ಲೇಖಕ: admin

ಮಡಿಕೇರಿ ಆ.9 : ಪ್ರತಿಯೊಬ್ಬ ಭಾರತೀಯ ಪ್ರಜೆ ದೇಶಾಭಿಮಾನ ಬೆಳೆಸಿಕೊಳ್ಳುವುದರೊಂದಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವದಿಂದ ಕಾಣಬೇಕೆಂದು ಭಾರತ ಸೇವಾದಳದ ರಾಜ್ಯ ಸಂಪನ್ಮೂಲ ವ್ಯಕ್ತಿ, ವಲಯ ಸಂಘಟಕ ಈರಯ್ಯ ಅವರು ಕರೆ ನೀಡಿದ್ದಾರೆ. ಭಾರತ ಸೇವಾದಳದ ವಿರಾಜಪೇಟೆ ತಾಲ್ಲೂಕು ಸಮಿತಿ ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯ್ತಿ ವತಿಯಿಂದ ತಾ.ಪಂ ವ್ಯಾಪ್ತಿಯ ಗ್ರಾ.ಪಂ ಸಿಬ್ಬಂದಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು. ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಈರಯ್ಯ ಅವರು ರಾಷ್ಟ್ರಧ್ವಜವನ್ನು ಆರೋಹಣ ಮತ್ತು ಅವರೋಹಣ ಮಾಡುವ ಸಂದರ್ಭ ಅತ್ಯಂತ ಗೌರವದಿಂದ ನಡೆದುಕೊಳ್ಳಬೇಕು ಎಂದರು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಸಿ.ಅಪ್ಪಣ್ಣ, ರಾಷ್ಟ್ರಧ್ವಜವನ್ನು ಕಟ್ಟುವ ವಿಧಾನ ಮತ್ತು ಆರೋಹಣ, ಅವರೋಹಣ ಮಾಡುವ ರೀತಿಯನ್ನು ಪ್ರತಿಯೊಬ್ಬರು ತಿಳಿದುಕೊಂಡಿರಬೇಕು. ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಗೆ ಎಲ್ಲೂ ಅಗೌರವ ಆಗದಂತೆ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು. ಖಾದಿ ಭಂಡಾರದಲ್ಲಿ ದೊರೆಯುವ ಐಎಸ್‍ಐ ಚಿಹ್ನೆ ಹೊಂದಿರುವ ನಿರ್ದಿಷ್ಟ ಅಳತೆಯ ರಾಷ್ಟ್ರಧ್ವಜವನ್ನೇ ಖರೀದಿಸಬೇಕು ಮತ್ತು…

Read More

ಮಡಿಕೇರಿ ಆ.9 : ಸಮಾಜದ ಅಗತ್ಯತೆಗಳಿಗೆ ತಕ್ಕಂತೆ ಜನರಪರವಾಗಿ ಕಾಯ೯ಪ್ರವೖತ್ತವಾಗಲು ಕೊಡಗು ಪೊಲೀಸ್ ಇಲಾಖೆ ಬದ್ದವಾಗಿದೆ. ಕೊಡಗಿನಲ್ಲಿ ಹೆಚ್ಚುತ್ತಿದ್ದ ಗಾಂಜಾ ಮಾದಕ ದ್ರವ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡಿರುವ ಸಮರಕ್ಕೆ ಸಾವ೯ಜನಿಕರೂ ಸಹಕಾರ ನೀಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ರೋಟರಿ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಪೊಲೀಸ್ ವರಿಷ್ಟಾಧಿಕಾರಿಗಳೊಂದಿಗೆ ವಿವಿಧ ಸಂಘಸಂಸ್ಥೆಗಳ ಪ್ರಮುಖರ ಸಂವಾದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ರಾಮರಾಜನ್ ಹಲವಾರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು. ಕೊಡಗಿನಲ್ಲಿ ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣಗಳು ಹೆಚ್ಚಾದರೇ ಅದು ಪ್ರವಾಸೋದ್ಯಮದ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಕೌಟುಂಬಿಕ ಪ್ರವಾಸೋದ್ಯಮಕ್ಕೆ ಧಕ್ಕೆ ಬರಲಿದೆ ಎಂದು ಎಚ್ಚರಿಸಿದ ರಾಮರಾಜನ್ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾದಕ ದ್ರವ್ಯ ಮಾರಾಟಗಾರರನ್ನು ಬಗ್ಗು ಬಡಿಯುತ್ತಿದೆ. ಮಾದಕ ದ್ರವ್ಯ ಸೇವನೆ ಮಾಡುವವರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಅಂಥವರ ವಿರುದ್ದವೂ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು…

Read More

ಮಡಿಕೇರಿ ಆ.9 : ನಗರದ ದೇಚೂರಿನಲ್ಲಿ  ಗಾಂಜಾ ಸೇವನೆ ಮಾಡುತ್ತಿದ್ದ  ನಾಲ್ವರನ್ನು ಕೊಡಗು ಜಿಲ್ಲಾ ಪೊಲೀಸರು  ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ದೇಚೂರು ಗ್ರಾಮದ ಹೆಚ್.ಎಸ್. ಪ್ರತಾಪ್ (22 ), ಇಬ್ಬಿವಳವಾಡಿ ಗ್ರಾಮದ   ಐ.ಆರ್. ಮೋನಿಶ್ ( 20), ಕರ್ಣಂಗೇರಿ ಗ್ರಾಮ ಲಿಖಿತ್ ಡಿ (23), ಪಿ.ಎಸ್.ಅಕ್ಷಯ್  (23) ಎಂಬವರನ್ನು  ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಹಿನ್ನೆಲೆ  ಡಿವೈಎಸ್‌ಪಿ ಗಂಗಾಧರಪ್ಪ, ಮಡಿಕೇರಿ ನಗರ ವೃತ್ತ ಪಿ. ಸಿ.ಪಿ.ಐ  ಅನೂಪ್ ಮಾದಪ್ಪ,  ಮಡಿಕೇರಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀನಿವಾಸ್‌  ಹಾಗೂ ಅಪರಾಧ ವಿಭಾಗದ ಪಿಎಸ್‌ಐ ಎ.ಬಿ.ರಾಧ ಹಾಗೂ ಡಿ.ಸಿ.ಆರ್.ಬಿ. ಘಟಕದ ಸಿಬ್ಬಂಧಿಯವರುಗಳ ವಿಶೇಷ ತಂಡವನ್ನು ರಚಿಸಿ, ತನಿಖೆ ಕೈ ಗೊಳ್ಳಲಾಗಿತ್ತು.   ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

Read More

ಸೋಮವಾರಪೇಟೆ ಜು.9 : ಗೌಡಳ್ಳಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎ.ಎಸ್.ನವೀನ್ ಕುಮಾರ್(ಅಜ್ಜಳ್ಳಿ ನವೀನ್) ಹಾಗೂ ಉಪಾಧ್ಯಕ್ಷರಾಗಿ ಕೆ.ಡಿ.ವಿಶಾಲಾಕ್ಷಿ ಅವಿರೋಧವಾಗಿ ಆಯ್ಕೆಯಾದರು. ಹತ್ತು ಸದಸ್ಯ ಬಲದ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ 9 ಹಾಗೂ ಓರ್ವ ಜೆಡಿಎಸ್ ಬೆಂಬಲಿತ ಸದಸ್ಯರಿದ್ದರು. ಈ ಹಿಂದೆ ಜೆಡಿಎಸ್ ಭದ್ರಕೋಟೆಯಾಗಿದ್ದ ಗೌಡಳ್ಳಿ ಪಂಚಾಯಿತಿ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಪಡೆದುಕೊಂಡಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಅದ್ಯತೆ ನೀಡಲಾಗುವುದು. ಸದಸ್ಯರ ಸಹಕಾರದಿಂದ ಕೆಲಸ ನಿರ್ವಹಿಸಲಾಗುವುದು ಎಂದು ಅಧ್ಯಕ್ಷ ನವೀನ್ ಹೇಳಿದರು. ಚುನಾವಣಾಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಜಿ.ನಿರ್ಮಲ ಕಾರ್ಯನಿರ್ವಹಿಸಿದರು. ಸದಸ್ಯರಾದ ಜಿ.ಜಿ.ಮಲ್ಲಿಕಾ, ಜಿ.ಜಿ.ಗಣೇಶ್, ಜಿ.ಎಸ್.ನಾಗರಾಜು, ಬಿಎಚ್.ಮಂಜುನಾಥ್, ಕೆ.ಎಂ.ರೋಹಿಣಿ, ಕೆ.ಕೆ.ಸುಮಾ, ಪಿಡಿಒ ಎಸ್.ಪಿ.ಲಿಖಿತಾ ಇದ್ದರು. ಸ್ಥಳೀಯ ಪ್ರಮುಖರಾದ ಜಿ.ಪಿ.ಸುನಿಲ್, ಎಚ್.ಎಂ.ಜಿತೇಂದ್ರ, ಗಿರೀಶ್ ಮಲ್ಲಪ್ಪ, ವಸಂತ್, ನಾಗರತ್ನ, ವಿನಯ್, ಪೃಥ್ವಿ ಮತ್ತಿತರರು ಇದ್ದರು.

Read More

ಮಡಿಕೇರಿ ಆ.8 : ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ನಿಮ್ಹಾನ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ “142ನೇ ರಾಜ್ಯ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ-2023” ರಲ್ಲಿ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ 43 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಪದಕ ಗೆದ್ದಿದ್ದಾರೆ. ಮಡಿಕೇರಿ ಕೇಂದ್ರದ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. 22 ಚಾಂಪಿಯನ್ ಟ್ರೋಫಿ, 14 ಚಿನ್ನದ ಪದಕ ಮತ್ತು 17 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಡಿಕೇರಿ ಕೇಂದ್ರಕ್ಕೆ ಬೆಸ್ಟ್ ಫ್ರಾಂಚೈಸಿ ಮತ್ತು ಬೆಸ್ಟ್ ಫ್ಯಾಕಲ್ಟಿ ಪ್ರಶಸ್ತಿ ದೊರೆಯಿತು. ತರಬೇತುದಾರರಾದ ಕವಿತಾ ಕರುಂಬಯ್ಯ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಬ್ರೈನೋಬ್ರೈನ್ ಇಂಟರ್ ನ್ಯಾಷನಲ್ ದುಬೈ ಸಂಸ್ಥೆ ಪ್ರಾರಂಭವಾಗಿ ಕೇವಲ 20 ವರ್ಷಗಳಲ್ಲಿ 45 ದೇಶಗಳಲ್ಲಿ 1000ಕ್ಕೂ ಹೆಚ್ಚು ಕೇಂದ್ರಗಳನ್ನು ಹೊಂದಿದ್ದು, ಇದು ಶ್ಲಾಘನೀಯ ಸಾಧನೆಯಾಗಿದೆ…

Read More

ಮಡಿಕೇರಿ ಆ.8 : ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕರಿಸಲು ನಿರಾಕರಿಸಿದ ಬಿಲ್ ಕಲೆಕ್ಟರ್ ಅನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಮಡಿಕೇರಿ ತಾಲ್ಲೂಕು ಘಟಕ, ಸಂಪಾಜೆ ಹೋಬಳಿ ಹಾಗೂ ಗ್ರಾಮ ಸಮಿತಿಗಳ ಆಶ್ರಯದಲ್ಲಿ ಸಂಪಾಜೆಯಲ್ಲಿ ಪ್ರತಿಭಟನೆ ನಡೆಯಿತು. ಸಂಪಾಜೆ ಗೇಟ್ ಬಳಿಯಿಂದ ಮೆರವಣಿಗೆ ಮೂಲಕ ಬಂದ ಪ್ರತಿಭಟನಾಕಾರರು ಗ್ರಾ.ಪಂ ಆವರಣದಲ್ಲಿ ಜಮಾಯಿಸಿ, ಬಿಲ್ ಕಲೆಕ್ಟರ್ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತಾನಾಡಿದ ಸಮಿತಿ ಜಿಲ್ಲಾಧ್ಯಕ್ಷ ಹೆಚ್.ಎಲ್.ದಿವಾಕರ್, ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ತೆರಳಿದಾಗ ಮನೆ ತೆರಿಗೆ, ನೀರಿನ ತೆರಿಗೆ ಪಾವತಿ ಮಾಡದೇ ಅರ್ಜಿ ಸ್ವೀಕರಿಸಲು ನಿರಾಕರಿಸಿದ ಬಿಲ್ ಕಲೆಕ್ಟರ್ ಅನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದರು. ದಲಿತರನ್ನು ಕಡೆಗಣಿಸುವ ಪ್ರಕರಣಗಳು ಕೊಡಗು ಜಿಲ್ಲೆಯ ಪಂಚಾಯತ್ ಗಳಲ್ಲಿ ಕಂಡು ಬರುತ್ತಿದ್ದು, ಇದು ಮುಂದುವರಿದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಮಡಿಕೇರಿ ತಾಲ್ಲೂಕು ಅಧ್ಯಕ್ಷ ದೀಪಕ್ ಪೊನ್ನಪ್ಪ ಮನವಿ…

Read More

ಮಡಿಕೇರಿ ಆ.8 :  ಬೆಂಗಳೂರು ಕೊಡಗು ಗೌಡ ಸಮಾಜ  ಆಶ್ರಯದಲ್ಲಿ ಜರುಗಿದ “ಆಟಿ ಹಬ್ಬ 2023” ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ  ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಸಕ ಮಂತರ್ ಗೌಡ ಅವರ  ಪತ್ನಿ ದಿವ್ಯಾ  ಹಾಜರಿದ್ದರು.  

Read More

ಮಡಿಕೇರಿ ಆ.8 : ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಅವಮಾನಿಸಿದ ಘಟನೆಯನ್ನು ಖಂಡಿಸಿ ಹಾಗೂ ಅತ್ಯಾಚಾರದಿಂದ ಅಮಾನವೀಯವಾಗಿ ಹತ್ಯೆಯಾದ ಉಜಿರೆಯ ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಆಗ್ರಹಿಸಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸುಮಾರು ಮೂರು ತಿಂಗಳಿನಿಂದ ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು, ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾಗಿರುವ ಮಣಿಪುರ ಬೀರೇನ್ ಸಿಂಗ್ ನೇತೃತ್ವದ ಸರ್ಕಾರವನ್ನು ತಕ್ಷಣ ವಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿ ಮಾಡಬೇಕು, ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ಮತ್ತಷ್ಟು ಅಮಾಯಕ ಜೀವಗಳು ಬಲಿಯಾಗುವುದನ್ನು ತಡೆಯಬೇಕು. ದೇಶವ್ಯಾಪಿ ದ್ವೇಷದ ಕಿಚ್ಚು ಹಬ್ಬುವ…

Read More

ಮಡಿಕೇರಿ ಆ.8 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್, 9 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಾಗೂ ಆ.11 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಯನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಆ.8 : ಹೆಪಟೈಟಿಸ್ ಎಚ್‍ಐವಿಗಿಂತಲೂ ಭೀಕರವಾದ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ವತಿಯಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಸಭಾಂಗಣದಲ್ಲಿ ಮಂಗಳವಾರ ನಡೆದ ‘ವಿಶ್ವ ಹೆಪಟೈಟಿಸ್ ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 1960 ರ ದಶಕದಲ್ಲಿ ಹೆಪಟೈಟಿಸ್ ಬಿ ವೈರಸ್‍ನ್ನು ಕಂಡುಹಿಡಿದ ಅಮೆರಿಕಾ ವಿಜ್ಞಾನಿ ಡಾ.ಬರೂಜ್ ಸ್ಯಾಮುಯಲ್ ಬಂಬರ್ಗ್ ಅವರು ಕ್ಯಾನ್ಸರ್‍ನಂತಹ ಹಲವು ರೋಗಗಳಿಗೆ ಔಷಧಿ ಕಂಡು ಹಿಡಿದರು ಎಂದು ಹೇಳಿದರು. ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ ಅವರು ಮಾತನಾಡಿ ಹೆಪಟೈಟಿಸ್‍ಗೆ ಲಸಿಕೆ ಕಂಡು ಹಿಡಿಯದಿದ್ದರೆ ಕ್ಯಾನ್ಸರ್‍ನಂತಹ ಹಲವು ಕಾಯಿಲೆಯಿಂದ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿತ್ತು ಎಂದು ತಿಳಿಸಿದರು. 2030 ರೊಳಗೆ ಹೆಪಟೈಟಿಸ್ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದು ಅವರು…

Read More