ಮಡಿಕೇರಿ ಆ.5 : ಕೊಡಗು ಜಿಲ್ಲೆಯಲ್ಲಿ ಆ.7 ರಿಂದ ಮೂರು ತಿಂಗಳವರೆಗೆ ‘ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಗಿದು,್ದ ಈ ಕಾರ್ಯಕ್ರಮದ ಉದ್ಘಾಟನೆಯು ಆಗಸ್ಟ್, 7 ರಂದು ಬೆಳಗ್ಗೆ 10.30 ಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಆ.5 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿಡಿಒ, ಎಫ್‍ಡಿಎ, ಎಸ್‍ಡಿಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಿದೆ. ಆಸಕ್ತರು ಆ.14 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.ಸಂ. 0821-2515944 ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆ.ಎಲ್.ಎನ್.ಮೂರ್ತಿ ತಿಳಿಸಿದ್ದಾರೆ.
ಮಡಿಕೇರಿ ಆ.5 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್, 9 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ…
ಕಲಬುರಗಿ: ಬಹು ನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು. ನೂತನ ವಿದ್ಯಾಲಯ (ಎನ್‌ವಿ) ಮೈದಾನದಲ್ಲಿ ಇಂಧನ ಇಲಾಖೆ ಹಾಗೂ ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ‘ಗೃಹ ಜ್ಯೋತಿ’ ಯೋಜನೆ ಉದ್ಘಾಟನೆಗಾಗಿ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್ ದೀಪ ಬೆಳಗಿಸುವ ಮೂಲಕ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಈ ಸಂದರ್ಭ ರಾಜ್ಯಸಭೆಯ ವಿರೋಧಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಹಾಜರಿದ್ದರು.
ಮಡಿಕೇರಿ ಆ. 5 : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯ ವಿದ್ಯಾಥಿ೯ಗಳಿಗೆ ನೋಟ್ ಬುಕ್, ಟಾಪ೯ಲ್, ಮಾಸ್ಕ್, ಕಿಟ್ ಗಳನ್ನು ನೀಡಲಾಯಿತು. ಸಂಸ್ಥೆಯ ಸಭಾಂಗಣದಲ್ಲಿ ಜರುಗಿದ ಕಾಯ೯ಕ್ರಮದಲ್ಲಿ ರೆಡ್ ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ, ಶಿಕ್ಷಣ ಸಂಸ್ಥೆಯ ಅಹ೯ ವಿದ್ಯಾಥಿ೯ಗಳಿಗೆ ಮಳೆಗಾದಲ್ಲಿ ಮನೆಗೆ ಹೊದಿಸಲು ಟಾಪ೯ಲ್, ಆಥಿ೯ಕ ಸಮಸ್ಯೆಯಲ್ಲಿರುವ ವಿದ್ಯಾಥಿ೯ಗಳಿಗೆ ನೋಟ್ ಬುಕ್, ಪಾತ್ರೆ ಪರಿಕರಗಳ ಕಿಟ್ ವಿತರಿಸಿದರು. ಸಂಸ್ಥೆಯ ಎಲ್ಲಾ ವಿದ್ಯಾಥಿ೯ಗಳಿಗೂ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಮಾಸ್ಕ್ ಗಳನ್ನೂ ನೀಡಲಾಯಿತು. ಈ ಸಂದಭ೯ ಮಾತನಾಡಿದ ರವೀಂದ್ರರೈ, ರೆಡ್ ಕ್ರಾಸ್ ಸಂಸ್ಥೆಯು ಜಾಗತಿಕ ಸೇವಾ ಸಂಸ್ಥೆಯಾಗಿ ಮನ್ನಣೆ ಪಡೆದಿದ್ದು, ಸಮರ ಸಂದಭ೯ದಲ್ಲಿ ಯುದ್ದ ನಿರತ ದೇಶಗಳ ಜನತೆಗೆ ಆರೋಗ್ಯ ನೆರವಿಗೆ ಮುಂದಾಗುವುದಲ್ಲದೇ ಉಭಯ ದೇಶಗಳ ನಡುವೆ ಶಾಂತಿ ಸ್ಥಾಪನೆಗೂ ಮುಂದಾಗುತ್ತದೆ. ರೆಡ್ ಕ್ರಾಸ್ ಗೆ ಭಾರತದಲ್ಲಿ 100 ವಷ೯ಗಳಿಗೂ ಮೀರಿದ ಇತಿಹಾಸವಿದೆ ಎಂದು ರೆಡ್ ಕ್ರಾಸ್ ಕಾಯ೯ಚಟುವಟಿಕೆಗಳ…
ಬೆಂಗಳೂರು: ಬೆಂಗಳೂರಿನ ಲಾಲ್ಬಾಗ್ನಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ತೋಟಗಾರಿಕೆ ಇಲಾಖೆ 2.50 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲವರ್ ಶೋ ಆಯೋಜನೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಇದೇ ವೇಳೆ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಸಹ ಸಿಎಂ ಬಿಡುಗಡೆ ಮಾಡಿದರು. ಆಗಸ್ಟ್ 15 ರವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಹೂವಿನ ಪ್ರತಿಕೃತಿ ಪ್ರಮುಖ ಆಕರ್ಷಣೆಯಾಗಿದೆ.
ಮಡಿಕೇರಿ ಆ.5 : ಸಮಾಜದಲ್ಲಿ ಒಗ್ಗಟ್ಟು ಮನೋಭಾವ ಸೃಷ್ಟಿಯಾಗಬೇಕಾದರೆ ಕ್ರೀಡಾಮನೋಭಾವ ಇರಬೇಕು ಎಂದು ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾ ಸಮಿತಿ ಹಾಗೂ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಮಹೋತ್ಸವ ಕ್ರೀಡಾ ಸಮಿತಿ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಒಳಾಂಗಣ ಕ್ರೀಡಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ನಿತ್ಯ ವೃತ್ತಿ ಜಂಜಾಟದಲ್ಲಿರುತ್ತಾರೆ. ಶ್ರದ್ಧಾಪೂರ್ವಕವಾಗಿ ಬದ್ಧತೆಯಲ್ಲಿ ಸಮಾಜಮುಖಿಯಾಗಿ ಕೆಲಸ ನಿರ್ವಹಿಸುತ್ತಾರೆ. ಈ ನಿಟ್ಟಿನಲ್ಲಿ ಅವರ ಮನೋಲ್ಲಾಸಕ್ಕೆ ಪೂರಕ ಕಾರ್ಯಕ್ರಮಗಳು ನಡೆಯಬೇಕು. ಇದರಿಂದ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದೊಂದಿಗೆ ಪತ್ರಿಕಾ ರಂಗ ಪ್ರಜಾಪ್ರಭುತ್ವದ ಬುನಾದಿ ಸುಭದ್ರಗೊಳಿಸುತ್ತಿದೆ. ಆಗುಹೋಗುಗಳನ್ನು ಸಕಾಲದಲ್ಲಿ ತಲುಪಿಸುವ ಕೆಲಸ ಪತ್ರಕರ್ತರಿಂದಾಗುತ್ತಿದೆ. ಸಮಾಜದಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾಗಿದೆ. ಒಳಿತು ಕೆಡಕನ್ನು ತೆರೆದಿಟ್ಟು ತಿದ್ದಿತೀಡುವ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಪತ್ರಕರ್ತರಿಂದ ಸಾಧ್ಯ ಎಂದು ಪ್ರತಿಪಾದಿಸಿದರು. ಇಂದಿನ…
ಬಾಳೆಲೆ ಆ.5 : ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜನ್ನು ವಿವೇಕಾನಂದ ಸೇವಾ ಸಮಿತಿಯ ಪ್ರಮುಖರಾದ ಡಾ ಮಾಪಂಗಡ ಪ್ರತಾಪ್ ಬೆಳ್ಳಿಯಪ್ಪ ಉದ್ಘಾಟಿಸಿದರು. ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 1979/81ರ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿದ ಬಳಗದವರು ವಿವೇಕಾನಂದ ಸೇವಾ ಸಂಸ್ಥೆಯನ್ನು ಸ್ಥಾಪಿಸಿಕೊಂಡು ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ತೋಡಗಿಸಿಕೊಂಡಿದ್ದಾರೆ. ಇವರು ಕಳೆದ ಶೈಕ್ಷಣಿಕ ವರ್ಷದಲ್ಲಿ ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜನ್ನು ಅಭಿವೃದ್ಧಿ ಪಡಿಸಲು ಆಯ್ಕೆ ಮಾಡಿಕೊಂಡರು. ಗಿರಿಜನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ವಿದ್ಯಾಸಂಸ್ಥೆಯನ್ನು ಇಪ್ಪತ್ತು ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ಕೊಠಡಿ, ಶೌಚಾಲಯ ಸೇರಿದಂತೆ ವ್ಯವಸ್ಥಿತವಾಗಿ ತರಗತಿಗಳನ್ನು ನವೀಕರಿಸಲಾಗಿದೆ. ಕಟ್ಟಡ ಉದ್ಘಾಟಿಸಿ ಮಾತನಾಡಿದ ಪ್ರತಾಪ್ ಬೆಳ್ಳಿಯಪ್ಪ ವಿದ್ಯೆಯೆಂಬ ಸಂಪತ್ತನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಶೈಕ್ಷಣಿಕ ಗುರಿಯತ್ತ ಸಾಗಲು ಶ್ರಮಿಸಬೇಕಾಗಿದೆ ಎಂದರು. ನಂತರ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿದರು. ವಿಜಯಲಕ್ಷ್ಮಿ ಸಂಯುಕ್ತ ಪದವಿ…
ಮಡಿಕೇರಿ ಆ.5 : ಪೊನ್ನಂಪೇಟೆ ತಾಲ್ಲೂಕು ಕಚೇರಿಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಭೂಮಿ ಶಾಖೆ, ಅಭಿಲೇಖಾಲಯ ಕೊಠಡಿ ಮತ್ತು ಸಕಾಲ ಅರ್ಜಿ ಕೇಂದ್ರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಜಿಲ್ಲಾಧಿಕಾರಿ ವೆಂಕಟ ರಾಜ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಆ.5 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಈಚೆಗೆ ಮಹಿಳಾ ಸಮಾಜದಲ್ಲಿ ಜರುಗಿದ ಕವಯತ್ರಿ ಜಲಜಾಶೇಖರ್ ಅವರ ‘ನೆಲ ಮುಗಿಲು’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ, ಡಾ.ಮೋಹನ್ ಪಾಳೇಗಾರ್, ಹಾಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ. ಪಿ. ರಮೇಶ್ ಅವರುಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ್, ಮಾಜಿ ಅಧ್ಯಕ್ಷ ಜೆ. ಸಿ. ಶೇಖರ್, ಕವಯತ್ರಿ ಜಲಕಾಳಪ್ಪ ಇದ್ದರು.






