ಲೇಖಕ: admin

ಮಡಿಕೇರಿ ಆ.3 : ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದಲ್ಲಿ ನಡೆದ 23 ನೇ ಘಟಿಕೋತ್ಸವದಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಇನ್ಸ್‍ಟ್ಯೂಟ್ ಆಫ್ ಟೆಕ್ನಾಲಜಿನಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ವಿಭಾಗದಲ್ಲಿ ಬಯೋಮೆಡಿಕಲ್ ಎಂಜಿನಿಯರಿಂಗ್‍ನಲ್ಲಿ ಅಧ್ಯಯನ ಮಾಡಿದ ಬಿನ್ಸಿ ಎಂ.ಜೇಕಬ್  ಇಡೀ ವಿಶ್ವವಿದ್ಯಾನಿಲಯಕ್ಕೆ ಬಯೋಮೆಡಿಕಲ್ ಎಂಜಿನಿಯರಿಂಗ್‍ನಲ್ಲಿ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕ ಪಡೆದಿದ್ದಾರೆ. ಇವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಚಿನ್ನದ ಪದಕ ಪ್ರಧಾನ ಮಾಡಿದರು. ಬಿನ್ಸಿ ಎಂ.ಜೇಕಬ್ ಅವರಿಗೆ ಬಯೋ ಮೆಡಿಕಲ್ ಎಂಜಿನಿಯರಿಂಗ್‍ನಲ್ಲಿ 9.42 ಸಿಜಿಪಿಎ ರಷ್ಟು ಅಂಕ ಪಡೆದು ಪ್ರಥಮರ‍್ಯಾಂಕ್ ಪಡೆದಿದ್ದಾರೆ. ಇವರು ಮಡಿಕೇರಿ ನಗರ ನಿವಾಸಿಯಾದ ಸಜಿ ಜೇಕಬ್ ಹಾಗೂ ಬಿಂದು ಅವರ ಪುತ್ರಿಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಆ.3 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2023-24 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ ಎಂದು ವಿವರಿಸಿದ್ದಾರೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ, ಕೃಷಿ ವಿಮಾ ಕಂಪನಿಯನ್ನು ಬೆಳೆ…

Read More

ಮಡಿಕೇರಿ ಆ.3 : ಭಾರತ ಆಹಾರ ನಿಗಮದಲ್ಲಿ ಲಭ್ಯತೆಯನುಸಾರ ಆಗಸ್ಟ್-2023 ರ ಮಾಹೆಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಚೀಟಿದಾರರಿಗೆ ‘ಸಾರವರ್ಧಿತ’ (ಪೌಷ್ಟಿಕಾಂಶ) ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪಡಿತರದಾರರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ಸಾರವರ್ಧಿತ ಅಕ್ಕಿಯನ್ನು ಪಡೆದು ಸದುಪಯೋಗಿಸಿಕೊಳ್ಳಬೇಕೆಂದು ಸಾರ್ವಜನಿಕ ಪಡಿತರದಾರರಲ್ಲಿ ಆಹಾರ ಇಲಾಖೆ ಕೋರಿದೆ. ಅಂತ್ಯೋದಯ ಪಡಿತರ ಚೀಟಿಗಳಿಗೆ (ಎಎವೈ) ಪ್ರತಿ ಪಡಿತರ ಚೀಟಿಗೆ ಅಕ್ಕಿ- 35 ಕೆ.ಜಿ ಉಚಿತ, ಪಿಹೆಚ್‍ಹೆಚ್ ಪಡಿತರ ಚೀಟಿಗಳಿಗೆ (ಬಿಪಿಎಲ್) (ಆದ್ಯತಾ) ಪ್ರತಿ ಸದಸ್ಯರಿಗೆ ಅಕ್ಕಿ-5 ಕೆ.ಜಿ. ಉಚಿತ, ಅಂತರ್ ನ್ಯಾಯಬೆಲೆ ಅಂಗಡಿ / ಅಂತರ್ ಜಿಲ್ಲೆ /ಅಂತರ್ ರಾಜ್ಯ ಪಡಿತರ ಚೀಟಿಗಳಿಗೆ ಪೋರ್ಟಬಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಜಿಲ್ಲೆಯ/ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ  ತಿಳಿಸಿದ್ದಾರೆ.

Read More

ಮಡಿಕೇರಿ ಆ.3 : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಜಾತಿ ಭೋವಿ ಜನಾಂಗಕ್ಕೆ ಸೇರಿದ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಭೂಮಿ ಖರೀದಿಸಲು ಹಾಗೂ ಭೂಮಿ ಮಾರಾಟ ಮಾಡಲು ಇಚ್ಚಿಸುವ ಪರಿಶಿಷ್ಟ ಜಾತಿ/ ಪಂಗಡ ಹೊರತುಪಡಿಸಿ, ಇತರೆ ಜನಾಂಗಕ್ಕೆ ಸೇರಿರುವ ಭೂ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಭೋವಿ ಜನಾಂಗಕ್ಕೆ ಸೇರಿದ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಮಾತ್ರ ಕೃಷಿಗೆ ಯೋಗ್ಯವಾಗಿರುವ ಕನಿಷ್ಠ 2 ಎಕರೆ ಖುಷ್ಕಿ ಅಥವಾ ಕನಿಷ್ಠ 1 ಎಕರೆ ತರಿ/ ಭಾಗಾಯ್ತು ಜಮೀನುಗಳನ್ನು ಒದಗಿಸುವುದು ಈ ಯೋಜನೆ ಅನುಷ್ಠಾನದ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಕಚೇರಿಯಿಂದ ಉಚಿತವಾಗಿ ಅರ್ಜಿ ಪಡೆದು ಆಗಸ್ಟ್, 31 ರೊಳಗೆ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಜಿಲ್ಲಾ ಕಚೇರಿಗೆ ಸಲ್ಲಿಸಲು ಕೋರಿದೆ. ಫಲಾಪೇಕ್ಷಿಯು ಸಲ್ಲಿಸಬೇಕಾದ ದಾಖಲಾತಿಗಳು :  ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ರೇಷನ್‍ಕಾರ್ಡ್, ಪೋಟೋ, ಗ್ರಾಮ ಸಭೆಯ…

Read More

ಮಡಿಕೇರಿ ಆ.3 : ಕೊಡಗು ಜಿಲ್ಲಾ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಣಾ ವೇದಿಕೆಗೆ ಸದಸ್ಯರು ಬೇಕಾಗಿರುತ್ತದೆ. ಆದ್ದರಿಂದ ಈ ಸದಸ್ಯತ್ವ ಹೊಂದಲು ಬಯಸುವವರು ವಿದ್ಯುತ್ ಕ್ಷೇತ್ರದ ಬಗ್ಗೆ ಅನುಭವವುಳ್ಳವರು ಅಥವಾ ಸೂಕ್ತ ಜ್ಞಾನ ಹೊಂದಿರುವ ಅಭ್ಯರ್ಥಿಗಳು ತಮ್ಮ ವೈಯುಕ್ತಿಕ ಮಾಹಿತಿಯೊಂದಿಗೆ ಅರ್ಜಿಯನ್ನು ಆಗಸ್ಟ್, 10 ರೊಳಗೆ ಕಾರ್ಯನಿರ್ವಾಹಕ ಎಂಜಿನಿಯರ್(ವಿ) ಅವರ ಕಚೇರಿ, ಕಾರ್ಯ ಮತ್ತು ಪಾಲನೆ ವಿಭಾಗ ಮಡಿಕೇರಿ ಇ-ಮೇಲ್ eeemdk@cescmysore.org, cesceemdk @gmail.com ಈ ಕಚೇರಿಗೆ ವಿವರವನ್ನು ಸಲ್ಲಿಸುವಂತೆ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಆ.3 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಸಿಎನ್‍ಸಿ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆಯನ್ನು ಸೆ.5 ಕ್ಕೆ ಮುಂದೂಡಲಾಗಿದ್ದು, ಮೂವರು ಪ್ರತಿವಾದಿಗಳು ಮುಂದಿನ 4 ವಾರಗಳಲ್ಲಿ ಉತ್ತರ ನೀಡುವಂತೆ ಕೋರ್ಟ್ ನಿರ್ದೇಶನ ನೀಡಿತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಎಂಜೆಎಸ್.ಕಮಲ್ ಅವರ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಡಾ. ಸುಬ್ರಮಣಿಯನ್ ಸ್ವಾಮಿ ಅವರು ಇಂದು ವಿಚಾರಣೆಗೆ ಹಾಜರಾಗಿ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಪ್ರಕರಣವನ್ನು ವಾದಿಸಿದರು. ಅರ್ಜಿದಾರರ ಪರವಾಗಿ ವಕೀಲರಾದ ಎಂ.ಎಸ್.ನಾರಾಯಣ ಕಿರಣ್, ವಿಕ್ರಮ್ ಹೆಗ್ಡೆ ಹಾಗೂ ಪಾರ್ಥ್ ಅವರು ಹಾಜರಾಗಿದ್ದರು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ವಿಎಚ್‍ಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಹೈಕೋರ್ಟ್‍ನಲ್ಲಿ ಉಪಸ್ಥಿತರಿದ್ದರು. ಡಾ.ಸುಬ್ರಮಣಿಯನ್ ಸ್ವಾಮಿ ಅವರು ಹೈಕೋರ್ಟ್‍ಗೆ ಸಲ್ಲಿಸಿದ ರಿಟ್ ಅರ್ಜಿ ಸಂಖ್ಯೆ-7769/2023 ರ ಪಿಐಎಲ್ ದೀರ್ಘಕಾಲ…

Read More

ನಾಪೋಕ್ಲು ಆ.3 :  ವಿದ್ಯಾರ್ಥಿಗಳು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಶಿಸ್ತನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಟಿ.ಬಿ.ಕುಮಾರಸ್ವಾಮಿ ಹೇಳಿದರು. ಮೂರ್ನಾಡು  ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ  ಸಮಾರಂಭವನ್ನು ಉದ್ಘಾಟಿಸಿ  ಮಾತನಾಡಿದರು. ವಿದ್ಯಾಸಂಸ್ಥೆಯ ನಿರ್ದೇಶಕ ಹಾಗೂ ಕ್ಲೀನ್ ಇಂಡಿಯಾ ಬ್ರಿಗೇಡ್ ಪ್ರಾಜೆಕ್ಟ್ ಡೈರೆಕ್ಟರ್ ರಾಜ ಮಾದಪ್ಪ ಮಾತನಾಡಿ, ವಿದ್ಯಾರ್ಥಿಗಳು ಶುಚಿತ್ವವನ್ನು ಮನೆಯಿಂದಲೇ ಪ್ರಾರಂಭಿಸಬೇಕು. ಆಗ ಮಾತ್ರ ನಮ್ಮ ಸುತ್ತಮುತ್ತಲ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ , ಉಪಾಧ್ಯಕ್ಷ ಸುಬ್ರಮಣಿ ,ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ , ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಆ.3 : ಡಾ.ಕಸ್ತೂರಿ ರಂಗನ್ ವರದಿಯ ಸಾಧಕ, ಬಾಧಕಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಆ.11 ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುವ ಸೇನೆ ವತಿಯಿಂದ ಜಿಲ್ಲೆಯಲ್ಲಿ ವಿಚಾರಗೋಷ್ಠಿ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಅಥವಾ ಸಿದ್ದಾಪುರದಲ್ಲಿ ವಿಚಾರಗೋಷ್ಠಿ ಮತ್ತು ಸಂವಾದವನ್ನು ಆಯೋಜಿಸಲಾಗುವುದು. ಗೋಷ್ಠಿಯಲ್ಲಿ ಪರಿಸರ ತಜ್ಞರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಮಲೆನಾಡು ಪ್ರದೇಶದ ಎಲ್ಲಾ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಪರಿಸರವನ್ನು ಕಾಪಾಡುವ ಕಾರಣ ನೀಡಿ ಸೂಕ್ಷ್ಮ ವಲಯ ಎಂದು ಘೋಷಿಸಲು ಕಸ್ತೂರಿ ರಂಗನ್ 2013 ಏಪ್ರಿಲ್ 15 ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಅವೈಜ್ಞಾನಿಕವಾಗಿದ್ದು, ಇದು ರೈತರಿಗೆ ಮಾರಕವಾಗಿದೆ. ಮಲೆನಾಡು ಪ್ರದೇಶದಲ್ಲಿ ವಾಸಿಸುತ್ತಿರುವ ರೈತರು, ಕಾರ್ಮಿಕರು, ಆದಿವಾಸಿ ಬುಡಕಟ್ಟು ಜನರ ಬದುಕು ಮತ್ತು ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ವರದಿಯಾಗಿದೆ. ಇದನ್ನು ಈ ಹಿಂದೆ ಕಾಂಗ್ರೆಸ್ ಮತ್ತು ಇತರ ಸರ್ಕಾರಗಳು ತಿರಸ್ಕರಿಸಿದ್ದು, ಪ್ರಸ್ತುತ…

Read More

ಸುಂಟಿಕೊಪ್ಪ,ಆ.3: ಗುರುವಾರದಂದು ನಿಗಧಿಯಾಗಿದ್ದ ಗ್ರೇಡ್ 1 ಪಂಚಾಯಿತಿಯ 2ನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು ತಾಂತ್ರಿಕ ದೋಷದ ಹಿನ್ನಲೆಯಲ್ಲಿ ಆ.10ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಅಧಿಕಾರಿ ವರದರಾಜ್ ತಿಳಿಸಿದ್ದಾರೆ. ಅಧ್ಯಕ್ಷ ಸ್ಥಾನವು ಬಿಸಿಎಂ (ಎ) ಮತ್ತು ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮೀಸಲಾಗಿದ್ದು, ಸಲ್ಲಿಕೆಯಾಗಿದ್ದ 7 ಅಧ್ಯಕ್ಷ ಆಕಾಂಕ್ಷಿಗಳ ನಾಮಪತ್ರ ಪರಿಶೀಲನೆ ಸಂದರ್ಭ ಸಂಬಂಧಿಸಿದ ಆಭ್ಯರ್ಥಿಗಳು ಆಯಾ ತಾಲೂಕು ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣಪತ್ರ, ನಾಮಪತ್ರದ ಜೊತೆಗೆ ಸಲ್ಲಿಸಬೇಕಾಗಿದ್ದು, ಪ್ರಸ್ತುತ ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳು ತಿರಸ್ಕೃತಗೊಂಡಿದೆ. ಈ ಹಿನ್ನೆಲೆ ಪ್ರಮಾಣ ಪತ್ರ ಒದಗಿಸಲು 7 ದಿನಗಳ ಕಾಲಾವಕಾಶ ನೀಡಿ ಚುನಾವಣೆಯನ್ನು ಆ.10 ರ ಗುರುವಾರಕ್ಕೆ ಮುಂದೂಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವರದರಾಜ್ ಆದೇಶಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ 7 ಜನ ಆಭ್ಯರ್ಥಿಗಳಾಗಿ ಬಿಜೆಪಿ. ಬೆಂಬಲಿತ ಪಕ್ಷದ ಪಿ.ಆರ್.ಸುನಿಲ್, ಬಿ.ಎಂ.ಸುರೇಶ್, ಕಾಂಗ್ರೆಸ್ ಬೆಂಬಲಿತ ರಫೀಕ್ ಖಾನ್, ಆಲಿಕುಟ್ಟಿ, ಪಕ್ಷೇತರರಾಗಿ ಶಬ್ಬೀರ್ ಪ್ರಸಾದ್ ಕುಟ್ಟಪ್ಪ, ಎಸ್‍ಡಿಪಿಐ ಬೆಂಬಲಿತ ಆಭ್ಯರ್ಥಿಯಾಗಿ ನಾಗರತ್ನ ಸುರೇಶ್ ನಾಮಪತ್ರ…

Read More

ಮಡಿಕೇರಿ ಆ.3 : ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘವು 2022-23ನೇ ಸಾಲಿನಲ್ಲಿ ಒಟ್ಟು ರೂ.2764.77 ಲಕ್ಷಗಳ ವಹಿವಾಟು ನಡೆಸುವ ಮೂಲಕ ರೂ.53.42 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಸ್ಯರಿಗೆ ಶೇ.15ರಂತೆ ಡಿವಿಡೆಂಟ್ ನೀಡಲಾಗುವುದು ಎಂದರು. ಸಂಘದಲ್ಲಿ 2022-23ನೇ ಸಾಲಿನ ಒಟ್ಟು ‘ಎ’ ತರಗತಿಯ 1138 ಸದಸ್ಯರಿದ್ದು, ಸದಸ್ಯರಿಂದ ಪಾಲು ಬಂಡವಾಳವಾಗಿ ರೂ.121.64 ಲಕ್ಷಗಳಿರುತ್ತದೆ. ಕ್ಷೇಮ ನಿಧಿ ಸೇರಿ ಇತರೆ ನಿಧಿಗಳು ರೂ.273.03 ಲಕ್ಷ ಹಾಗೂ ನಿರುಖು ಠೇವಣಿ, ಸಂಚಯ ಠೇವಣಿ ಹಾಗೂ ಇತರೆ ಠೇವಣಿ ಸೇರಿ ಒಟ್ಟು ರೂ.1410.33 ಲಕ್ಷಗಳಿರುತ್ತದೆ. ಸಂಘದ ಬಂಡವಾಳವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಪಾಲು ಹಣ, ಕ್ಷೇಮ ನಿಧಿ ಹಾಗೂ ನಿರುಖು ಠೇವಣಿಯಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಯಲ್ಲಿ ಪಾಲು ಮತ್ತು ನಿರಖು ಠೇವಣಿ ರೂಪದಲ್ಲಿ ಒಟ್ಟು ರೂ.485.37 ಲಕ್ಷಗಳನ್ನು ಠೇವಣಿ ಮಾಡಲಾಗಿದೆ ಎಂದು ತಿಳಿಸಿದರು.…

Read More