ಮಡಿಕೇರಿ ಜೂ.1 : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಜೂನಿಯರ್ ಕಾಲೇಜು ಆವರಣ ಇಲ್ಲಿ 2023-24 ನೇ ಸಾಲಿನ ಬಿಎ, ಬಿಕಾಂ, ಬಿಬಿಎ ಪದವಿ ಪ್ರವೇಶಾತಿ ಆರಂಭಗೊಂಡಿದೆ. ಅನುಭವಿ ಉಪನ್ಯಾಸಕರು ಮತ್ತು ಎಲ್‍ಎಂಎಸ್ ತಂತ್ರಜ್ಞಾನದ ಮೂಲಕ ಬೋಧನೆ, ವಿದ್ಯಾರ್ಥಿ ವೇತನ ಸೌಲಭ್ಯದೊಂದಿಗೆ ಮಹಿಳಾ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ, ಸರ್ಕಾರಿ ವಿದ್ಯಾರ್ಥಿ ನಿಲಯ, ಉದ್ಯೋಗ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನಕ್ಕೆ ಪೂರಕವಾದ ಅತ್ಯುತ್ತಮ ಗ್ರಂಥಾಲಯ, ಎನ್‍ಎಸ್‍ಎಸ್, ರೋವರ್ಸ್ ಮತ್ತು ರೇಂಜರ್ಸ್, ರೆಡ್‍ಕ್ರಾಸ್, ರೆಡ್ ರಿಬ್ಬನ್, ಸಾಂಸ್ಕೃತಿಕ ವೇದಿಕೆ, ಕ್ರೀಡೆ, ಐಕ್ಯುಎಸಿ ಮುಂತಾದ ವೇದಿಕೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ, ಮೊದಲಾದ ಸೌಲಭ್ಯಗಳೊಂದಿಗೆ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆಯಲು ಪ್ರವೇಶ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-223913, ಮೊಬೈಲ್ ಸಂಖ್ಯೆ 9901234941 ನ್ನು ಸಂಪರ್ಕಿಸಬಹುದು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಡಾ.ನಿರ್ಮಲ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.1 : ಪೊನ್ನಂಪೇಟೆ ಮತ್ತು ವಿರಾಜಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಜೂ.3 ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆ ವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 33/11 ಕೆವಿ ಶ್ರೀಮಂಗಲ, 33/11ಕೆವಿ ಸಿದ್ದಾಪುರ ಹಾಗೂ 33/11 ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಜೂ.1 : ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಗೆ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕ್ಯಾನಿಕ್(2 ವರ್ಷ) (ಎನ್‍ಸಿವಿಟಿ) ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (1 ವರ್ಷ) (ಎನ್‍ಸಿವಿಟಿ) ವೃತ್ತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಜೂ.9 ರವರೆಗೆ ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ) ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ.08274-200221 ಮತ್ತು 9036796935, 8971358220 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಮಡಿಕೇರಿ ಜೂ.1 : ಕೊಡಗು ವಿಶ್ವವಿದ್ಯಾನಿಲಯ, ಮಂಗಳೂರು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಆರ್ಟ್ಸ್ ಫೆಸ್ಟ್ ಕಲಾವೈಭವದ ಉದ್ಘಾಟನಾ ಕಾರ್ಯಕ್ರಮವು ಜೂ.3 ರಂದು ಬೆಳಗ್ಗೆ 9.30 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಕೊಡಗು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರು, ಎಫ್‍ಎಂಕೆಎಂಸಿ ಕಾಲೇಜಿನ ಪ್ರಾಂಶುಪಾಲ ಮೆ.ಡಾ.ಬಿ.ರಾಘವ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3.30 ಗಂಟೆಗೆ ವ್ಯಾಲಿಡೆಕ್ಟರಿ(ಮೌಲ್ಯಾಧಾರಿತ) ಕಾರ್ಯಕ್ರಮ ನಡೆಯಲಿದೆ. ಕನ್ನಡ ಚಲನಚಿತ್ರ ನಟರಾದ ಎಂ.ಆದ್ಯ ತಿಮ್ಮಯ್ಯ, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಅಬ್ದುಲ್ ಲತೀಫ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜೂ.1 : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಶಿಕ್ಷಣ ನೀತಿ ಆಧಾರಿತ ಮೂರು ವರ್ಷದ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಬಿಎ ಪದವಿ (ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಐಚ್ಛಿಕ ಕನ್ನಡ), ಬಿಕಾಂ ಪದವಿ, ಬಿಬಿಎ ಪದವಿ. ಆಸಕ್ತ ವಿದ್ಯಾರ್ಥಿಗಳು ಕಾಲೇಜು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ತಿಳಿಸಿದ್ದಾರೆ.
ಮಡಿಕೇರಿ ಜೂ.1 : ಸಣ್ಣ ವಯಸ್ಸಿನಲ್ಲಿಯೇ ಹೆಚ್ಚು ಹೆಚ್ಚು ಜವಾಬ್ದಾರಿಯನ್ನು ನಿಭಾಯಿಸುವುದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಮುನ್ನುಡಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಹೊಸದಾಗಿ ಆಯ್ಕೆಗೊಂಡ ಗ್ರಾಮ ಲೆಕ್ಕಾಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಕೃತಿಕ ವಿಕೋಪ ಸೇರಿದಂತೆ ವಿವಿಧ ರೀತಿಯ ಸವಾಲುಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಎಲ್ಲರೂ ಹೆಚ್ಚು ವಿಚಾರಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದ್ದಾರೆ. ಅಧಿಕಾರಿಗಳು ಯಾವ ರೀತಿಯಾಗಿ ಯಾವ ಸೆಕ್ಷನ್ ಅಡಿಯಲ್ಲಿ ಯಾರು ಜಾಗ ಮಂಜೂರು ಮಾಡಿದ್ದಾರೆ ಹಾಗೂ ಯಾವ ಸೆಕ್ಷನ್ ಅಡಿಯಲ್ಲಿ ಮಂಜೂರು ಮಾಡಬಹುದು ಎಂದು ತಿಳಿಸಲಾಗುವುದು ಹಾಗೂ ಕೆಲವೊಂದು ವಿಚಾರಗಳ ಬಗ್ಗೆ ತಿಳಿಯಲು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಹೇಳಿಕೊಡಲಾಗುವುದು ಎಂದು ತಿಳಿಸಿದರು. ಸೆಕ್ಷನ್‍ಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ತಿಳಿದುಕೊಳ್ಳಲು ಪುಸ್ತಕ ಅಧ್ಯಯನ ಮಾಡಬೇಕು. ದಿನ ನಿತ್ಯ 2 ರಿಂದ 3 ಗಂಟೆ ಇದಕ್ಕೆ ಸಮಯ ಮೀಸಲಿಡಬೇಕು, ಹಾಗೂ ವಾಟ್ಸಪ್ ಗ್ರೂಪ್ ರಚಿಸಿಕೊಂಡು ಸಂದೇಶ ಹಾಗೂ ಯಾವುದಾದರು…
ಮಡಿಕೇರಿ ಜೂ.1 : ಕೊಡಗಿನ ಪ್ರವಾಸಿ ತಾಣಗಳಾದ ಮಾಂದಲ ಪಟ್ಟಿ, ಅಬ್ಬಿಫಾಲ್ಸ್ ಮೊದಲಾದೆಡೆಗಳಿಗೆ ಪ್ರವಾಸಿಗರನ್ನು ಕರೆದೊಯ್ಯಲು ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳನ್ನು ಬಾಡಿಗೆಗೆ ಬಳಸಲು ಅವಕಾಶವಿಲ್ಲವೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ ಎಸ್.ಎನ್. ತಿಳಿಸಿದ್ದಾರೆ. ಜಿಲ್ಲೆ ಪ್ರಮುಖ ಪ್ರವಾಸಿ ಕೇಂದ್ರವಾಗಿ ರೂಪುಗೊಂಡಿದೆ. ಪ್ರತಿನಿತ್ಯ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರು ಜಿಲ್ಲೆಗಾಗಮಿಸುವುದಲ್ಲದೆ, ಮಡಿಕೇರಿ ಸಮೀಪದ ಅಬ್ಬಿಫಾಲ್ಸ್, ಮಾಂದಲಪಟ್ಟಿ ಪ್ರದೇಶಗಳಿಗೆ ತೆರಳುತ್ತಾರೆ. ಇದನ್ನು ಬಳಸಿಕೊಂಡು ಹಲ ಖಾಸಗಿ ಜೀಪ್‍ಗಳನ್ನು ಪ್ರವಾಸಿಗರನ್ನು ಪ್ರವಾಸಿ ತಾಣಗಳಿಗೆ ಕರೆದೊಯ್ಯುವ ಪ್ರಮಾಣ ಹೆಚ್ಚಾಗುತ್ತಾ ಸಾಗಿತ್ತು. ಇತ್ತೀಚೆಗೆ ಮಾಂದಲಪಟ್ಟಿ ಪ್ರವಾಸಿ ತಾಣಕ್ಕೆ ತೆರಳಿದ್ದ ಪ್ರವಾಸಿಗರ ಮೇಲೆ ಬಾಡಿಗೆ ಜೀಪ್ ಓಡಿಸುತ್ತಿದ್ದ ಮಂದಿ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮತ್ತು ಸಾರಿಗೆ ಪ್ರಾಧಿಕಾರಕ್ಕೆ ಬಂದ ದೂರಿನ ಹಿನ್ನೆಲೆಯಲ್ಲಿ ಪ್ರದೇಶಿಕ ಸಾರಿಗೆ ಅಧಿಕಾರಿ ಮಧುರ ಅವರು ತಮ್ಮ ಕಛೇರಿಯಲ್ಲಿ ಮಾಂದಲಪಟ್ಟಿ, ಅಬ್ಬಿಫಾಲ್ಸ್ ಪ್ರವಾಸಿ ತಾಣಗಳು ಬರುವ ಕೆ.ನಿಡುಗಣೆ ಪಮಚಾಯ್ತಿಯ ಅಧ್ಯಕ್ಷರು ಮತ್ತು ಖಾಸಗಿ ಜೀಪ್ ಮಾಲೀಕರುಗಳೊಂದಿಗೆ ಸಭೆ ನಡೆಸಿ, ಯಾವುದೇ ಕಾರಣಕ್ಕೂ…
ಮಡಿಕೇರಿ ಜೂ.1 : ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆ, ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸಿ ಮೇ 31 ರಂದು ನಿವೃತ್ತಿ ಹೊಂದಿದ ಹೆಚ್.ಇ ದೇವರಾಜು, ಟಿ.ಎಂ. ಸಾಬು, ಎಂ.ಯು. ಅಬ್ದುಲ್ ಮಜೀದ್, ಎ.ಎ.ಬಿದ್ದಪ್ಪ ಮತ್ತು ಎಂ.ಎ ಹಮೀದ್ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.
ಚಾಮರಾಜನಗರ ಜೂ.1 : ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದ್ದು, ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಮಡಿಕೇರಿ ಜೂ.1 : ಕಡಂಗ ಸರ್ಕಾರಿ ಶಾಲೆಯಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಈ ಸಂದರ್ಭ 2023-24ನೇ ಸಾಲಿನ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಫಾತಿಮಾ, ಮುಖ್ಯಶಿಕ್ಷಕರಾ ಪಿ. ಎಂ.ಶಾಂತಿಕುಮಾರಿ, ಎಸ್,ಡಿಎಂಸಿ ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳು ಹಾಜರಿದ್ದರು.






