ಮಡಿಕೇರಿ ಮೇ 30 : ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಯ ವತಿಯಿಂದ ನೂತನವಾಗಿ ಆಯ್ಕೆಯಾದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಅಭಿನಂದಿಸಲಾಯಿತು. ಶಾಲೆಯ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೋಟ್ರಂಗಡ ಹಾಗೂ ಎಂ.ಎಸ್. ಪೂವಯ್ಯ ಹೂವು ನೀಡಿ ಶುಭಕೋರಿದರು. ಈ ಸಂದರ್ಭ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೆಳಗಿ ಹಾಗೂ ಇಸಿ ಓ ಅಯ್ಯಪ್ಪ ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಮೇ 31 : ಪೊಲೀಸ್ ಠಾಣೆಗಳಿಗೆ ತೆರಳಿ ದೂರು ನೀಡುವ ದೂರುದಾರರ ನೆರವಿಗೆ ಪೊಲೀಸ್ ಕಂಟ್ರೋಲ್ ರೂಂ ಸಿದ್ಧವಿದೆ ಎಂದು ಎಸ್.ಪಿ ಕೆ ರಾಜರಾಮನ್ ತಿಳಿಸಿದ್ದಾರೆ.ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಕೊಂಡ 23 ಮಂದಿಗೆ ಮೊಬೈಲ್‍ಗಳನ್ನು ಹಿಂತಿರುಗಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ದೂರು ನೀಡಲು ತೆರಳುವವರ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆ ಮಾಹಿತಿಯನ್ನು ಕಂಟ್ರೋಲ್ ರೂಂ ಪಡೆದುಕೊಂಡು ದೂರುದಾರರನ್ನು ಸಂಪರ್ಕಿಸುತ್ತದೆ. ಬಳಿಕ ಠಾಣೆಗೆ ತೆರಳಿದ ಉದ್ದೇಶ, ದೂರಿನ ಮಾಹಿತಿ ಪಡೆದು ಕೊಳ್ಳಲಾಗುತ್ತದೆ. ಅಲ್ಲದೇ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತಿದೆಯೇ ? ಅಧಿಕಾರಿ, ಸಿಬ್ಬಂದಿ ಗೌರವಯುತವಾಗಿ ನಡೆದುಕೊಂಡಿದ್ದಾರೆಯೇ, ನೀಡಿರುವ ದೂರಿಗೆ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಮಾಹಿತಿಯನ್ನು ದೂರುದಾರರಿಂದ ಪಡೆದುಕೊಳ್ಳಲಾಗುತ್ತದೆ. ಈ ಸಂದರ್ಭ ಯಾವುದಾದರೂ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತ್ತಿಲ್ಲ ಎಂಬ ಬಗ್ಗೆ ದೂರುದಾರರು ತಿಳಿಸಿದರೆ, ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಅವರು,…
ಮಡಿಕೇರಿ ಮೇ 30 : ರಾಜ್ಯದಲ್ಲಿ ಸಧ್ಯದಲ್ಲಿಯೇ ಜಿ.ಪಂ ಮತ್ತು ತಾ.ಪಂ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷ ಕೊಡಗು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನಲ್ಲಿ ಕ್ಷೇತ್ರ ಮಟ್ಟದಲ್ಲಿ ಚುನಾವಣೆಗೆ ತಯಾರಿ ಆರಂಭಿಸಿದ್ದು, ಸ್ಪರ್ಧಿಸಲು ಆಸಕ್ತಿ ಹೊಂದಿರುವ ಕಾರ್ಯಕರ್ತರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ. ಖಾಲಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆದಿದೆ ಎಂದು ಹೇಳಿದ್ದಾರೆ. ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮೂಲಕ ಸ್ಪರ್ಧಿಸಲು ಆಸಕ್ತಿ ಹೊಂದಿರುವವರು ಭರ್ತಿ ಮಾಡಿದ ಅರ್ಜಿಯೊಂದಿಗೆ ಜೂ.15 ರೊಳಗೆ ಪಕ್ಷದ ಪ್ರಮುಖರಾದ ಹೆಚ್.ಬಿ.ಪೃಥ್ವಿ-98800 73440, ಎಂ.ಕೆ.ಅಪ್ಪಯ್ಯ-98806 54179, ಭೋಜಣ್ಣ ಸೋಮಯ್ಯ-7483991359, ಸಿ.ಎಸ್.ರವೀಂದ್ರ – 93422 57506, ಕೆ.ಪಿ.ಬೋಪಣ್ಣ -78992 73938 ಅವರನ್ನು ಸಂಪರ್ಕಿಸಬಹುದು. ಅರ್ಹ ಅಭ್ಯರ್ಥಿಗಳ ಅರ್ಜಿಯನ್ನು ಜಿಲ್ಲೆ ಮತ್ತು ರಾಜ್ಯ ನಾಯಕರುಗಳ ಸಮ್ಮುಖದಲ್ಲಿ ಪರಿಶೀಲಿಸಲಾಗುವುದು ಎಂದು ಭೋಜಣ್ಣ ಸೋಮಯ್ಯ…
ಮಡಿಕೇರಿ ಮೇ 30 : ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಸೇರಿದಂತೆ ವಿವಿಧ ಖಾಸಗಿ ಶಾಲೆಗಳು ಪ್ರಾರಂಭಗೊಂಡಿದ್ದು ವಿದ್ಯಾರ್ಥಿಗಳನ್ನು ಶಿಕ್ಷಕರು ಆತ್ಮೀಯವಾಗಿವಾಗಿ ಬರಮಾಡಿಕೊಂಡರು. ಇಲ್ಲಿನ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆ, ಶಾಂತಿಭವನ, ಕೊಡಗರಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಗಳಲ್ಲಿ ತರಗತಿಗಳು ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಬಹು ಉತ್ಸುಕತೆ ಮತ್ತು ಸಂತೋಷದಿಂದಲೇ ಹೆಜ್ಜೆ ಹಾಕಿದರು. ಶಾಲೆಯ ಮುಂಭಾಗ ಮತ್ತು ಆವರಣವನ್ನು ಬಾಳೆಕಂಬ, ತಳೀರು ತೋರಣ, ಹೂವುಗಳಿಂದ ಅಲಂಕರಿಸಲಾಗಿತ್ತು. ಶಾಲೆಯ ಎಲ್ಲ ಶಿಕ್ಷಕರು ಶಾಲಾ ಮಹಾದ್ವಾರ ಅಕ್ಕಪಕ್ಕದಲ್ಲಿ ನಿಂತು ಚಪ್ಪಾಳೆ ತಟ್ಟೆ, ಹೂವು, ಸಿಹಿ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಮುಖ್ಯ ದ್ವಾರದಿಂದ ತಮ್ಮ ಮಕ್ಕಳನ್ನು ವಾದ್ಯದೊಂದಿಗೆ ಕರೆ ತರಲಾಯಿತು. ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಫಾ.ಅರುಳ್ ಸೆಲ್ವಕುಮಾರ್, ಮುಖ್ಯ ಶಿಕ್ಷಕ ಸೆಲ್ವರಾಜ್, ಶಿಕ್ಷಕರು ಇದ್ದರು. ಸಮೀಪದ ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಪ್ರೀತಿಯಿಂದ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಪಾತಿಮಾ, ಶಿಕ್ಷಕರು, ಆಡಳಿತ ಮಂಡಳಿ ಪದಾಧಿಕಾರಿಗಳು…
ಮಡಿಕೇರಿ ಮೇ : 30 ಚೆನೈನ ಕೇಂದ್ರೀಯ ಪಿಂಚಣಿ ಕಾರ್ಯಾಲಯದ ವತಿಯಿಂದ ನಗರದ ಮೈತ್ರಿ ಪೊಲೀಸ್ ಭವನದಲ್ಲಿ ಸ್ಪರ್ಶ್‍ಗೆ ವರ್ಗಾಯಿಸಲ್ಪಟ್ಟ ಮಿಲಿಟರಿ ಪಿಂಚಣಿ ಪಡೆಯುವ ಮಾಜಿ ಸೈನಿಕರು/ ಕುಟುಂಬ ಪಿಂಚಣಿದಾರರ ಕುಂದುಕೊರತೆ ನಿವಾರಣಾ ಕಾರ್ಯಕ್ರಮವು ಮಂಗಳವಾರ ನಡೆಯಿತು. ಹಾಗೂ ಈ ಕಾರ್ಯಕ್ರಮವು ಮೇ 31 ರಂದು ಕೂಡ ನಡೆಯಲಿದೆ. ಬೆಂಗಳೂರು ಡಿಪಿಡಿಒ ವಿ.ಭುವನೇಶ್ವರಿ ಅವರು ಸ್ಪರ್ಶ್ ಹಾಗೂ ಸ್ಪರ್ಶ್‍ಗೆ ವರ್ಗಾಯಿಸಲ್ಪಟ್ಟ ಮಿಲಿಟರಿ ಪಿಂಚಣಿದಾರರು ಎದುರಿಸುತ್ತಿರುವ ಕುಂದುಕೊರತೆಗಳ ಕುರಿತು ಹಾಗೂ ಅವುಗಳ ನಿವಾರಣೆ ಕುರಿತು ಈ ಕಾರ್ಯಕ್ರಮದಲ್ಲಿ ಕೈಗೊಳ್ಳುವ ಕ್ರಮದ ಕುರಿತು ವಿವರಿಸಿದರು. ಲೇ ಕರ್ನಲ್ ಕಿರಣ್ ಕುಮಾರ್ ಗೆಡೇಲಾ ಡಿಎಸ್‍ಸಿ ಕಣ್ಣೂರು, ಮೇಜರ್ ಬಾಲಸುಬ್ರವ್ಮಣ್ಯಂ, ಜಂಟಿ ನಿರ್ದೇಶರು, ಸೈನಿಕ ಕಲ್ಯಾಣ ಇಲಾಖೆ, ಮಡಿಕೇರಿ, ಮೇಜರ್ ಉಮೇದ್ ಸಿಂಗ್, ಎಎಸ್‍ಸಿ ಅಭಿಲೇಖಾಲಯ, ಬೆಂಗಳೂರು, ಲೆಫ್ಟಿನೆಂಟ್ ಅನುಜ್ ರಾಣಾ, ಡಿಎಸ್‍ಸಿ ಅಭಿಲೇಖಾಲಯ, ಇವರುಗಳು ಸದರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ಪರ್ಶ್ ಹಾಗೂ ಈ ಕಾರ್ಯಕ್ರಮದ ಸದುಪಯೋಗ ಪಡೆಯಲು ಕೋರಿದರು. ಈ ಕಾರ್ಯಕ್ರಮದಲ್ಲಿ ಸುಮಾರು ನೂರೈವತ್ತು ಮಿಲಿಟರಿ…
ಮಡಿಕೇರಿ ಮೇ 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ ಶಿಶಿಕ್ಷು ಅಧಿನಿಯಮ 1961 ರನ್ವಯ ಪೂರ್ಣ ಅವಧಿಯ ತಾಂತ್ರಿಕ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿದ ಮೆಕ್ಯಾನಿಕಲ್ ಡೀಸೆಲ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಮೋಟಾರ್ ಮೆಕ್ಯಾನಿಕ್ ವೆಹಿಕಲ್, ವೆಲ್ಡರ್, ಫಿಟ್ಟರ್ ಈ ಶಿಶಿಕ್ಷು ವೃತ್ತಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜೂ. 8 ರಂದು ನೇರ ಸಂದರ್ಶನ ನಡೆಯಲಿದೆ. ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ: ಮೆಕ್ಯಾನಿಕಲ್ ಡೀಸೆಲ್ (43 ಸ್ಥಾನ), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (10 ಸ್ಥಾನ), ಎಲೆಕ್ಟ್ರೀಷಿಯನ್(20 ಸ್ಥಾನ), ಮೋಟಾರ್ ಮೆಕ್ಯಾನಿಕ್ ವೆಹಿಕಲ್ (19 ಸ್ಥಾನ), ವೆಲ್ಡರ್(05 ಸ್ಥಾನ), ಫಿಟ್ಟರ್(5 ಸ್ಥಾನ), ಪಾಸಾ(10 ಸ್ಥಾನ). ತರಬೇತಿ ಅವಧಿ ಒಂದು ವರ್ಷ ಆಗಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ…
ಮಡಿಕೇರಿ ಮೇ 30 : 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ತಿಳಿಸಿದ್ದಾರೆ. ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್‍ಎಟಿಎಸ್ಐ (SATS ID) ಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂ.15 ಕೊನೆಯ ದಿನ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ ಎಸ್‍ಎಟಿಎಸ್ ಐಡಿ (SATS ID) ಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು…
ಮಡಿಕೇರಿ ಮೇ 30 : ಜಿಲ್ಲೆಯ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಜೊತೆಗೆ ಸೌಜನ್ಯ, ವಿನಯದಿಂದ ನಡೆದುಕೊಳ್ಳಬೇಕು, ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದರೆ ಕಾನೂನು ರೀತಿಯ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಸಿದ್ದಾರೆ. ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆ’ಯಲ್ಲಿ ಮಾತನಾಡಿದರು. ಪೊಲೀಸ್ ಇಲಾಖೆಯಿಂದ ಮುಂದಿನ 10 ದಿನದೊಳಗೆ ಜಿಲ್ಲೆಯ ಪ್ರತಿಯೊಂದು ಪ್ರವಾಸಿ ತಾಣದಲ್ಲಿ ‘ಪ್ರವಾಸಿ ಫಲಕ’ ಅಳವಡಿಸಲಾಗುವುದು. ಹಾಗೆಯೇ ಮುಖ್ಯ ಹೆದ್ದಾರಿಗಳಲ್ಲಿಯೂ ಸಹ ಸೂಚನಾ ಫಲಕ ಅಳವಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು. ಕೊಡಗು ಜಿಲ್ಲೆಗೆ ವಿವಿಧ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಅಂತವರನ್ನು ಯಾವ ರೀತಿ ಕಾಣಬೇಕು ಎಂಬುದು ತಿಳಿದಿರಬೇಕು. ಅದನ್ನು ಬಿಟ್ಟು ಪ್ರವಾಸಿಗರ ಜೊತೆ ಕೆಟ್ಟದಾಗಿ ವರ್ತಿಸಿದರೆ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಿದೆ ಎಂದು ಖಡಕ್ ಆಗಿ ನುಡಿದರು. ‘ಪ್ರವಾಸಿ ತಾಣಗಳಲ್ಲಿ ಯಾವುದೇ ರೀತಿಯ ತೊಂದರೆ ಉಂಟಾದಲ್ಲಿ ಪೊಲೀಸ್…
ಮಡಿಕೇರಿ ಮೇ 30 : ಮೈಸೂರು-ಕುಶಾಲನಗರ ನಾಲ್ಕು ಪಥದ ಹೆದ್ದಾರಿಯ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮೈಸೂರು-ಕುಶಾಲನಗರ ನಾಲ್ಕು ಪಥದ ಹೆದ್ದಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದು, 4,130 ಕೋಟಿ ರೂ. ವೆಚ್ಚದಲ್ಲಿ 93 ಕಿ.ಮೀ. ಉದ್ದದ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು. ಕುಶಾಲನಗರ-ಸಂಪಾಜೆ ಮಾರ್ಗದಲ್ಲಿ ಅಪಘಾತ ಸ್ಥಳಗಳನ್ನು ಗುರುತಿಸಿ ವರದಿ ನೀಡಬೇಕು. ಇಂತಹ ಸ್ಥಳಗಳಲ್ಲಿ ಅಪಘಾತ ತಪ್ಪಿಸಲು ಅಗತ್ಯ ಕ್ರಮವಹಿಸುವಂತೆ ಹೆದ್ದಾರಿ ಇಲಾಖೆಯ ಎಂಜಿನಿಯರ್‍ಗಳಿಗೆ ಸಂಸದರು ಸೂಚಿಸಿದರು. ಮದೆನಾಡು ಬಳಿಯ ಕರ್ತೋಜಿ ಗುಡ್ಡ ಮೇಲ್ಭಾಗದಲ್ಲಿ ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ಮಣ್ಣು ರಸ್ತೆಗೆ ಬರುವ ಸಾಧ್ಯತೆ ಇದೆ. ಆದ್ದರಿಂದ ತಡೆಗೋಡೆ ನಿರ್ಮಿಸಬೇಕಿದೆ. ಈ ಸಂಬಂಧ ಎಂಜಿನಿಯರ್‍ಗಳು ಸೂಕ್ತ ಕ್ರಮವಹಿಸಬೇಕು. ಹೆದ್ದಾರಿಯಲ್ಲಿ ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ…
ಮಡಿಕೇರಿ ಮೇ 30 : ನೂತನ ಸರ್ಕಾರ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನೂತನ ಕೊಡವ ಅಭಿವೃದ್ದಿ ನಿಗಮದ ಅಧ್ಯಕ್ಷ/ ಆಡಳಿತ ಮಂಡಳಿಯ ಆಯ್ಕೆಯಲ್ಲಿ ಪ್ರಬುದ್ದತೆಯೊಂದಿಗೆ, ರಾಜಕೀಯಾತೀತ ಅರ್ಹರನ್ನು ಆಯ್ಕೆ ಮಾಡಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘಟನೆಯ ಪ್ರಮುಖ ಚಾಮೆರ ದಿನೇಶ್ ಬೆಳ್ಯಪ್ಪ, ಸರ್ಕಾರ ಬದಲಾಗಿ ನೂತನ ಸರ್ಕಾರ ಬಂದ ಸಂದರ್ಭದಲ್ಲಿ ವಿವಿಧ ನಿಗಮ ಹಾಗೂ ಸಾಹಿತ್ಯ ಅಕಾಡೆಮಿಗಳಿಗೂ ನೂತನ ಅಧ್ಯಕ್ಷರು ಹಾಗೂ ಸಮಿತಿಯನ್ನು ರಚಿಸುವುದು ವಾಡಿಕೆ. ಈ ಭಾರಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೂಡ ಮಂಡಳಿ, ಅಕಾಡೆಮಿಗಳಿಗೆ ನೂತನ ಆಡಳಿತ ಮಂಡಳಿ ರಚನೆಯನ್ನೂ ಮಾಡಬೇಕಿದೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗಲೂ ತನ್ನ ಕಾರ್ಯಕರ್ತರಿಗೆ ಅದರಲ್ಲೂ ಅಸಮದಾನಿತ ಮುಖಂಡರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ಕೊಡುವ ಮೂಲಕ ಸಮಾಧಾನ ಪಡಿಸುವ ಪದ್ಧತಿ ಇದೆ. ಇದರಿಂದಾಗಿ ಎಷ್ಟೋ ಬಾರಿ ಸಾಹಿತ್ಯ ಅಕಾಡೆಮಿ ಮತ್ತು ಜನಾಂಗೀಯ ಅಭಿವೃದ್ಧಿ ನಿಗಮಗಳಲ್ಲಿ ಕೇವಲ ಅಧಿಕಾರದ ಆಸೆಯಿಂದ, ಅರ್ಹತೆಯೇ ಇಲ್ಲದವರು ಆಸೀನರಾಗಿ…






