಪರಿಸ್ಥಿತಿಗಳು ಸೇರಿದಂತೆ ಸರ್ವ ಸಮಸ್ಯೆಗಳನ್ನು ಆಧ್ಯಾತ್ಮದ ಜಾಗೃತಿ ಮೂಡಿಸುವುದು ಮತ್ತು ಯೋಗದಿಂದ ಮಾತ್ರ ಉಪಶಮನ ಮಾಡಲು ಸಾಧ್ಯ ಎಂದರು. ವ್ಯಕ್ತಿತ್ವ ನಿರ್ಮಾಣ ಹಾಗೂ ಲೋಕೋದ್ದಾರದ ಪವಿತ್ರ ಗುರಿಯನ್ನು ಡಿವೈನ್ ಪಾರ್ಕ್ ಹೊಂದಿದೆ. ಎಲ್ಲರೂ ಸುಖ ಶಾಂತಿಯಿಂದ ಜೀವನ ನಡೆಸುವಂತೆ ಮಾಡುವುದು…

Read More

ಬೆಂಗಳೂರು :  ಮುಖ್ಯಮಂತ್ರಿಸಿದ್ದರಾಮಯ್ಯ ಅವರು  ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು  ಹಾಜರಿದ್ದರು.

Read More

ಮಡಿಕೇರಿ ಆ.9 : ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಲ್ಪಸಂಖ್ಯಾತರಿಗಾಗಿ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಎಲ್ಲಾ ಇಲಾಖೆ ಹಂತದ ಅಧಿಕಾರಿಗಳು ಶ್ರಮಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಇರುವ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕಿರುಹೊತ್ತಿಗೆ ಮುದ್ರಣ ಮಾಡಿ ಎಲ್ಲೆಡೆ ವಿತರಿಸಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. ಪ್ರಸಕ್ತ ಸಾಲಿನಲ್ಲಿ ವಿವಿಧ ಇಲಾಖೆಗಳಿಗೆ ಅಲ್ಪಸಂಖ್ಯಾತರಿಗಾಗಿ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ತಲುಪಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ಸಮಿತಿ ಸದಸ್ಯರಾದ ಕೆ.ಟಿ.ಬೇಬಿಮ್ಯಾಥ್ಯೂ ಅವರು ಮಾಹಿತಿ ನೀಡಿ ಸರ್ಕಾರದಿಂದ ಅಲ್ಪಸಂಖ್ಯಾತರಿಗಾಗಿ ಸಾಕಷ್ಟು ಕಾರ್ಯಕ್ರಮಗಳು ಇದ್ದು, ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ 5 ತಾಲ್ಲೂಕುಗಳಲ್ಲಿಯೂ ವಿಶೇಷ ಕಾರ್ಯಾಗಾರ ಏರ್ಪಡಿಸುವಂತಾಗಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಮತ್ತೊಬ್ಬ…

Read More

ಮಡಿಕೇರಿ ಆ.9 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ಪರಮಾಣು ಜ್ಯೋತಿ ಕಾರ್ಯಕ್ರಮ ನಡೆಯಿತು. ಮುಂಬಯಿ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರ(ಬಾರ್ಕ್) ಇಲ್ಲಿಂದ ಬಂದ ಪರಮಾಣು ವಿಜ್ಞಾನಿಗಳಾದ ಜಸರಾಜ್ ವೈಷ್ಣವ ಮತ್ತು ಊರ್ವಶಿ ಕರ್ನಾಣಿ ಗೋರ್ ಇವರುಗಳು ವಿದ್ಯಾಲಯದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ತಮ್ಮ ಅನುಮಾನಗಳನ್ನು ಪರಿಹರಿಸಿಕೊಂಡರು. ಆಗಮಿಸಿದ ಅತಿಥಿಗಳು ವಿದ್ಯಾರ್ಥಿಗಳಿಗಾಗಿ ವಿಜ್ಞಾನ ರಸಪ್ರಶ್ನೆಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಿದರು. ವಿಜ್ಞಾನಿಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಮೂಲ ವಿಜ್ಞಾನದಲ್ಲಿ ವಿಶೇಷವಾಗಿ ಪರಮಾಣು ವಿಜ್ಞಾನದಲ್ಲಿ ಆಸಕ್ತಿ ಹೆಚ್ಚುವ ಹಾಗೆ ಮಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ಹಾಗೂ ವಿಜ್ಞಾನ ಶಿಕ್ಷಕರು ಹಾಜರಿದ್ದರು. ಆಗಮಿಸಿದ ಅತಿಥಿಗಳು ವಿದ್ಯಾಲಯದ ಚಟುವಟಿಕೆಗಳನ್ನು ವೀಕ್ಷಿಸಿದರು. ನಂತರ ವಿದ್ಯಾರ್ಥಿಗಳ ಹಾಸ್ಟೇಲ್‍ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಾಚಾರ್ಯರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಂಭ್ರಮಿಸಿದ ವಿಜ್ಞಾನಿಗಳಿಗೆ ವಿದ್ಯಾಲಯದ ಸಿಬ್ಬಂದಿ ಮತ್ತು…

Read More

ಮಡಿಕೇರಿ ಆ.9 : ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಇವರ ವತಿಯಿಂದ ರಾಷ್ಟ್ರೀಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್ ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ “ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆ”ಯು ಆ.27 ರಂದು ನಡೆಯಲಿದೆ. ಸ್ಪರ್ಧೆಗೆ ಹೆಸರು ನೋಂದಾಯಿಸಲು ಆ.25 ಕೊನೆ ದಿನವಾಗಿದೆ. ಸ್ಪರ್ಧಾ ವಿವರ ಮತ್ತು ಹೆಚ್ಚಿನ ಮಾಹಿತಿಗೆ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ “ಚೇತನ ಚಿಲುಮೆ” (ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದ ಹತ್ತಿರ) ದೂ.ಸಂ.9880985939, 9480745776 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ  ತಿಳಿಸಿದೆ.

Read More

ಮಡಿಕೇರಿ ಆ.9 : “ವಿಶ್ವ ಆದಿಮಸಂಜಾತ ಸ್ಥಳೀಯ ಜನರ” ಅಂತರಾಷ್ಟ್ರೀಯ ದಿನದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿತು. ಧರಣಿಯ ನೇತೃತ್ವ ವಹಿಸಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಸ್ವಯಂ ನಿರ್ಣಯ ಹಕ್ಕು ಮತ್ತು ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆಯನ್ನು ಒಳಗೊಂಡ ವಿವಿಧ ರಾಜ್ಯಾಂಗದತ್ತ ಹಕ್ಕುಗಳ ಬೇಡಿಕೆಗಳ ಕುರಿತು ಸರ್ಕಾರಗಳು ಸೂಕ್ತ ಸ್ಪಂದನೆಯನ್ನು ನೀಡಬೇಕೆಂದು ಒತ್ತಾಯಿಸಿದರು. ಕೊಡವರು ವಿಶಿಷ್ಟವಾದ ಸಾಮಾಜಿಕ, ಸಾಂಸ್ಕೃತಿಕ ವ್ಯವಸ್ಥೆಯನ್ನು ಹೊಂದಿರುವ ಬುಡಕಟ್ಟು ಜನಾಂಗದವರಾಗಿದ್ದಾರೆ. ವಿಭಿನ್ನ ಭಾಷೆ ಮತ್ತು ನಂಬಿಕೆಗಳನ್ನು ಹೊಂದಿದ್ದಾರೆ. ಸಾಂಪ್ರದಾಯಿಕವಾಗಿ ಅವರು ಕೊಡವ ಭೂಮಿಯಲ್ಲೇ ಉಳಿದುಕೊಂಡಿದ್ದಾರೆ. ನಂಬಿಕೆ ಮತ್ತು ಸಂಸ್ಕೃತಿಯನ್ನು ತಮ್ಮ ಹೊಸ ಪೀಳಿಗೆಗೆ ರವಾನಿಸಿದ್ದಾರೆ. ಈ ರೀತಿಯ ವಿಶಿಷ್ಟ ಮತ್ತು ಅತಿಸೂಕ್ಷ್ಮ ಜನಾಂಗದ ಹಕ್ಕುಗಳನ್ನು ಆಡಳಿತ ವ್ಯವಸ್ಥೆ ಮುಂದೆ ಪ್ರತಿಪಾದಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಸ್ಥಳೀಯ ಜನರ ಹಕ್ಕುಗಳ ಕುರಿತು ವಿಶ್ವ ರಾಷ್ಟ್ರಸಂಸ್ಥೆ (UNDRIP) 2007 ಸೆಪ್ಟಂಬರ್ ನಲ್ಲಿ UN…

Read More

ಮಡಿಕೇರಿ ಆ.9 : ಮಡಿಕೇರಿ ಆಕಾಶವಾಣಿಯಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 50 ವರ್ಷ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕನ್ನಡವನ್ನು ಚೆನ್ನಾಗಿ ಓದಲು ಮತ್ತು ಬರೆಯಲು ಗೊತ್ತಿರಬೇಕು. ಸ್ಪಷ್ಟ ಉಚ್ಛಾರಣೆ ಹೊಂದಿರಬೇಕು. ಕಂಪ್ಯೂಟರ್ ಬಳಸುವ ಜ್ಞಾನ ಇರಬೇಕು. ಇಂಗ್ಲೀಷ್ ಭಾಷೆಯಿಂದ ಕನ್ನಡಕ್ಕೆ ಮತ್ತು ಕನ್ನಡದಿಂದ ಇಂಗ್ಲೀಷ್‍ಗೆ ಭಾಷಾಂತರ ಮಾಡುವ ಸಾಮಥ್ರ್ಯ ಇರಬೇಕು. ಪ್ರಚಲಿತ ವಿದ್ಯಮಾನ, ಕಲೆ, ಸಂಸ್ಕೃತಿ , ಸಂಗೀತ, ರಂಗಭೂಮಿ, ಚಲನಚಿತ್ರ, ಸಾಹಿತ್ಯ, ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಸಾಮಾನ್ಯ ಜ್ಞಾನ ಹೊಂದಿರಬೇಕು. ಮಡಿಕೇರಿ ನಿವಾಸಿಗಳಿಗೆ ಆದ್ಯತೆ. ಅರ್ಜಿ ಶುಲ್ಕ ರೂ.354 ಗಳನ್ನು ಅರ್ಜಿಯಲ್ಲಿ ನಮೂದಿಸಿರುವ ಪ್ರಸಾರ ಭಾರತಿ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು. ಲಿಖಿತ ಪರೀಕ್ಷೆ, ಧ್ವನಿ ಪರೀಕ್ಷೆ ಹಾಗೂ ಸಂದರ್ಶನ ಒಳಗೊಂಡ ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ನಿಗದಿತ ಅರ್ಜಿ ಫಾರಂಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 11 ಗಂಟೆಯಿಂದ ಸಂಜೆ…

Read More

ಮಡಿಕೇರಿ ಆ.9 :  ಕುಶಾಲನಗರ ಪುರಸಭೆ ವ್ಯಾಪ್ತಿಯ ಮಾರುಕಟ್ಟೆ ರಸ್ತೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು,  ಕುಶಾಲನಗರ ಭಾಗದಲ್ಲಿ  ಕುಡಿಯುವ ನೀರಿನ ಘಟಕ ಆಗದೆ ಉಳಿದಿರುವ ವಾರ್ಡ್ ಹಾಗೂ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ.  ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಸೂಚನೆ ನೀಡಿ ಪುರಸಭೆಯ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಅಭಿನಂದನೆ  ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಧಿಕಾರಿ  ಕೃಷ್ಣ ಪ್ರಸಾದ್,  ಸಹಾಯಕ ಅಭ್ಯಂತರ  ರಂಗರಾಮ್,  ಸದಸ್ಯರಾದ ಪ್ರಮೋದ್ ಮುತ್ತಪ್ಪ, ಶೇಕ್ ಕಲೀಮುಲ್ಲ, ಸುಂದರೇಶ್, ಜಯಲಕ್ಷ್ಮಿ, ಜಯಲಕ್ಷ್ಮಮ್ಮ, ಪುಟ್ಟಲಕ್ಷ್ಮಿ, ಕುಶಾಲನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಹಾಗೂ ಜಿ.ಪಂ ಮಾಜಿ ಸದಸ್ಯ ವಿ.ಪಿ ಶಶಿಧರ್, ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ ಚಂದ್ರಕಲ, ಕೆ.ಪಿ.ಸಿ.ಸಿ ಸಂಯೋಜಕ ನಟೇಶ್ ಗೌಡ, ಪ್ರಮುಖರಾದ ಶಿವಶಂಕರ್, ಕಿರಣ್ ಕುಮಾರ್, ಮುಸ್ತಫ, ನಂಜುಂಡಸ್ವಾಮಿ, ಹರೀಶ್ ಮುಳ್ಳುಸೋಗೆ ಹಾಗೂ ಮುಖಂಡರು ಮತ್ತು ಹಿತೈಷಿಗಳು ಹಾಜರಿದ್ದರು.

Read More

ಮಡಿಕೇರಿ ಆ.9 : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾಸಂಸ್ಥೆಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಶಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿ ಒಕ್ಕೂಟವಾದ “ಅವಿನ್ಯಂ” ವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಮೈಸೂರಿನ ಎನ್‍ಐಈ ಪ್ರಾಧ್ಯಾಪಕರಾದ ಡಾ. ರಘುವೀರ್, ಕೃತಕ ಬುದ್ಧಿಮತ್ತೆಯ ಮಹತ್ವ, ದೈನಂದಿನ ಜೀವನದಲ್ಲಿ ಅಳವಡಿಕೆ, ಮತ್ತು ಸಮಾಜದಲ್ಲಿ ಕೃತಕ ಬುದ್ಧಿಮತ್ತೆಯ ಪ್ರಭಾವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕೊಡವ ಏಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ. ಎಮ್.ಸಿ.ಕಾರ್ಯಪ್ಪ ಮಾತನಾಡಿ, ಹೇಗೆ ಕೃತಕ ಬುದ್ದಿಮತ್ತೆಯು ನಮ್ಮ ಸಮಾಜದಲ್ಲಿ ಬದಲಾವಣೆಗಳನ್ನು ತರುತ್ತಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಸವರಾಜ್ ಮಾತನಾಡಿ, ವಿದ್ಯಾರ್ಥಿ ಒಕ್ಕೂಟದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿ ಒಕ್ಕೂಟದ ಲಾಂಛನವನ್ನು ಡಾ.ಎಂ.ಸಿ ಕಾರ್ಯಪ್ಪ ಬಿಡುಗಡೆ ಮಾಡಿದರು. ಸಂಯೋಜಕರಾದ (ಸಹ ಪ್ರಾಧ್ಯಾಪಕ) ಬಿ.ಎಂ. ಮುರಳೀಧರ್ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿ ಸದಸ್ಯರುಗಳಿಗೆ ಪ್ರಮಾಣ ವಚನ ಭೋದಿಸಿದರು. ಇದೇ ಸಂದರ್ಭ ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ಸ್ವರ್ಧಿಗಳಿಗೆ ಬಹುಮಾನವನ್ನು…

Read More

ಮಡಿಕೇರಿ ಆ.9 : ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಯಾವುದೇ ಅಡ್ಡಿ ಇಲ್ಲದೆ ಪೂರೈಸಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚೆಂಬು ಗ್ರಾ.ಪಂ ಸಭಾಂಗಣದಲ್ಲಿ ನಡೆದ ಜನಸ್ಪಂದನ ಸಭೆ ಮತ್ತು ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ಥಳೀಯ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಶಾಸಕರು ಸ್ಥಳದಲ್ಲೇ ಬಹುತೇಕ ಅಹವಾಲುಗಳಿಗೆ ಪರಿಹಾರ ಸೂಚಿಸಿದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅರಣ್ಯ ಇಲಾಖೆ ಅಡ್ಡಿಪಡಿಸಬಾರದು. ಬಡಕುಟುಂಬಗಳಿಗೆ ವಿದ್ಯುತ್ ನೀಡಲು ಚೆಸ್ಕಾಂ ಇಲಾಖೆ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು. ಆನೆ ಹಾವಳಿ ತೀವ್ರಗೊಂಡಿರುವ ಭಾಗದಲ್ಲಿ ಅರಣ್ಯ ಅಧಿಕಾರಿಗಳು ಸೋಲಾರ್ ಬೇಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು. ಅರಣ್ಯ ಹಕ್ಕು ಪತ್ರದ ಬಗ್ಗೆ ಈಗಾಗಲೇ ಅರಣ್ಯ ಸಚಿವರು ಹಲವು ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಅಗತ್ಯ…

Read More