ಲೇಖಕ: admin

ಸುಂಟಿಕೊಪ್ಪ ಆ.4 : ಕೊಡಗು ಜಿಲ್ಲಾ ಶಿಕ್ಷಣ ಪೌಂಡೇಶನ್ ವತಿಯಿಂದ ಗರಗಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಆರೋಗ್ಯ ಅರಿವು’ ಕಾರ್ಯಕ್ರಮ ನಡೆಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರೋಗ್ಯ ಕಾರ್ಯಕರ್ತೆ ಗ್ರೀಷ್ಮ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯು ಸಂಪೂರ್ಣವಾಗಿ ಆರೋಗ್ಯವಂತರಾಗಿ ಇರಬೇಕಾದರೆ, ವೈಯಕ್ತಿಕ ಸ್ವಚ್ಚತೆಯನ್ನು ಕಾಯ್ದುಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ. ನಾವು ನಿತ್ಯ ಜೀವನದಲ್ಲಿ ಸ್ವಚ್ಚತೆಗೆ ಆಧ್ಯತೆ ನೀಡುವುದರಿಂದ ಹೆಚ್ಚು ದಿನಗಳಕಾಲ ಉತ್ತಮ ಆರೋಗ್ಯವಂತರಾಗಿ ಜೀವಿಸಲು ಸಾಧ್ಯವಾಗಲಿದೆ ಎಂದರು. ವೈಯಕ್ತಿಕ ಮುನ್ನಚ್ಚರಿಕ ಕ್ರಮಗಳ ಬಗ್ಗೆ ಕಿವಿಮಾತು ಹೇಳಿದರು. ಸಿಆರ್‍ಪಿ ಬಿಪಿನ್ ಮಾತನಾಡಿ, ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕಾದರೆ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಅತ್ಯವಶ್ಯಕವಾಗಿದೆ. ಆದುದ್ದರಿಂದ ದೈನಂದಿನ ಆಹಾರ ಸೇವನೆಯಲ್ಲಿ ಪೌಷ್ಠಿಕ ಆಹಾರವನ್ನೇ ಸೇವೆನೆ ಮಾಡುವುದ್ದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಬಹುದೆಂದರು. ಸಮಾರಂಭದ ವೇದಿಕೆಯಲ್ಲಿ ಸಿಎಚ್‍ಓ ರಫೀನಾ, ಪ್ರೇರಣಾ, ಕಾರ್ಯಕ್ರಮ ಜಿಲ್ಲಾ ಸಂಯೋಜಕ ಶಿವಕುಮಾರ್, ಮಾದಾಪುರ ಕ್ಲಸ್ಟರ್ ಸಿಆರ್‍ಪಿ ಬಿಪಿನ್, ಆಶಾ ಕಾರ್ಯಕರ್ತೆ ಚಿತ್ರ, ಪ್ರೇಮ ಮತ್ತಿತರರು ಇದ್ದರು. ಸಮಾರಂಭದ ಮೊದಲಿಗೆ ಶಾಲಾ…

Read More

ಮಡಿಕೇರಿ ಆ.4 :  ಜಿಲ್ಲೆಯಲ್ಲಿ ನಿರಂತರವಾಗಿ  ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು,  ತಕ್ಷಣ ಸಮಸ್ಯೆ ಬಗೆಹರಿಸಲು ಕ್ರಮ  ಕೈಗೊಳ್ಳುವಂತೆ  ಆಮ್ ಆದ್ಮಿ ಪಕ್ಷ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಪಕ್ಷದ  ಜಿಲ್ಲಾಧ್ಯಕ್ಷರು ಭೋಜಣ್ಣ ಸೋಮಯ್ಯ ಅವರ ನೇತೃತ್ವದಲ್ಲಿ  ಸಹಾಯಕ ಕಾರ್ಯಪಾಲಕ ಅಭಿಯಂತರು ದಿಲೀಪ್  ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ವಿದ್ಯುತ್ ಅಡಚಣೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಗಮನ ಸೆಳೆದರು. ಮುಂಗಾರು ಆರಂಭಕ್ಕೂ ಮೊದಲೇ ಸೆಸ್ಕ್ ಇಲಾಖೆಯವರು ವಿದ್ಯುತ್ ರಸ್ತೆಬದಿಗಳಲ್ಲಿ ಮತ್ತು ತೋಟಗಳಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳಿಗೆ ಹೊಂದಿಕೊಂಡಿರುವ ಮರಗಳನ್ನು ತೆರವು ಗೊಳಿಸಬೇಕು, ಅದರಂತೆ ಹಳೆಯ ಕಂಬಗಳನ್ನು ಬದಲಿಸಿ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಪೂರ್ವ ಸಿದ್ಧತೆಗಳನ್ನು ನಡೆಸಬೇಕಾಗಿತ್ತು. ಆದರೆ ನಾಪೋಕ್ಲು ವಿಭಾಗದಲ್ಲಿ ಇದರಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದೆರುವುದರಿಂದ ಸಣ್ಣ ಮಳೆಗೆ ವಿದ್ಯುತ್ ಕಡಿತಗೊಂಡು ಜನರು ವಿದ್ಯುತ್ ಸಮಸ್ಯೆಯನ್ನು ಎದುರಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಹುತೇಕ ಎಲ್ಲಾ ಕಡೆ ವಿದ್ಯುತ್ ಸಮಸ್ಯೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಈ ಸಮಸ್ಯೆ ಮುಂಗಾರು ಪ್ರವೇಶಕ್ಕೂ…

Read More

ನಾಪೋಕ್ಲು ಆ.4 : ಸರ್ಕಾರದ ವಿವಿಧ ಇಲಾಖೆಯಲ್ಲಿರುವ ಅಧಿಕಾರಿವರ್ಗದವರು ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿರುವವರು ಜನಸಾಮಾನ್ಯರ ಕಷ್ಟವನ್ನು ಅರಿತು ಅದನ್ನು ನಿವಾರಿಸಲು ಬದ್ಧರಾಗಿರಬೇಕೆಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲು ಹಳೇತಾಲೂಕುವಿನ ಶ್ರೀ ಭಗವತಿ ಸಮುದಾಯ ಭವನದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ಪಿಂಚಣಿ ಆದೇಶ ಪ್ರತಿ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರ ಸಮಸ್ಯೆಯನ್ನು ನಿವಾರಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಹಲವಾರು ವ್ಯಕ್ತಿಗಳನ್ನು ನೇಮಿಸಿದೆ. ಆದರೆ ಅದನ್ನು ಆಡಳಿತ ಕಾರ್ಯಾಂಗದವರು ಕಾರ್ಯಪ್ರವೃತ್ತರಾಗಿ ಜನರಿಗೆ ಸ್ಪಂದಿಸುವ ರೀತಿಯಲ್ಲಿ ಕೆಲಸ ಮಾಡಬೇಕೆಂದರು. ಕ್ಷೇತ್ರದಲ್ಲಿ ವಸತಿ, ರಸ್ತೆ ಕಾಮಗಾರಿ, ಆಸ್ಪತ್ರೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲೆಗಳನ್ನು ಉನ್ನತಿಗೇರಿಸಬೇಕು. ಕಂದಾಯ ಇಲಾಖೆಯಲ್ಲಿ ಒಂದು ಕ್ರಾಂತಿಯನ್ನೇ ತರುವಂತ ಸಮಸ್ಯೆಗಳು ನಮ್ಮ ಕ್ಷೇತ್ರದಲ್ಲಿ ಕಾಡುತ್ತಿದೆ. ಇದನ್ನು ಬಗೆಹರಿಸಲು ನಾನು ಪ್ರಾಮಾಣಿಕವಾಗಿ ಕೆಲಸ ಮಾಡಲು ಬದ್ಧನಾಗಿದ್ದೇನೆ. ಇದಕ್ಕೆ ಇಲಾಖೆಯ ಅಧಿಕಾರಿಗಳು ಪೂರ್ವಕವಾಗಿ ನನ್ನೊಂದಿಗೆ ಕೈಜೋಡಿಸಬೇಕು ಎಂದರು.…

Read More

ಮಡಿಕೇರಿ ಆ.4 : ತೀವ್ರತರವಾದ ಮತ್ತು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್‍ಗಳನ್ನು ತಲುಪಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ನಿರ್ಮೂಲನೆ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬಿಟ್ಟು ಹೋಗಿರುವ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ನಿರ್ಮೂಲನೆ ಮಾಡಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಸಂಬಂಧಿಸಿದಂತೆ ವಿಶೇಷವಾಗಿ ದಡಾರ ಮತ್ತು ರುಬೆಲ್ಲಾ ರೋಗ ನಿರೋಧಕತೆಯ ಅಂತರ ಕಡಿಮೆ ಮಾಡುವುದು, ಇದುವರೆಗೆ ಲಸಿಕೆ ಡೋಸ್ ಪಡೆಯದಿದ್ದಲ್ಲಿ ಲಸಿಕೆಯನ್ನು ತಲುಪಿಸುವುದು, ಲಸಿಕೆ ಪಡೆದಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಹಾಗೆಯೇ ಹೊಸ ಲಸಿಕೆಗಳ ಲಸಿಕಾ ಪ್ರಗತಿಯನ್ನು…

Read More

ಮಡಿಕೇರಿ ಆ.4 : ಬೆಳೆಹಾನಿ ಸಮೀಕ್ಷೆ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು. ಜುಲೈ ಮೂರನೇ ವಾರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಾಫಿ ಸೇರಿದಂತೆ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು, ಈ ಸಂಬಂಧ ನಿಖರ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಹೆಚ್ಚಿನ ಮಳೆಯಾಗಿ ಬೆಳೆ ಹಾನಿಯಾಗಿರುವ ಬಗ್ಗೆ ಸಮೀಕ್ಷೆ ಮಾಡಿ ವರದಿ ನೀಡಬೇಕು. ಬೆಳೆ ಹಾನಿ ಸಮೀಕ್ಷೆ ಸಂಬಂಧಿಸಿದಂತೆ ಸ್ಥಳೀಯರಿಗೆ ಮಾಹಿತಿ ಇರಬೇಕು. ಆ ನಿಟ್ಟಿನಲ್ಲಿ ಬೆಳೆ ಹಾನಿ ಸಮೀಕ್ಷೆಯನ್ನು ಕೈಗೊಂಡು ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಮತ್ತು ಕಾಫಿ ಮಂಡಳಿ ಉಪ ನಿರ್ದೇಶಕರಾದ ಚಂದ್ರಶೇಖರ್ ಅವರು ಮಾತನಾಡಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು. ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಪ್ರಮೋದ್, ಎಸ್.ಎನ್.ನರಗುಂದ, ಪ್ರಕಾಶ್ ಅವರು…

Read More

ಮಡಿಕೇರಿ ಆ.4 : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2023-24ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರ.ವರ್ಗ-1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ 2.50 ಲಕ್ಷ ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1 ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರೆ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 2 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರನ ವಯಸ್ಸು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷದ ಒಳಗಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಲ್ಪಟ್ಟಿರಬೇಕು.…

Read More

ಮಡಿಕೇರಿ ಆ.4 : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ವಿರಾಜಪೇಟೆ ಮತ್ತು ಇತಿಹಾಸ ವೇದಿಕೆ ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಇತಿಹಾಸ ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿಯ ಗೌರವಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಮಾತನಾಡಿ, ಹಿಂದೆ ನಾವು ಹೇಗಿದ್ದೇವು ಎಂಬುದನ್ನು ತಿಳಿಯಬೇಕಾದರೆ ನಾವು ಇತಿಹಾಸವನ್ನು ಒದಲೇಬೇಕು ಹಾಗೂ ಇತಿಹಾಸವನ್ನು ನಾವು ಎಂದಿಗೂ ಮರೆಯಬಾರದು. ಅದರದಲ್ಲಿ ಹಲವು ಸ್ವಾರಸ್ಯಕರವಾದ ವಿಷಯವಿರುತ್ತದೆ ಎಂದು ಹೇಳಿದರು. ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಕಾರ್ಲ ಮಾತನಾಡಿ ಇತಿಹಾಸದ ಮಹತ್ವ ಹೊಂದಿರುವ ಭಾರತದ ಚರಿತ್ರೆಯನ್ನು ಮರೆಯಬಾರದು, ಬ್ರಿಟಿಷರು ಬರೆದಿಟ್ಟ ಇತಿಹಾಸವನ್ನು ಮಾತ್ರ ಓದುವುದರ ಬದಲು ನಮ್ಮ ಭಾರತಾಂಬೆಯ ಚರಿತ್ರೆಯನ್ನು ಎಲ್ಲೆಲ್ಲೂ ಹಬ್ಬಿಸುವ ಕೆಲಸವನ್ನು ಉಪನ್ಯಾಸಕರು ಮಾಡಬೇಕೆಂಬುವುದಾಗಿ ಕಿವಿ ಮಾತನಾಡಿದರು. ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಂಪಾಜೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಲ್ಯೋಖ್ಯಾ ನಾಯ್ಕ್, ಕೊಡಗು ಇತಿಹಾಸ ವೇದಿಕೆ ಅಧ್ಯಕ್ಷ…

Read More

ಅರಂತೋಡು ಆ.4 :  ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳಿಗೆ  ಡಾ. ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ದಾಮೋದರ ಕಣಜಾಲು ಚಾಲನೆ ನೀಡಿದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು,   ಕ್ರಮಬದ್ಧವಾದ ಜೀವನಶೈಲಿ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು. ಕಾಲೇಜಿನ ಸಂಚಾಲಕ, ರಾಷ್ಟ್ರ ಪ್ರಶಸ್ತಿ ಪುರಸ್ಕತ ಶಿಕ್ಷಕ  ಕೆ.ಆರ್.ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರೊಂದಿಗೆ, ಚಲನಾಶೀಲರಾಗಿರಬೇಕು. ಸಮಾಜದಲ್ಲಿ ಧೈರ್ಯದಿಂದ ಬದುಕುವುದನ್ನು  ಎನ್ಎಸ್ಎಸ್ ಕಲಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ  ರಮೇಶ್ ವಹಿಸಿದ್ದರು. ನಿಕಟಪೂರ್ವ ಕಾರ್ಯಕ್ರಮಾಧಿಕಾರಿ  ಗೌರಿಶಂಕರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ  ಪದ್ಮಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಾಧಿಕಾರಿ  ಎಂ.ಲಿಂಗಪ್ಪ  ವಂದಿಸಿದರು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Read More

ನಾಪೋಕ್ಲು ಆ.4 :   ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಕ್ಯಾಬಿನೆಟ್ ದರ್ಜೆ ಸ್ಥಾನವನ್ನು ಅಲಂಕರಿಸಿ ಮೊದಲ ಬಾರಿಗೆ ನಾಪೋಕ್ಲುವಿಗೆ ಆಗಮಿಸಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ  ಎ.ಎಸ್. ಪೊನ್ನಣ್ಣ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು. ಜಿಲ್ಲಾ  ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹ್ಮಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಲು ಹೊದಿಸಿ ಹೂವಿನ ಹಾರ ಹಾಕಿ  ಬರಮಾಡಿಕೊಂಡರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಲಯಾಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ, ನಾಪೋಕ್ಲು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿರಾಜ್, ಗ್ರಾ.ಪಂ ಅಧ್ಯಕ್ಷೆ ಹೆಚ್.ಎಸ್ ಪಾರ್ವತಿ, ಉಪಾಧ್ಯಕ್ಷ ಮಹಮ್ಮದ್, ಗ್ರಾ.ಪಂ ಸದಸ್ಯರು, ಕಾಂಗ್ರೆಸ್ ಮುಖಂಡರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ ಆ.4 :  ಹೂಕಾಡು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಶುಕ್ರವಾರ ನಡೆಯಿತು. ಕಗ್ಗೋಡು ಗ್ರಾಮದ ಆಶಾ ಕಾರ್ಯಕರ್ತೆ ಯಶೋಧ ಕುಮಾರಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಎದೆ ಹಾಲಿನ ಮಹತ್ವದ ಕುರಿತು ಮಾಹಿತಿ ನೀಡಿದರು. ಎದೆ ಹಾಲು ಅಮೃತಕ್ಕೆ ಸಮಾನ. ಪ್ರತಿಯೊಬ್ಬ ತಾಯಿಯು ಮಗು ಹುಟ್ಟಿದ ಅರ್ಧ ಗಂಟೆಯೊಳಗೆ ಮೊದಲಿಗೆ ಬರುವ ಕೊಲೊಸ್ಟ್ರಂ ಗಟ್ಟಿ ಹಾಲನ್ನು ಮಗುವಿಗೆ ತಪ್ಪದೆ ಕುಡಿಸಬೇಕು ಎಂದರು. ಈ ಹಾಲು ಕುಡಿಸುವುದರಿಂದ ಮಗುವಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಹಾಲಿನಲ್ಲಿ ಪ್ರೊಟೀನ್ ಮತ್ತು ವಿಟಮಿನ್ ‘ಎ’ ಹೇರಳವಾಗಿ ಸಿಗುತ್ತದೆ. ಮಗುವಿಗೆ ಆರು ತಿಂಗಳುಗಳ ಕಾಲ ಎದೆಹಾಲನ್ನು ಮಾತ್ರ ಕುಡಿಸಬೇಕು. ಆರು ತಿಂಗಳ ನಂತರ ಎದೆ ಹಾಲಿನ ಜೊತೆಗೆ ಇತರೆ ಆಹಾರವನ್ನು ನೀಡಬೇಕು. ನಮ್ಮ ಮಕ್ಕಳ ಆರೋಗ್ಯ ನಮ್ಮ ಕೈಯಲ್ಲಿ ಇರುವುದರಿಂದ ಯಾವುದೇ ಜಾಹೀರಾತುಗಳಿಗೆ ಮರುಳಾಗದೆ,  ಎದೆಹಾಲನ್ನು ಮಾತ್ರ ಕುಡಿಸಬೇಕು. ಮಗು ಅನಾರೋಗ್ಯದಿಂದ ಬಳಲುತ್ತಿರುವಾಗ ಎದೆಹಾಲು ಕುಡಿಸುವುದನ್ನು ನಿಲ್ಲಿಸಬಾರದು ಎಂದು ಕಿವಿ ಮಾತು ಹೇಳಿದರು.…

Read More