ಸುಂಟಿಕೊಪ್ಪ,ಆ.3 : ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ರಸ್ತೆಯಲ್ಲಿ ಹಾಡಹಗಲು ಹಾಗೂ ರಾತ್ರಿಯ ವೇಳೆಯಲ್ಲಿ ಬೀದಿ ದೀಪಗಳು ಕಳೆದ 10 ದಿನಗಳಿಂದ ನಿರಂತರವಾಗಿ ಉರಿಯುತ್ತಿದ್ದು, ಸಾರ್ವಜನಿಕರು ಪಂಚಾಯಿತಿ ಹಾಗೂ ಚೆಸ್ಕಾಂ ಇಲಾಖೆಯ ನಿರ್ಲಕ್ಷ್ಯತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯು ಸೆಸ್ಕ್ ಇಲಾಖೆಗೆ ಲಕ್ಷಗಟ್ಟಲೇ ಹಣ ಬಾಕಿ ಉಳಿಸಿಕೊಂಡಿದೆ. ಹಗಲಲ್ಲೂ ಬೀದಿದೀಪ ಉರಿಯುತ್ತಿರುವ ಗ್ರಾ.ಪಂ ಗಮನಕ್ಕೆ ತಂದರೂಯಾವುದೇ ಪ್ರಯೋಜನವಾಗಿಲ್ಲ. ಈ ರಸ್ತೆಯಲ್ಲಿ ತುರ್ತು ವೇಳೆಯಲ್ಲಿ ರಾತ್ರಿ ಹೊತ್ತು ಕತ್ತಲಮಯವಾಗಿರುತ್ತದೆ. ಆದರೆ ಇದೀಗ ಹಗಲು ವೇಳೆಯಲ್ಲೂ ಉರುಯುತ್ತಿರುವುದು ಗ್ರಾ.ಪಂ ಮತ್ತು ಸೆಸ್ಕ್ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದರು. ಸೆಸ್ಕ್ ಕಿರಿಯ ಎಂಜಿನಿಯರ್ ಲವ ಅವರ ಗಮನಕ್ಕೆ ತಂದಾಗ, ಈ ಬಗ್ಗೆ ಯಾವುದೇ ದೂರು ಬಂದಿಲ್ಲ. ಗಮನಹರಿಸುವುದಾಗಿ ಮಾಹಿತಿ ನೀಡಿದರು.
ಲೇಖಕ: admin
ಮಡಿಕೇರಿ, ಆ.3 : ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಕೆ.ಎಂ.ಸತೀಶ್ ಕುಮಾರ್ ಹೇಳಿದರು. ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾ ಮತ್ತು ಚಿಕೂನ್‌ಗುನ್ಯಾ ರೋಗ ಹರಡುವಿಕೆ, ನಿಯಂತ್ರಣ ಕುರಿತು ಮಡಿಕೇರಿ ನಗರದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಮಡಿಕೇರಿ ತಾಲ್ಲೂಕಿನ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಏರ್ಪಡಿಸಿದ್ದ ಅಡ್ವೊಕೆಸಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಕ್ಕಳು ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಬೇಕು ಎಂದರು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೆ ಎಲ್ಲಾ ರೋಗಗಳನ್ನು ತಡೆಗಟ್ಟಲು ಸಾಧ್ಯ…
ಮಡಿಕೇರಿ ಆ.3 : ಶಿರಂಗಾಲ ಗ್ರಾ.ಪಂ ನ ಎರಡನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರಾಗಿ ಲತಾಬಾಯಿ, ಉಪಾಧ್ಯಕ್ಷರಾಗಿ ಎಚ್.ಎಸ್.ಬಸವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಮಂದಿ ಸದಸ್ಯರ ಪೈಕಿ ಮತದಾನದಲ್ಲಿ 8 ಮಂದಿ ಸದಸ್ಯರು ಪಾಲ್ಗೊಂಡಿದ್ದರು. ಸದಸ್ಯರಾದ ಎಸ್.ಬಿ.ಶ್ರೀಕಾಂತ್, ಸರಿತಾ, ಲಕ್ಷ್ಮಮ್ಮ, ಗೀತಾ, ಪ್ರದೀಪ್, ಭಾಗೀರಥಿ ಮತದಾನದಲ್ಲಿ ಭಾಗಿಯಾಗಿದ್ದರು.
ಮಡಿಕೇರಿ ಆ.3 : ನೆಲ್ಲಿಯಹುದಿಕೇರಿ ಗ್ರಾಮ ಪಂಚಾಯತ್ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬೆಂಬಲಿತ ಅಭ್ಯರ್ಥಿ ಎಚ್.ಎನ್. ಧನಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಪ್ರಮೀಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರು ಆ.3 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು. ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಗಡ್ಕರಿ ಅವರು ತಿಳಿಸಿದರು. ಶಿರಾಡಿ ಘಾಟ ಸುರಂಗ ಮಾರ್ಗ ಕುರಿತಾಗಿಯೂ ಮುಖ್ಯಮಂತ್ರಿಗಳು ಸಚಿವರೊಂದಿಗೆ ಮಾತುಕತೆ ನಡೆಸಿದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.
ನವದೆಹಲಿ ಆ.3 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಈ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾಸಿದರು. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾದರು. nodbeku
ಮಡಿಕೇರಿ ಆ.3 : ಮಡಿಕೇರಿ ಕೊಡವ ಸಮಾಜದ ವತಿಯಿಂದ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರನ್ನು ಸನ್ಮಾನಿಸಲಾಯಿತು. ಕೊಡವ ಸಮಾಜದಲ್ಲಿ ಸಮಾಜದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಶಾಸಕರಿಗೆ ಶಾಲುಹೊದಿಸಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿ ಶಾಸಕರು, ಸಮಾಜದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದಭದಲ್ಲಿ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಉಪಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಕಾರ್ಯದರ್ಶಿ ಕನ್ನಂಡ ಸಂಪತ್ತ್ ಕುಮಾರ್, ಜಿಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರುಗಳಾದ ಕನ್ನಂಡ ಕವಿತಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಮೂವೆರ ಕೆ.ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ,ಕಾಳಚಂಡ ಅಪ್ಪಣ್ಣಪುತ್ತರಿರ ಕರುಣ್ ಕಾಳಯ್ಯ, ಮಂಡಿರ ಸದಾಮುದ್ದಪ್ಪ, ಕಾಂಡೆರ ಲಲ್ಲುಕುಟ್ಟಪ್ಪ ಹಾಗು ಸದಸ್ಯರುಗಳಾದ ಚೊಟ್ಟೆಯಂಡ ಸಂಜುಕಾವೇರಪ್ಪ, ಪಾಲೆಯಂಡ ಸುಬ್ಬಯ್ಯ, ಪಾಲೆಯಂಡ ರೂಪಸುಬ್ಬಯ್ಯ ಹಾಜರಿದ್ದರು.
ಮಡಿಕೇರಿ ಆ.3 : ಕೊಡಗಿನಲ್ಲಿ ಕೃಷಿಕರು ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ಹೆಚ್ಚು ಭತ್ತ ಬೆಳೆಯುವ ಪ್ರದೇಶಗಳಿದ್ದು, ಗಾಳಿಬೀಡುವಿನಲ್ಲಿ ರೈತರು ನಾಟಿ ಕಾರ್ಯ ಪೂರ್ಣಗೊಳಿಸಿದ್ದಾರೆ.
ಕಡಂಗ ಆ.3 : ಇತಿಹಾಸ ಪ್ರಸಿದ್ಧ ಕಡಂಗ ಕೋಕ್ಕಂಡ ಬಾಣೆ ಮಖಾಂ ಉರೂಸ್ ಸಮಾರಂಭವು 2024 ಫೆಬ್ರವರಿ 2 ರಿಂದ 6 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮುಹ್ಯದ್ದೀನ್ ಜುಮಾ ಮಸೀದಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ : ನೌಫಲ್ ಕಡಂಗ
ಕುಶಾಲನಗರ, ಆ.3: ಕೊಡಗು ಜಿಲ್ಲೆಯ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಉಪ ನಿರ್ದೇಶಕ (ಅಭಿವೃದ್ಧಿ)ರೂ ಮತ್ತು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದು, ಜುಲೈ ತಿಂಗಳ ಅಂತ್ಯಕ್ಕೆ ನಿವೃತ್ತಗೊಂಡ ಬಿ.ವಿ.ಮಲ್ಲೇಶಪ್ಪ ಅವರಿಗೆ ಕೂಡಿಗೆ ಡಯಟ್ ನಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಡಯಟ್ ಸಂಸ್ಥೆಯ ಉಪನ್ಯಾಸಕ ವೃಂದ, ಸಿಬ್ಬಂದಿ ಸೇರಿದಂತೆ ಜಿಲ್ಲಾ ಹಾಗೂ ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಹಾಗೂ ತಾಲ್ಲೂಕು ಸಹ ಶಿಕ್ಷಕರ ಸಂಘ ಮತ್ತು ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ನಿವೃತ್ತಗೊಂಡ ಮಲ್ಲೇಶಪ್ಪ ಅವರಿಗೆ ಫಲತಾಂಬುಲ ನೀಡಿ ಶಾಲು ಹೊದಿಸಿ ಸತ್ಕರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲ ಬಿ.ವಿ.ಮಲ್ಲೇಶಪ್ಪ, ತಾವು ಶಿಕ್ಷಣ ಇಲಾಖೆಯಲ್ಲಿ 37 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಲು ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕೆಲಸ ಕಾರ್ಯಗಳಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ, ಸಹನೆ, ತಾಳ್ಮೆ ಅಧಿಕಾರದ ಕುಟುಂಬದ ಸದಸ್ಯರಂತೆ ಕೆಲಸ ನಿರ್ವಹಿಸಿದರೆ ಅಧಿಕಾರದಲ್ಲಿ ಅಹಂ ಎಂಬ…






