ಮಡಿಕೇರಿ ಆ.4 : 2023-24ನೇ ಸಾಲಿನ 31ನೇ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.12 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9.30 ಗಂಟೆಯಿಂದ ಸ್ಪರ್ಧೆಗಳು ನಡೆಯಲಿವೆ ಎಂದರು. ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (9 ಜನರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (4 ಜನರ ತಂಡ), ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್ (6 ಜನರ ತಂಡ), ಪ್ರೌಢ ಶಾಲಾ ಬಾಲಕಿಯರಿಗೆ ಥ್ರೋಬಾಲ್…
ಲೇಖಕ: admin
ಮಡಿಕೇರಿ ಆ.4 : ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಡಗಿನ ಆರು ಕಡೆಗಳಲ್ಲಿ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದ ಪ್ರಯುಕ್ತ ಪಂಜಿನ ಮೆರವಣಿಗೆ, ವಾಹನ ಜಾಥ ಮತ್ತು ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಕುಕ್ಕೇರ ಅಜಿತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಆ.9 ರಂದು ವಿರಾಜಪೇಟೆಯಲ್ಲಿ ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಮೆರವಣಿಗೆ ತೆಲುಗರ ಬೀದಿ ಮಾರಿಯಮ್ಮ ದೇವಾಲಯದಿಂದ ಆರಂಭಗೊಂಡು ಕ್ಲಾಕ್ ಟವರ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕಾಗಿ ಮಹಿಳಾ ಸಮಾಜದ ಬಳಿ ಸಂಜೆ 7.30 ಕ್ಕೆ ಮುಕ್ತಾಯಗೊಳ್ಳಲಿದೆ. ಸುಮಾರು 2 ಕಿ.ಮೀ. ಅಂತರದ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಗೋಣಿಕೊಪ್ಪಲಿನಲ್ಲಿ ಆ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 10 ಕಿ.ಮೀ. ಅಂತರದ ವಾಹನ ಜಾಥ ನಡೆಯಲಿದೆ. ಅಲ್ಲಿನ ಆರ್‍ಎಂಸಿ ಬಳಿಯಿಂದ ಜಾಥ ಆರಂಭಗೊಂಡು ಖಾಸಗಿ ಬಸ್ ನಿಲ್ದಾಣದ ಮೂಲಕ ಬೈಪಾಸ್ ಮಾರ್ಗವನ್ನು ಹಾದು ಪೊನ್ನಂಪೇಟೆ ಕೊಡವ…
ಮಡಿಕೇರಿ ಆ.4 : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಕ್ನಾಲಜಿ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಕಾಲೇಜಿನ ಇಕೋ ಕ್ಲಬ್ ವತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ಮುಖ್ಯಅತಿಥಿಗಳಾಗಿ ಆಗಮಿಸಿದ ಪೊನ್ನಂಪೇಟೆ ಅರಣ್ಯ ಕಾಲೇಜಿನ ನಿವೃತ್ತ ಡೀನ್ ಸಿ.ಜಿ.ಕುಶಾಲಪ್ಪ ವಿಶ್ವ ಪ್ರಕೃತಿ ಸಂರಕ್ಷಣಾದಿನದ ಕುರಿತು ಮಾತನಾಡಿ ದಿನದ ಮಹತ್ವವನ್ನುತಿಳಿಸಿದರು. ಕೊಡಗಿನ ಜೀವವೈವಿಧ್ಯತೆಯ ಜೊತೆಗೆ ಪ್ರಕೃತಿಯ ಸಂರಕ್ಷಣೆ, ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ , ಜಾಗತಿಕ ತಾಪಮಾನದ ಪರಿಣಾಮ , ಕಾಫಿಮೆಣಸು ಭತ್ತದ ಕೃಷಿ, ಪ್ರವಾಸಿಕೇಂದ್ರಗಳಿಂದ ಪರಿಸರದಮೇಲಾಗುವ ಪರಿಣಾಮ ಮುಂತಾದ ವಿಚಾರಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಇದೇ ಸಂದರ್ಭ ಡಾ.ಸಿ.ಜಿ.ಕುಶಾಲಪ್ಪ ಅವರು, ಉಡುಗೊರೆಯಾಗಿ ನೀಡಿದ ಬಿದಿರಿನ ಎರಡು ವಿಶಿಷ್ಟತಳಿಗಳನ್ನು ಪ್ರಾಂಶುಪಾಲರು ಹಾಗೂ ಇಕೋ ಕ್ಲಬ್ ವಿದ್ಯಾರ್ಥಿಗಳು ಹಾಗೂ ಸಂಚಾಲಕರಾದ ಪ್ರೊ. ಕಾರ್ತಿಕ್ ಅವರ ಸಮ್ಮುಖದಲ್ಲಿ ಕಾಲೇಜು ಆವರಣದಲ್ಲಿ ನೆಡುವುದರ ಮೂಲಕ ಕಾಲೇಜು ಆವರಣದಲ್ಲಿ ಹಸಿರೀಕರಣ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಗಿಡನೆಡಲು ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 272 ವಿಧ್ಯಾರ್ಥಿಗಳು ಭಾಗವಹಿಸಿದ್ದರು.…
ಮಡಿಕೇರಿ ಆ.4 : ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದು ಕುಶಾಲನಗರದ ಹಾರಂಗಿಯಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಇಂದು ಹೊರ ತೆಗೆಯಲಾಗಿದೆ. ಬೆಂಗಳೂರು ವಿಜಯಪುರದ ನಿವಾಸಿ ಸಂದೀಪ್ (45) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಗುರುವಾರ ಹಾರಂಗಿ ಜಲಾಶಯದ ಎದುರಿನ ಸೇತುವೆಯಿಂದ ಆಯತಪ್ಪಿ ನೀರಿಗೆ ಬಿದ್ದಿದ್ದರು. ಸಂಜೆ ಶವ ಪತ್ತೆ ಕಾರ್ಯಾಚರಣೆ ವಿಫಲವಾದ ಹಿನ್ನೆಲೆ ಇಂದು ಅಗ್ನಿಶಾಮಕ ದಳ ಹಾಗೂ ದುಬಾರೆಯ ರ್ಯಾಫ್ಟಿಂಗ್ ತಂಡ ಶೋಧ ಕಾರ್ಯ ನಡೆಸಿತು. ಹಾರಂಗಿ ಜಲಾಶಯದ ಹೊರಹರಿವು ಸ್ಥಗಿತಗೊಳಿಸಿ ಪತ್ತೆ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಸೇತುವೆಯ ಕೆಳಭಾಗದಲ್ಲೇ ಶವ ಸಿಕ್ಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು ಆ.4 : ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಜೆ.ಡಬ್ಲ್ಯೂ ಮ್ಯಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಿದರು. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರು ಉಪಸ್ಥಿತರಿದ್ದರು.
ಮಡಿಕೇರಿ ಆ. 4 : ಪರಿಸರ ನಾಶವಾದರೆ ಭವಿಷ್ಯದಲ್ಲಿ ಘೋರ ಪರಿಣಾಮ ಎದುರಿಸಬೇಕಾದೀತು. ಈ ಹಿನ್ನಲೆಯಲ್ಲಿ ಪರಿಸರವನ್ನು ಸಂರಕ್ಷಿಸುವುದರೊಂದಿಗೆ ಮರಗಳ ನಾಶವನ್ನು ತಡೆಗಟ್ಟುವುದು ಪ್ರತೀಯೋವ೯ ಜವಬ್ದಾರಿಯುತ ನಾಗರಿಕರ ಕತ೯ವ್ಯ ಎಂದು ಪ್ರಭಾರ ವಲಯ ಅರಣ್ಯಾಧಿಕಾರಿ ಮಯೂರ್ ಉದಯ್ ಕರವೇಕರ್ ಹೇಳಿದ್ದಾರೆ. ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ರೋಟರಿ ಸಭಾಂಗಣದಲ್ಲಿ ಆಯೋಜಿತ ಪರಿಸರ ಮಹತ್ವದ ಉಪನ್ಯಾಸ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಯೂರ್ ಕರವೇಕರ್ , ವನ ಮಹೋತ್ಸವದಂಥ ಪರಿಸರ ಜಾಗ್ರತಿ ಆಚರಣೆಗಳು ವಷ೯ಕ್ಕೊಂದೇ ದಿನಕ್ಕೆ ಸೀಮಿತವಾಗದೇ ಯಾವಾಗ ಸಾಧ್ಯವಾಗುತ್ತದೋ ಆಗಾಗ್ಗೆ ಪರಿಸರ ಕಾಳಜಿಯ ನಿಟ್ಟಿನಲ್ಲಿ ಹಸಿರ ಸಸಿ ನೆಡುವಿಕೆಯಂಥ ಕಾಯ೯ಕ್ರಮಗಳು ಜರುಗಬೇಕು. ಪರಿಸರ ನಾಶ ತಡೆಯದೇ ಹೋದಲ್ಲಿ ವಿದ್ಯುತ್, ನೀರಿನಂತೆ ಗಾಳಿಗೂ ಅತ್ಯಧಿಕ ಬೆಲೆ ತೆರಬೇಕಾದೀತು. ನಾವು ಮೊದಲು ಪರಿಸರ ರಕ್ಷಣೆಗೆ ಬದ್ದರಾಗಬೇಕು. ಬೇರೆಯವರಿಗೆ ಉಪದೇಶ ನೀಡುವಮುನ್ನ ಈ ನಿಟ್ಟಿನಲ್ಲಿ ನಾವು ಯಾವ ರೀತಿ ಕಾಳಜಿ ವಹಿಸಿರುವೆ ಎಂಬ ಆತ್ಮಾವಲೋಕನ ಮುಖ್ಯವಾಗಬೇಕು. ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರತೀ ವಷ೯ ಲಕ್ಷಾಂತರ ಹೆಕ್ಟೇರ್ ನಾಶವಾಗುತ್ತಿದೆ.…
ಮಡಿಕೇರಿ ಆ.4 : ಭಾರತೀಯ ಭೂ ಸೇನೆಯಲ್ಲಿ ಕ್ಯಾಪ್ಟನ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿರಾಜಪೇಟೆಯ ಶರಣ್ಯರಾವ್ ಅವರಿಗೆ ಪ್ರಶಸ್ತಿ “ಡಬಲ್”ಗೆ ಪಾತ್ರರಾಗಿದ್ದಾರೆ. 60ನೇ ವರ್ಷಾಚರಣೆಯಲ್ಲಿರುವ ಗುಜರಾತ್‍ನ ವಡೋದರಾದಲ್ಲಿರುವ ಇಎಂಇ ಶಾಲೆಯಲ್ಲಿ ಆಯೋಜಿಸಲಾಗಿದ್ದ “ಯಂಗ್ ಆಫೀಸರ್ಸ್” ತರಬೇತಿಯಲ್ಲಿ ಶರಣ್ಯರಾವ್ ಮೊದಲ ಸ್ಥಾನಿಯೂ ಆಗಿ ಹೊರಹೊಮ್ಮಿದ್ದಾರೆ. ಭೂ ಸೇನೆಯ ತರಬೇತಿ ವಿಭಾಗದ ಮುಖ್ಯಸ್ಥರಾದ ಹೆಸರಿನಲ್ಲಿರುವ ಟ್ರೋಫಿ ಪದಕವನ್ನು ಇತ್ತೀಚಿಗೆ ನಡೆದ ಸಮಾರಂಭವೊಂದರಲ್ಲಿ ಇಎಂಇ ಶಾಲಾ ಕಮಾಂಡೆಂಟ್ ಮೇ.ಜ ನೀರಜ್ ವರ್ಶಾನಿ ವಿಎಸ್‍ಎಂ ರಿಂದ ಪಡೆದುಕೊಂಡಿದ್ದಾರೆ. ಶರಣ್ಯ ಕೂರ್ಗ್ ಗಾಲ್ಫ್ ಲಿಂಕ್ಸ್‍ನ ವ್ಯವಸ್ಥಾಪಕರಾಗಿರುವ ಹರೀಶ್‍ರಾವ್ ಎಸ್ ಹಾಗೂ ಎಸ್‍ಎಂಎಸ್ ಅಕಾಡೆಮಿಯಲ್ಲಿ ಗೈಡ್ ಕ್ಯಾಪ್ಟನ್ ಆಗಿರುವ ಮೈಥಿಲಿರಾವ್ ದಂಪತಿಯ ಪುತ್ರಿ.
ಮಡಿಕೇರಿ ಆ.4 : ಮುಖ್ಯಮಂತ್ರಿ ಯವರ ಕಾನೂನು ಸಲಹೆಗಾರರಾಗಿ ಅಧಿಕಾರ ಸ್ವೀಕರಿಸಿ ಕೊಡಗಿಗೆ ಆಗಮಿಸಿದ ಶಾಸಕ ಎ.ಎಸ್ ಪೊನ್ನಣ್ಣ ಅವರನ್ನು ಕೊಡಗಿನ ಗಡಿ ಆನೆಚೋಕೂರುಗೇಟ್ ಹಾಗೂ ಬಿಟ್ಟಂಗಾಲ , ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ , ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದರ ಜತೆಗೆ ಸರಕಾರದಿಂದ ದೊರಕುವ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರಾ ನವೀನ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಪಕ್ಷದ ಹಿರಿಯ ಮುಖಂಡರಾದ ವಾಸು ಕುಟಪ್ಪ, ಪಿ. ಕೆ. ಪೊನಪ್ಪ, ಮುಂತಾದ ಪಕ್ಷದ ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ,ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಆ.4 : ಕುಶಾಲನಗರ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿದರು. ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಶಾಸಕರನ್ನು ಸ್ವಾಗತಿಸಿ ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭ ಶಾಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ಶಾಲೆಯ ಸ್ಥಾಪಕಾಧ್ಯಕ್ಷರು ಮತ್ತು ಜಿ.ಪಂ ಮಾಜಿ ಸದಸ್ಯ ವಿ.ಪಿ.ಶಶಿಧರ್, ಕುಶಾಲನಗರ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಪುರಸಭೆ ಸದಸ್ಯ ಶೇಕ್ ಖಲೀಮುಲ್ಲ, ಎಂ.ಕೆ ಸುಂದರೇಶ್ ಹಾಗೂ ಶಾಲೆಯ ಆಡಳಿತ ಮಂಡಳಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಆ.3 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವರ್ತನೆ ಖಂಡನೀಯವೆಂದು ಕೆಪಿಸಿಸಿ ಸದಸ್ಯ ಹಾಗೂ ವಕ್ಫ್ ಬೋರ್ಡ್ ನ ಮಾಜಿ ಜಿಲ್ಲಾಧ್ಯಕ್ಷ ಕೆ.ಎ.ಯಾಕುಬ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ದಲಿತ ನಾಯಕರೊಬ್ಬರನ್ನು ಅವಹೇಳನ ಮಾಡಿರುವ ರೀತಿಯನ್ನು ಗಮನಿಸಿದರೆ ಬಿಜೆಪಿ ಯಾವ ಮನೋಸ್ಥಿತಿಯನ್ನು ಅನುಸರಿಸುತ್ತಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಟೀಕಿಸಿದ್ದಾರೆ. ಬಿಜೆಪಿಗೆ ದಲಿತರ ಬಗ್ಗೆ ನೈಜ ಕಾಳಜಿ ಮತ್ತು ಗೌರವವಿದ್ದರೆ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸಬೇಕು ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಆರಗ ಜ್ಞಾನೇಂದ್ರ ಅವರು ಖರ್ಗೆ ಅವರ ಮೈಬಣ್ಣ ಮತ್ತು ಅವರು ಬಂದ ಪ್ರದೇಶದ ಜನರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಇದು ಅತ್ಯಂತ ಬೇಸರದ ವಿಚಾರ ಮತ್ತು ಇಡೀ…






