ಸೋಮವಾರಪೇಟೆ ಆ.8 : ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ವಿರಕ್ತಮಠದ ಆವರಣದಲ್ಲಿ ಸಂಘದ ಅಧ್ಯಕ್ಷ ಮೋಹನಮೂರ್ತಿ ಶಾಸ್ತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಬೆಳವಣಿಗೆ, ಕಟ್ಟಡನಿರ್ಮಾಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ ಸಾನಿಧ್ಯ ವಹಿಸಿದ್ದ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಜಿಲ್ಲೆಯಲ್ಲಿರುವ ವೀರಶೈವ ಲಿಂಗಾಯತ ಅರ್ಚಕರುಗಳು ಸಂಘಟಿತರಾಗಬೇಕು, ಸಂಘಟನೆಯಲ್ಲಿ ಬಲವಿದೆ ಅದನ್ನು ಅರಿತುಕೊಳ್ಳಬೇಕು ಎಂದರು. ಅರ್ಚಕರುಗಳಿಗೂ ಸಮಾಜದಲ್ಲಿ ಗೌರವವಿದೆ, ಜವಾಬ್ದಾರಿಯಿದೆ ಅದನ್ನು ಅರಿತು ನಡೆಯಬೇಕೆಂದು ತಿಳಿಸಿದರು. ಕಳೆದ ಏಳು ವರ್ಷಗಳಿಂದ ಸಂಘಟನೆ ಉತ್ತಮವಾಗಿ ಕಾರ್ಯನಿರ್ವಹಿಸಿದೆ, ಮುಂದೆ ಇನ್ನಷ್ಟು ಉತ್ತಮವಾಗಿ ಸಮಾಜಕ್ಕೆ ಸೇವೆಸಲ್ಲಿಸಿ ಎಂದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಶಾಂತಮಲ್ಲಯ್ಯ ಶಾಸ್ತ್ರಿ, ಕಾರ್ಯದರ್ಶಿ ಸೋಮಶೇಖರ ಶಾಸ್ತ್ರಿ,ಖಜಾಂಚಿ ವೇದಮೂರ್ತಿ ನಿರ್ದೇಶಕರುಗಳಾದ ಯೋಗೇಶ್ ಶಾಸ್ತ್ರಿ, ನಂದೀಶ್ ಶಾಸ್ತ್ರಿ,ಮಹೇಶ್,ಚಂದ್ರಶೇಖರಯ್ಯ ಹಾಗೂ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಆ.8 : ಭಾರತ ಸೇವಾದಳದ ಸೋಮವಾರಪೇಟೆ ತಾಲ್ಲೂಕು ಸಮಿತಿ ಮತ್ತು ಸೋಮವಾರಪೇಟೆ ತಾಲ್ಲೂಕು ಪಂಚಾಯ್ತಿಯ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗಕ್ಕೆ ರಾಷ್ಟ್ರಧ್ವಜದ ಕುರಿತು ಮಾಹಿತಿ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾ.ಪಂ ಸಹ ನಿರ್ದೇಶಕ ರಾಕೇಶ್, ಶಿಬಿರದ ಲಾಭ ಪಡೆದುಕೊಳ್ಳುವಂತೆ ಗ್ರಾ.ಪಂ ಸಿಬ್ಬಂದಿ ವರ್ಗಕ್ಕೆ ಕರೆ ನೀಡಿದರು. ಭಾರತ ಸೇವಾದಳದ ಜಿಲ್ಲಾ ಸಂಘಟಕ ಜಿ.ಈ.ರೇವಣ್ಣ ಮಾತನಾಡಿ ಸೇವಾದಳ ಮತ್ತು ರಾಷ್ಟ್ರಧ್ವಜದ ಕುರಿತು ವಿವರಿಸಿದರು. ರಾಷ್ಟ್ರಧ್ವಜದ ಆರೋಹಣ, ಅವರೋಹಣ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಲಾಂಛನದ ಬಗ್ಗೆ ಜಿಲ್ಲಾ ಸಂಪನ್ಮೂಲ ಶಿಕ್ಷಕ ಹೆಚ್.ಪಿ.ಕರುಂಬಯ್ಯ ಮಾಹಿತಿ ನೀಡಿದರು. ರಾಷ್ಟ್ರಧ್ವಜದ ಉಗಮ, ಇತಿಹಾಸ ಮತ್ತು ತ್ರಿವರ್ಣ ಧ್ವಜದ ಕುರಿತು ಸೇವಾದಳದ ಸಂಪನ್ಮೂಲ ಶಿಕ್ಷಕ ಎ.ಆರ್.ರಂಗಸ್ವಾಮಿ ತಿಳಿಸಿದರು. ಧ್ವಜಾರೋಹಣ, ರಾಷ್ಟ್ರಗೀತೆ, ವಂದೇ ಮಾತರಂ, ಧ್ವಜಗೀತೆ ಹಾಡುವ ರೀತಿಯನ್ನು ಸೇವಾದಳದ ತಾಲ್ಲೂಕು ಸಮಿತಿಯ ಸದಸ್ಯರಾದ ಮೀರಾ ಸುಮನ್ ಕ್ಯಾಸ್ತಲಿನ ವಿವರಿಸಿದರು. ಸೇವಾದಳದ ತಾಲ್ಲೂಕು ಸಮಿತಿಯ ಅಧ್ಯಕ್ಷ ಎಂ.ಪಿ.ಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಶಿಕ್ಷಕ…
ಕುಶಾಲನಗರ, ಆ.8 : ವಿದ್ಯಾರ್ಥಿಗಳು ಉತ್ತಮ ಬದುಕು ಹಾಗೂ ಭವಿಷ್ಯ ರೂಪಿಸಿಕೊಳ್ಳಲು ನಾವು ಇಂದು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇದಕ್ಕೆ ಪೂರಕವಾಗಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಡಾಮಂಥರ್ ಗೌಡ ಕರೆ ನೀಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ರೂ.15.06 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಹೆಚ್ಚಿನ ಒತ್ತಡ ನೀಡದೇ ಅವರನ್ನು ಪ್ರೀತಿಯಿಂದ ಸ್ನೇಹಿತರಂತೆ ಕಾಣುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಿ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು. ಶಾಲೆಯ ವತಿಯಿಂದ ಸಲ್ಲಿಸಲಾದ ಮನವಿಗೆ ಸ್ಪಂದಿಸಿದ ಶಾಸಕ ಡಾ ಮಂಥರಗೌಡ ಅವರು, ಹಂತ ಹಂತವಾಗಿ ಶಾಲಾ ಮೂಲಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು. ಶಾಲೆಗಳ ಅಗತ್ಯತೆಗೆ ಅನುಗುಣವಾಗಿ ಶಾಲಾ ಕೊಠಡಿ ಮತ್ತು ಇನ್ನಿತರ ಕಟ್ಟಡಗಳನ್ನು ನಿರ್ಮಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಇಂಜಿನಿಯರಿಂಗ್ ವಿಭಾಗದ ಎಂಜಿನಿಯರ್ ಗಳು ಉತ್ತಮ ಯೋಜನೆ ಮತ್ತು ನೀಲನಕ್ಷೆ ರೂಪಿಸಲು…
ಮಡಿಕೇರಿ ಆ.8 : ಕೊಡಗು ಪ್ರೆಸ್ ಕ್ಲಬ್, ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಆ.14 ರಂದು “ಕದನ ಕಲಿಗಳಿಗೆ ಗೌರವ” ಕಾರ್ಯಕ್ರಮ ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ಮಡಿಕೇರಿಯ ಕೊಹಿನೂರು ರಸ್ತೆಯಲ್ಲಿರುವ ರೆಡ್‍ಬ್ರಿಕ್ಸ್ ಇನ್‍ನ ಸತ್ಕಾರ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಏರ್ ಮಾರ್ಷಲ್ ನಂದ ಕಾರ್ಯಪ್ಪ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಉಳ್ಳಿಯಡ ಎಂ.ಪೂವಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರಪತಿಗಳ ಗೌರವ ಚಿಕಿತ್ಸಕರು, ಆಸ್ಪತ್ರೆ ಸೇವಾ ವಿಭಾಗ ಮತ್ತು ಮುಖ್ಯ ಸಮಾಲೋಚಕರು, ಮಾಜಿ ಮಹಾ ನಿರ್ದೇಶಕರಾದ ಲೆ/ಜ/ ಡಾ. ಬಿ.ಎನ್ ಬಿ.ಎಂ.ಪ್ರಸಾದ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಆರ್.ಸವಿತಾ ರೈ, ಶಕ್ತಿ ದಿನ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ, “ಕದನ ಕಲಿಗಳಿಗೆ ಗೌರವ” ಕಾರ್ಯಕ್ರಮದ ಸಂಚಾಲಕರಾದ ಬೊಳ್ಳಜಿರ ಬಿ.ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಏರ್ ಮಾರ್ಷಲ್ ನಂದ ಕಾರ್ಯಪ್ಪ, ಲೆ/ಜ/…
ಮಡಿಕೇರಿ ಆ.8 : ಅಲ್ಲಾರಂಡ ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಸಹಯೋಗದಲ್ಲಿ ಬಹುಭಾಷಾ ಬೈಗುಳ ಸಾಹಿತ್ಯೋತ್ಸವ ನಡೆಯಲಿದ್ದು, ಲೇಖಕರಿಂದ ಬರಹಗಳನ್ನು ಆಹ್ವಾನಿಸಲಾಗಿದೆ. ಯಾವದೇ ಭಾಷೆಯಲ್ಲಿ ಕತೆ, ಕವನ, ಲೇಖನಗಳನ್ನು ಬೈಗುಳದೊಂದಿಗೆ ಬರೆಯಬಹುದಾಗಿದೆ. ನವೆಂಬರ್ ತಿಂಗಳಿನಲ್ಲಿ ರಾಜ್ಯೋತ್ಸವದ ಸಂದರ್ಭ ಕಾರ್ಯಕ್ರಮ ಆಯೋಜನೆ ಮಾಡಲು ನಿರ್ಧರಿಸಿದ್ದು, ವಿಭಿನ್ನ ರೀತಿಯ ಬೈಗುಳಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಉದ್ದೇಶ ಹೊಂದಲಾಗಿದೆ. ಆಸಕ್ತರು ಆ.31ರ ಒಳಗೆ kudekalsanthu@gmail.com ವಿಳಾಸಕ್ಕೆ ಬರಹಗಳನ್ನು ಕಳುಹಿಸಬಹುದಾಗಿದೆ. ವ್ಯಾಟ್ಸಪ್ ಮೂಲಕವೂ(9972538584)ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9448312310, 8762110948 ಸಂಪರ್ಕಿಸಬಹುದಾಗಿದೆ ಎಂದು ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಅಧ್ಯಕ್ಷ ಅಲ್ಲರಂಡ ವಿಠಲ ತಿಳಿಸಿದ್ದಾರೆ.
ಮಡಿಕೇರಿ ಆ.8 : ಜಿಲ್ಲೆಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದ್ದಾರೆ. ನಗರದಲ್ಲಿ ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ನಡೆದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಭವನ ನಿರ್ಮಾಣಕ್ಕೆ ನಿವೇಶನ ದೊರಕಿಸಿಕೊಡುವುದಾಗಿ ಹೇಳಿದರು. ಜಿಲ್ಲೆಯಲ್ಲಿ ಸುಸಜ್ಜಿತ ಒಕ್ಕಲಿಗರ ಭವನ ನಿರ್ಮಾಣದ ಕುರಿತು ಬೇಡಿಕೆ ಇದೆ. ಇದಕ್ಕೆ ಸಕಾಲದಲ್ಲಿ ಸ್ಪಂದಿಸಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಒಕ್ಕಲಿಗ ಸಮುದಾಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು. ಸಂಘದ ಜಿಲ್ಲಾ ನಿರ್ದೇಶಕ ವಿ.ಪಿ.ಶಶಿಧರ್ ಮಾತನಾಡಿ ಒಕ್ಕಲಿಗ ಸಮುದಾಯ ದೊಡ್ಡ ಜನಸಂಖ್ಯೆಯನ್ನು ಹೊಂದಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಒಗ್ಗಟ್ಟನ್ನು ಕಾಯ್ದುಕೊಳ್ಳುವ ಮೂಲಕ ರಾಜಕೀಯವಾಗಿ ಪ್ರಗತಿಯನ್ನು ಸಾಧಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್, ಮಡಿಕೇರಿ ತಾಲ್ಲೂಕಿಗೂ ಒಂದು ಒಕ್ಕಲಿಗರ ಭವನದ ಅಗತ್ಯವಿದ್ದು, ನಿವೇಶನ ದೊರಕಿಸಿಕೊಡುವಂತೆ…
ಮಡಿಕೇರಿ ಆ.8 : ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ 2019 – 20ನೇ ಸಾಲಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಯೋಜನೆಯಡಿ ಬರುವ ಪ್ರೌಢಶಾಲೆಯ ಹೆಚ್ಚುವರಿ ಕೊಠಡಿಗಳನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಂತರ ಶಾಲೆಯ ಅಭಿವೃದ್ಧಿ ಕಾರ್ಯಗಳು, ಮೂಲಭೂತ ಸೌಕರ್ಯಗಳ ಬಗ್ಗೆ ಶಾಲೆಯ ಆಡಳಿತ ಮಂಡಳಿಯವರೊಂದಿಗೆ ಮಾಹಿತಿ ಪಡೆದುಕೊದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಎನ್‍ಎಸ್‍ಎಸ್ ವಿದ್ಯಾರ್ಥಿ ಘಟಕದ ವತಿಯಿಂದ ಗಿಡಗಳನ್ನು ನೆಡಲಾಯಿತು.. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಶಾಲೆಯ ಮುಖ್ಯೋಪಾಧ್ಯಾಯರಾದ ಟಿ.ಜಿ ಪ್ರೇಮಕುಮಾರ್, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಪುಟ್ಟಸ್ವಾಮಿ, ಜಿ.ಪಂ ಅಭ್ಯಂತರ ವೀರೇಂದ್ರ, ಕಟ್ಟಡದ ಗುತ್ತಿಗೆದಾರಡಿ.ಸಿ ಪ್ರಕಾಶ್, ಜಿ.ಪಂ ಮಾಜಿ ಸದಸ್ಯ ವಿ.ಪಿ ಶಶಿಧರ್, ಕೆ.ಪಿ.ಚಂದ್ರಕಲಾ, ಸ್ಥಳೀಯ ಪ್ರಮುಖರಾದ ಕೆ.ಕೆ ಮಂಜುನಾಥ್, ನಟೇಶ್ ಗೌಡ, ಪ್ರಮೋದ್ ಮುತ್ತಪ್ಪ, ಶೇಕ್ ಕಲೀಮುಲ್ಲ ಹಾಗೂ ಗ್ರಾಮಸ್ಥರು ಪ್ರಮುಖರು ಹಾಜರಿದ್ದರು.
ಮಡಿಕೇರಿ ಆ.8 : ಹಾರಂಗಿ ಜಲಾಶಯದ ಬಳಿ ಇರುವ ತೋಟಗಾರಿಕೆ ಕ್ಷೇತ್ರಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ರೈತರಿಗೆ ತೆಂಗಿನ ಗಿಡಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತೋಟಗಾರಿಕಾ ಪಿತಾಮಹ ಡಾ. ಎಂ.ಹೆಚ್. ಮರೀಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರೈತರಿಗೆ ತೆಂಗಿನ ಗಿಡಗಳನ್ನು ವಿತರಿಸಿದರು. ಈ ಸಂದರ್ಭ ಶಾಸಕರು ಹಾರಂಗಿ ತೋಟಗಾರಿಕೆ ಕ್ಷೇತ್ರದಲ್ಲಿರುವ ಮೀನುಗಾರಿಕೆ ಘಟಕ, ಎರೆಹುಳ ಉತ್ಪಾದನ ಘಟಕ ಹಾಗೂ ವನ್ಯ ಸಸಿ ಬೆಳೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವರದರಾಜ್, ಅಧಿಕಾರಿಗಳಾದ ಶೋಭ, ಜಿ.ಪಂ ಮಾಜಿ ಸದಸ್ಯರುಗಳಾದ ವಿ.ಪಿ.ಶಶಿಧರ್, ಕೆ.ಪಿ.ಚಂದ್ರಕಲ, ಕೆಪಿಸಿಸಿ ಸಂಯೋಜಕ ನಟೇಶ್ ಗೌಡ ಹಾಗೂ ಪ್ರಮುಖರು ಮತ್ತು ರೈತರು ಈ ಸಂಧರ್ಭ ಹಾಜರಿದ್ದರು.
ಮಡಿಕೇರಿ ಆ.8 : ಕೆಎಸ್‌ಆರ್‌ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಗುಟ್ಟೆ ಜಯಮಂಗಳಿ ನದಿ ಸೇತುವೆ ಬಳಿ ನಡೆದಿದೆ. ಗಾರ್ಮೆಂಟ್ಸ್ ಗೆ ನೌಕರರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾಗೆ ನಗರ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಜೋಗೆನಹಳ್ಳಿ ನಿವಾಸಿ ಲಕ್ಷ್ಮೀ (20) ಎಂಬಾಕೆ ತೀವ್ರವಾಗಿ ಗಾಯಗೊಂಡು ಮೃತಪಟ್ಟರು. ಎಂಟಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಮೃತ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಆ.8 : ಕುಂದಚೇರಿ ಗ್ರಾ.ಪಂ ನ ಎರಡನೇ ಅವಧಿಯ ಆಡಳಿತಕ್ಕಾಗಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪಿ.ಬಿ.ದಿನೇಶ್ ಹಾಗೂ ಉಪಾಧ್ಯಕ್ಷರಾಗಿ ಹೆಚ್.ಪಿ. ಬೇಬಿ ಆಯ್ಕೆಯಾಗಿದ್ದಾರೆ.






