ಮಡಿಕೇರಿ ಜು.7 : ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯಿತಿಗೆ ಖಾಯಂ ಸಿಬ್ಬಂದಿಗಳನ್ನು ನೇಮಿಸದಿದ್ದಲ್ಲಿ ಪಂಚಾಯಿತಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆದಮುಳ್ಳೂರು ಗ್ರಾ.ಪಂ ಸದಸ್ಯ ಎಂ.ಎಂ.ಪರಮೇಶ್ವರ್ ಎಚ್ಚರಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಹಂಗಾಮಿ ಕಾರ್ಯದರ್ಶಿಯಾಗಿ ಪಿ.ಎಸ್.ಸತೀಶ್ ಎಂಬುವವರನ್ನು ನೇಮಿಸಲಾಗಿತ್ತು. ಇವರು ವಾರದಲ್ಲಿ ಮೂರು ದಿನದಂತೆ ಗ್ರಾ.ಪಂ ಕಚೇರಿಗೆ ಆಗಮಿಸಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಏಕಾಏಕಿ ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆ ಕಚೇರಿ ಕೆಲಸಗಳು ವಿಳಂಬವಾಗುವುದರ ಜತೆಗೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಆದಷ್ಟು ಶೀಘ್ರದಲ್ಲಿ ಪಿಡಿಒ, ಕಾರ್ಯದರ್ಶಿ ಹಾಗೂ ಕರವಸೂಲಿಗಾರರನ್ನು ನೇಮಕ ಮಾಡದಿದ್ದಲ್ಲಿ ಕೆದಮುಳ್ಳುರು ಗ್ರಾ.ಪಂ ಅಧ್ಯಕ್ಷರು ಸೇರಿದಂತೆ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಕೆದಮುಳ್ಳೂರು ಗ್ರಾ.ಪಂ ಅಧ್ಯಕ್ಷೆ ಶೀಲಾ ಮೇದಪ್ಪ, ಉಪಾಧ್ಯಕ್ಷೆ ಎಂ.ಬಿ.ಮೀನಾಕ್ಷಿ, ಸದಸ್ಯರಾದ ಎಂ.ಜೆ.ಮುತ್ತಪ್ಪ, ಪಿ.ಜೆ.ಜಯಂತಿ ಉಪಸ್ಥಿತರಿದ್ದರು.
ಲೇಖಕ: admin
ಕುಶಾಲನಗರ ಜು.7 : ಅರಣ್ಯ ಬೆಳೆಸಲು ವನ ಮಹೋತ್ಸವ ಕಾರ್ಯಕ್ರಮ ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಗಿಡ ನೆಡುವ ಕಾರ್ಯಕ್ಕೆ ಸಹಕರಿಸುವ ಮೂಲಕ ಹಸರು ಪರಿಸರ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ಹೇಳಿದರು. ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವಿಭಾಗ ಮತ್ತು ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ಕಾವೇರಿ ಪರಿಸರ ಬಳಗ, ಲಯನ್ಸ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆಯ ಸಹಯೋಗದಲ್ಲಿ ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 250 ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಭೂಮಿಯಲ್ಲಿ ಶೇ. 33…
ಮಡಿಕೇರಿ ಜು.7 : ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ವೆಂಕಟರಾಟ್ ರಾಜಾ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಭೇಟಿಯಾಗಿ ಅಭಿನಂದಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಕನ್ನಡ ಶಲ್ಯವನ್ನು ಮತ್ತು ಕನ್ನಡದ ಪುಸ್ತಕವನ್ನು ಜಿಲ್ಲಾಧಿಕಾರಿಗೆ ನೀಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು 81ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಶ್ರವಣಬೆಳಗೊಳದಲ್ಲಿ ನಡೆದ ಸಂದರ್ಭದಲ್ಲಿ ತಾವು ಸಕ್ರಿಯವಾಗಿ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದನ್ನು ನೆನಪಿಸಿಕೊಂಡಿದ್ದಲ್ಲದೆ ಕನ್ನಡದ ಎಲ್ಲಾ ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಇರುವುದಾಗಿ ತಿಳಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿಎಸ್.ಐ ಮುನಿರ್ ಅಹ್ಮದ್ ಮತ್ತು ಶ್ರೀಮತಿ ರೇವತಿ ರಮೇಶ್ ಉಪಸ್ಥಿತರಿದ್ದರು.
ಮಡಿಕೇರಿ ಜು.7 : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯಮಟ್ಟದ ಸಮನ್ವಯ ಸಮಿತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಿಶೇಷ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಕುಶಾಲನಗರದ ಶಕ್ತಿಧಾಮ ಮದ್ಯ ವ್ಯಸನಿಗಳ ಸಮಗ್ರ ಪುನಶ್ಚೇತನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಬಗ್ಗೆ ಇಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಾರ್ಯಾಗಾರ ನಡೆಯಿತು. ನಗರದ ಜಿಲ್ಲಾ ಪೊಲೀಸ್ ಕಚೇರಿಯ ಕಿರು ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಮನೋವೈದ್ಯರಾದ ಡಾ.ಡೆವಿನ್ ಲಿನೇಕರ್ ಕಾರ್ಕಡ, ಶೈಲಶ್ರೀ ಹಾಗೂ ಕುಶಾಲನಗರದ ಶಕ್ತಿಧಾಮ ಪುನರ್ ವಸತಿ ಕೇಂದ್ರದ ಯೋಜನಾ ಸಂಯೋಜಕ ಕೆ.ಒ.ಪ್ರಭು ಮಾದಕ ವಸ್ತುಗಳ ವ್ಯಸನ ಹಾಗೂ ಅವುಗಳಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳು ಮತ್ತು ಮದ್ಯ ವ್ಯಸನಿಗಳ ಪುನರ್ ವಸತಿಯ ಬಗ್ಗೆ ಮಾತನಾಡಿದರು. ಈ ಸಂದರ್ಭ ಅಪರ ಜಿಲ್ಲಾ ವರಿಷ್ಠಾಧಿಕಾರಿ ಕೆ.ಎಸ್.ಸುಂದರ ರಾಜ್, ಜಿಲ್ಲಾ ವಿಕಲ ಚೇತನ ಕಲ್ಯಾಣ ಇಲಾಖೆಯ ಅಧಿಕಾರಿ ವಿಮಲ, ಹಾಗೂ ಜಿಲ್ಲೆಯ ಪೊಲೀಸ್ ಅಧಿಕಾರಿ…
ಮಡಿಕೇರಿ ಜು.7 : ಕರ್ನಾಟಕ ರಾಜ್ಯ ಬಜೆಟ್ ಘೋಷಣೆಯಾಗಿದೆ. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಲು ಕಟ್ಟಡ ದುರಸ್ತಿ ಸೇರಿದಂತೆ ಇತರ ಸೌಲಭ್ಯಗಳ ಅಭಿವೃದ್ಧಿಗಾಗಿ ಅನುದಾನ ಘೋಷಿಸಲಾಗಿದೆ. ತಜ್ಞರ ಸಮಿತಿ ನೇಮಕ ಮಾಡಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹಾಗೂ ಹೊಸ ಶಿಕ್ಷಣ ನೀತಿ 2020ನ್ನು ಕೈಬಿಟ್ಟು ರಾಜ್ಯಕ್ಕೆ ಪ್ರತ್ಯೇಕ ನೀತಿಯೊಂದನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ, ಜೊತೆಗೆ, ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಅನುದಾನವನ್ನು ಹೆಚ್ಚಿಸಲಾಗಿದೆ. ಸರ್ಕಾರದ ಈ ನಿರ್ಧಾರಗಳನ್ನು ಎಐಡಿಎಸ್ಓ ಸ್ವಾಗತಿಸುತ್ತದೆ ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕ ಸುಭಾಷ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಸಾರ್ವಜನಿಕ ಶಿಕ್ಷಣದ ಉಳಿವಿಗಾಗಿ ಎನ್.ಇ.ಪಿ ವಿರೋಧಿಸಿ ರಾಜ್ಯದ ವಿದ್ಯಾರ್ಥಿ ಹಾಗೂ ಜನ ಚಳುವಳಿಗೆ ಸಂದ ಜಯವಾಗಿದೆ. ರಾಜ್ಯದಲ್ಲಿ ರೂಪಿಸಲಾಗುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣ, ಕೋಮುವಾದೀಕರಣಕ್ಕೆ ಎಡೆಕೊಡದೆ ಪ್ರಜತಾಂತ್ರಿಕವಾಗಿಯೂ, ಧರ್ಮನಿರಪೇಕ್ಷವಾಗಿಯೂ ಇರುವುದೆಂಬ ಅಪೇಕ್ಷೆ ಇದೆ. ಇವುಗಳ ಅನುಷ್ಠಾನವನ್ನು ಸರ್ಕಾರವು ಏಕಪಕ್ಷಿಯವಾಗಿ ನಡೆಸದೆ ರಾಜ್ಯದ ಶಿಕ್ಷಣ ತಜ್ಞರು, ಪಾಲಕರು…
ಮಡಿಕೇರಿ ಜು.7 – ಮಡಿಕೇರಿ ನ್ಯಾಯಾಲಯದ ವಕೀಲ ಕೃಷ್ಣಮೂತಿ೯ ಅವರಿಗೆ ಅನಾಮಧೇಯರಿಂದ ಬೆದರಿಕೆ ಪತ್ರ ಬಂದಿರುವ ಪ್ರಕರಣವನ್ನು ಖಂಡಿಸಿರುವ ಮಡಿಕೇರಿ ವಕೀಲರ ಸಂಘವು ಕೂಡಲೇ ದುಷ್ಕಮಿ೯ಗಳನ್ನು ಬಂಧಿಸುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ. ವಕೀಲ ಕೖಷ್ಣಮೂತಿ೯ ಅವರಿಗೆ ಅನಾಮಧೇಯರಿಂದ ಬೆದರಿಕೆ ಪತ್ರವೊಂದು ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣಮೂತಿ೯ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆದರಿಕೆ ಪತ್ರ ಬಂದಿರುವ ಪ್ರಕರಣದ ಬಗ್ಗೆ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಅವರು ಆಡಳಿತ ಮಂಡಳಿ ಸಭೆಯಲ್ಲಿ ಚಚಿ೯ಸಿದ್ದು ಪ್ರಕರಣವನ್ನು ಖಂಡಿಸಿದ್ದಾರೆ. ಅಂತೆಯೇ ಕೂಡಲೇ ಪೊಲೀಸರು ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ಬೆದರಿಕೆ ಪತ್ರ ಬರೆದಿರುವ ದುಷ್ಕಮಿ೯ಗಳನ್ನು ಬಂಧಿಸಬೇಕು ಎಂದೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಈ ಹಿಂದೆಯೂ ಕೃಷ್ಣಮೂತಿ೯ ಅವರ ಕಾರ್ ಮೇಲೆ ಚೆಟ್ಟಳ್ಳಿ ಬಳಿ ಗುಂಡಿನ ಧಾಳಿ ನಡೆದಿತ್ತು. ಆ ಪ್ರಕರಣದ ಆರೋಪಿಗಳನ್ನೂ ಕೂಡ ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಹೀಗಾಗಿ ನ್ಯಾಯವಾದಿ ಕೃಷ್ಣಮೂತಿ೯ ಅವರ ಮೇಲೆ ಪದೇ ಪದೇ…
ನಾಪೋಕ್ಲು ಜು.7 : ಬೆಟ್ಟಗೇರಿ ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದ ಶ್ರೀ ಮಹಾಗಣಪತಿ ಹೋಮ, ನೂತನ ತೆರೆದ ಬಾವಿಯ ಗಂಗಾ ಪೂಜೆ, ತುಳಸಿ ಪೂಜೆ, ಶ್ರೀ ಭಗವತಿ ದುರ್ಗಾದೇವಿಗೆ ಕಳಶಾಭಿಷೇಕ ಸೇರಿದಂತೆ ವಿವಿಧ ಪ್ರತಿಷ್ಠಾಪನೆ ಪೂಜಾ ಕೈಂಕರ್ಯಗಳು ಜರುಗಿದವು. ಪುರಾತನ ಇತಿಹಾಸವಿರುವ ಶ್ರೀ ಭಗವತಿ ದೇವಸ್ಥಾನಕ್ಕೆ ರಸ್ತೆ ಸಂಪರ್ಕ ಕುಡಿಯುವ ನೀರಿನ ವ್ಯವಸ್ಥೆ ವಿದ್ಯುತ್ ವ್ಯವಸ್ಥೆ, ದೇವಸ್ಥಾನದ ಜೀರ್ಣೋದ್ಧಾರ ದೇವರ ಪುನರ್ ಪ್ರತಿಷ್ಠಾಪನೆ, ದೇವಾಲಯದ ಒಳಾಂಗಣದಲ್ಲಿ ದೇವರ ಅಭಿಷೇಕಕ್ಕೆ ನೂತನ ತೆರೆದ ಬಾವಿ ನಿರ್ಮಿಸಲಾಗಿದೆ. ಶ್ರೀ ಪೌಡಂಡ ಡಾಲಿ ಭೀಮಯ್ಯ ಅವರ ಅಧ್ಯಕ್ಷತೆಯ ದೇವಸ್ಥಾನದ ಆಡಳಿತ ಮಂಡಳಿಯ ಶ್ರಮ ಹಾಗೂ ದಾನಿಗಳ ಸಹಾಯದಿಂದ ದುರ್ಗಮ ಹಾದಿಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ದೇವಸ್ಥಾನವನ್ನು ವೈಭವೀಕರಿಸಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸುವಲ್ಲಿ ಆಡಳಿತ ಮಂಡಳಿ ಯಶಸ್ವಿಯಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕ ರಾಜಶೇಖರ್ ನೇತೃತ್ವದಲ್ಲಿ ತಂತ್ರಿಗಳಾದ ರಾಧಾಕೃಷ್ಣ ಭಟ್ ಚೊಕ್ಕಾಡಿ ಜೋಗಿಯಡ್ಕ ಸುಳ್ಯ ಸಕಲ ಪೂಜಾ ವಿಧಿ ವಿಧಾನಗಳು ನಡೆದವು.…
ಮಡಿಕೇರಿ ಜು.7 : ನಿಷೇಧಿತ ಕೇರಳದ ಲಾಟರಿ ಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ನೆಹರು ನಗರದ ನಿವಾಸಿ ಗಪೂರ್ ಬಂಧಿತ ವ್ಯಕ್ತಿ. ನಾಪೋಕ್ಲು ಸಮೀಪದ ಹಳೆತಾಲೂಕುವಿನಲ್ಲಿರುವ ಗ್ಯಾರೇಜ್ ಒಂದರ ಮುಂಭಾಗದಲ್ಲಿ ಅಕ್ರಮವಾಗಿ ನಿಷೇಧಿತ ಕೇರಳರಾಜ್ಯದ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಶ್ರೇಣಿಯ 1,520 ರೂ.ಮೌಲ್ಯದ 38 ಕೇರಳರಾಜ್ಯದ ಲಾಟರಿ ಮತ್ತು ಮಾರಾಟ ಮಾಡಿದ 370 ರೂಗಳೊಂದಿಗೆ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಉಪಅಧೀಕ್ಷಕ ಸುಂದರ್ ರಾಜ್ ನಿರ್ದೇಶನದಂತೆ, ಉಪ ವಿಭಾಗದ ಡಿವೈಎಸ್ಪಿ ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು ಜು.7 : ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಭಾಗಮಂಡಲ ಸೇರಿದಂತೆ ಕಾವೇರಿ ನದಿಯ ತಪ್ಪಲಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಪೋಕ್ಲು ಬಳಿಯ ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ನಾಪೋಕ್ಲು ವಿಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಬರೆಕುಸಿತ ಮತ್ತು ಕೆಲವೆಡೆ ತೋಟಗಳಲ್ಲಿ ಮರದ ಕೊಂಬೆಗಳು ಬಿದ್ದು ವಿದ್ಯುತ್ ಪೂರೈಕೆಯಲ್ಲಿ ವ್ಯತೆಯ ಕೂಡ ಉಂಟಾಗಿದೆ. ಸಮೀಪದ ಬಲಮುರಿ ಗ್ರಾಮದಲ್ಲಿರುವ ಸಣ್ಣ ಸೇತುವೆ ಕಾವೇರಿ ನದಿ ಪ್ರವಾಹದಿಂದ ಮುಳುಗಡೆಯಾಗಿದೆ. ಅದರಂತೆ ಕೊಳಕೇರಿ ಗ್ರಾಮದಲ್ಲಿರುವ ಚಪ್ಪೆಂಡಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳುವ ರಸ್ತೆಯ ಬದಿಯಲ್ಲಿರುವ ಬರೆ ಕುಸಿದಿದ್ದು ಪಕ್ಕದಲ್ಲಿರುವ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದೆ. ನಾಪೋಕ್ಲು ಸುತ್ತಮುತ್ತಲಿನ ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಕೊಳಕೇರಿ ಚೆರಿಯಪರಂಬು, ಕೈಕಾಡು, ಹೊದವಾಡ ಸೇರಿದಂತೆ ವ್ಯಾಪ್ತಿಯ ಎಲ್ಲಾ ಗ್ರಾಮಳಲ್ಲಿರುವ ಹೊಳೆ,ತೊರೆ, ಹಳ್ಳ ಕೊಳ್ಳೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ವರದಿ :ಝಕರಿಯ ನಾಪೋಕ್ಲು
ಬೆಂಗಳೂರು ಜು.7 : ಕೊಯಮತ್ತೂರು ವೃತ್ತದ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸಿ.ವಿಜಯಕುಮಾರ್(45) ಅವರು ಇಂದು ಬೆಳಗ್ಗೆ ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಯಮತ್ತೂರು ನಗರದ ರೆಡ್ ಫೀಲ್ಡ್ ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಕುರಿತು ತನಿಖೆ ಮುಂದುವರೆದಿದೆ. ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಕಾರಣ ಎನ್ನುವ ಸಂಶಯ ವ್ಯಕ್ತವಾಗಿದೆ. ವಿಜಯಕುಮಾರ್ ಅವರು ಇದೇ ಜನವರಿ 6ರಂದು ಕೊಯಮತ್ತೂರು ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿದ್ದರು.






